LATEST NEWS
ಇದೇ ಕಾರಣಕ್ಕೆ ನಿಮಗೆ ಗೃಹಲಕ್ಷ್ಮಿ ಹಣ ಬಂದಿಲ್ಲ ಅನಿಸುತ್ತೆ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಯ ಹಣದಿಂದ ಬೆಳಗಾವಿಯ ವೃದ್ಧೆಯೊಬ್ಬರು ಊರಿಗೆಲ್ಲ ಹೋಳಿಗೆ ಊಟ ಹಾಕಿಸಿದ್ದ ವಿಚಾರ ಸಿಎಂ ಸಿದ್ದರಾಮಯ್ಯವರೆಗೂ ತಲುಪಿತ್ತು. ಇದಕ್ಕೆ ಸಂತಸ ವ್ಯಕ್ತಪಡಿಸಿ ವೃದ್ಧೆಗೆ ಸನ್ಮಾನವೂ ಮಾಡಲಾಗಿದೆ. ಆದರೆ, ಕೆಲವು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬರುತ್ತಿಲ್ಲ ಎಂದು ಫಲಾನುಭವಿಗಳು ಬೇಸರ ವ್ಯಕ್ತಪಡಿಸಿದ್ದಾರೆ.
ಇನ್ನೂ ಹಲವರು ನಮಗೆ ಗೃಹಲಕ್ಷ್ಮಿ ಯೋಜನೆಯಿಂದ ಹಣ ಬರಲೇ ಇಲ್ಲ ಎಂದು ತಲೆಕೆಡಿಸಿಕೊಂಡವರೂ ಇದ್ದಾರೆ. ಈಗ ಇದಕ್ಕೆ ಕಾರಣವನ್ನು ಖುದ್ದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರೇ ಬಿಚ್ಚಿಟ್ಟಿದ್ದಾರೆ. ಈ ಬಗ್ಗೆ ಬೆಳಗಾವಿಯಲ್ಲಿ ಮಾತನಾಡಿರುವ ಅವರು, ಜಿಎಸ್‌ಟಿ ಹಾಗೂ ಆದಾಯ ತೆರಿಗೆ ತುಂಬುವವರಿಗೆ ಗೃಹಲಕ್ಷ್ಮಿ ಯೋಜನೆಯಡಿ ಹಣ ಬರುವುದಿಲ್ಲ. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದು ಹೇಳಿದ್ದಾರೆ.
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕುವವರಿಗೆ ಕೆಲವು ನಿಯಮಗಳನ್ನು ರೂಪಿಸಲಾಗಿತ್ತು. ಜಿಎಸ್‌ಟಿ, ಆದಾಯ ತೆರಿಗೆ ತುಂಬುವವರು ಗೃಹಲಕ್ಷ್ಮಿ ಯೋಜನೆಯ ವ್ಯಾಪ್ತಿಗೆ ಸೇರುವುದಿಲ್ಲ ಎಂದು ಹೇಳಿದ್ದವು. ಆದರೂ ಜಿಎಸ್‌ಟಿ ಇದ್ದವರೂ ಸರ್ಕಾರದ ಪೋರ್ಟಲ್‌ನಲ್ಲಿ ಈ ಯೋಜನೆಗೆ ಅರ್ಜಿ ಹಾಕಿದ್ದರು. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದು ವಿವರಣೆ ನೀಡಿದ್ದಾರೆ.
ಈ ರೀತಿ ಗೃಹಲಕ್ಷ್ಮಿ ಯೋಜನೆಗೆ ಅನರ್ಹವಾದ ಸುಮಾರು 15 ಸಾವಿರಕ್ಕೂ ಹೆಚ್ಚಿನ ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಅರ್ಜಿದಾರರ ಹಿನ್ನೆಲೆ ಪರಿಶೀಲಿಸಿದಾಗ ಜಿಎಸ್‌ಟಿಗೆ ಒಳಪಟ್ಟಿರುವುದು ತಿಳಿಯಿತು. ಕೂಡಲೇ ಅಂತಹ ಅರ್ಜಿಗಳನ್ನು ರಿಜೆಕ್ಟ್ ಮಾಡಿದ್ದೇವೆ. ರಾಜ್ಯಾದ್ಯಂತ ಶ್ರೀಮಂತರು, ಜಿಎಸ್‌ಟಿ ಇದ್ದವರು ಸೇರಿ ಒಟ್ಟು 1.58 ಕೋಟಿ ಕುಟುಂಬಗಳಿವೆ ಎಂದು ಮಾಹಿತಿ ನೀಡಿದ್ದಾರೆ.
LATEST NEWS
ನೋಯಲ್ ಟಾಟಾ ಗ್ರೂಪ್’ಗೆ ಮುಂದಿನ ವಾರಸುದಾರ
ಮುಂಬೈ: ಟಾಟಾ ಗ್ರೂಪ್ ಗೆ ಹೊಸ ವಾರಸುದಾರರ ಆಯ್ಕೆಯಾಗಿದೆ. ಟಾಟಾ ಟ್ರಸ್ಟ್ ಗಳ ಮುಖ್ಯಸ್ಥರಾಗಿ ನೋಯಲ್ ಟಾಟಾ ಅವರನ್ನು ನೇಮಕ ಮಾಡಲಾಗಿದೆ.
ಇಂದು ಶುಕ್ರವಾರ ಟಾಟಾ ಟ್ರಸ್ಟ್ ಗಳ ಮಂಡಳಿ ಸಭೆ ನಡೆದಿದ್ದು, ಅದರಲ್ಲಿ ಒಮ್ಮತದಿಂದ ನೋಯಲ್ ಅವರ ಪರವಾಗಿ ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಟಾಟಾ ಗ್ರೂಪ್ ನ ಮಾಲೀಕ ಸಂಸ್ಥೆಯಾದ ಟಾಟಾ ಸನ್ಸ್ ನಲ್ಲಿ ಟಾಟಾ ಟ್ರಸ್ಟ್ ಗಳು ಬಹುಪಾಲು ಷೇರುದಾರಿಕೆ ಹೊಂದಿವೆ. ಈ ಮೂಲಕ ಟಾಟಾ ಗ್ರೂಪ್ ನ ಒಡೆತನ ನೋಯಲ್ ಟಾಟಾಗೆ ಸಿಗಲಿದೆ.
67 ವರ್ಷದ ನೋಯಲ್ ಟಾಟಾ ಅವರು ರತನ್ ಟಾಟಾ ತಂದೆಯ ಎರಡನೇ ಪತ್ನಿಯ ಮಗ. ಟಾಟಾ ಕುಟುಂಬಕ್ಕೆ ಸೇರಿದ ಸರ್ ದೊರಾಬ್ ಜಿ ಟಾಟಾ ಟ್ರಸ್ಟ್ ಮತ್ತು ಸರ್ ರತನ್ ಟಾಟಾ ಟ್ರಸ್ಟ್ ಮಂಡಳಿಗಳ ಟ್ರಸ್ಟೀಗಳಲ್ಲಿ ಒಬ್ಬರಾಗಿರುವ ನೋಯಲ್ ಟಾಟಾ ಅವರು ಮುಂದಿನ ವಾರಸುದಾರ ಎಂಬುದು ಬಹುತೇಕ ನಿಶ್ಚಿತವಾಗಿತ್ತು.
87 ವರ್ಷದ ರತನ್ ಟಾಟಾ ಮೊನ್ನೆ ಬುಧವಾರ ಸಂಜೆ ಮುಂಬೈನಲ್ಲಿ ವಿಧಿವಶರಾಗಿದ್ದಾರೆ. ರತನ್ ಅವರ ತಂದೆ ನವಲ್ ಟಾಟಾ ಅವರಿಗೆ ಎರಡು ವಿವಾಹವಾಗಿತ್ತು. ಮೊದಲ ಪತ್ನಿಗೆ ವಿಚ್ಛೇದನ ನೀಡಿ ಎರಡನೇ ಮದುವೆಯಾಗಿದ್ದರು. ರತನ್ ಮತ್ತು ಜಿಮ್ಮಿ ಟಾಟಾ ಅವರು ಮೊದಲ ಪತ್ನಿಯ ಮಕ್ಕಳಾಗಿದ್ದಾರೆ. ನೋಯಲ್ ಟಾಟಾ ಅವರು ಎರಡನೇ ಪತ್ನಿಯ ಮಗ. ನೋಯಲ್ ಅವರಿಗೆ ಒಂದು ಗಂಡು ಮಗು ಸೇರಿ ಮೂವರು ಮಕ್ಕಳಿದ್ದಾರೆ.
LATEST NEWS
VIRAL VIDEO: ವಿದ್ಯಾರ್ಥಿಗಳ ಕೈಯಿಂದ ತರಗತಿಯಲ್ಲಿ ಸ್ಮೂತ್ ಮಸಾಜ್ ಮಾಡಿಕೊಂಡ ಶಿಕ್ಷಕಿ
ಮಂಗಳೂರು/ಜೈಪುರ; ಕೆಲವು ಶಿಕ್ಷಕರು ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡದೆ ವಿದ್ಯಾರ್ಥಿಗಳಿಂದ ಕೆಲಸ ಮಾಡಿಸಿಕೊಳ್ಳುವಂತಹ ನಾಚಿಕೆಗೇಡಿನ ಕೆಲಸಳು ನಡೆಯುತ್ತಿವೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಮಕ್ಕಳಿಗೆ ಪಾಠ ಹೇಳಿಕೊಡುವ ಬದಲು ಶಿಕ್ಷಕಿಯೊಬ್ಬರು ತರಗತಿಯೊಳಗೆ ಮಲಗಿ ವಿದ್ಯಾರ್ಥಿಗಳಿಂದ ತನ್ನ ಕಾಲಿಗೆ ಮಸಾಜ್ ಮಾಡಿಸಿಕೊಂಡಿರುವ ಘಟನೆ ಜೈಪುರ ಕರ್ತಾರ್‌ಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಶಾಲೆಗಳು ದೇವಾಲಯವಿದ್ದಂತೆ. ಈ ಪವಿತ್ರ ಸ್ಥಳದಲ್ಲಿ ಶಿಕ್ಷಕರಾದವರು ಮಕ್ಕಳಿಗೆ ಕಲಿಕೆಯ ಜೊತೆಗೆ ಒಳ್ಳೆಯ ಜೀವನ ಪಾಠವನ್ನು ಕೂಡಾ ಕಲಿಸಿಕೊಡಬೇಕು. ಆದ್ರೆ ಕೆಲವು ಶಿಕ್ಷಕರು ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡದೆ ವಿದ್ಯಾರ್ಥಿಗಳಿಂದ ಕೆಲಸ ಮಾಡಿಸಿಕೊಳ್ಳುವಂತಹ ನಾಚಿಕೆಗೇಡಿನ ಕೆಲಸಗಳನ್ನು ಮಾಡುತ್ತಿರುತ್ತಾರೆ. ಶಿಕ್ಷಕರ ಕರ್ತವ್ಯ ಲೋಪಕ್ಕೆ ಸಂಬಂಧಿಸಿದ ಸುದ್ದಿಗಳು ಈ ಹಿಂದೆಯೂ ವೈರಲ್ ಆಗಿದೆ. ಘಟನೆಯ ಅನ್ವಯ ಶಾಲೆಯ ಶಿಕ್ಷಕಿ ಪಾಠ ಮಾಡುವ ಬದಲು ತರಗತಿಯಲ್ಲಿ ಮಲಗಿ ವಿದ್ಯಾರ್ಥಿಗಳಿಂದಲೇ ತಮ್ಮ ಕಾಲಿಗೆ ಮಸಾಜ್ ಮಾಡಿಸಿಕೊಂಡಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದ್ದು, ಶಿಕ್ಷಕರೇ ಹೀಗೆ ಮಾಡಿದ್ರೆ ವಿದ್ಯಾರ್ಥಿಗಳ ಭವಿಷ್ಯ ಏನಾಗಬೇಡ ಎಂದು ನೆಟ್ಟಿಗರು ಕಳವಳ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:WATCH VIDEO : ಕಾಳಿಗೆ ಮೋದಿ ನೀಡಿದ್ದ ಕಿರೀಟಕ್ಕೆ ಕನ್ನ ಹಾಕಿದ ಕಳ್ಳ; ಸಿಸಿ ಟಿವಿಯಲ್ಲಿ ಸೆರೆಯಾಯ್ತು ಖದೀಮನ ಕೈಚಳಕ
ಪ್ರಶಾಂತ್ ರೈ (prashanthrai280) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ಮಕ್ಕಳು ಶಿಕ್ಷಕಿಯ ಕಾಲಿನ ಮೇಲೆ ನಿಂತು ಮಸಾಜ್ ಮಾಡಿದ್ದಾರೆ.
ಇಂದು ಮುಂಜಾನೆ ಶೇರ್ ಮಾಡಲಾದ ಈ ವಿಡಿಯೋ ಸದ್ಯ ಭಾರೀ ವೈರಲ್ ಆಗುತ್ತಿದ್ದು, ‘ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡುವ ಬದಲು ವಿದ್ಯಾರ್ಥಿಗಳಿಂದಲೇ ಕೆಲಸ ಮಾಡಿಸಿಕೊಂಡ ಆ ಶಿಕ್ಷಕಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲೇಬೇಕು, ಇದು ಆ ಶಾಲೆಯ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ’ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
watch video:
BIG BOSS
ಬಿಗ್ ಬಾಸ್ ಮನೆಯ ಸ್ವರ್ಗ ನರಕ ಇನ್ನಿಲ್ಲ.. ಕಾರಣ ಏನು ಗೊತ್ತಾ ?
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11 ಗ್ರ್ಯಾಂಡ್ ಆಗಿ ಓಪನಿಂಗ್ ಪಡೆದುಕೊಂಡು ಎರಡು ವಾರ ಕಳೆದಿದೆ. ಇದೇ ಎರಡು ವಾರದಲ್ಲಿ ಬಿಗ್ಬಾಸ್ ಮನೆಯಲ್ಲಿ ನಡೆಯಬಾರದ ಘಟನೆಯೊಂದು ನಡೆದು ಹೋಗಿದೆ.
ಹೌದು, ಸೆಪ್ಟೆಂಬರ್ 29ರಂದು ಬಹಳ ಅದ್ಧೂರಿಯಾಗಿ ಬಿಗ್ಬಾಸ್ ಓಪನಿಂಗ್ ಪಡೆದುಕೊಂಡಿತ್ತು. ಆದರೆ ಇದೀಗ ಬಿಗ್ಬಾಸ್ ಮನೆ ಪೂರ್ತಿಯಾಗಿ ಬದಲಾಗಿ ಬಿಟ್ಟಿದೆ. ಇಷ್ಟು ದಿನ ನರಕ ಸ್ವರ್ಗ ಎಂಬ ಎರಡು ಕಾನ್ಸೆಪ್ಟ್ಗಳನ್ನು ಒಳಗೊಂಡಿತ್ತು. ಆದರೆ ಬಿಗ್ಬಾಸ್ ಮನೆಯ ಆಟದ ಶೈಲಿ ಈಗ ಬದಲಾಗಿ ಬಿಟ್ಟಿದೆ.
ನರಕದ ಮನೆಯನ್ನೇ ಬಿಗ್ಬಾಸ್ ತಂಡ ಒಡೆದು ಹಾಕಿದೆ. ಮಹಿಳಾ ಆಯೋಗ ಎಂಟ್ರಿ ಬೆನ್ನಲ್ಲೇ ನರಕವನ್ನು ಡೆಮಾಲಿಷ್ ಮಾಡಲಾಗಿದೆ. ಮಹಿಳೆಯರ ಖಾಸಗಿತನಕ್ಕೆ ಧಕ್ಕೆ ಸಂಬಂಧ ಬಿಗ್ಬಾಸ್ ಕಾರ್ಯಕ್ರಮದ ವಿರುದ್ಧ ದೂರು ದಾಖಲಾಗಿತ್ತು. ಹೀಗಾಗಿ ಮಹಿಳಾ ಆಯೋಗವು 5 ದಿನದ ಡೆಡ್ ಲೈನ್ ಕೊಟ್ಟಿತ್ತು. ಅದರಂತೆ ಇಂದಿನ ಎಪಿಸೋಡ್ನಲ್ಲಿ ಬಿಗ್ಬಾಸ್ ತಂಡ ಬಿಗ್ ಮನೆಗೆ ಹೋಗಿ ನರಕದ ಬೇಲಿ ತೆರವು ಮಾಡಿದ್ದಾರೆ.
ಇನ್ನು, ಬಿಗ್ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದ 17 ಸ್ಪರ್ಧಿಗಳು ಎಂಟ್ರಿ ಕೊಟ್ಟಿದ್ದರು. ಅದರಲ್ಲಿ 7 ಮಂದಿ ಬಿಗ್ಬಾಸ್ ನರಕಕ್ಕೆ ಸೇರಿದ್ದರು. ಉಳಿದ 10 ಮಂದಿ ಸ್ವರ್ಗಕ್ಕೆ ಸೇರಿದ್ದರು. ನರಕದಲ್ಲಿ ಇರೋ ಸ್ಪರ್ಧಿಗಳಿಗೆ ಸರಿಯಾದ ಊಟ ನೀಡುತ್ತಿರಲಿಲ್ಲ. ಜೊತೆಗೆ ಶೌಚಾಲಯದ ಸಮಸ್ಯೆ ಕೂಡ ಇದೆ ಅಂತ ಸ್ಪರ್ಧಿಗಳು ಕ್ಯಾಮೆರಾ ಮುಂದೆ ಬಂದು ಹೇಳುತ್ತಿದ್ದರು. ಈಗ ಬಿಗ್ಬಾಸ್ ಮನೆಯಲ್ಲಿ ಬಿಗ್ ಟ್ವಿಸ್ಟ್ ಪಡೆದುಕೊಂಡಿದೆ. ಇಂದಿನ ಎಪಿಸೋಡ್ನಲ್ಲಿ ಏನೆಲ್ಲಾ ಆಯ್ತು ಅಂತ ಗೊತ್ತಾಗಲಿದೆ.
- LATEST NEWS5 days ago
ಶಿಕ್ಷಕಿಯ ಅ*ಶ್ಲೀಲ ವಿಡಿಯೋ ಹಂಚಿಕೆ; ನಾಲ್ವರು ವಿದ್ಯಾರ್ಥಿಗಳ ಬಂಧನ
- BIG BOSS7 days ago
BBK11: ಬಿಗ್ಬಾಸ್ ಮನೆಯಲ್ಲಿರೋ ಮಹಿಳಾ ಸ್ಪರ್ಧಿಗಳ ಖಾಸಗಿತನಕ್ಕೆ ಧಕ್ಕೆ; ಶೋ ವಿರುದ್ಧ ದೂರು ದಾಖಲು
- FILM3 days ago
ಎರಡನೇ ಮದುವೆಯಾಗುತ್ತಿರುವ ಬಿಗ್ಬಾಸ್ ಕಂಟೆಸ್ಟೆಂಟ್
- BIG BOSS6 days ago
ಮಹಿಳೆಯರ ಒಳ ಉಡುಪಿನ ಬಗ್ಗೆ ಲಾಯರ್ ಜಗದೀಶ್ ಮಾತು.. ಏನಿದು ವಿವಾದ?