ಜಿಲ್ಲೆಯಲ್ಲಿ ಸರ್ಕಾರಿ ಬಸ್ ಕಾರ್ಯಾಚರಿಸಲು ಜಿಲ್ಲಾ ಉಸ್ತುವಾರಿ ಸಚಿವ ಸೂಚನೆ..
ಜಿಲ್ಲೆಯಲ್ಲಿ ಸರ್ಕಾರಿ ಬಸ್ ಕಾರ್ಯಾಚರಿಸಲು ಜಿಲ್ಲಾ ಉಸ್ತುವಾರಿ ಸಚಿವ ಸೂಚನೆ..
ಮಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಗಳ ಸಂಚಾರವನ್ನು ಮಂಗಳೂರು ನಗರದಲ್ಲಿ ಆರಂಭಿಸಲು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ವೆನ್ಲಾಕ್ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಮಾಡಲಾಗಿದ್ದು,
ಈ ಮೊದಲು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ವೆನ್ಲಾಕ್ ಆಸ್ಪತ್ರೆ ದರದಲ್ಲೇ ಚಿಕಿತ್ಸೆ ದೊರಕಬೇಕು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.
ಕೆ.ಎಸ್.ಆರ್.ಟಿ.ಸಿ ನರ್ಮ್ ಬಸ್ಸ್ಗಳ ಬಗ್ಗೆ ಮಾಹಿತಿ ಪಡೆದು, 42 ನರ್ಮ್ ಬಸ್ಸುಗಳು ಕಾರ್ಯಾಚರಣೆ ಪ್ರಾರಂಭಿಸಲಿ ಎಲ್ಲಿ ಅಗತ್ಯವಿದೆಯೋ ಅಲ್ಲಿ ಮೊದಲು ಒಂದೊಂದಾಗಿ ಕಾರ್ಯಾಚರಿಸಲಿ ಎಂದು ಸೂಚಿಸಿದರು.
ಇನ್ನು ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಒಟ್ಟು 32 ಕೊರೊನಾ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು ಎಲ್ಲರ ಆರೋಗ್ಯ ಸ್ಥಿತಿ ಉತ್ತಮವಾಗಿದೆ.
ರೋಗಿಗಳು ತಮ್ಮ ತಮ್ಮ ಕುಟುಂಬದೊಂದಿಗೆ ದೂರವಾಣಿ ಮೂಲಕ ಸಂಪರ್ಕದಲ್ಲಿದ್ದಾರೆ.
ಹಾಗೂ ರೋಗಿಯ ಕೌನ್ಸಿಲರ್ಗಳು ಕುಟುಂಬದವರಿಗೆ ರೋಗಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಳನ್ನು ನೀಡುತ್ತಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಮಚಂದ್ರ ಬಾಯಾರಿ ಸಚಿವರಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ಮಾತನಾಡಿ, ಮಂಗಳವಾರ 40 ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಪ್ರಾರಂಭವಾಗಿದ್ದು,
ಎಲ್ಲಾ ಬಸ್ಸುಗಳಲ್ಲಿ ಪ್ರಯಾಣಿಕರಿಗೆ ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯವಾಗಿ ಬಳಸಲು ಸೂಚಿಸಲಾಗಿದೆ.
ಸ್ಯಾನಿಟೈಸರ್ ಬಸ್ ಕಂಡೆಕ್ಟರ್ ಕೈಯಲ್ಲಿ ನೀಡಲಾಗಿದ್ದು, ಪ್ರಯಾಣಿಕರು ಬಸ್ಸಿನೊಳಗೆ ಪ್ರವೇಶಿಸುವ ಮೊದಲು ಸ್ಯಾನಿಟೈಸರ್ ಬಳಸುವಂತೆ ಕ್ರಮ ವಹಿಸಲಾಗಿದೆ.
ಹಾಗೂ ಟಿಕೆಟ್ ದರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದರು. ಮಂಗಳೂರಿನಿಂದ ಬೆಂಗಳೂರು ಅಥವಾ ಮೈಸೂರು ಬಸ್ಸ್ ಗಳಲ್ಲಿ ಪ್ರಯಾಣಿಸುವವರಿಗೆ,
ಟರ್ಮಿನಲ್ ಸ್ಕ್ಯಾನಿಂಗ್, ಮಾಸ್ಕ್, ಸ್ಯಾನಿಟೈಸರ್ ಮತ್ತು ಪ್ರಯಾಣಿಸುವವರ ಬಗ್ಗೆ ಮಾಹಿತಿ ದೂರವಾಣಿ ಸಂಖ್ಯೆ ಕಡ್ಡಾಯವಾಗಿ ನೀಡಬೇಕು.
ಕರ್ನಾಟಕ ಬಸ್ಸ್ನಲ್ಲಿ 29 ಪ್ರಯಾಣಿಕರು, ರಾಜಹಂಸ ಬಸ್ಸ್ನಲ್ಲಿ 19 ಜನ ಪ್ರಯಾಣಿಸಬಹುದು ಎಂದರು.
ಸಭೆಯಲ್ಲಿ ಶಾಸಕ ಭರತ್ ವೈ ಶೆಟ್ಟಿ, ಅಪರ ಜಿಲ್ಲಾಧಿಕಾರಿ ರೂಪಾ ಎಂ.ಜೆ, ಎಸ್.ಪಿ. ಲಕ್ಷ್ಮೀಪ್ರಸಾದ್, ಮಹಾನಗರ ಪಾಲಿಕೆ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗಡೆ ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
LATEST NEWS
ಉಡುಪಿ : ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿಅ*ಗ್ನಿ ಅವಘ*ಡ
ಉಡುಪಿ : ದೊಡ್ಡಣಗುಡ್ಡೆ ಬಬ್ಬುಸ್ವಾಮಿ ಗುಡಿಯ ಬಳಿ ಇರುವ ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಇಂದು(ಸೆ.23) ಬೆಳಗ್ಗೆ ಅ*ಗ್ನಿ ಅವಘ*ಡ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂ*ಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.
ರಿನೋವೇಷನ್ ಆಗುತ್ತಿದ್ದುದರಿಂದ ರೋಗಿಗಳು ಯಾರೂ ಇರಲಿಲ್ಲ. ಬೆಳಗ್ಗೆ ದೈನಂದಿನ ಕೆಲಸಕ್ಕೆ ಬರುವ ಮಹಿಳೆಯೊಬ್ಬರು ಅಡುಗೆ ಕೋಣೆಯಲ್ಲಿ ಕೆಲಸ ಪ್ರಾರಂಭಿಸುವಾಗ ಹಾಲ್ ನಲ್ಲಿ ಬೆಂ*ಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.
ತಕ್ಷಣ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಉಡುಪಿ ಅ*ಗ್ನಿಶಾಮಕ ದಳದ ತಂಡ ಬೆಂ*ಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಪ್ರಾರಂಭದಲ್ಲಿ ಕಟ್ಟಡದ ಮೇಲ್ಮಹಡಿಯಲ್ಲಿ ಬೆಂ*ಕಿ ಹೊತ್ತಿಕೊಂಡಿದೆ. ಮೊದಲ ಮಹಡಿಯಲ್ಲಿದ್ದ ಇಬ್ಬರು ಕಾರ್ಮಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
LATEST NEWS
ಅಣ್ಣನ ಪ್ರೀತಿಗೆ ತಮ್ಮ ಬ*ಲಿ; ತಾಯಿಯ ಮುಂದೆಯೇ ಮಗನ ಕೊ*ಲೆ
ಮಂಗಳೂರು/ಕಲಬುರಗಿ: ಯುವ ಸಮಾಜದ ಪ್ರೀತಿಗೆ ಮನೆಯಲ್ಲಿ ವಿರೋಧ ಬರುವುದು ಸಹಜ. ಅದರಲ್ಲೂ ಹುಡುಗಿಯ ವಿಚಾರದಲ್ಲಿ ಇದು ಹೆಚ್ಚಾಗಿಯೇ ಕಾಣಬಹುದು. ವಿಪರ್ಯಾಸವೆಂದರೆ ಅಣ್ಣನ ಪ್ರೇಮದ ವಿಚಾರದಲ್ಲಿ ತಮ್ಮ ಬಲಿ*ಯಾದ ಘಟನೆ ನಡೆದಿದೆ.
ಕಲಬುರಗಿ ನಗರದ ಹೊರವಲಯದಲ್ಲಿರುವ ನಾಗನಹಳ್ಳಿ ಗ್ರಾಮದಲ್ಲಿ ಸುಮಿತ್ ಮಲ್ಲಾಬಾದ್ ಎಂಬ 19 ವರ್ಷದ ಯುವಕನನ್ನು ಭೀಕ*ರವಾಗಿ ಕೊ*ಲೆ ಮಾಡಲಾಗಿದೆ. ತಂದೆ-ತಾಯಿಯೊಂದಿಗೆ ಮುಂಬೈನಲ್ಲಿ ವಾಸವಾಗಿದ್ದ ಸುಮಿತ್, ಮುಂಬೈನಲ್ಲಿ ಪದವಿ ವಿದ್ಯಾಭ್ಯಾಸ ಮಾಡುತ್ತಿದ್ದ. ಕಳೆದ ವಾರವಷ್ಟೇ ತಾಯಿಯೊಂದಿಗೆ ಕಲಬುರಗಿಗೆ ಆಗಮಿಸಿದ್ದ. ಊರಲ್ಲಿ ಸುಮಿತ್ ಸಹೋದರ ಸಚಿನ್ ಮನೆಯಲ್ಲಿ ವಾಸವಾಗಿದ್ದ. ಸಚಿನ್ ನಾಗನಹಳ್ಳಿ ಗ್ರಾಮದ ತನ್ನದೆ ಏರಿಯಾದ ಯುವತಿಯನ್ನು ಪ್ರೀತಿಸುತ್ತಿದ್ದನಂತೆ. ಈ ವಿಚಾರ ಯುವತಿಯ ಮನೆಯವರಿಗೆ ಗೊತ್ತಾಗಿ ಸಾಕಷ್ಟು ಭಾರಿ ನ್ಯಾಯ ಪಂಚಾಯಿತಿ ಮಾಡಿದ್ದರಂತೆ. ಆದರೆ ಅದು ಬಗೆಹರೆದಿರಲಿಲ್ಲ. ನಿನ್ನೆ ಸಂಜೆ (ಸೆ.21) ಸಚಿನ್ ಮನೆಗೆ ಯುವತಿಯ ಸಹೋದರ ಮತ್ತು ಆತನ ಕೆಲ ಸ್ನೇಹಿತರು ಬಂದಿದ್ದಾಗ ಸಚಿನ್ ಮನೆಯಲ್ಲಿರದ ಕಾರಣ ಆತನ ತಾಯಿ ಮತ್ತು ಸಹೋದರನ ಜೊತೆ ಗಲಾಟೆ ತೆಗೆದಿದ್ದಾರೆ. ಬಳಿಕ ಗಲಾಟೆ ವಿಕೋಪಕ್ಕೆ ತೆರಳಿ ಸುಮಿತ್ನನ್ನ ಚಾ*ಕುವಿನಿಂದ ಚು*ಚ್ಚಿ ಎಸ್ಕೇಪ್ ಆಗಿದ್ದಾರೆ.
ಇತ್ತ ಸುಮಿತ್ಗೆ ಚಾ*ಕು ಚುಚ್ಚಿ*ದ್ದನ್ನು ಕಂಡ ತಾಯಿ, ಮಗನನ್ನ ಉಳಿಸಿಕೊಳ್ಳಲು ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹನ್ನೆರೆಡು ಗಂಟೆಗಳ ಕಾಲ ನಡೆದ ಚಿಕಿತ್ಸೆ ಫಲಕಾರಿಯಾಗಿದೆ ಇಂದು ಬೆಳಗ್ಗೆ (ಸೆ.22) ಸಾವನ್ನ*ಪ್ಪಿದ್ದಾನೆ.
ಈ ಸಂಬಂಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಅದೇನೆ ಆಗಲಿ ಯುವತಿಯ ವಿಚಾರದಲ್ಲಿ ಏನು ಮಾಡದ ಅಮಾಯಕ ಯುವಕ ಬಲಿಯಾಗಿರೋದು ನಿಜಕ್ಕೂ ದುರಂತವೆ ಸರಿ.
LATEST NEWS
ತಿರುಪತಿಯಿಂದ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ತುಪ್ಪ ಸಾಗಿಸುವ ಟ್ಯಾಂಕರ್ಗಳಿಗೆ ಜಿಪಿಎಸ್ ಅಳವಡಿಕೆ
ಆಂಧ್ರಪ್ರದೇಶ/ಮಂಗಳೂರು: ತಿರುಪತಿ ತಿರುಮಲದಲ್ಲಿ ಲಡ್ಡು ವಿವಾದ ಉಂಟಾದ ಬಳಿಕ ಸರಕಾರ ನಂದಿನಿ ತುಪ್ಪಕ್ಕೆ ಬೇಡಿಕೆ ಇಟ್ಟಿದೆ. ಒಂದು ತಿಂಗಳ ಹಿಂದೆ ಟಿಟಿಡಿ ಕೆಎಂಎಫ್ಗೆ ಟೆಂಡರ್ ನೀಡಿದ ನಂತರ ನಂದಿನಿ ತುಪ್ಪ ಪೂರೈಕೆಯನ್ನು ಪುನಃ ಆರಂಭಿಸಲಾಗಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ ಕೆ ಜಗದೀಶ್ ಹೇಳಿದ್ದಾರೆ.
ತಿರುಪತಿ ಲಡ್ಡು ವಿವಾದದ ಬಳಿಕ ಕೆಎಮ್ಎಫ್ ಹೈ ಅಲರ್ಟ್:
“ನಾವು ಒಂದು ತಿಂಗಳ ಹಿಂದೆ ತುಪ್ಪವನ್ನು(ಟಿಟಿಡಿಗೆ) ಸರಬರಾಜು ಮಾಡುತ್ತಿದ್ದೇವೆ. ನಾವು ವಾಹನಗಳಿಗೆ ಜಿಪಿಎಸ್ ಸಿಸ್ಟಮ್ ಮತ್ತು ಜಿಯೋ ಲೊಕೇಶನ್ ಸಾಧನಗಳನ್ನು ಅಳವಡಿಸಿದ್ದೇವೆ. ಇದರಿಂದ ವಾಹನ ಎಲ್ಲಿ ನಿಲ್ಲುತ್ತವೆ ಎಂಬುದನ್ನು ನಾವು ಕಂಡುಹಿಡಿಯಬಹುದು. ಇದು ಎಲ್ಲಿಯೂ ಕಲಬೆರಕೆ ಮಾಡದಂತೆ ನೋಡಿಕೊಳ್ಳಲು ಸಹಾಯಕವಾಗುತ್ತದೆ” ಎಂದು ಜಗದೀಶ್ ತಿಳಿಸಿದ್ದಾರೆ.
ಕೆಎಂಎಫ್, ಟಿಟಿಡಿಗೆ 350 ಟನ್ ತುಪ್ಪ ಪೂರೈಸುವ ಗುತ್ತಿಗೆ ಪಡೆದುಕೊಂಡಿದೆ. ಅಗತ್ಯ ಬಿದ್ದಾಗ ತುಪ್ಪ ಪೂರೈಕೆ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ. ವಿಶ್ವವಿಖ್ಯಾತ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಮುಖ್ಯಮಂತ್ರಿ ಆರೋಪ ಮಾಡಿದ್ದರು. ಅಲ್ಲದೆ ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ.