Connect with us

    LATEST NEWS

    ಕ್ಷಣಾರ್ಧದಲ್ಲಿ ಲಕ್ಷಾಧಿಪತಿಗಳಾದ ಗಣಿ ಕಾರ್ಮಿಕರು..!

    Published

    on

    ಮಂಗಳೂರು/ಮಹಾರಾಷ್ಟ್ರ : ಮಹಾರಾಷ್ಟ್ರದ ಗಣಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ನೌಕರರು ಒಂದೇ ದಿನದಲ್ಲಿ ಲಕ್ಷಾಧಿಪತಿಗಳಾಗಿದ್ದಾರೆ. ಕಬ್ಬಿಣದ ಅದಿರು ಕಂಪೆನಿಯಲ್ಲಿ ಕೆಲಸ ಮಾಡುತ್ತಿರುವ 6000 ಉದ್ಯೋಗಿಗಳು 1000 ಕೋಟಿಯ ಒಡೆಯರಾಗುವ ಮೂಲಕ ಕಂಪನಿಯ ಪಾಲುದಾರರಾಗಿದ್ದಾರೆ.

    ಸಾಮಾನ್ಯವಾಗಿ ಉದ್ಯೋಗ ನೀಡಿದ ಕಂಪೆನಿಗಳು ನೌಕರರಲ್ಲಿ ದುಡಿಸಿಕೊಂಡು ಲಾಭ ಗಳಿಸುವತ್ತ ಮಾತ್ರ ಗಮನ ಹರಿಸುತ್ತದೆ. ಆದರೆ ಮಹಾರಾಷ್ಟ್ರದ ನಕ್ಸಲ್ ಪೀಡಿತ ಜಿಲ್ಲೆಯಾದ ಗಡ್ಚಿರೋಲಿಯಲ್ಲಿ ಇರುವ ಗಣಿ ಕಂಪೆನಿಯೊಂದು ಕಾರ್ಮಿಕರನ್ನು ಲಕ್ಷಾಧಿಪತಿಗಳನ್ನಾಗಿಸಿ ತನ್ನ ಪಾಲುದಾರರನ್ನಾಗಿ ಮಾಡಿಕೊಂಡಿದೆ.

    ನೌಕರರಿಗೆ ರೂ. 1000 ಕೋಟಿಯ ಷೇರು ಹಂಚಿಕೆ:

    1995 ರಲ್ಲಿ ಆರಂಭವಾದ ಲಾಯ್ಡ್ಸ್ ಮೆಟಲ್ಸ್ ಮತ್ತು ಎನರ್ಜಿ ಲಿಮಿಟೆಡ್ 2025 ರ ಹೊಸ ವರ್ಷದ ಮೊದಲ ದಿನವೇ ತನ್ನ ನೌಕರರಿಗೆ ಶಾ*ಕ್ ಆಗುವಂತಹ ಗಿಫ್ಟ್‌ ನೀಡಿದೆ. ಮಾರುಕಟ್ಟೆಯಲ್ಲಿ ರೂ.1300 ಮೌಲ್ಯ ಹೊಂದಿರುವ ಷೇರುಗಳನ್ನು  ತನ್ನ ಉದ್ಯೋಗಿಗಳಿಗೆ ಕೇವಲ 4 ರೂಪಾಯಿಗೆ ಹಂಚಿಕೆ ಮಾಡಿದೆ. ಕಂಪೆನಿಯ ಗಣಿಯಲ್ಲಿ ದುಡಿಯುತ್ತಿರುವ ಶೇಕಡಾ 80 ರಷ್ಟು ಕಾರ್ಮಿಕರು ಹಾಗೂ ನೌಕರರು ಇದರ ಫಲಾನುಭವಿಗಳು. ಬುಡಕಟ್ಟು ಜನಾಂಗದವರೇ ಹೆಚ್ಚಾಗಿ ಇಲ್ಲಿನ ಕಾರ್ಮಿಕರಾಗಿದ್ದು, ತಮ್ಮ ಸೇವೆ ಹಾಗೂ ಸಂಬಳದ ಆಧಾರದಲ್ಲಿ ಒಬ್ಬರು ಕನಿಷ್ಟ ಅಂದ್ರೂ 100 ಷೇರುಗಳನ್ನು ಪಡೆದುಕೊಂಡಿದ್ದಾರೆ. ಮಾರುಕಟ್ಟೆಯಲ್ಲಿ 100 ಷೇರುಗಳಿಗೆ 1 ಲಕ್ಷದ 30 ಸಾವಿರ ಬೆಲೆ ಇದೆ. ಈ ಕಂಪೆನಿಯ ಒಡಿಶಾ ಘಟಕದಲ್ಲಿ ಕೆಲಸ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತೆ 70 ವರ್ಷದ ತುಳಸಿ ಮುಂಡಾ ಹತ್ತು ಸಾವಿರ ಷೇರುಗಳನ್ನು ಪಡೆಯುವ ಮೂಲಕ 1.3 ಕೋಟಿಯ ಒಡತಿಯಾಗಿದ್ದಾರೆ.

    ಕಂಪೆನಿಯ ದಿಟ್ಟ ಹೆಜ್ಜೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಮಹಾರಾಷ್ಟ್ರ ಸಿಎಂ :

    ವಿಶೇಷವಾಗಿ ಲಾಯ್ಡ್ಸ್‌ ಮೆಟಲ್ಸ್ ಮತ್ತು ಎನರ್ಜಿ ಲಿಮಿಟೆಡ್ ಕಂಪೆನಿ ಶರಣಾಗತರಾಗುವ ನಕ್ಸಲರಿಗೆ ನೌಕರಿ ನೀಡುವ ಮೂಲಕ ಬದುಕು ಕಟ್ಟಿಕೊಳ್ಳಲು ಅವಕಾಶ ನೀಡಿದೆ. ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಬಿ. ಪ್ರಭಾಕರನ್ ಅವರ ಈ ಕಾರ್ಯಕ್ಕೆ ಮಹಾರಾಷ್ಟ್ರದ ಮುಖ್ಯಮಂತ್ರಿ ಫಡ್ನವೀಸ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಯಾವುದೇ ಕಂಪೆನಿಗಳು ತೆಗೆದುಕೊಳ್ಳದ ಗಟ್ಟಿ ನಿರ್ಧಾರ ತೆಗೆದುಕೊಂಡು ಕಾರ್ಮಿಕರನ್ನು ಲಕ್ಷಾಧಿಪತಿಗಳಾಗಿಸುವುದರ ಜೊತೆಗೆ ಕಂಪೆನಿಯ ಪಾಲುದಾರರನ್ನಾಗಿಸಿರುವ ಕಾರ್ಯವನ್ನು ಶ್ಲಾಘಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ಚಹಲ್-ಧನಶ್ರೀ ದಾಂಪತ್ಯದಲ್ಲಿ ಬಿರುಕು; ಖಚಿತ ಪಡಿಸಿತು ಕ್ರಿಕೆಟರ್ ಮಾಡಿದ ಆ ಒಂದು ಕೆಲಸ !

    Published

    on

    ಮಂಗಳೂರು/ಮುಂಬೈ : ಟೀಂ ಇಂಡಿಯಾ ಕ್ರಿಕೆಟಿಗ ಯುಜುವೇಂದ್ರ ಚಹಲ್ ಹಾಗೂ ಖ್ಯಾತ ಕೊರಿಯೋಗ್ರಾಫರ್ ಧನಶ್ರೀ ವರ್ಮಾ ದಾಂಪತ್ಯ ಜೀವನ ಮುರಿದುಬಿತ್ತಾ ಎಂಬ ಅನುಮಾನ ಶುರುವಾಗಿದೆ.

    ಕಳೆದ ಕೆಲವು ವರ್ಷಗಳಿಂದಲೂ ಚಹಲ್-ಧನಶ್ರೀ ದಾಂಪತ್ಯ ಜೀವನದಲ್ಲಿ ಬಿರುಕುಬಿಟ್ಟಿದೆ ಎನ್ನುವಂತಹ ಮಾತುಗಳು ಕೇಳಿ ಬಂದಿದ್ದವು.

    ಇದೀಗ ಅಚ್ಚರಿ ಎಂಬಂತೆ ಯುಜುವೇಂದ್ರ ಚಹಲ್ ಹಾಗೂ ಧನಶ್ರೀ ವರ್ಮಾ ಇಬ್ಬರು ಇನ್ ಸ್ಟಾಗ್ರಾಂನಲ್ಲಿ ಒಬ್ಬರಿಗೊಬ್ಬರು ಅನ್ ಫಾಲೋ ಮಾಡಿದ್ದಾರೆ. ಚಹಲ್ ಅವರು ಧನಶ್ರೀ ಅವರೊಂದಿಗಿನ ಎಲ್ಲಾ ಫೋಟೊಗಳನ್ನು ಸಾಮಾಜಿಕ ಮಾಧ್ಯಮ ಇನ್ ಸ್ಟಾಗ್ರಾಂನಲ್ಲಿ ಅಳಿಸಿ ಹಾಕಿದ್ದಾರೆ. ಆದರೆ, ಚಹಲ್ ಅವರನ್ನು ಅನ್ ಫಾಲೋ ಮಾಡಿರುವ ಧನಶ್ರೀ ಅವರೊಂದಿಗಿನ ಫೋಟೊಗಳನ್ನು ಈವರೆಗೆ ಅಳಿಸಿ ಹಾಕಿಲ್ಲ.

    ಇದನ್ನೂ ಓದಿ: 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಟೀಂ ಇಂಡಿಯಾ

    2023ರಲ್ಲಿ ಧನಶ್ರೀ ಅವರು ಇನ್ ಸ್ಟಾಗ್ರಾಂ ಯುಸರ್ ನೇಮ್ ನಿಂದ ‘ಚಹಲ್’ ಅನ್ನು ಕೈಬಿಟ್ಟ ನಂತರ ವಿಚ್ಛೇದನ ವದಂತಿಗಳು ಹರಿದಾಡಿದ್ದವು. ಆದರೆ, ಈ ವದಂತಿಯನ್ನು ಆಗ ಯಜುವೇಂದ್ರ ಚಹಲ್ ನಿರಾಕರಿಸಿದ್ದರು.

    ಲಾಕೌಡೌನ್ ಸಮಯದಲ್ಲಿ ಪರಸ್ಪರ ಪರಿಚಯವಾಗಿದ್ದ ಚಹಲ್ ಮತ್ತು ಧನಶ್ರೀ, 2020ರ ಡಿಸೆಂಬರ್ 11ರಂದು ವಿವಾಹವಾಗಿದ್ದರು.

     

    Continue Reading

    LATEST NEWS

    ಅಜ್ಮೀರ ದರ್ಗಾಕ್ಕೆ ‘ಚಾದರ್’ ಸಮರ್ಪಿಸಿದ ಕೇಂದ್ರ ಸಚಿವ ಕಿರಣ್ ರಿಜಿಜು..!

    Published

    on

    ಮಂಗಳೂರು/ಜೈಪುರ : ಭಾರತದ ಶ್ರೀಮಂತ ಆಧ್ಯಾತ್ಮಿಕ ಪರಂಪರೆ ಮತ್ತು ಶಾಂತಿ ಮತ್ತು ಏಕತೆಯ ಸಂದೇಶ ಸಾರುವ ಅಜ್ಮೀರ್ ಷರೀಫ್ ದರ್ಗಾದಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಭಾಗವಹಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಪರವಾಗಿ ದರ್ಗಾಗೆ ಭೇಟಿ ನೀಡಿ ಚಾದರ್ ಸಮರ್ಪಿಸುವ ಮೂಲಕ ಖ್ವಾಜಾ ಮೊಯಿನುದ್ದೀನ್ ಚಸ್ತಿ ಅವರ 813 ನೇ ಉರೂಸ್ ನಲ್ಲಿ ಭಾಗವಹಿಸಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಸತತ ಹನ್ನೊಂದು ವರ್ಷಗಳಿಂದ ಅಜ್ಮೀರ್ ಷರೀಫ್ ದರ್ಗಾದ ಉರೂಸ್‌ ಸಮಯದಲ್ಲಿ ದರ್ಗಾಕ್ಕೆ ಚಾದರ್ ಸಮರ್ಪಣೆ ಮಾಡಿದ್ದಾರೆ. ಈ ಬಾರಿ ಸಚಿವ ಕಿರಣ್ ರಿಜಿಜು ಅವರು ಪ್ರಧಾನಿ ಮೋದಿ ಅವರ ಪರವಾಗಿ ದರ್ಗಾಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಮಾತನಾಡಿದ ಸಚಿವ ರಿಜಿಜು, “ಅಜ್ಮೀರ್ ಉರೂಸ್ ಸಮಯದಲ್ಲಿ ಗರೀಬ್ ನವಾಜ್ ದರ್ಗಾಕ್ಕೆ ಭೇಟಿ ನೀಡುವುದು ದೇಶದ ಹಳೆಯ ಸಂಪ್ರದಾಯವಾಗಿದೆ. ಸೌಹಾರ್ದತೆ ಮತ್ತು ಭಾತೃತ್ವದ ಸಂದೇಶವನ್ನು ರವಾನಿಸಲು ಪ್ರಧಾನಿ ಮೋದಿ ಅವರ ಪರವಾಗಿ ಚಾದರ್ ಅರ್ಪಿಸುವ ಅವಕಾಶ ಸಿಕ್ಕಿದೆ. ಉರೂಸ್‌ ಸಂದರ್ಭದಲ್ಲಿ ದೇಶದಲ್ಲಿ ಶಾಂತಿಯುತ ವಾತಾವರಣಕ್ಕಾಗಿ ನಾವು ಆಶೀರ್ವಾದವನ್ನು ಬಯಸುತ್ತಿದ್ದೇನೆ” ಎಂದು ಹೇಳಿದ್ದಾರೆ.

    ಇದೇ ವೇಳೆ ದರ್ಗಾಕ್ಕೆ ಭೇಟಿ ನೀಡುವ ಲಕ್ಷಾಂತರ ಯಾತ್ರಾರ್ಥಿಗಳಿಗೆ ಅನುಕೂಲ ಆಗುವ ಎಲ್ಲಾ ಮೂಲಸೌಕರ್ಯಗಳನ್ನು ಸುಧಾರಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.

    Continue Reading

    LATEST NEWS

    ಕಮರಿಗೆ ಬಿದ್ದ ಸೇನಾ ವಾಹನ; ಇಬ್ಬರೂ ಯೋಧರ ಸಾವು, ಮೂವರಿಗೆ ಗಂಭೀರ ಗಾಯ

    Published

    on

    ಮಂಗಳೂರು/ಶ್ರೀನಗರ: ಜಮ್ಮು ಕಾಶ್ಮೀರದ ಬಂಡಿಪೊರಾದಲ್ಲಿ ಸೇನಾ ವಾಹನ ಕಂದಕಕ್ಕೆ ಬಿದ್ದ ಹಿನ್ನೆಲೆಯಲ್ಲಿ ಇಬ್ಬರು ಯೋಧರು ಮೃತಪಟ್ಟಿದ್ದಾರೆ.

    ಈ ದುರ್ಘಟನೆಯಲ್ಲಿ 3 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಂಡಿಪೋರಾದ ವುಲರ್ ವ್ಯೂಪಾಯಿಂಟ್ ಬಳಿ ಸೇನಾ ವಾಹನವೊಂದು ರಸ್ತೆಯಿಂದ ಕೆಳಗಿಳಿದು ಆಳವಾದ ಕಮರಿಗೆ ಉರುಳಿದ ಘಟನೆ ನಡೆದಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.

    ಉತ್ತರ ಕಾಶ್ಮೀರ ಜಿಲ್ಲೆಯ ಎಸ್.ಕೆ ಪಯೆನ್ ಬಳಿ ಸೇನಾ ವಾಹನ ಕಮರಿಗೆ ಬಿದ್ದು ಇಬ್ಬರು ಸೈನಿಕರ ಸಾವು, ಮೂವರು ಗಂಭೀರವಾಗಿರುವುದನ್ನು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಬಂಡಿಪೋರಾ- ಶ್ರೀನಗರ ರಸ್ತೆಯ ಎಸ್ ಕೆ ಪಯೀನ್ ಬಳಿ ವಾಹನ ಸ್ಕಿಡ್ ಆಗಿ ಆಳವಾದ ಕಮರಿಗೆ ಬಿದ್ದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಇದನ್ನೂ ಓದಿ: ಚೀನಾದ ನಿಗೂಢ ವೈರಸ್ ಕುರಿತು ಆರೋಗ್ಯ ಸಂಸ್ಥೆ ಮಾಹಿತಿ !

    ಈ ಘಟನೆಯಲ್ಲಿ ಐವರು ಯೋಧರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಜಿಲ್ಲಾ ಆಸ್ಪತ್ರೆಗೆ ಬಂಡಿಪೋರಾಕ್ಕೆ ಕರೆದೊಯ್ಯಲಾಯಿತು. ಇಲ್ಲಿ ಇಬ್ಬರು ಬರುವಾಗಲೇ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ತೀವ್ರವಾಗಿ ಗಾಯಗೊಂಡ ಮೂವರು ಸೈನಿಕರನ್ನು ಚಿಕಿತ್ಸೆಗಾಗಿ ಶ್ರೀನಗರಕ್ಕೆ ಸ್ಥಳಾಂತರಿಸಲಾಗಿದೆ.

    Continue Reading

    LATEST NEWS

    Trending