Connect with us

LATEST NEWS

ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಕೆನ್ನೆಗೆ ಬಾರಿಸಿದ ಸಚಿವ ಸೋಮಣ್ಣ..!

Published

on

ಚಾಮರಾಜನಗರ: ಸಮಸ್ಯೆಗಳನ್ನು ಹೇಳಿಕೊಳ್ಳಲು ಬಂದ ಮಹಿಳೆಯೊಬ್ಬರಿಗೆ ವಸತಿ ಮೂಲ ಸೌಕರ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಕಪಾಳಮೋಕ್ಷ ಮಾಡಿದ ಘಟನೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನ ಹಂಗಳದಲ್ಲಿ ನಡೆದಿದೆ. ಇದೀಗ ಈ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.


ನಿನ್ನೆ ಹಂಗಳದಲ್ಲಿ ಗ್ರಾಮೀಣ ಪ್ರದೇಶಗಳ ಹಕ್ಕುಪತ್ರ ವಿತರಣೆ ಕಾರ್ಯಕ್ರಮವನ್ನು ಆಯೊಜನೆ ಮಾಡಲಾಗಿತ್ತು.

ಈ ಸಂದರ್ಭ ಹಕ್ಕುಪತ್ರ ಹಂಚಿಕೆಯಲ್ಲಿ ವ್ಯತ್ಯಾಸವಾಗಿದ್ದು ನಿಜವಾದ ಫಲಾನುಭವಿಗಳನ್ನು ಆಯ್ಕೆ ಮಾಡಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದರು.

ನಿವೇಶನ ಇದ್ದವರಿಗೆ ಮತ್ತೆ ಕೊಡಲಾಗಿದೆ, ನಮಗೆ ಅನ್ಯಾಯವಾಗಿದೆ ಎಂದು ಆಕ್ರೋಶಗೊಂಡ ಮಹಿಳೆಯರು ಸಚಿವರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು.

ಈ ಸಂದರ್ಭ ಕೋಪಗೊಂಡ ಸಚಿವರು ಓರ್ವ ಮಹಿಳೆಗೆ ಕಪಾಳಕ್ಕೆ ಬಾರಿಸಿ ದುರ್ವರ್ತನೆ ತೋರಿದ್ದಾರೆ.
ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Click to comment

Leave a Reply

Your email address will not be published. Required fields are marked *

LATEST NEWS

ಮೇ 3 ರಂದು Incture ಸಂಸ್ಥೆ ಮಂಗಳೂರಿನಲ್ಲಿ ಶುಭಾರಂಭ

Published

on

ಡಿಜಿಟಲ್ ಹಾಗೂ ಎಐ ಸೊಲ್ಯೂಷನ್‌ ಮತ್ತು ಉತ್ಪನ್ನಗಳ  ಪ್ರಮುಖ ಪೂರೈಕೆದಾರ ಸಂಸ್ಥೆಯಾಗಿರುವ ಇಂಕ್ಚರ್‌ ಮಂಗಳೂರಿಗೆ ಪಾದಾರ್ಪಣೆ ಮಾಡಿದೆ. ಮೇ 3 ರಂದು ಮಂಗಳೂರಿನ ದೇರೆಬೈಲಿನ ಬ್ಲೂಬೆರಿ ಹಿಲ್‌ನಲ್ಲಿರುವ ಎಸ್‌ಟಿಪಿಐ ಇನ್‌ಕ್ಯುಬೇಷನ್ ಸೆಂಟರ್‌ ನಲ್ಲಿ ನೂತನ ಸೆಂಟರ್ ಆರಂಭವಾಗಲಿದೆ ಎಂದು ಇಂಕ್ಚರ್ ಸಂಸ್ಥೆಯ ರವಿಕಿರಣ್ ಮಾಹಿತಿ ನೀಡಿದ್ದಾರೆ.

ಇಂಕ್ಚರ್ ಸಂಸ್ಥೆ ದೇಶ ವಿದೇಶದ ಹಲವು ಕಡೆಗಳಲ್ಲಿ ತಮ್ಮ ಬ್ರಾಂಚ್ ಹೊಂದಿದ್ದು, ಮಂಗಳೂರಿಗೂ ವಿಸ್ತರಣೆ ಮಾಡಿದೆ. ಮಂಗಳೂರಿನಲ್ಲಿ ಉದ್ಯೋಗಾವಕಾಶವನ್ನು ಸೃಷ್ಟಿಸುವ ನಿಟ್ಟಿನಲ್ಲಿ ಈ ನಿರ್ಧಾರ ಮಾಡಲಾಗಿದ್ದು, ಈಗಾಗಲೆ 25 ಜನರಿಗೆ ಉದ್ಯೋಗ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಯುವಕ ಯುವತಿಯರಿಗೆ ಉದ್ಯೋಗ ದೊರೆಯಲಿದೆ ಎಂದು ಹೇಳಿದ್ದಾರೆ.

ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಮುಂಚೂಣಿಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಂತ್ರಜ್ಞಾನದ ಬಳಕೆ ಕೂಡಾ ಸಾಕಷ್ಟು ಹೆಚ್ಚಿದೆ. ಹೀಗಾಗಿ ಇಂಕ್ಚರ್‌ ಸಂಸ್ಥೆಯಿಂದ ಡಿಜಿಟಲ್ ಕ್ಷೇತ್ರದಲ್ಲಿ ಉತ್ತಮವಾದ ಅಪ್ಲಿಕೇಷನ್‌ಗಳು ಮತ್ತು SAP ಗ್ರಾಹಕರಿಗೆ ಉತ್ತಮ ಉತ್ಪನ್ನಗಳ ಪ್ಯಾಕೇಜ್‌ಗಳನ್ನು ಸಂಸ್ಥೆ ನೀಡಲಿದೆ ಎಂದು ಅವರು ಹೇಳಿದ್ದಾರೆ.

ಮೇ 3 ರಂದು ಸಂಜೆ 4 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಯಿಲನ್ ಅವರು ಸಂಸ್ಥೆಯ ಉದ್ಘಾಟನೆ ನೆರವೇರಿಸಲಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿನ ಎಲ್ಲಾ ಅವಶ್ಯಕತೆಗಳನ್ನು ಪೂರೈಸುವುದರ ಜೊತೆಗೆ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಇಂಕ್ಚರ್ ಸಂಸ್ಥೆ ಸದಾ ಮಂಗಳೂರು ಜನರ ಜೊತೆಗೆ ಇರಲಿದೆ ಎಂದು ಅವರು ಜನರ ಸಹಾಕಾರ ಕೋರಿದ್ದಾರೆ.

 

Continue Reading

DAKSHINA KANNADA

ಅಡ್ಯಾರ್ ಬೊಂಡ ಪ್ಯಾಕ್ಟರಿ ಎಳನೀರು ಪ್ರಕರಣ- ಆರೋಗ್ಯ ಇಲಾಖೆಯ ಕೈ ಸೇರಿದ ಪ್ರಯೋಗಾಲಯ ಪರೀಕ್ಷಾ ವರದಿ ಬಹಿರಂಗ..!

Published

on

ಮಂಗಳೂರು : ಇತ್ತೀಚೆಗೆ ಅಡ್ಯಾರ್ ನಲ್ಲಿರುವ ಬೊಂಡಾ ಪ್ಯಾಕ್ಟರಿಯಲ್ಲಿ ಎಳ ನೀರು ಸೇವಿಸಿ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಯೋಗಾಲಯ ಪರೀಕ್ಷಾ ವರದಿ ಆರೋಗ್ಯ ಇಲಾಖೆಯ ಕೈ ಸೇರಿದ್ದು, ಸಹಜವಾಗಿತ್ತು ಎಳನೀರು ಎಂದು ವರದಿಯಲ್ಲಿ ತಿಳಿಸಲಾಗಿದೆ.

ನಗರದ ಹೊರವಲಯದ ಅಡ್ಯಾರಿನ ಬೊಂಡ ಫ್ಯಾಕ್ಟರಿಯಲ್ಲಿ ಎಪ್ರಿಲ್ 9ರಂದು ಖರೀದಿಸಿದ ಎಳನೀರು ಕುಡಿದವರಲ್ಲಿ 138 ಜನರು ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡಿದ್ದರು. ಈ ಪ್ರಕರಣ ಗಮನಕ್ಕೆ ಬಂದ ಬೆನ್ನಲ್ಲೇ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಹಾಗೂ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಫ್ಯಾಕ್ಟರಿಯನ್ನು ಬಂದ್ ಮಾಡಿಸಿ ಎಳನೀರು ಮಾದರಿ ಸಂಗ್ರಹಿಸಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿದ್ದರು.ಘಟನೆ ನಡೆದ ಎರಡು ದಿನಗಳ ನಂತರ ಇದು ಗಮನಕ್ಕೆ ಬಂದಿದ್ದು, ಆ ದಿನ ಫ್ಯಾಕ್ಟರಿಯಲ್ಲಿ ಸಂಗ್ರಹಿಸಿದ್ದ ಎಳನೀರನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಪ್ರಯೋಗಾಲಯ ಪರೀಕ್ಷೆಯ ವರದಿ ಎಪ್ರಿಲ್ 22ರಂದು ಆರೋಗ್ಯ ಇಲಾಖೆಯ ಕೈ ಸೇರಿದೆ.

ಅಸ್ವಸ್ಥಗೊಂಡವರ ಮಲ ಮತ್ತು ರಕ್ತದ ಮಾದರಿ ಸಂಗ್ರಹಿಸಿ, ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ವರದಿ ಪ್ರಕಾರ ಕೆಲವರ ದೇಹದಲ್ಲಿ ಇಕೊಲೈ ಬ್ಯಾಕ್ಟಿರಿಯಾ ಇರುವುದು ಪತ್ತೆಯಾಗಿದೆ. ಮನುಷ್ಯನ ಕರುಳಿನಲ್ಲಿ ಈ ಬ್ಯಾಕ್ಟಿರಿಯಾ ಇರುತ್ತದೆ. ಆದರೆ ಅವುಗಳ ಪ್ರಮಾಣ ಹೆಚ್ಚಾದರೆ, ಕೆಲವೊಮ್ಮೆ ಆರೋಗ್ಯ ಸಮಸ್ಯೆ ಬರುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ತಿಳಿಸಿದರು.ಅಡ್ಯಾರಿನಲ್ಲಿರುವ ಎಳನೀರು ಗಂಜಿಯಿಂದ ಐಸ್‌ಕ್ರೀಮ್ ತಯಾರಿಸುವ ಘಟಕ, ಕಾರ್‌ಸ್ಪೀಟ್ ಮತ್ತು ಕದ್ರಿಯಲ್ಲಿರುವ ಎಳನೀರು ಮಳಿಗೆಗಳನ್ನು ಬಂದ್ ಮಾಡಿಸಲಾಗಿದೆ. ಈಗಲೂ ಅವು ಬಂದ್ ಆಗಿಯೇ ಇವೆ.

ಫ್ಯಾಕ್ಟರಿಯವರು ಸ್ವಯಂ ಪ್ರೇರಿತರಾಗಿ ಎಳನೀರು ನೀಡುವುದನ್ನು ನಿಲ್ಲಿಸಿದ್ದಾರೆ. ಅಡ್ಯಾರ್‌ನಲ್ಲಿ ಪಲ್ಟಿಂಗ್‌ ಘಟಕಗಳು ಮಾತ್ರ ಕಾರ್ಯಾಚರಿಸುತ್ತಿವೆ. ಗ್ರಾಹಕರಿಗೆ ಆಹಾರ ನೀಡುವಾಗ ನಿಯಮ ಪಾಲನೆ, ಶುಚಿತ್ವಕ್ಕೆ ಸಂಬಂಧಿಸಿ ಕೆಲವು ಅಂಶಗಳ ಕಟ್ಟುನಿಟ್ಟು ಪಾಲನೆಗೆ ಆಹಾರ ಸುರಕ್ಷಾ ಅಫಿದಾವಿತನ್ನು ಫ್ಯಾಕ್ಟರಿಯಿಂದ ಪಡೆಯಲು ಆಹಾರಸುರಕ್ಷಾ ಅಧಿಕಾರಿಗೆ ಸೂಚನೆ ನೀಡಲಾಗುವುದು ಎಂದು ಅವರು ಪ್ರತಿಕ್ರಿಯಿಸಿದರು.

Continue Reading

FILM

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ‘ಸ್ಯಾಂಡಲ್ ವುಡ್ ಸಲಗ’

Published

on

ಬೈಂದೂರು : ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ರಾಜಕೀಯ ಮುಖಂಡರು, ನಟ ನಟಿಯರು ಭೇಟಿ ನೀಡುತ್ತಿರುತ್ತಾರೆ. ಇದೀಗ ದುನಿಯಾ ವಿಜಯ್ ಅವರು ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಶ್ರೀ ಮೂಕಾಂಬಿಕೆ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ತಮ್ಮ ಸ್ನೇಹಿತರೊಂದಿಗೆ ದುನಿಯಾ ವಿಜಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭ ಅವರ ಅಭಿಮಾನಿಗಳು ಅವರೊಂದಿಗೆ ಫೋಟೋ ತೆಗೆಸಿಕೊಂಡರು.

ಕಾಲ್ನಡಿಗೆಯಲ್ಲಿ ನಂಜನಗೂಡು ಕ್ಷೇತ್ರಕ್ಕೆ ಹೋಗಿದ್ದ ನಟ:

ದುನಿಯಾ ವಿಜಿ ಇತ್ತೀಚೆಗೆ ಬೆಂಗಳೂರಿನಿಂದ ಕಾಲ್ನಡಿಗೆಯಲ್ಲಿ ಹೊರಟು ನಂಜನಗೂಡಿನ ನಂಜುಂಡೇಶ್ವರ ದರ್ಶನ ಪಡೆದಿದ್ದರು. ಸತತ ಐದು ದಿನಗಳ ಕಾಲ ತಮ್ಮ ಸಂಗಡಿಗರ ಜೊತೆ ನಡೆದುಕೊಂಡೇ ನಂಜನಗೂಡು ತಲುಪಿದ್ದರು. ಹಗಲು ರಾತ್ರಿ ಲೆಕ್ಕಿಸದೇ ಪಾದಯಾತ್ರೆ ಮಾಡಿದ್ದರು.

ಸಿನಿಮಾಗಳಲ್ಲಿ ಬ್ಯುಸಿ :

ದುನಿಯಾ ವಿಜಯ್ ಸಾಲು ಸಾಲು ಸಿನಿಮಾಗಳಲ್ಲಿ ಬಿಝಿಯಾಗಿದ್ದಾರೆ. ನಟನೆಯ ಜೊತೆಗೆ ನಿರ್ದೇಶಕನ ಕ್ಯಾಪ್ ಕೂಡ ಅವರು ಹಾಕಿದ್ದಾರೆ.’ಸಲಗ’ ಚಿತ್ರದ ಮೂಲಕ ನಿರ್ದೇಶಕನಾಗಿ ಬಡ್ತಿ ಪಡೆದಿದ್ದ ಅವರು, ‘ಭೀಮ’ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ನಿಖಿಲ್ ಕುಮಾರ್ ಸಿನಿಮಾದಲ್ಲೂ ದುನಿಯಾ ವಿಜಯ್ ನಟಿಸುತ್ತಿದ್ದಾರೆ.

ಇದನ್ನೂ ಓದಿ : ಬಿಗ್ ಬಾಸ್ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ನಮ್ರತಾ ಗೌಡ!

ಚಿತ್ರರಂಗಕ್ಕೆ ವಿಜಿ ಮಗಳು ಎಂಟ್ರಿ :

ದುನಿಯಾ ವಿಜಯ್ ತಮ್ಮ ಮಗ ಸಾಮ್ರಾಟ್ ನನ್ನು ಈಗಾಗಲೇ ಭೀಮ ಚಿತ್ರದ ಮೂಲಕ ಪರಿಚಯಿಸುವ ತಯಾರಿಯಲ್ಲಿದ್ದಾರೆ. ಇದೀಗ ಮಗಳನ್ನೂ ಚಿತ್ರರಂಗಕ್ಕೆ ಕರೆತರುತ್ತಿದ್ದಾರೆ. ಕಾಟೇರ ಚಿತ್ರಕ್ಕೆ ಕಥೆ ಬರೆದಿದ್ದ ಜಡೇಶ್ ಹಂಪಿ ನಿರ್ದೇಶನದಲ್ಲಿ ಮೂಡಿ ಬರಲಿರುವ ಹೊಸ ಸಿನಿಮಾದಲ್ಲಿ ತಂದೆ – ಮಗಳು ಇಬ್ಬರೂ ಕಾಣಿಸಿಕೊಳ್ಳುತ್ತಿದ್ದಾರೆ.


‘ಜಾನಿ ಮೇರಾ ನಾಮ್ ಪ್ರೀತಿ ಮೇರಾ ಕಾಮ್’ ಚಿತ್ರದಲ್ಲಿ ಜೊತೆಯಾಗಿದ್ದ ದುನಿಯಾ ವಿಜಯ್ ಮತ್ತು ರಚಿತಾ ರಾಮ್ ಮತ್ತೆ ಈ ಚಿತ್ರದ ಮೂಲಕ ಒಂದಾಗುತ್ತಿದ್ದಾರೆ. ಇದರಲ್ಲಿ ವಿಜಿ ಮಗಳು ಮೋನಿಕಾ/ರಿತನ್ಯಾ ನಟಿಸುತ್ತಿದ್ದಾರೆ. ಇದು ದುನಿಯಾ ವಿಜಯ್ ಅವರ 29 ನೇ ಸಿನಿಮಾ.

Continue Reading

LATEST NEWS

Trending