Connect with us

DAKSHINA KANNADA

ಹಾಲಿನ ಖರೀದಿ ದರ, ಪ್ರೋತ್ಸಾಹ ಧನ ಹೆಚ್ಚಳವಾಗದಿದ್ದರೆ ರಾಜ್ಯ ವ್ಯಾಪಿ ಪ್ರತಿಭಟನೆ – ಸಾಣೂರು ನರಸಿಂಹ ಕಾಮತ್

Published

on

ರಾಜ್ಯದ ಎಲ್ಲಾ 224 ಶಾಸಕರು ಪಕ್ಷಭೇದ ಮರೆತು ಅಧಿವೇಶನದಲ್ಲಿ ರಾಜ್ಯದ ಹೈನುಗಾರರಿಗೆ ಆಗುತ್ತಿರುವ ತೊಂದರೆಯ ಬಗ್ಗೆ ಧ್ವನಿ ಎತ್ತಿ ಗ್ರಾಮೀಣ ಭಾಗದ ರೈತರ ನೆರವಿಗೆ ಬರಬೇಕು ಎಂದು ಎಲ್ಲಾ ಶಾಸಕರನ್ನು ಸಾಣೂರು ನರಸಿಂಹ ಕಾಮತ್ ವಿನಂತಿಸಿರುತ್ತಾರೆ.

ಮಂಗಳೂರು: ಸಹಕಾರ ಭಾರತಿ ಕಳೆದ ಒಂದು ವರ್ಷಗಳಿಂದ ನಿರಂತರವಾಗಿ ಹೈನುಗಾರರಿಂದ ಖರೀದಿಸುವ ಹಾಲಿಗೆ ದರ ಹೆಚ್ಚಳವಾಗಬೇಕು, ಬಜೆಟ್ ನಲ್ಲಿ ಹಾಲಿನ ಪ್ರೋತ್ಸಾಹ ಧನ ಹೆಚ್ಚಳಕ್ಕೆ ಹೆಚ್ಚಿನ ಅನುದಾನ ಒದಗಿಸಬೇಕು, ನಂದಿನಿ ಪಶು ಆಹಾರಕ್ಕೆ ಸಬ್ಸಿಡಿ ಕೊಡಬೇಕೆಂದು ಅಂಚೆ ಕಾರ್ಡ್ ಚಳವಳಿ, ಮುಖ್ಯಮಂತ್ರಿಗಳ ಬಳಿಗೆ ನಿಯೋಗ ಭೇಟಿ, ಜಿಲ್ಲಾಧಿಕಾರಿ ಕಚೇರಿಯ ಎದುರು ಧರಣಿ ಸರಕಾರಕ್ಕೆ ಮನವಿ ಸಲ್ಲಿಕೆ ಮುಂತಾದ ಪ್ರಜಾಸತ್ತಾತ್ಮಕ ರೀತಿಯ ಹೋರಾಟವನ್ನು ಕೈಗೊಂಡಿತ್ತು.

ಆದರೂ ಈವರೆಗೆ ಹೈನುಗಾರರ ನ್ಯಾಯ ಬದ್ಧ ಬೇಡಿಕೆಗೆ ಸರಕಾರದಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ದೊರೆತಿಲ್ಲ.

ಹೊಸ ಸರಕಾರ ಬಂದ ಬಳಿಕ ರಾಜ್ಯದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಳೆದ ವಾರ ಕೆಎಂಎಫ್ ಆಡಳಿತ ಮಂಡಳಿ, ಅಧಿಕಾರಿಗಳು, ರಾಜ್ಯದ 15 ಒಕ್ಕೂಟಗಳ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರ ಸಭೆ ಕರೆದು ಮೂರು ಬಾರಿ ಮುಂದೂಡಿರುವುದು ಬಹಳ ಬೇಸರದ ಸಂಗತಿ.

ರಾಜ್ಯದಾದ್ಯಂತದಿಂದ ಕಳೆದ ಒಂದು ವಾರ ಕೆಎಂಎಫ್ ಮತ್ತು 15 ಒಕ್ಕೂಟಗಳ ಪ್ರತಿನಿಧಿಗಳು ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಿ ಲಕ್ಷಾಂತರ ರೂಪಾಯಿ ಖರ್ಚು- ವೆಚ್ಚ ಮತ್ತು ಅಮೂಲ್ಯವಾದ ಸಮಯ ವ್ಯರ್ಥವಾಗಿದ್ದು ಬಿಟ್ಟರೆ ಯಾವುದೇ ಸಾಧನೆ ಆಗಿಲ್ಲ.

ಪಕ್ಷಭೇದ ಮರೆತು ರಾಜ್ಯದ ಎಲ್ಲಾ ಶಾಸಕರು ಹೈನುಗಾರರ ನೆರವಿಗೆ ಬರಬೇಕು.

ಕಳೆದ ಎಂಟು ತಿಂಗಳಿನಿಂದ ಪಾವತಿಗೆ ಬಾಕಿ ಇರುವ ಪ್ರೋತ್ಸಾಹ ಧನ ಬಿಡುಗಡೆಗೆ ಯಾವುದೇ ಅನುದಾನ ಮೀಸಲಿಡದೆ ಸರಕಾರ ಹೈನುಗಾರರನ್ನು ಸಂಪೂರ್ಣವಾಗಿ ಕಡೆಗಣಿಸಿದೆ, ಈ ಬಗ್ಗೆ ರಾಜ್ಯದ ಎಲ್ಲಾ 224 ಶಾಸಕರು ಪಕ್ಷಭೇದ ಮರೆತು ಅಧಿವೇಶನದಲ್ಲಿ ರಾಜ್ಯದ ಹೈನುಗಾರರಿಗೆ ಆಗುತ್ತಿರುವ ತೊಂದರೆಯ ಬಗ್ಗೆ ಧ್ವನಿ ಎತ್ತಿ ಗ್ರಾಮೀಣ ಭಾಗದ ರೈತರ ನೆರವಿಗೆ ಬರಬೇಕು ಎಂದು ಎಲ್ಲಾ ಶಾಸಕರನ್ನು ಸಾಣೂರು ನರಸಿಂಹ ಕಾಮತ್ ವಿನಂತಿಸಿರುತ್ತಾರೆ.

ಸಹಕಾರ ಭಾರತಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಹಾಲು ಪ್ರಕೋಷ್ಟದ ರಚನೆಯಾಗುತ್ತಿದ್ದು, ರಾಜ್ಯದ ಲಕ್ಷಾಂತರ ರೈತರು ಬೀದಿಗಿಳಿದು ಪ್ರತಿಭಟಿಸಿ ಹೋರಾಟ ವಿಧಾನಸೌಧದ ಮೆಟ್ಟಿಲಿಗೆ ಬರುವುದರ ಮುಂಚಿತವಾಗಿ ಸರಕಾರ ಎಚ್ಚೆತ್ತು ಹಾಲಿಗೆ ವೈಜ್ಞಾನಿಕ ದರ ನಿಗದಿಪಡಿಸಿ ಹೈನುಗಾರಿಕೆಯಲ್ಲಿ ಆಗುತ್ತಿರುವ ನಷ್ಟವನ್ನು ಭರ್ತಿ ಮಾಡಿ ಲಾಭದಾಯಕವಾಗುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿರುತ್ತಾರೆ.

ಸರಕಾರ ಹೈನುಗಾರರ ಬೇಡಿಕೆಗೆ ಸ್ಪಂದಿಸದೆ ನಿರ್ಲಕ್ಷಿಸಿದರೆ, ಬರುವ ಆಗಸ್ಟ್ ತಿಂಗಳಿನಿಂದ ರಾಜ್ಯ ವ್ಯಾಪಿ ಪ್ರತಿಭಟನೆ ಧರಣಿ ಸತ್ಯಾಗ್ರಹಗಳನ್ನು ಸಂಘಟಿಸಿ ರಾಜ್ಯ ವ್ಯಾಪಿ ಹೋರಾಟ ನಡೆಸಲಾಗುವುದೆಂದು ಸಹಕಾರ ಭಾರತಿ ರಾಜ್ಯ ಹಾಲು ಪ್ರಕೋಷ್ಟದ ಸಂಚಾಲಕರಾದ ಸಾಣೂರು ನರಸಿಂಹ ಕಾಮತ್ ರವರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿರುತ್ತಾರೆ.

Click to comment

Leave a Reply

Your email address will not be published. Required fields are marked *

DAKSHINA KANNADA

Moodabidri: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಅರೆಸ್ಟ್..!

Published

on

ಮೂಡುಬಿದಿರೆ: ನಿಷೇಧಿತ ವಸ್ತು ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ವ್ಯಕ್ತಿಗಳನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ.ನೇತೃತ್ವದ ತಂಡವು ಬುಧವಾರ ವಶಕ್ಕೆ ಪಡೆದಿದೆ.

ಬೆಳುವಾಯಿ ನಿವಾಸಿಗಳಾದ ಮಹಮ್ಮದ್ ಅಯಾನ್ (22), ಫರ್ಹಾನ್ ಖಾನ್ (18) ಹಾಗೂ ಶೇಖ್ ಮುಹಮ್ಮದ್ ಜುಬೈರ್ (19) ಬಂಧಿತ ಆರೋಪಿಗಳು.

ಮೂವರು ಆರೋಪಿಗಳು ಬೆಳುವಾಯಿ ಕಾಂತಾವಾರ ದ್ವಾರದ ಬಳಿ ಸ್ಕೂಟರ್ ನಲ್ಲಿ ನಿಷೇಧಿತ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದಾರೆಂದ ಖಚಿತ ಮಾಹಿತಿಯನ್ನು ಮೇರೆಗೆ ಸ್ಥಳಕ್ಕೆ ಧಾವಿಸಿದ್ದಾರೆ.

ಬಳಿಕ ಮೂವರು ವ್ಯಕ್ತಿಗಳ ಸಹಿತ 800 ಗ್ರಾಂ ಗಾಂಜಾ ಮತ್ತು ಸ್ಕೂಟರನ್ನು ಪೊಲೀಸರು ಸ್ವಾಧೀನ ಪಡಿಸಿಕೊಂಡಿದ್ದಾರೆ.

ಈ ಎಲ್ಲಾ ಸೊತ್ತುಗಳ ಒಟ್ಟು ಮೌಲ್ಯ 62,000 ಆಗಿರಬಹುದೆಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಮಾರ್ಗದರ್ಶನದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

Continue Reading

DAKSHINA KANNADA

Mangaluru: ಸೋಮೇಶ್ವರ ಉಚ್ಚಿಲದಲ್ಲಿ ಬಲೆಗೆ ಬಿದ್ದ ದೈತ್ಯ ಪಿಲಿ ತೊರಕೆ..!

Published

on

ಮಂಗಳೂರು: ಮಂಗಳೂರಿನ ಉಳ್ಳಾಲ ಸಮೀಪದ ಸೋಮೇಶ್ವರ ಉಚ್ಚಿಲದ ನಾಡದೋಣಿ ಮೀನುಗಾರರಿಗೆ ದೈತ್ಯ ಗಾತ್ರದ ಪಿಲಿ ತೊರಕೆ ಮೀನು ಲಭಿಸಿದೆ.

ಉಚ್ಚಿಲ ಪೆರಿಬೈಲ್ ನಿವಾಸಿ ನಾಡದೋಣಿ ಮೀನುಗಾರರಾದ ಶೈಲೇಶ್ ಉಚ್ಚಿಲ, ಚಂದ್ರ ಉಚ್ಚಿಲ, ಅಝೀಝ್, ಕಲ್ಪೇಶ್ ಮತ್ತು ಶಂಭು ನ್ಯೂ ಉಚ್ಚಿಲ ಎಂಬವರು ನಿನ್ನೆ ಸಂಜೆ ಸಮುದ್ರ ತೀರದಲ್ಲಿ ಮೀನಿಗಾಗಿ ಬಲೆ ಹಾಕಿದ್ದು, ಸುಮಾರು 75 ಕೆ.ಜಿ. ತೂಕದ ಮೀನು ಅವರ ಬಲೆಗೆ ಬಿದ್ದಿದೆ.

ಈ ವರ್ಷದ ತಮ್ಮ ಮೀನುಗಾರಿಕೆ ಅವಧಿಯಲ್ಲಿ ಸಿಕ್ಕ ಅತಿದೊಡ್ಡ ಮೀನು ಇದಾಗಿದೆ ಎಂದವರು ಅಭಿಪ್ರಾಯ ಪಟ್ಟಿದ್ದಾರೆ.

ಪ್ರತಿವರ್ಷದಂತೆ ಈ ಬಾರಿಯೂ ಸಮುದ್ರದಲ್ಲಿ ಕೆಸರಿನಂತೆ ಅಲೆಗಳು ಬರುತ್ತವೆ.

ಈ ನೀರಿಗೆ ಮೀನುಗಾರಿಕೆಯಲ್ಲಿ ಅತ್ಯಂತ ಪಾವಿತ್ರ್ಯತೆಯೂ ಇದೆ.

ಅದರಲ್ಲಿ ಹಲವು ಬಗೆಯ ಮೀನುಗಳು ಬರುವ ಐತಿಹ್ಯವಿದೆ.
ಈ ಬಾರಿ ದೊಡ್ಡ ಗಾತ್ರದ ಪಿಲಿತೊರಕೆ ಬಂದಿರುವುದು ಮೀನುಗಾರರಲ್ಲಿ ಉತ್ಸಾಹ ಮೂಡಿಸಿದೆ.

ಮಾರಾಟ ಮಾಡುವುದಾದರೆ ಈ ಮೀನಿಗೆ ಕೆ.ಜಿ.ಗೆ 200 ರೂಪಾಯಿ ಬೆಲೆ ಇದೆ.

ಆದರೆ ಸಿಕ್ಕ ಮೀನನ್ನು ವ್ಯಾಪಾರ ಮಾಡದೆ ಈದ್ ಹಬ್ಬ ಇರುವುದರಿಂದ ತಮ್ಮೊಳಗೆ ಹಂಚಿಕೊಂಡಿದ್ದಾರೆ.

Continue Reading

DAKSHINA KANNADA

ದ.ಕ.ಜಿಲ್ಲೆಯ 9 ಗ್ರಾಮಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ

Published

on

ಮಂಗಳೂರು: ದ.ಕ.ಜಿಲ್ಲೆಯ 9 ತಾಲೂಕಿನ 9 ಗ್ರಾಮಗಳು 2022-23ನೆ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಯಾಗಿದೆ.

ಅಕ್ಟೋಬರ್ 2ರ ಗಾಂಧಿಜಯಂತಿ ದಿನದಂದು ರಾಜ್ಯ ವಿಧಾನಸೌಧದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಯನ್ನು ಪ್ರದಾನ ಮಾಡಲಾಗುತ್ತದೆ ಎಂದು ಪ್ರಕಟನೆ ತಿಳಿಸಿದೆ.

ಮಂಗಳೂರು ತಾಲೂಕಿನ ಉಳಾಯಿಬೆಟ್ಟು, ಉಳ್ಳಾಲ ತಾಲೂಕಿನ ಬೆಳ್ಮ, ಮುಲ್ಕಿ ತಾಲೂಕಿನ ಕೆಮ್ರಾಲ್, ಮೂಡುಬಿದಿರೆ ತಾಲೂಕಿನ ಪುತ್ತಿಗೆ, ಬಂಟ್ವಾಳ ತಾಲೂಕಿನ ಅಮ್ಮುಂಜೆ, ಪುತ್ತೂರು ತಾಲೂಕಿನ ಉಪ್ಪಿನಂಗಡಿ, ಕಡಬ ತಾಲೂಕಿನ ಸವಣೂರು, ಬೆಳ್ತಂಗಡಿ ತಾಲೂಕಿನ ಬಳಂಜ, ಸುಳ್ಯ ತಾಲೂಕಿನ ಮರ್ಕಂಜ ಗ್ರಾಮಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿವೆ.

Continue Reading

LATEST NEWS

Trending