ದುಷ್ಕರ್ಮಿಗಳಿಂದ ದಾಳಿಗೊಳಗಾದ ದಿನೇಶ್ ಆರೋಗ್ಯ ವಿಚಾರಿಸಿದ ಸಚಿವ ಕೋಟಾ..!
ಮಂಗಳೂರು : ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾದ ಭಾಜಪಾ ಕಾರ್ಯಕರ್ತ ದಿನೇಶ್ ಕೊಟ್ಟಿಂಜ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಮಂಗಳೂರು ಉತ್ತರ ಶಾಸಕರಾದ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಈ ಸಂದರ್ಭದಲ್ಲಿ ಉಪಸ್ಥಿರಿದ್ದರು.
ತಜ್ಞ ವೈದ್ಯರೊಂದಿಗೆ ಸಚಿವರು, ಶಾಸಕರು ಸಮಾಲೋಚನೆ ನಡೆಸಿ ದಿನೇಶ್ ಅವರ ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದರು.
ಶಾಸಕ ಡಾ.ಭರತ್ ಶೆಟ್ಟಿಯವರು ದಿನೇಶ್ ಅವರ ಆರೋಗ್ಯದ ಬಗ್ಗೆ ನಿರಂತರವಾಗಿ ವೈದ್ಯರೊಂದಿಗೆ, ಕುಟುಂಬದವರೊಂದಿಗೆ ಸಂಪರ್ಕದಲ್ಲಿದ್ದು ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದಾರೆ.
ಪ್ರಮುಖರಾದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಂತೋಷ್ ಕುಮಾರ್ ಬೊಳಿಯಾರ್, ಬಿಜೆಪಿ ಮಂಡಲ ಅಧ್ಯಕ್ಷರಾದ ಚಂದ್ರಹಾಸ ಪಂಡಿತ್ ಹೌಸ್, ಹಾಗೂ ಇನ್ನಿತರರು ಉಪಸ್ಥಿತರಿದ್ದರು.