Wednesday, December 1, 2021

ಬಿಜೆಪಿ – ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲಿನ ಸುಳ್ಳು ಕೇಸುಗಳ ಮರು ಪರಿಶೀಲಿಸಿ ಹಿಂಪಡೆಯಲು ಕೋಟ ಪ್ರಸ್ತಾಪನೆ

ಬೆಂಗಳೂರು : ಬಿಜೆಪಿ – ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲಿನ ಸುಳ್ಳು ಕೇಸುಗಳ ಮರು ಪರಿಶೀಲಿಸಿ ಹಿಂಪಡೆಯಲು  ಸಚಿವ  ಕೋಟಾ ಶ್ರೀನಿವಾಸ್ ಪೂಜಾರಿ ಅವರು ಪ್ರಸ್ತಾವನೆ ಸಲ್ಲಿಸಿದ್ದಾರೆ.

ಬೆಂಗಳೂರಿನ ವಿಕಾಸ ಸೌದದಲ್ಲಿ ಖುದ್ದಾಗಿ ರಾಜ್ಯದ ಗೃಹ ಮಂತ್ರಿ ಆರಗ ಜ್ನಾನೇಂದ್ರರವರನ್ನು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಭೇಟಿ ಮಾಡಿದರು.

ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಭಾರತೀಯ ಜನತಾ ಪಾರ್ಟಿ ಮತ್ತು ಹಿಂದೂ ಸಂಘಟನೆಗಳು ಕೊಟ್ಟಿದ್ದ ಮನವಿಯನ್ನು ಗೃಹ ಮಂತ್ರಿಗಳಿಗೆ ಹಸ್ತಾಂತರಿಸುತ್ತಾ ಈ ಹಿಂದೆ ಅನ್ಯ ಸಂಘಟನೆಯ ಕಾರ್ಯಕರ್ತರ ಪ್ರಕರಣಗಳನ್ನು ಹಿಂದಿನ ಸರ್ಕಾರ ವಾಪಾಸು ಪಡೆದಿದ್ದು ಅದೇ ಸಂದರ್ಭದಲ್ಲಿ ಬಿಜೆಪಿ ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರ ಕೇಸುಗಳು ಬಾಕಿ ಉಳಿದಿದೆ.

ಕರಾವಳಿ ಭಾಗದ ಹಿಂದೂ ಸಂಘಟನೆಗಳು ಕೊಟ್ಟಿದ್ದ ಮನವಿಯನ್ನು ಉಲ್ಲೇಖಿಸಿ ರಾಜ್ಯದಲ್ಲಿರುವ ಇಂತಹಾ ಪ್ರಕರಣಗಳನ್ನು ಕೂಡಲೇ ಮಾಹಿತಿ ಪಡೆದುಕೊಂಡು ಭಾರತೀಯ ಜನತಾ ಪಾರ್ಟಿ ಹಾಗೂ ಹಿಂದೂ ಕಾರ್ಯಕರ್ತರ ಮೇಲಿರುವ ಸುಳ್ಳು ಪ್ರಕರಣಗಳನ್ನು ತಕ್ಷಣ ವಾಪಾಸು ಪಡೆಯಬೇಕೆಂದು ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಉಲ್ಲೇಖಿಸಿದರು.

ಗೃಹ ಸಚಿವ ಆರಗ ಜ್ನಾನೇಂದ್ರರವರು ಈ ವಿಷಯಗಳನ್ನು ಕೂಡಲೇ ಗಮನಿಸಿ ಎಲ್ಲಾ ಜಿಲ್ಲೆಗಳಿಂದ ಮಾಹಿತಿಯನ್ನು ಪಡೆದು ಸಚಿವ ಸಂಪುಟದ ಮಂಡಿಸಿ ಸುಳ್ಳು ಕೇಸುಗಳನ್ನು ವಾಪಾಸು ಪಡೆಯುವ ಭರವಸೆ ನೀಡಿದರು.

 

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...