Connect with us

    BANTWAL

    ಕಡಬ ತಹಶೀಲ್ದಾರ್ ಕಚೇರಿಯಲ್ಲಿ ಮಧ್ಯವರ್ತಿಗಳಿಗೆ ಅವಕಾಶವಿಲ್ಲ: ಪುತ್ತೂರು ಎಸಿ ಖಡಕ್ ವಾರ್ನಿಂಗ್

    Published

    on

    ಕಡಬ: ತಹಶೀಲ್ದಾರ್ ಕಚೇರಿಯಲ್ಲಿ ಮಧ್ಯವರ್ತಿಗಳಿಗೆ ಅವಕಾಶ ನೀಡುವುದಿಲ್ಲ. ಅಂತಹ ವಿಚಾರಗಳು ಕಂಡು ಬಂದಲ್ಲಿ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ಎಚ್ಚರಿಕೆ ನೀಡಿದ್ದಾರೆ.


    ಅವರು ಸೋಮವಾರ ಕಡಬ ತಹಶಿಲ್ದಾರ್ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿ ‘ಕಡಬ ತಾಲೂಕು ಕಛೇರಿಯ ಟೇಬಲ್‌ನಲ್ಲಿ ಮಧ್ಯವರ್ತಿಯೊಬ್ಬರು ಕುಳಿತು ದರ್ಬಾರ್ ನಡೆಸಿದ್ದಾರೆ ಎಂದು ಮಾಧ್ಯಮಗಳಲ್ಲಿ ಸುದ್ದಿಯಾಗಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸಲಾಗುತ್ತಿದೆ,

    ಪ್ರತೀ ಸಿಬ್ಬಂದಿಯನ್ನು ವಿಚಾರಣೆ ಮಾಡಲಾಗಿದೆ, ಸಾರ್ವಜನಿಕರು ಯಾರೂ ಕೂಡಾ ಅವರ ಕೆಲಸಕ್ಕೆ ಸರಕಾರಿ ಕಛೇರಿಗೆ ಬರಬಹುದು, ಮಾಹಿತಿ ಇಲ್ಲದವರು ತಮ್ಮ ಸಹಾಯಕ್ಕಾಗಿ ಬೇರೊಬ್ಬರನ್ನು ಕರೆದುಕೊಂಡು ಬರಬಹುದು.

    ಆದರೆ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ಹಣ ಸುಲಿಗೆ ಮಾಡುವ ಕೆಲಸ ಮಾಡಿದರೆ ಅದು ಅನ್ಯಾಯವಾಗುತ್ತದೆ, ಇಂತಹ ಮಧ್ಯವರ್ತಿಗಳ ಬಗ್ಗೆ ಮೃದು ದೋರಣೆ ಬೇಡ ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ,

    ಸಾರ್ವಜನಿಕರ ಕೆಲಸವನ್ನು ಅಧಿಕಾರಿಗಳು ಯಾವುದೇ ತಕರಾರಿಲ್ಲದೆ ಮಾಡಿಕೊಡಬೇಕು ಎನ್ನುವ ಸೂಚನೆಯನ್ನು ಕೂಡಾ ನೀಡಿದ್ದೇನೆ ಎಂದು ಹೇಳಿದ ಸಹಾಯಕ ಆಯುಕ್ತರು ಕಡಬ ತಾಲೂಕು ಕಛೇರಿಯಲ್ಲಿ ಕಡತಗಳ ವಿಲೇವಾರಿ ಸಮಾಧಾನಕರ ರೀತಿಯಲ್ಲಿ ನಡೆಯುತ್ತಿದೆ” ಎಂದರು.

    ಮಿನಿ ವಿಧಾನಸೌಧದ ಕಾಮಗಾರಿ ಮುಗಿದು ಎಲ್ಲಾ ಕಂದಾಯ ಕಛೇರಿಗಳು ಒಂದೇ ಸೂರಿನಡಿಯಲ್ಲಿ ಕಾರ್ಯ ನಿರ್ವಹಿಸಲು ಪ್ರಾರಂಭವಾದ ಬಳಿಕ ಜನರಿಗೆ ಇನ್ನಷ್ಟು ಅನುಕೂಲವಾಗಲಿದೆ ಎಂದರು.

    94 ಸಿ ಗೆ ಮಾಚ್ 31ರ ತನಕ ಅರ್ಜಿ ಸ್ವೀಕರಿಸಲಾಗುತ್ತಿದೆ. ಈಗಾಗಲೇ ತಯಾರಾಗಿರುವ ಕಡತಗಳ ಪೈಕಿ 53 ಕಡತಗಳು ಮಾತ್ರ ವಿಲೇವಾರಿಗೆ ಬಾಕಿ ಇವೆ, ಇನ್ನು ಅಕ್ರಮ ಸಕ್ರಮದಡಿಯಲ್ಲಿ ತಾಲೂಕಿನಲ್ಲಿ 13,000 ಅರ್ಜಿಗಳು ಬಂದಿವೆ ಎಂದು ಸಹಾಯಕ ಆಯುಕ್ತರು ವಿವರ ನೀಡಿದರು. ಈ ಸಂದರ್ಭದಲ್ಲಿ ಕಡಬ ತಹಶಿಲ್ದಾರ್ ಅನಂತ ಶಂಕರ್ ಬಿ ಉಪಸ್ಥಿತರಿದ್ದರು.

    BANTWAL

    ಕಲ್ಲಡ್ಕದಲ್ಲಿ ಸರ್ವೀಸ್ ರಸ್ತೆಗೆ ಡಾಮರು

    Published

    on

    ಬಂಟ್ವಾಳ: ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಟೀಕೆಗೆ ಗುರಿಯಾಗಿದ್ದ ಕಲ್ಲಡ್ಕದಲ್ಲಿ ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.

    ಮಳೆ ದೂರವಾದ ಹಿನ್ನೆಲೆಯಲ್ಲಿ ಕಲ್ಲಡ್ಕದ ಪೂರ್ಲಿಪ್ಪಾಡಿ ಭಾಗದಿಂದ ಒಂದು ಬದಿಯಲ್ಲಿ ಡಾಮರು ಹಾಕಲಾಗುತ್ತಿದೆ.

    ಕಳೆದ 2-3 ವರ್ಷಗಳಿಂದ ಹೆದ್ದಾರಿ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸಿದ್ದು, ಈ ಬಾರಿಯ ಮಳೆಗಾಲದಲ್ಲಿ ಕಲ್ಲಡ್ಕ ಪೇಟೆಯನ್ನು ಎಲ್ಲ ರೀತಿಯಿಂದಲೂ ಹಿಂಡಿ ಹಿಪ್ಪೆ ಮಾಡಲಾಗಿತ್ತು. ಮಳೆ ಬಂದರೆ ಕೆಸರು, ಬಿಸಿಲಾದರೆ ಧೂಳು ಎಂಬ ಸ್ಥಿತಿ ಇತ್ತು. ಹೆದ್ದಾರಿ ತುಂಬಾ ಕೆಸರು ತುಂಬಿ ನಡೆದಾಡುವುದು ಕಷ್ಟವಾಗಿರುವ ಜತೆಗೆ ಹೊಂಡಗಳು ಸೃಷ್ಟಿಯಾಗಿ ವಾಹನ ಸಾಗುವುದು ತೀರಾ ತ್ರಾಸದಾಯಕವಾಗಿತ್ತು. ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.

    Continue Reading

    BANTWAL

    ಮಂಗಳೂರು: ಯುವತಿ ವಿಚಾರದಲ್ಲಿ ಯುವಕನಿಗೆ ಥಳಿತ; ಆರೋಪಿಗಳು ಅರೆಸ್ಟ್

    Published

    on

    ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಮಹಮ್ಮದ್ ಮುಸ್ತಾಫ(21) ಎಂಬಾತನನ್ನು ಕಂಬಕ್ಕೆ ಕಟ್ಟಿ ಹಾಕಿದ ಥಳಿಸಿದ ಆರು ಮಂದಿ ಆರೋಪಿಗಳನ್ನು ಬಂಟ್ವಾಳ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ಹಲ್ಲೆ ಮಾಡಿ, ಕೊಲೆ ಬೆದರಿಕೆಯೊಡ್ಡಿದ ಆರೋಪಿಗಳಾದ ಕಂಚಿನಡ್ಕದ ನಿವಾಸಿಗಳಾಗಿರುವ ಮಹಮ್ಮದ್‌ ಸಪ್ವಾನ್( 25), ಮಹಮ್ಮದ್‌ ರಿಜ್ವಾನ್‌ (25), ಇರ್ಪಾನ್‍(27), ಅನೀಸ್‍ ಅಹಮ್ಮದ್‍ (19), ನಾಸೀರ್‍ (27), ಇಬ್ರಾಹಿಂ, ಶಾಕೀರ್‍ (18)ನನ್ನು ಬಂಧಿಸಲಾಗಿದೆ.

    ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನವೆಂಬರ್ 7ರಂದು ರಾತ್ರಿ 10 ಗಂಟೆ ಸುಮಾರಿಗೆ ಕಂಚಿನಡ್ಕ ಪದವು ನಿವಾಸಿಯಾಗಿರುವ ಯುವತಿಯೊಬ್ಬಳು ಮಹಮ್ಮದ್ ಮುಸ್ತಾಫಾನನ್ನು ಮನೆಗೆ ಬರಲು ಹೇಳಿದ್ದು, ಆಕೆ ಸೂಚನೆಯಂತೆ ಮಹಮ್ಮದ್ ಮುಸ್ತಾಫಾ ಅಲ್ಲಿಗೆ ಹೋಗಿದ್ದ. ಈ ವೇಳೆ ಅಲ್ಲಿದ್ದ ಆರೋಪಿಗಳು ಮಹಮ್ಮದ್‍ ಮುಸ್ತಾಫ್‍ ನ ಬಗ್ಗೆ ಸಂಶಯ ವ್ಯಕ್ತಪಡಿಸಿ ಗುಂಪು ಸೇರಿಕೊಂಡು ಆತನನ್ನು ಹಿಡಿದು ರಕ್ತ ಒಸರುವಂತೆ ಥಳಿಸಿದ್ದಲ್ಲದೇ ಕಂಬಕ್ಕೆ ಕಟ್ಟಿ ಹಾಕಿ ಹೊಡೆದಿದ್ದಾರೆ. ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ.

     

    ಇದನ್ನೂ ಓದಿ : ಬಂಟ್ವಾಳ : ಮನೆಗೆ ಬಂದಿದ್ದ ಪ್ರಿಯಕರನ್ನು ಅ*ರೆಬೆತ್ತಲು ಮಾಡಿ ಹ*ಲ್ಲೆ

     

    ಮಹಮ್ಮದ್‍ ಮುಸ್ತಾಫ್‍ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಬಳಿಕ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಸಂದರ್ಭದಲ್ಲಿ ಪೊಲೀಸರು ವಿಚಾರಣೆ ಮಾಡಲು ತೆರಳಿದಾದ ಮಹಮ್ಮದ್‍ ಮುಸ್ತಾಫ್‍ ಆರೋಪಿಗಳು ತನ್ನನ್ನು ಕೊಲೆ ನಡೆಸುವ ಉದ್ದೇಶದಿಂದ ಗುಂಪು ಸೇರಿ ಕಂಬಕ್ಕೆ ಕಟ್ಟಿ ಹಾಕಿ ಕೊಲೆಯತ್ನ ನಡೆಸಿದ್ದಾನೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಲಾಗಿದೆ.

    Continue Reading

    BANTWAL

    ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕ ಆತ್ಮಹ*ತ್ಯೆ

    Published

    on

    ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕನೋರ್ವ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಕಡೇಶಿವಾಲಯದಲ್ಲಿ ನಡೆದಿದೆ.

    ಬಂಟ್ವಾಳ ತಾಲೂಕಿನ ಕಡೇಶಿವಾಲಯದ ಕಂಡಿಗ ನಿವಾಸಿ ಗಣೇಶ್(25) ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಗಣೇಶ್ ಅವರು ಸೋಮವಾರ ಮನೆಯಲ್ಲಿಯೇ ಸಂಜೆ ಹುಲ್ಲಿಗೆ ಬಿಡುವ ವಿಷವನ್ನು ಸೇವಿಸಿದ್ದರು.

    ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

    Continue Reading

    LATEST NEWS

    Trending