Thursday, March 23, 2023

ಬೆಂಗ್ರೆಯಲ್ಲಿ ಮಧ್ಯರಾತ್ರಿ ಮೀನುಗಾರಿಕೆ ಬಲೆ ಸಂಗ್ರಹಣಾ ಕೊಠಡಿಗೆ ಬೆಂಕಿ-ಲಕ್ಷಾಂತರ ರೂ. ನಷ್ಟ

ಮಂಗಳೂರು: ಮಂಗಳೂರಿನ ಹೊರವಲಯದ ಕಸಬಾ ಬೆಂಗರೆಯಲ್ಲಿ ಮೀನುಗಾರಿಕೆಗೆ ಬಳಸಲಾಗುವ ಮೀನುಹಿಡಿಯುವ ಬಲೆಯ ಸಂಗ್ರಹಾಗಾರದಲ್ಲಿ ಬೆಂಕಿ ಹಿಡಿದಿದ್ದು, ಲಕ್ಷಾಂತರ ರೂ. ನಷ್ಟ ಉಂಟಾದ ಘಟನೆ ನಿನ್ನೆ ಮಧ್ಯರಾತ್ರಿ ಸಂಭವಿಸಿದೆ.

ಎರಡು ವಾರಗಳ ಹಿಂದೆ ಇಲ್ಲಿ ಬೀಕರ ಅಗ್ನಿ ದುರಂತ ಸಂಭವಿಸಿ ಸರಕು ಸಾಗಾಟದ ಮೂರು ಬೃಹತ್‌ ಬೋಟುಗಳು ಸುಟ್ಟು ಕರಕಲಾಗಿದ್ದು, ಅಪಾರ ನಷ್ಟ ಉಂಟಾಗಿತ್ತು.

ಅಕ್ಟೋಬರ್ 28ರಂದು ನಡೆದ ಭೀಕರ ಅಗ್ನಿ ದುರಂತ ಮಾಸುವ ಮುನ್ನವೇ ಇದೀಗ ಮಂಗಳೂರು ದಕ್ಕೆ ಯಾರ್ಡಿನಲ್ಲಿ ನಿನ್ನೆ ಮಧ್ಯರಾತ್ರಿ ಸುಮಾರು 12.30ಕ್ಕೆ ಮತ್ತೆ ಬೆಂಕಿ ದುರಂತ ಸಂಭವಿಸಿದೆ.


ವಿಚಾರ ತಿಳಿಯುತ್ತಿದ್ದಂತೆ ಪಾಂಡೇಶ್ವರ ಅಗ್ನಿ ಶಾಮಕ ತಂಡದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸುವಲ್ಲಿ ಶ್ರಮಿಸಿದ್ದಾರೆ.

ಸ್ಥಳೀಯ ಮೀನುಗಾರರು ಕೂಡಾ ಬೆಂಕಿ ನಂದಿಸಲು ಶ್ರಮಿಸಿದರು.
ಆದರೆ ಅದಾಗಲೇ ಲಕ್ಷಗಟ್ಟಲೆ ಮೌಲ್ಯದ ಬಲೆ ಸುಟ್ಟು ನಷ್ಟ ಉಂಟಾಗಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here

Hot Topics

40 ವರ್ಷಗಳಿಂದ ಅದೇ ಪೊಳ್ಳು ಭರವಸೆ : ಚುನಾವಣಾ ಬಹಿಷ್ಕಾರಕ್ಕೆ ಮುಂದಾದ ಸುಳ್ಯ ಅರಮನೆಗಾಯದ ಜನತೆ..!

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಈ ಗ್ರಾಮದ ಜನ ಕಳೆದ 40 ವರ್ಷಗಳಿಂದ ಬಿದಿರಿನ ತೂಗು ಸೇತುವೆಯ ಮುಖಾಂತರ ಜೀವ ಭಯದಲ್ಲಿ ಜೀವನ ನಡೆಸುತಿದ್ದಾರೆ.ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ...

ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜಿನೈಕ್ಯ..!

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆವರು ಜಿನೈಕ್ಯರಾಗಿದ್ದಾರೆ.ಹಾಸನ : ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ...

ಚಿಕ್ಕಮಗಳೂರು : ಬೈಕಿಗೆ ಬಸ್ ಡಿಕ್ಕಿ – ಇಬ್ಬರು ಸವಾರರು ಸ್ಥಳದಲ್ಲೇ ಮೃತ್ಯು..!

ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನಲ್ಲಿ ಸಂಭವಿಸಿದೆ. ಚಿಕ್ಕಮಗಳೂರು: ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು...