Wednesday, June 16, 2021

ಉಡುಪಿ ಕೊರೊನಾ ಪ್ರಕರಣದಲ್ಲಿ ಏರಿಕೆಯಾದರೆ ಕಟ್ಟು ನಿಟ್ಟಿನ ಕರ್ಫ್ಯೂ ಅನಿವಾರ್ಯ; ಸಚಿವ ಕೋಟಾ ಶ್ರೀನಿವಾಸ ಪೂಜಾರಿ..

ಉಡುಪಿ:ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯ ಸರಕಾರ ಕೈಗೊಂಡ ಲಾಕ್ ಡೌನ್ ವಿಫಲವಾಗಬಾರದು ಎಂಬುದು ನಮ್ಮ ಬಯಕೆ.ಅದಕ್ಕಾಗಿ ಎಲ್ಲರೂ ಜೊತೆಯಾಗಿ ಕೆಲಸ ಮಾಡುತ್ತಿದ್ದೇವೆ ಎಂದು ದಕ್ಷಿಣ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ  ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಲಾಕ್ ಡೌನ್ ಯಶಸ್ವಿ ಗೊಳಿಸಲು ಎಲ್ಲಾ ಶಾಸಕರು ಮಂತ್ರಿಗಳು ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ.

ಕೊರೋನಾ ಪೀಡಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದೆ. ಪ್ರಕರಣಗಳ ಸಂಖ್ಯೆ ಹೀಗೆ ಮುಂದುವರಿದರೆ ರಾಜ್ಯದಲ್ಲಿ  ಕಠಿಣ ಕ್ರಮ ಕೈಗೊಳ್ಳಲಾಗುತ್ತೆ.

ಕೊರೊನಾ ನಿಯಂತ್ರಣಕ್ಕೆ ಮುಖ್ಯ ಮಂತ್ರಿಗಳು ರಾಜ್ಯದಲ್ಲಿ ಕಠಿಣ ಕ್ರಮ ಕೈಗೊಂಡಿದ್ದಾರೆ.ಲಾಕ್ ಡೌನ್ ಇದ್ದರೂ ಜನರ ಓಡಾಟ ಹೆಚ್ಚಿರುವುದರಿಂದ ಆರೋಗ್ಯ ಸಚಿವ ಸುಧಾಕರ್ ಅವರು ರಾಜ್ಯದಲ್ಲಿ ಕಟ್ಟು ನಿಟ್ಟಿನ ಕರ್ಫ್ಯೂ ಜಾರಿಗೊಳಿಸುವ ಕುರಿತು ಮಾತನಾಡಿದ್ದಾರೆ.

ಜನರ ಓಡಾಟ ಹೆಚ್ಚಾದರೆ, ಕೊರೋನ ನಿಯಂತ್ರಣ ಮಾಡುವುದಕ್ಕೆ ಸಾಧ್ಯವಿಲ್ಲ. ಸಾರ್ವಜನಿಕರು ಮನೆಯೊಳಗೆ ಇದ್ದುಕೊಂಡೇ ಕೊರೋನಾ ನಿಯಂತ್ರಣಕ್ಕೆ  ಸಹಕರಿಸಿ ಎಂದರು…

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...