Tuesday, October 19, 2021

ನಾನು ಶಾಸಕನಾದಾಗ ಅವ ಹುಟ್ಟೇ ಇರಲಿಲ್ಲ: ಸ್ವಪಕ್ಷದ ಶಾಸಕನ ವಿರುದ್ಧ ಸಚಿವ ಸೋಮಣ್ಣ ಗರಂ

ಮಂಡ್ಯ: ಪ್ರೀತಮ್ ಗೌಡ ಒಂದು ಬಾರಿ ಎಂಎಲ್ಎ ಆದ ತಕ್ಷಣಕ್ಕೆ ದೇವರಲ್ಲ ಎಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಸಚಿವ ವಿ. ಸೋಮಣ್ಣ ಹಾಸನದ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ.


ಸಚಿವ ವಿ ಸೋಮಣ್ಣಸುದ್ದಿಗಾರರೊಂದಿಗೆ ಮಾತನಾಡಿ, ನಾನು ಶಾಸಕನಾಗಿದ್ದಾಗ ಪ್ರೀತಮ್ ಗೌಡ ಹುಟ್ಟೇ ಇರಲಿಲ್ಲ. ದೇವೇಗೌಡರ ಕುಟುಂಬಕ್ಕೆ 50 ವರ್ಷ ರಾಜಕೀಯದ ಇತಿಹಾಸವಿದೆ. ಅವರು ರಾಷ್ಟ್ರದ ಪ್ರಧಾನಿಗಳಾಗಿದ್ದವರು. ನಾನು ಕೂಡ ದೇವೇಗೌಡರ ಮನೆಗೆ ಹೋಗಿದ್ದೆ ಎಂದರು.
ಸಿಎಂ ಬಸವರಾಜ ಬೊಮ್ಮಾಯಿ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ಹೋಗಿ ಆಶೀರ್ವಾದ ಪಡೆದಿದ್ದರು. ಈ ಕಾರಣಕ್ಕೆ ಸ್ವಪಕ್ಷೀಯ ಶಾಸಕರೇ ಆಗಿರುವ ಹಾಸನ ಶಾಸಕ ಪ್ರೀತಮ್ ಗೌಡ ಆಕ್ರೋಶ ಹೊರಹಾಕಿದ್ದರು. ಅಲ್ಲದೇ ಮುಂದಿನ ಪಂಚಾಯಿತಿ ಚುನಾವಣೆಗಳಲ್ಲಿ ಬಿಜೆಪಿ ಪಕ್ಷಕ್ಕೆ ಹಿನ್ನಡೆಯಾದರೂ ಅದಕ್ಕೆ ಸಿಎಂ ಬೊಮ್ಮಾಯಿ ಅವರೇ ನೇರ ಹೊಣೆಗಾರರಾಗುತ್ತಾರೆ ಎಂದು ಕಿಡಿ ಕಾರಿದ್ದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...