Tuesday, October 19, 2021

ಯಾವುದೇ ಧರ್ಮದವರಿಗೂ ನೋವುಂಟು ಮಾಡಿದರೆ ಒಳ್ಳೆಯದಾಗಲ್ಲ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಉಡುಪಿ: ಯಾವುದೇ ಸಮುದಾಯ, ಧರ್ಮದವರಿಗೂ ನೋವುಂಟು ಮಾಡಿದರೆ ಒಳ್ಳೆಯದಾಗಲ್ಲ. ಆದ್ದರಿಂದ ಧಾರ್ಮಿಕ ಶ್ರದ್ಧಾಕೇಂದ್ರಗಳನ್ನು ಉಳಿಸುವ ಜವಾಬ್ದಾರಿ ಸರ್ಕಾರದ್ದು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಹೇಳಿದ್ದಾರೆ.


ಪ್ರಧಾನಿ‌ ನರೇಂದ್ರ ಮೋದಿ ಹುಟ್ಟು ಹಬ್ಬದ ಹಿನ್ನೆಲೆ ನಿನ್ನೆ ಉಡುಪಿಯ ಕೊರಗ ಸಮುದಾಯದ ಮನೆಗಳಿಗೆ ತೆರಳಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಹಾರ ಪದಾರ್ಥಗಳ ಕಿಟ್ ವಿತರಿಸಿದರು.
ಶ್ರದ್ಧಾ ಕೇಂದ್ರಗಳ ರಕ್ಷಣೆ ನಮ್ಮ ಜವಾಬ್ದಾರಿ. ಅಕ್ರಮ ಸ್ಥಳದಲ್ಲಿ ಶ್ರದ್ಧಾ ಕೇಂದ್ರಗಳಿದ್ದರೆ ಪೂರ್ವಭಾವಿಯಾಗಿ ಸೂಚನೆ ನೀಡಬೇಕು.

ಸ್ಥಳೀಯ ಜನರ ಮನವೊಲಿಸಿ ಪರ್ಯಾಯ ವ್ಯವಸ್ಥೆ ಕಲ್ಪಿಸಿ ತೆರವು ಮಾಡುವ ಬಗ್ಗೆ ಸರ್ಕಾರ ಯೋಚಿಸಬೇಕು. ಶ್ರದ್ಧಾ ಕೇಂದ್ರಗಳ ಬಗ್ಗೆ ಜನರ ನಂಬಿಕೆ, ಭಕ್ತಿ ಭಾವ ಪ್ರೀತಿ ಸಹಜವಾಗಿ ಹೆಚ್ಚಿರುತ್ತದೆ. ಭಾವನೆಗೆ ನೋವುಂಟಾದಲ್ಲಿ ಪ್ರತಿಭಟನೆ ನಡೆಸುತ್ತಾರೆ. ಯಾವುದೇ ಸಮುದಾಯ- ಧರ್ಮಕ್ಕೆ ನೋವುಂಟು ಮಾಡಿದರೆ ನಮಗೆ ಒಳ್ಳೆಯದಾಗುವುದಿಲ್ಲ.

ಅಕ್ರಮ ದೇವಾಲಯ ಕಂಡು ಬಂದರೆ ಊರಿನ ಜನರ ಮನವೊಲಿಸಿ ಮುಂದಿನ ಕ್ರಮ ಕೈಗೊಳ್ಳಿ, ಇದು ರಾಜ್ಯ ಸರ್ಕಾರಕ್ಕೆ ನನ್ನ ಮನವಿ ಎಂದು ಹೇಳಿದರು.
ಕರಾವಳಿ ಜಿಲ್ಲೆಗಳಲ್ಲಿ ಮಿಷನರಿಗಳಿಂದ ಮತಾಂತರ ಪ್ರಕರಣಗಳು ವರದಿಯಾಗುತ್ತಿರುವುದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವೆ ಕರಂದ್ಲಾಜೆ, ಕರಾವಳಿ ಮಾತ್ರವಲ್ಲದೆ, ದೇಶಾದ್ಯಂತ ಕ್ರಿಶ್ಚಿಯನ್ ಮಿಷನರಿಗಳಿಂದ ಮತಾಂತರ ನಡೆಯುತ್ತಿದೆ.

ಮತಾಂತರ ಕುರಿತ ಕಾನೂನು ವ್ಯವಸ್ಥೆ ಇನ್ನಷ್ಟು ಗಟ್ಟಿಯಾಗಬೇಕು. ಮತಾಂತರ ತಡೆಯಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಬೇಕು ಎಂದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...