Connect with us

LATEST NEWS

ಅಡ್ಡ ಬಂದ ನಾಯಿಯ ಪ್ರಾಣ ಉಳಿಸಲು ಹೋಗಿ ಎಡವಟ್ಟು : ರಸ್ತೆಯಲ್ಲೇ ಹಾಲಿನ ವಾಹನ ಪಲ್ಟಿ..!

Published

on

ಧಾರವಾಡ: ರಸ್ತೆ ಮಧ್ಯೆ ಬಂದ ಬೀದಿನಾಯಿಯನ್ನು ತಪ್ಪಿಸಲು ಹೋಗಿ ಹಾಲಿನ ವಾಹನವೇ ನಡುರಸ್ತೆಯಲ್ಲಿ ಪಲ್ಟಿಯಾದ ಘಟನೆ ಧಾರವಾಡ ನಗರದ ಜೆಎಸ್‌ಎಸ್‌ ಕಾಲೇಜ್ ಬಳಿ‌ ಇಂದು ಮುಂಜಾನೆ ಸಂಭವಿಸಿದೆ.

ಅವಘಡದಿಂದ ಒಂದು ಸಾವಿರ ಲೀಟರ್ ಹಾಲು ರಸ್ತೆ ಪಾಲಾಗಿ ಹಾಲಿನ ಹೊಳೆ ಹರಿದಿದೆ.

ಧಾರವಾಡ ಕೆಎಂಎಫ್‌ಗೆ‌ ಉತ್ತರ‌ ಕನ್ನಡ ಜಿಲ್ಲೆಯ ಹಳಿಯಾಳದಿಂದ ಹಾಲು ತುಂಬಿದ್ದ ಕ್ಯಾನ್​ಗಳನ್ನು ತುಂಬಿಸಿಕೊಂಡು ಮಹೀಂದ್ರಾ ಗೂಡ್ಸ್ ವಾಹನ ಬರುತ್ತಿತ್ತು.

ಈ ಸಂದರ್ಭ ಏಕಾಏಕಿ ವಾಹಕ್ಕೆ ಬೀದಿನಾಯಿ ನಾಯಿಯೊಂದು ಅಡ್ಡ ಬಂದಿದೆ. ಹಾಲಿನ ವಾಹನ ನಾಯಿಗೆ ಡಿಕ್ಕಿಯಾಗುವುದನ್ನ ತಪ್ಪಿಸಲು ಯತ್ನಿಸಿದ ಚಾಲಕ  ಪಕ್ಕದ ಬ್ಯಾರಿಕೇಡ್​ಗೆ ಡಿಕ್ಕಿ ಹೊಡೆದಿದ್ದಾನೆ.

ಡಿಕ್ಕಿಯಾದ ರಭಸಕ್ಕೆ ರಸ್ತೆ ಮಧ್ಯೆ ವಾಹನ ಪಲ್ಟಿಯಾಗಿದ್ದು, ಹಾಲೆಲ್ಲ ರಸ್ತೆಪಾಲಾಗಿ ಹಾಲಿನ ಹೊಳೆಯೇ ಹರಿದಿದೆ.  ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

FILM

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ‘ಸ್ಯಾಂಡಲ್ ವುಡ್ ಸಲಗ’

Published

on

ಬೈಂದೂರು : ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ರಾಜಕೀಯ ಮುಖಂಡರು, ನಟ ನಟಿಯರು ಭೇಟಿ ನೀಡುತ್ತಿರುತ್ತಾರೆ. ಇದೀಗ ದುನಿಯಾ ವಿಜಯ್ ಅವರು ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಶ್ರೀ ಮೂಕಾಂಬಿಕೆ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ತಮ್ಮ ಸ್ನೇಹಿತರೊಂದಿಗೆ ದುನಿಯಾ ವಿಜಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭ ಅವರ ಅಭಿಮಾನಿಗಳು ಅವರೊಂದಿಗೆ ಫೋಟೋ ತೆಗೆಸಿಕೊಂಡರು.

ಕಾಲ್ನಡಿಗೆಯಲ್ಲಿ ನಂಜನಗೂಡು ಕ್ಷೇತ್ರಕ್ಕೆ ಹೋಗಿದ್ದ ನಟ:

ದುನಿಯಾ ವಿಜಿ ಇತ್ತೀಚೆಗೆ ಬೆಂಗಳೂರಿನಿಂದ ಕಾಲ್ನಡಿಗೆಯಲ್ಲಿ ಹೊರಟು ನಂಜನಗೂಡಿನ ನಂಜುಂಡೇಶ್ವರ ದರ್ಶನ ಪಡೆದಿದ್ದರು. ಸತತ ಐದು ದಿನಗಳ ಕಾಲ ತಮ್ಮ ಸಂಗಡಿಗರ ಜೊತೆ ನಡೆದುಕೊಂಡೇ ನಂಜನಗೂಡು ತಲುಪಿದ್ದರು. ಹಗಲು ರಾತ್ರಿ ಲೆಕ್ಕಿಸದೇ ಪಾದಯಾತ್ರೆ ಮಾಡಿದ್ದರು.

ಸಿನಿಮಾಗಳಲ್ಲಿ ಬ್ಯುಸಿ :

ದುನಿಯಾ ವಿಜಯ್ ಸಾಲು ಸಾಲು ಸಿನಿಮಾಗಳಲ್ಲಿ ಬಿಝಿಯಾಗಿದ್ದಾರೆ. ನಟನೆಯ ಜೊತೆಗೆ ನಿರ್ದೇಶಕನ ಕ್ಯಾಪ್ ಕೂಡ ಅವರು ಹಾಕಿದ್ದಾರೆ.’ಸಲಗ’ ಚಿತ್ರದ ಮೂಲಕ ನಿರ್ದೇಶಕನಾಗಿ ಬಡ್ತಿ ಪಡೆದಿದ್ದ ಅವರು, ‘ಭೀಮ’ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ನಿಖಿಲ್ ಕುಮಾರ್ ಸಿನಿಮಾದಲ್ಲೂ ದುನಿಯಾ ವಿಜಯ್ ನಟಿಸುತ್ತಿದ್ದಾರೆ.

ಇದನ್ನೂ ಓದಿ : ಬಿಗ್ ಬಾಸ್ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ನಮ್ರತಾ ಗೌಡ!

ಚಿತ್ರರಂಗಕ್ಕೆ ವಿಜಿ ಮಗಳು ಎಂಟ್ರಿ :

ದುನಿಯಾ ವಿಜಯ್ ತಮ್ಮ ಮಗ ಸಾಮ್ರಾಟ್ ನನ್ನು ಈಗಾಗಲೇ ಭೀಮ ಚಿತ್ರದ ಮೂಲಕ ಪರಿಚಯಿಸುವ ತಯಾರಿಯಲ್ಲಿದ್ದಾರೆ. ಇದೀಗ ಮಗಳನ್ನೂ ಚಿತ್ರರಂಗಕ್ಕೆ ಕರೆತರುತ್ತಿದ್ದಾರೆ. ಕಾಟೇರ ಚಿತ್ರಕ್ಕೆ ಕಥೆ ಬರೆದಿದ್ದ ಜಡೇಶ್ ಹಂಪಿ ನಿರ್ದೇಶನದಲ್ಲಿ ಮೂಡಿ ಬರಲಿರುವ ಹೊಸ ಸಿನಿಮಾದಲ್ಲಿ ತಂದೆ – ಮಗಳು ಇಬ್ಬರೂ ಕಾಣಿಸಿಕೊಳ್ಳುತ್ತಿದ್ದಾರೆ.


‘ಜಾನಿ ಮೇರಾ ನಾಮ್ ಪ್ರೀತಿ ಮೇರಾ ಕಾಮ್’ ಚಿತ್ರದಲ್ಲಿ ಜೊತೆಯಾಗಿದ್ದ ದುನಿಯಾ ವಿಜಯ್ ಮತ್ತು ರಚಿತಾ ರಾಮ್ ಮತ್ತೆ ಈ ಚಿತ್ರದ ಮೂಲಕ ಒಂದಾಗುತ್ತಿದ್ದಾರೆ. ಇದರಲ್ಲಿ ವಿಜಿ ಮಗಳು ಮೋನಿಕಾ/ರಿತನ್ಯಾ ನಟಿಸುತ್ತಿದ್ದಾರೆ. ಇದು ದುನಿಯಾ ವಿಜಯ್ ಅವರ 29 ನೇ ಸಿನಿಮಾ.

Continue Reading

DAKSHINA KANNADA

ವೈರಲ್ ವಿಡಿಯೋ: ಕಲ್ಲಂಗಡಿ ಚಿಕನ್ ಬಿರಿಯಾನಿ ತಿಂದಿದ್ದೀರಾ?

Published

on

ಮಂಗಳೂರು(ವೈರಲ್ ವಿಡಿಯೋ): ಬಿರಿಯಾನಿ ಅಂದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಬಹುಜನರ ಬೇಡಿಕೆಯ ಖಾದ್ಯವಾದ ಬಿರಿಯಾನಿ ಹಲವು ಮಾದರಿಗಳಲ್ಲಿ ಸಿಗುತ್ತದೆ. ಚಿಕನ್ ಬಿರಿಯಾನಿ, ಮಟನ್ ಬಿರಿಯಾನಿ ತಿನ್ನಲು ಜನರಂತೂ ದೂರ ಸರಿಯುದೇ ಇಲ್ಲ. ಆದರೆ ಈಗ ಬಿರಿಯಾನಿ ಹೊಸ ಹೊಸ ಮಾದರಿಯಲ್ಲಿ ತುಂಬಾ ವೈರಟಿ ಆಗಿ ಸಿಗುತ್ತಾ ಇದೆ. ಬಾರ್ಬಿ ಬಿರಿಯಾನಿ ವೈರಲ್ ಆದ ಬಳಿಕ ಇದೀಗ ಇನ್ನೊಂದು ಹೊಸ ಬಿರಿಯಾನಿ ವೈರಲ್ ಆಗ್ತಾ ಇದೆ.

ಕಲ್ಲಂಗಡಿ ಚಿಕನ್ ಬಿರಿಯಾನಿ

ಹೌದು, ಈ ಬಿರಿಯಾನಿಯ ಹೆಸರು ಕಲ್ಲಂಗಡಿ ಚಿಕನ್ ಬಿರಿಯಾನಿ. ಇದು ವಿಚಿತ್ರವಾದರೂ ಸತ್ಯ. ಕಲ್ಲಂಗಡಿ ಹಾಕಿ ಮಾಡಿರುವ ಈ ಚಿಕನ್ ಬಿರಿಯಾನಿ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗ್ತಾ ಇದೆ. ಇನ್ಸ್ಟಾಗ್ರಾಮ್‌ನ villagefoodchannel_official ಪೇಜ್‌ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ, ಈ ವಿಚಿತ್ರ ಬಿರಿಯಾನಿ ವೈರಲ್ ಆಗಿದೆ.

ಕಲ್ಲಂಗಡಿ ಬಿಕನ್ ಬಿರಿಯಾನಿ ತಯಾರಿಸುವ ವಿಧಾನ

ಮೊದಲಿಗೆ ಇಬ್ಬರು ಕಲ್ಲಂಗಡಿ ಹಣ್ಣನ್ನು ತುಂಡು ಮಾಡುವ ಮೂಲಕ ವಿಡಿಯೋ ಆರಂಭವಾಗುತ್ತದೆ. ಬಳಿಕ ಹಣ್ಣಿನ ತುಂಡುಗಳನ್ನು ದೊಡ್ಡ ಪಾತ್ರೆಗೆ ಹಾಕಿ ಅದರಲ್ಲಿ ಗುದ್ದಿ ರಸವನ್ನು ತೆಗೆಯುತ್ತಾರೆ. ಬಳಿಕ ಮತ್ತೊಂದು ಪಾತ್ರೆಯಲ್ಲಿ ಚಿಕನ್ ಬಿರಿಯಾನಿ ತಯಾರಿಸಲು ಪ್ರಾರಂಭಿಸುತ್ತಾರೆ.

ದೊಡ್ಡ ಪಾತ್ರೆಯನ್ನು ಇಟ್ಟು ಅದಕ್ಕೆ ಎಣ್ಣೆ, ನೀರುಳ್ಳಿ, ಬೆಳ್ಳುಳ್ಳಿ, ಶುಂಠಿ-ಬೆಳ್ಳುಳ್ಳಿ ಪೇಸ್ಟ್, ಮಸಾಲೆಗಳು, ಗರಂ ಮಸಾಲೆ ಹಾಕಿ ಮಸಾಲೆ ತಯಾರಿಸುತ್ತಾರೆ. ಬಳಿಕ ಅದಕ್ಕೆ ಶುಚಿಗೊಳಿಸಿದ ಕೋಳಿ ತುಂಡುಗಳನ್ನು ಹಾಕಿ ಮಿಕ್ಸ್ ಮಾಡಿ ಬೇಯಿಸುತ್ತಾರೆ.

ಕೋಳಿ ಮಾಂಸ ಬೆಂದ ನಂತರ ಅದಕ್ಕೆ ಪ್ರಮುಖ ಅಂಶವಾದ ಕಲ್ಲಂಗಡಿ ಹಣ್ಣಿನ ರಸವನ್ನು ಸೇರಿಸುತ್ತಾರೆ. ನಂತರ ಅದಕ್ಕೆ ಬಾಸುಮತಿ ಅಕ್ಕಿ ಹಾಕಿ ಮತ್ತೆ ಬೇಯಿಸುತ್ತಾರೆ. ಸ್ವಲ್ಪ ಕೊತ್ತಂಬರಿ ಸೊಪ್ಪನ್ನು ಮೇಲಿಗೆ ಹಾಕಿ ಮುಚ್ಚಿಡುತ್ತಾರೆ. ಈ ರೀತಿ ಮಾಡಿದಾಗ ಕಲ್ಲಂಗಡಿ ಚಿಕನ್ ಬಿರಿಯಾನಿ ತಯಾರಾಗುತ್ತದೆ.

ಈ ವಿಡಿಯೋ ಬಾರಿ ವೈರಲ್ ಆಗಿದ್ದು, ಇದುವರೆಗೆ ಆರು ಲಕ್ಷಕ್ಕೂ ಹೆಚ್ಚು ಮಂದಿ ವಿಡಿಯೋ ಲೈಕ್ ಮಾಡಿದ್ದಾರೆ. ಹಾಗೆಯೇ 21 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. ಕಲ್ಲಂಗಡಿ ಚಿಕನ್ ಬಿರಿಯಾನಿಯ ಈ ವಿಶಿಷ್ಟ ಸಂಯೋಜನೆಯನ್ನು ವೀಕ್ಷಿಸಿದ ಹಲವಾರು ಜನರು ತಮ್ಮ ಅಭಿಪ್ರಾಯಗಳನ್ನು ಕಮೆಂಟ್ ಮಾಡಿದ್ದಾರೆ.

Continue Reading

Ancient Mangaluru

ಮಂಗಳೂರು ವಿಮಾನ ನಿಲ್ದಾಣವಿನ್ನು ನಿಶ್ಶಬ್ದ ವಲಯ!

Published

on

ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಇನ್ನು ಮುಂದೆ ನಿಶ್ಶಬ್ದ ವಲಯವಾಗಿರಲಿದೆ. ಹೌದು, ಇನ್ನು ಮುಂದೆ ವಿಮಾನ ನಿಲ್ದಾಣದಲ್ಲಿ ಏರ್‌ಲೈನರ್‌ಗಳಿಂದ ಯಾವುದೇ ಪ್ರಯಾಣಿಕರ ಮಾಹಿತಿ ಕುರಿತ ಅನೌನ್ಸ್ ಮೆಂಟ್‌ ಇರುವುದಿಲ್ಲ. ಪ್ರಯಾಣಿಕರು ಫ್ಲೈಟ್‌ ಇನ್ಫಾರ್ಮೇಶನ್‌ ಡಿಸ್‌ಪ್ಲೇ ಸಿಸ್ಟಂ ಫಲಕಗಳನ್ನು ನೋಡಿ ಮಾಹಿತಿ ಪಡೆದುಕೊಳ್ಳ ಬೇಕಾಗಿದೆ ಎಂದು ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.

ಸಹಾಯಕ್ಕಾಗಿ ಯಾರನ್ನು ಸಂಪರ್ಕಿಸಬೇಕು?

ವಿಮಾನ ನಿಲ್ದಾಣದಲ್ಲಿರುವ ಪ್ರಯಾಣಿಕರಿಗೆ ಕಿರಿಕಿರಿಯಾಗುವುದನ್ನು ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ. ಇನ್ನು ಮುಂದೆ ವಿಮಾನಗಳ ಹಾರಾಟದ ಮಾಹಿತಿಗಳು ಫ್ಲೈಟ್‌ ಇನ್ಫಾರ್ಮೇಶನ್‌ ಡಿಸ್‌ಪ್ಲೇ ಸಿಸ್ಟಂ ಫಲಕಗಳಲ್ಲಿ ಅನಾವರಣಗೊಳ್ಳಲಿದೆ. ವಿಮಾನ ನಿಲ್ದಾಣದ ಹಲವು ಕಡೆಗಳಲ್ಲಿ ಈ ಡಿಸ್‌ಪ್ಲೇಗಳನ್ನು ಇರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.


ಇದಲ್ಲದೆ, ವಿಮಾನ ನಿಲ್ದಾಣದ ಟರ್ಮಿನಲ್‌ನಲ್ಲಿ ‘ಮೇ ಐ ಹೆಲ್ಪ್ ಯು’ ಡೆಸ್ಕ್ ನಿರ್ವಹಿಸುವ ಸಿಬಂದಿ, ಗ್ರಾಹಕ ಸೇವೆ ಮತ್ತು ಅತಿಥಿ ಸಂಬಂಧಗಳ ಕಾರ್ಯನಿರ್ವಾಹಕರು, ಪ್ರಣಾಮ್ ಸಿಬಂದಿ ಕೂಡಾ ಮಾಹಿತಿಯೊಂದಿಗೆ ಪ್ರಯಾಣಿಕರಿಗೆ ಸಹಾಯ ಮಾಡಲು ಸಿದ್ಧರಿರುತ್ತಾರೆ.

ಇದನ್ನೂ ಓದಿ : ಕೋವಿಶೀಲ್ಡ್ ಲಸಿಕೆ ಅಡ್ಡ ಪರಿಣಾಮ ಬೀರಲಿದೆ; ಸತ್ಯ ಒಪ್ಪಿಕೊಂಡ ಆಸ್ಟ್ರಾಜೆನಿಕಾ! ಏನಿದರ ಪರಿಣಾಮ?

ಎಸ್.ಎಂ.ಎಸ್ ಮೂಲಕ ಮಾಹಿತಿ :

ಎಲ್ಲಾ ಏರ್‌ಲೈನ್ ಚೆಕ್-ಇನ್ ಕೌಂಟರ್‌ಗಳು, ಬೋರ್ಡಿಂಗ್ ಗೇಟ್‌ಗಳಲ್ಲಿ ವಿಮಾನದ ಮಾಹಿತಿಯನ್ನು ವೀಕ್ಷಿಸ ಬಹುದು. ಬೋರ್ಡಿಂಗ್ ಗೇಟ್ ಬದಲಾವಣೆಗಳು/ ವಿಮಾನ ಮರು ವೇಳಾಪಟ್ಟಿ ವಿವರಗಳನ್ನು ಎಸ್.ಎಂ.ಎಸ್. ಮೂಲಕ ಪ್ರಯಾಣಿಕರ ನೋಂದಾಯಿತ ಇಮೇಲ್ ಮತ್ತು ಮೊಬೈಲ್ ಸಂಖ್ಯೆಯಲ್ಲೂ ಕೂಡಾ ಏರ್‌ಲೈನ್ ಹಂಚಿಕೊಳ್ಳಲಿದೆ ಎಂದು ವಿವರಿಸಿದ್ದಾರೆ.

Continue Reading

LATEST NEWS

Trending