Wednesday, October 5, 2022

ಕೊರೊನಾದ ಹೆಸರಿನಲ್ಲಿ ಸುಲಿಗೆ ಮಾಡುವ ಆಸ್ಪತ್ರೆಗಳಿಗೆ ಸಚಿವ ಕೋಟಾ ವಾರ್ನಿಂಗ್..!

ಕೊರೊನಾದ ಹೆಸರಿನಲ್ಲಿ ಸುಲಿಗೆ ಮಾಡುವ ಆಸ್ಪತ್ರೆಗಳಿಗೆ ಸಚಿವ ಕೋಟಾ ವಾರ್ನಿಂಗ್..!

ಮಂಗಳೂರು : ಜಿಲ್ಲೆಯಲ್ಲಿ ಯಾವುದೇ ಆಸ್ಪತ್ರೆ ಹೆಚ್ಚುವರಿ ಬಿಲ್ ಪಡೆದುಕೊಂಡಿರುವುದು ಗಮನಕ್ಕೆ ಬಂದರೆ ಅಂತಹ ಆಸ್ಪತ್ರೆಗಳ ಮೇಲೆ ನಿರ್ದಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಖಾಸಾಗಿ ಇರಲಿ ಅಥವಾ ಸರ್ಕಾರಿ ಇರಲಿ ಕೊರೊನಾದ ಹೆಸರಿನಲ್ಲಿ ಯಾವುದೇ ಆಸ್ಪತ್ರೆ ಹೆಚ್ಚುವರಿ ಬಿಲ್ ಪಡೆದುಕೊಂಡಿರುವುದು ಗಮನಕ್ಕೆ ಬಂದರೆ ಜಿಲ್ಲಾ ಆರೋಗ್ಯಾಧಿಕಾರಿಗೆ ದಾಖಲೆ ಸಮೇತ ದೂರು ನೀಡಿದರೆ ತನಿಖೆ ನಡೆಸಿ ತಪ್ಪಿತಸ್ಥ ಆಸ್ಪತ್ರೆ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಕೋವಿಡ್ ನಿರ್ವಹಣೆ ಸಂಬಂಧ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರ ಮನವಿ ಮೇರೆಗೆ ಎ.ಜೆ ಆಸ್ಪತ್ರೆ ಹಾಗೂ ಶ್ರೀನಿವಾಸ ವೈದ್ಯಕೀಯ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಕೋವಿಡ್ ನಿರ್ವಹಣೆಗೆ ಖಾಸಗೀ ಆಸ್ಪತ್ರೆಗಳು ಹಾಗೂ ಮೆಡಿಕಲ್ ಕಾಲೇಜುಗಳು ತಮ್ಮ ಹಾಸಿಗೆ ಸಾಮಥ್ಯ೯ದ ಶೇಕಡಾ 50 ರಷ್ಟನ್ನು ಸರಕಾರಕ್ಕೆ ಬಿಟ್ಟು ಕೊಡಲೇಬೇಕು. ಸಾರ್ವಜನಿಕ ಆರೋಗ್ಯ ರಕ್ಷಣೆ ಸರಕಾರದ ಆದ್ಯತೆಯಾಗಿದೆ.

ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋರೋನಾ ಸೋಂಕಿತರ ಚಿಕಿತ್ಸೆಗೆ ಖಾಸಗೀ ಆಸ್ಪತ್ರೆಗಳು ಸರಕಾರದೊಂದಿಗೆ ಸಹಕರಿಸಬೇಕು. ರಾಜ್ಯ ಸರಕಾರವು ಆಯುಷ್ಮಾನ್ ಯೋಜನೆಯಡಿ ಕೋವಿಡ್ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲು ಉದ್ದೇಶಿಸಿದೆ.

ಅಲ್ಲದೆ ಖಾಸಗಿಯಾಗಿ ಚಿಕಿತ್ಸೆ ಪಡೆಯುವ ಸೋಂಕಿತರಿಗೆ ಸರಕಾರ ನಿಗದಿಪಡಿಸಿದ ದರದಲ್ಲಿ ಚಿಕಿತ್ಸೆ ನೀಡಬೇಕು ಎಂದು ಸಚಿವರು ತಿಳಿಸಿದರು.

ಖಾಸಗೀ ಆಸ್ಪತ್ರೆಗಳಿಗೆ ಸರಕಾರದಿಂದ ರಾಪಿಡ್ ಕಿಟ್ ಗಳನ್ನು ಸರಬರಾಜು ಮಾಡಲಾಗುತ್ತಿದ್ದು, ಉಚಿತವಾಗಿ ಕೋವಿಡ್ ಪರೀಕ್ಷೆ ನಡೆಸಲು ಸೂಚಿಸಲಾಗಿದೆ. ಸರಕಾರಿ ಆಸ್ಪತ್ರೆಗಳಲ್ಲಿ ಈಗಾಗಲೇ ಈ ಪರೀಕ್ಷೆ ನಡೆಯುತ್ತಿದೆ ಎಂದು ಸಚಿವರು ತಿಳಿಸಿದರು.

ಜಿಲ್ಲೆಗೆ ರಾಜ್ಯ ಸರಕಾರವು 50 ವೆಂಟಿಲೇಟರ್ ಗಳನ್ನು ಸರಬರಾಜು ಮಾಡಲಿದ್ದು ಹೆಚ್ಚುವರಿ ವೆಂಟಿಲೇಟರ್‌ ಗಳನ್ನು ಅಗತ್ಯವಿರುವ ಖಾಸಾಗಿ ಆಸ್ಪತ್ರೆಗಳಿಗೆ ನೀಡಲಾಗುವುದು ಎಂದು ಸಚಿವರು ನುಡಿದರು.

ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಮಾತನಾಡಿ, ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆ ವಿವರ, ಶುಲ್ಕ ಮಾಹಿತಿ, ಆಯುಷ್ಮಾ‌ನ್ ಯೋಜನೆಯ ಸಮರ್ಪಕ ಮಾಹಿತಿಯನ್ನು ರೋಗಿಗಳು ದಾಖಲಾಗುವಾಗಲೇ ನೀಡಬೇಕು.

ಆಸ್ಪತ್ರೆಯ ಪ್ರವೇಶ ದ್ವಾರದಲ್ಲಿ ದೊಡ್ಡ ಬೋಡ್೯ ಹಾಕಿ ವಿವರ ನಮೂದಿಸಬೇಕು ಎಂದು ಸೂಚಿಸಿದರು. ಎಲ್ಲಾ ಮೆಡಿಕಲ್ ಕಾಲೇಜುಗಳು ಪ್ರತೀ ದಿ‌ನ 100 ಮಂದಿಯ ರಾಪಿಡ್ ಆಂಟಿಜನ್ ಪರೀಕ್ಷೆಯನ್ನು ಉಚಿತವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸಾರ್ವಜನಿಕರಿಗೆ ಆಯುಷ್ಮಾ‌ನ್ ಸೌಲಭ್ಯದ ಮಾಹಿತಿ ನೀಡಲು ಆರೋಗ್ಯ ಇಲಾಖೆ ವತಿಯಿಂದ ಪ್ರತೀ ಮೆಡಿಕಲ್ ಕಾಲೇಜು ಆಸ್ಪತ್ರೆಗಳಲ್ಲಿ ಆರೋಗ್ಯ ಮಿತ್ರ ಕಾರ್ಯಕರ್ತರನ್ನು ನೇಮಿಸಲಾಗಿದ್ದು, ಇವರು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು.

ನಿರ್ಲಕ್ಷ್ಯ ತೋರುವವರ ವಿರುದ್ಧ ಕ್ರಮ‌ ಜರುಗಿಸುವುದಾಗಿ ಜಿಲ್ಲಾಧಿಕಾರಿಗಳು ಎಚ್ಚರಿಸಿದರು.

ಸಭೆಯಲ್ಲಿ ಶಾಸಕ ಡಾ. ಭರತ್ ಶೆಟ್ಟಿ, ಜಿ.ಪಂ.ಸಿಇಒ ಡಾ. ಸೆಲ್ವಮಣಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಚಂದ್ರ ಬಾಯಾರಿ, ವೆನ್ ಲಾಕ್ ಅಧೀಕ್ಷಕ ಡಾ. ಸದಾಶಿವ, ಎ.ಜೆ. ಆಸ್ಪತ್ರೆ ನಿರ್ದೇಶಕ ಡಾ. ಪ್ರಶಾಂತ್ ಮಾರ್ಲ, ಶ್ರೀನಿವಾಸ ಮೆಡಿಕಲ್ ಕಾಲೇಜಿನ ಡೀನ್ ಡಾ. ಉದಯಕುಮಾರ್ ಮತ್ತಿತರರು ಇದ್ದರು.

LEAVE A REPLY

Please enter your comment!
Please enter your name here

Hot Topics

ಎಲ್‌ಇಡಿ ಟಿ.ವಿ ಬ್ಲಾಸ್ಟ್‌..! : ಬಾಲಕ ಸಾವು-ಮನೆ ಗೋಡೆ ಕುಸಿತ

ಲಕ್ನೋ: ಎಲ್‌ಇಡಿ ಟಿ.ವಿ ಸ್ಪೋಟಗೊಂಡ ಪರಿಣಾಮ ಬಾಲಕನೊಬ್ಬ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.ಮೃತ ಬಾಲಕನನ್ನು ಓಮೇಂದ್ರ (16) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಟಿವಿ ನೋಡುತ್ತಿದ್ದ ಸಂದರ್ಭ ಎಲ್ ಐಡಿ ಟಿವಿ...

ಮಂಗಳೂರು: ಹೆಲಿಕಾಪ್ಟರ್‌ನಲ್ಲಿ ವೈಷ್ಣೋದೇವಿ ಮಂದಿರಕ್ಕೆ ಕರೆದೊಯ್ಯುವುದಾಗಿ 38 ಸಾವಿರ ರೂ. ವಂಚನೆ

ಮಂಗಳೂರು: ವೈಷ್ಣೋದೇವಿ ಮಂದಿರ ಯಾತ್ರೆಗೆ ಹೆಲಿಕಾಪ್ಟರ್ ಬುಕ್ಕಿಂಗ್ ಮಾಡುತ್ತೇನೆಂದು ನಂಬಿಸಿ ಮಂಗಳೂರು ಮೂಲದ ವ್ಯಕ್ತಿಯೊಬ್ಬರಿಗೆ ರೂ.38 ಸಾವಿರ ವಂಚನೆಗೈದ ಬಗ್ಗೆ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಂಚನೆಗೊಳಗಾದ ವ್ಯಕ್ತಿ ಬೆಂಗಳೂರಿನಲ್ಲಿ IT consultant...

ಮಹಾನವಮಿ ಸಂಭ್ರಮ: ಕಟೀಲು ಕ್ಷೇತ್ರದಲ್ಲಿ ಮಹಾ ರಂಗ ಪೂಜೆ

ಮಂಗಳೂರು: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮಹಾನವಮಿ ಪ್ರಯುಕ್ತ ಮಹಾ ರಂಗ ಪೂಜೆ ನಡೆಯಿತು. ಆರು ನೂರಕ್ಕೂ ಹೆಚ್ಚು ವಿಶಿಷ್ಟ ಆರತಿಗಳಿಂದ ಸುಮಾರು ಒಂದೂಕಾಲು ಗಂಟೆಗಳ ಕಾಲ ನಡೆದ ಮಹಾಪೂಜೆಯನ್ನು...