Connect with us

    DAKSHINA KANNADA

    ಕರಾವಳಿಯಲ್ಲಿ ಸಚಿವ ಸ್ಥಾನದ ಲೆಕ್ಕಾಚಾರ: ಯು.ಟಿ ಖಾದರ್‌ಗೆ ಪಕ್ಕಾ, ಮತ್ಯಾರಿಗಿದೆ ಭಾಗ್ಯ

    Published

    on

    ಮಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅವಿಭಜಿತ ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್‌ಗೆ ಹೀನಾಯ ಸೋಲು ಕಂಡರೂ ಐದನೇ ಬಾರಿಗೆ ಶಾಸಕ, ಸೋಲಿಲ್ಲದ ಸರದಾರ ಯು ಟಿ ಖಾದರ್‌ ಮತ್ತು ಎಂಎಲ್‌ಸಿ  ಮಂಜುನಾಥ ಭಂಡಾರಿ ಅವರನ್ನು ಕಾಂಗ್ರೆಸ್ ತನ್ನ ಸಂಪುಟಕ್ಕೆ ಸೇರ್ಪಡೆಗೊಳಿಸುವ ಸಾಧ್ಯತೆ ಹೆಚ್ಚಾಗಿದೆ. ಕರಾವಳಿಯಲ್ಲಿ ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಚಿವರಾಗುವ ಭಾಗ್ಯ ಯಾರಿಗೆ ಎನ್ನುವ ಲೆಕ್ಕಾಚಾರ ಜೋರಾಗಿದೆ. ಯು.ಟಿ ಖಾದರ್‌ಗೆ ಸಚಿವ ಸ್ಥಾನದೊಂದಿಗೆ ದ.ಕ ಜಿಲ್ಲಾ ಉಸ್ತುವಾರಿ ಸಿಗುವುದು ಪಕ್ಕಾ ಎಂದು ಪಕ್ಷದ ಮೂಲಗಳು ತಿಳಿಸಿವೆ.

    ಮುಂಬರುವ ಲೋಕಸಭೆ ಚುನಾವಣೆಗೂ ಮುನ್ನ ಪಕ್ಷವನ್ನು ಮತ್ತಷ್ಟು ಪುನಶ್ಚೇತನಗೊಳಿಸಲು ಬಿ.ಕೆ ಹರಿಪ್ರಸಾದ್‌ ಮತ್ತು ಹರೀಶ್ ಕುಮಾರ್ ಈ ಇಬ್ಬರು ಹಿರಿಯ ನಾಯಕರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬಹುದು ಎಂದು ಪಕ್ಷದ ಮೂಲಗಳು ತಿಳಿಸಿವೆ.

    ಎಂಎಲ್ ಸಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ ಹರೀಶ್ ಕುಮಾರ್ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗುವ ಸಾಧ್ಯತೆ ಇದೆ ಎಂದೂ ಹೇಳಲಾಗುತ್ತಿದೆ. ಆದರೆ  ಇವರಿಬ್ಬರೂ ಬಿಲ್ಲವ ಸಮುದಾಯದವರು. ಅಲ್ಲದೆ ಹರೀಶ್ ಕುಮಾರ್ ಅವರ ಅವಧಿ ಈ ವರ್ಷ ಮುಕ್ತಾಯಗೊಳ್ಳಲಿದೆ.

    ಮಂಜುನಾಥ ಭಂಡಾರಿಯವರು ವಿಧಾನ ಪರಿಷತ್ತಿನಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿಯನ್ನು ಪ್ರತಿನಿಧಿಸುತ್ತಾರೆ. ಖಾದರ್ ಅವರು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮತ್ತು ಹೆಚ್.ಡಿ ನೇತೃತ್ವದ ಜನತಾ ದಳ (ಜಾತ್ಯತೀತ)-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದರು.

    ಯು ಟಿ ಖಾದರ್ ಅವರು ಆರೋಗ್ಯ, ನಗರಾಭಿವೃದ್ಧಿ, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ವಸತಿ ಖಾತೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದರು.

    ಬಿಜೆಪಿಯಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸ್ಥಾನಗಳನ್ನು ಕಸಿದುಕೊಳ್ಳಲು ಪಕ್ಷಕ್ಕೆ ‘ಕರಾವಳಿಯಲ್ಲಿ ಕಾಂಗ್ರೆಸ್ಸನ್ನು ಪ್ರಬಲ ಪಡಿಸುವುದು ಮುಖ್ಯವಾಗಿದೆ.

    ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಟ್ಟು 19 ವಿಧಾನಸಭಾ ಸ್ಥಾನಗಳಲ್ಲಿ ಕಾಂಗ್ರೆಸ್ 6 ಸ್ಥಾನಗಳನ್ನು ಹೊಂದಿದೆ, 13 ಬಿಜೆಪಿ ಪಡೆದಿದೆ. ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ಎಲ್ಲಾ ಐದು ಸ್ಥಾನಗಳನ್ನು ಗೆಲ್ಲುವ ಮೂಲಕ ಸತತ ಎರಡನೇ ಬಾರಿಗೆ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್‌ಗೆ ಉಡುಪಿಯಿಂದ ವಿಧಾನಸಭೆಯಲ್ಲಿ ಯಾವುದೇ ಪ್ರಾತಿನಿಧ್ಯ ಇಲ್ಲ.

    ದಕ್ಷಿಣ ಕನ್ನಡದ ಪುತ್ತೂರಿನಿಂದ ಸ್ಪರ್ಧಿಸಿ ಮೊದಲ ಬಾರಿಗೆ ಗೆದ್ದಿರುವ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅನನುಭವಿ. ಉತ್ತರ ಕನ್ನಡದಲ್ಲಿ ಪಕ್ಷವು ನಾಲ್ಕು ಸ್ಥಾನಗಳನ್ನು ಹೊಂದಿದ್ದು, ಅದರಲ್ಲಿ ಮಾಜಿ ಸಚಿವ ಆರ್.ವಿ.ದೇಶಪಾಂಡೆ (ಹಳಿಯಾಳ) ಅವರು ಮತ್ತೊಮ್ಮೆ ಸಚಿವ ಸಂಪುಟಕ್ಕೆ ಸೇರ್ಪಡೆಗೊಳ್ಳುವ ಅವಕಾಶವನ್ನು ಹೊಂದಿದ ಹಿರಿಯರು. ಮಾಂಕಾಳ್ ವೈದ್ಯ (ಭಟ್ಕಳ) ಮತ್ತು ಸತೀಶ್ ಸೈಲ್ (ಕಾರವಾರ) ಉತ್ತರ ಕನ್ನಡದ ಇತರ ಹಿರಿಯರು.

    ವಿಧಾನಸಭೆ ಚುನಾವಣೆಗೂ ಮುನ್ನ ಪಕ್ಷ ಘೋಷಿಸಿದಂತೆ ಕರಾವಳಿ ಕರ್ನಾಟಕದ ಅಭಿವೃದ್ಧಿಗೆ ಪ್ರತ್ಯೇಕ ಯೋಜನೆ ರೂಪಿಸಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ. ಉದ್ಯೋಗ ಮತ್ತು ಹೂಡಿಕೆ ಅವಕಾಶಗಳನ್ನು ಸೃಷ್ಟಿಸಲು ವಾರ್ಷಿಕ 2,500 ಕೋಟಿ ರೂಪಾಯಿ ಬಜೆಟ್ ಹಂಚಿಕೆಯೊಂದಿಗೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ಶಾಸನಬದ್ಧ ಸಂಸ್ಥೆಯಾಗಿ ಪುನರ್ ರಚಿಸುವುದು, ಐಟಿ ಮತ್ತು ಗಾರ್ಮೆಂಟ್ ಉದ್ಯಮದ ಕೇಂದ್ರವಾಗಿ ಮಂಗಳೂರನ್ನು ಕೇಂದ್ರೀಕರಿಸುವುದು, ‘ನಾರಾಯಣ ಗುರು ಅಭಿವೃದ್ಧಿ ನಿಗಮ ಮಾಡಬೇಕಾಗಿದೆ. ಮದ್ಯ ಮತ್ತು ಶೇಂದಿ (ಈಚಲು ತಾಳೆ ಮರದ ರಸದಿಂದ ತೆಗೆದ ಪಾನೀಯ) ತಯಾರಿಕೆಯಲ್ಲಿ ತೊಡಗಿರುವವರಿಗೆ ಪುನರ್ವಸತಿ ಕಲ್ಪಿಸಲು ವಾರ್ಷಿಕ 250 ಕೋಟಿ ರೂಪಾಯಿ ವೆಚ್ಚದ ಮಂಡಳಿ,  ವಾರ್ಷಿಕ 250 ಕೋಟಿ ರೂಪಾಯಿ ವೆಚ್ಚದ ಬಂಟ್ಸ್ ಅಭಿವೃದ್ಧಿ ಮಂಡಳಿಗೆ ಭರವಸೆ ನೀಡಲಾಗಿದೆ.

    ಮೊಗವೀರ ಸಮುದಾಯದ ಪ್ರತಿಯೊಬ್ಬ ಮೀನುಗಾರರಿಗೆ  10 ಲಕ್ಷ ರೂಪಾಯಿಗಳ ವಿಮೆ, ಮೀನುಗಾರ ಮಹಿಳೆಯರಿಗೆ 1 ಲಕ್ಷ ರೂಪಾಯಿ ಬಡ್ಡಿ ರಹಿತ ಸಾಲದ ಭರವಸೆ ನೀಡಲಾಗಿದೆ. ಇದೆಲ್ಲವನ್ನೂ ಈಡೇರಿಸುವ ಹೊಣೆಗಾರಿಕೆ ಕಾಂಗ್ರೆಸ್ ಪಕ್ಷದ ಮೇಲಿದೆ.

    ಒಟ್ಟಿನಲ್ಲಿ ಕರಾವಳಿಯಲ್ಲಿ ಯು ಟಿ ಖಾದರ್, ಡಾ ಮಂಜುನಾಥ್ ಭಂಡಾರಿ, ಹರೀಶ್‌ ಕುಮಾರ್‌ ಸಚಿವ ಸ್ಥಾನದ ರೇಸ್‌ನಲ್ಲಿದ್ದು, ಕುರ್ಚಿ ಯಾರಿಗೆ ಒಲಿಯಲಿದೆ ಎನ್ನುವುದು ಕುತೂಹಲ ಸೃಷ್ಟಿಸಿದೆ.

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು

    Published

    on

    ಮಂಗಳೂರು: ಗುಜರಾತ್‌ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.

     

     

    ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್‌ ಗಾರ್ಡ್‌ ತಂಡ ಹೆಲಿಕಾಪ್ಟರ್‌ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್‌ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್‌ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.

    ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್‌ ಗಾರ್ಡ್‌ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

    Continue Reading

    DAKSHINA KANNADA

    ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!

    Published

    on

    ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.

    ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.

    ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.

    ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.

    ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.

    Continue Reading

    LATEST NEWS

    Trending