Connect with us

BANTWAL

ಕಾರೀಂಜೇಶ್ವರ ಸನ್ನಿಧಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಸೂಕ್ತ ಕ್ರಮಕ್ಕೆ ಸಚಿವ ಅಂಗಾರ ಸೂಚನೆ..!

Published

on

ಮಂಗಳೂರು : ಬಂಟ್ವಾಳ ತಾಲೂಕಿನ ಕಾವಳಮುಡೂರು ಗ್ರಾಮದ ಕಾರಿಂಜೇಶ್ವರ ದೇವಸ್ಥಾನದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಅವರು ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೇವಸ್ಥಾನದ ಸುತ್ತಮುತ್ತಲಿನ ಜಾಗದಲ್ಲಿ 2 ಕ್ರಶರ್ ಮತ್ತು 2 ಕಲ್ಲು ಕ್ವಾರಿಗಳ ಕಾರ್ಯಾಗಚರಣೆ ಸ್ಥಗಿತಗೊಳಿಸಲಾಗಿದೆ.

ಕಲ್ಲು ಗಣಿ ಗುತ್ತಿಗೆ ಪ್ರದೇಶದ ಹೊರ ಭಾಗದಲ್ಲಿ ಅಕ್ರಮವಾಗಿ ಕಟ್ಟಡ ಕಲ್ಲು ಸಾಗಾಣಿಕೆ ಮಾಡಿರುವುದರಿಂದ ಗಣಿ ಮಾಲೀಕರಿಗೆ 8.90 ಕೋಟಿ ರೂ.ದಂಡ ವಿಧಿಸಲಾಗಿದೆ. ಬಂಟ್ವಾಳ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಇಲಾಖೆಯವರು ಪಿಸಿಆರ್ ದಾವೆ ಹೂಡಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

ಜಿಯೋಗ್ರಾಫಿಕಲ್ ಸರ್ವೆ ಆಫ್ ಇಂಡಿಯಾದಿಂದ ಸರ್ವೇ ನಡೆಸಿ ಅದರ ವರದಿ ಆಧಾರದ ಮೇಲೆ ಕ್ರಮಕೈಗೊಳ್ಳಲಾಗುವುದು.

ಜಿಲ್ಲಾಧಿಕಾರಿ ಹಾಗೂ ಸಂಬಂಧ ಪಟ್ಟ ಎಲ್ಲ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ಕ್ರಮಕ್ಕೆ ನಿರ್ದೇಶನ ನೀಡಲಾಗುವುದೆಂದು ಸಚಿವ ಎಸ್.ಅಂಗಾರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

BANTWAL

ಗಂಡ ಹೆಂಡತಿಗೆ ನಾಲ್ವರಿಂದ ಹಲ್ಲೆ..!!

Published

on

ಬಂಟ್ವಾಳ; ಅಪಘಾತದ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ಮಾಡಿರುವ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಎ.15ರಂದು ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ ಹಲ್ಲೆಗೊಳಗಾದವರು. ಹಲ್ಲೆಗೊಳಗಾದವರು ಬಂಟ್ವಾಳ ನಗರ ಪೋಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಮಂಜುನಾಥ್ ಅವರು ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ ಕಲ್ಲಡ್ಕ ಸಮೀಪದ ನರಹರಿ ಎಂಬಲ್ಲಿ ಇವರ ಕಾರಿಗೆ ಹರಿಯಾಣ ಮೂಲದ ಕಾರೊಂದ ಓವರ್ ಟೇಕ್ ಮಾಡುವ ಭರದಲ್ಲಿ ಡಿಕ್ಕಿಯಾಗಿದೆ. ಈ ಸಂದರ್ಭದಲ್ಲಿ ಕೈ ಸನ್ನೆಯ ಮೂಲಕ ಪ್ರಶ್ನಿಸಿದಕ್ಕೆ ಅಪಘಾತ ಎಸಗಿದ ಕಾರು ಮುಂದೆ ಹೋಗಿ ಕರಿಂಗಾಣ ಕ್ರಾಸ್ ಎಂಬಲ್ಲಿ ಅಡ್ಡವಾಗಿ ಇರಿಸಿ ಮಂಜುನಾಥ್ ಹಾಗೂ ಅವರ ಪತ್ನಿ ಪೂರ್ಣಿಮಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ಇದೇ ಸಂದರ್ಭದಲ್ಲಿ ಪೂರ್ಣಿಮಾ ಅವರ ಕುತ್ತಿಗೆಯಲ್ಲಿದ್ದ ಬಂಗಾರದ ಚೈನ್ ನಾಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಹಲ್ಲೆಯಿಂದ ಮಂಜುನಾಥ್ ಅವರ ಕಣ್ಣಿಗೆ ಏಟಾಗಿದ್ದು, ಅವರು ಬಂಟ್ವಾಳ ನಗರ ಪೋಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಘಟನೆ ನಡೆದ ಕೂಡಲೇ ಸಂಚಾರ ಪೊಲೀಸರು ಭೇಟಿ ನೀಡಿ ವಾಹನವನ್ನು ಹಾಗೂ ಸ್ಥಳದಲ್ಲಿದ್ದವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಟ್ವಾಳ ನಗರ ಪೊಲೀಸ್‌ ಇನ್ಸ್ ಪೆಕ್ಟರ್ ಅನಂತ ಪದ್ಮನಾಭ ಅವರು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಗೆ ಭಜರಂಗದಳ, ವಿಶ್ವಹಿಂದೂಪರಿಷತ್ ಕಲ್ಲಡ್ಕ ಪ್ರಖಂಡ ಖಂಡನೆ ವ್ಯಕ್ತಪಡಿಸಿದ್ದಾರೆ.

Continue Reading

BANTWAL

ಹಿಂದೂ ಸಂಘಟನೆಯ ಮುಖಂಡನಿಗೆ ಸ್ನೇಹಿತನಿಂದಲೆ ಚೂ*ರಿ ಇರಿತ

Published

on

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತನೇ ಚೂ*ರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ಭಾನುವಾರ(ಎ.14) ರಾತ್ರಿ ನಡೆದಿದೆ.

ಹಿಂದೂ ಯುವಸೇನೆಯ ಮುಖಂಡ ಉದ್ಯಮಿಯಾಗಿರುವ ಪುಷ್ಪರಾಜ್ ಎಂಬವರಿಗೆ ಜಕ್ರಿಬೆಟ್ಟು ಎಂಬಲ್ಲಿ ಚೂ*ರಿ ಇರಿತವಾಗಿದೆ. ಇರಿತಕ್ಕೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ. ರಿಕ್ಷಾದಲ್ಲಿ ಜತೆಯಾಗಿ ತೆರಳುತ್ತಿದ್ದಾಗಲೇ ಸ್ನೇಹಿತ ರವಿ ಎಂಬಾತ ಚೂ*ರಿಯಿಂದ ಕುತ್ತಿಗೆಗೆ ಇರಿದಿದ್ದಾನೆ ಎಂದು ಹೇಳಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಪುಷ್ಪರಾಜ್ ರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆರೋಪಿ ರವಿ ಚೂ*ರಿ ಇರಿದು ಪರಾರಿಯಾಗಿದ್ದಾನೆ. ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ‌ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading

BANTWAL

ಬಂಟ್ವಾಳ: ಮಾರ್ಗ ನಡುವೆ ಹೊ*ತ್ತಿ ಉರಿದ ಡಸ್ಟರ್ ಕಾರ್

Published

on

ಬಂಟ್ವಾಳ: ಡಸ್ಟರ್ ಕಾರೊಂದು ಮಾರ್ಗದ ನಡುವೆ ಹೊ*ತ್ತಿ ಉರಿದ ಘಟನೆ ಬಂಟ್ವಾಳ – ಮೂಡುಬಿದಿರೆಯ ಕುದ್ಕೋಳಿ ಸಮೀಪ ಸೋಮವಾರ ಬೆಳಗ್ಗೆ ಸಂಭವಿಸಿದೆ.

ಕಾರಿನಲ್ಲಿ ಏಕಾಏಕಿ ಬೆಂ*ಕಿ ಕಾಣಿಸಿಕೊಂಡಿದ್ದು ಕಾರಿನಲ್ಲಿದ್ದವರು ಕಾರಿನಿಂದ ಕೆಳಗಿಳಿದಿದ್ದಾರೆ. ಬೆಂ*ಕಿ ಕಾಣಿಸಿಕೊಂಡಿದ್ದರಿಂದ ಸ್ಥಳೀಯರು ಮತ್ತು ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂ8ಕಿ ನಂದಿಸುವ ಕಾರ್ಯ ನಿರ್ವಹಿಸಿದರು. ಸುಮಾರು ಒಂದು ಗಂಟೆಯ ಕಾಲ ಬಂಟ್ವಾಳ-ಮೂಡಬಿದ್ರೆ ರೋಡ್ ಬ್ಲಾಕ್ ಆಗಿತ್ತು.

ಕಾರಿನ ಬ್ಯಾಟರಿ ಶಾರ್ಟ್‌ ಸಕ್ಯೂರ್ಟ್‌ನಿಂದಾಗಿ ಬೆಂ*ಕಿ ಕಾಣಿಸಿಕೊಂಡಿದೆ. ಕಾರಿನಲ್ಲಿ ಮಗು ಸೇರಿದಂತೆ ನಾಲ್ಕು ಮಂದಿ ಇದ್ದರು. ಆದರೆ ಯಾರಿಗೂ ಹಾನಿಯಾಗಲಿಲ್ಲ.

Continue Reading

LATEST NEWS

Trending