Tuesday, July 5, 2022

ಮಹಿಳೆಯರಿಗೆ ಕಿರುಕುಳ ನೀಡಿ ಪೊಲೀಸರ ಅತಿಥಿಯಾದ ಅಪ್ರಾಪ್ತ ಬಾಲಕ..!

ಮಹಿಳೆಯರಿಗೆ ಕಿರುಕುಳ ನೀಡಿ ಪೊಲೀಸರ ಅತಿಥಿಯಾದ ಅಪ್ರಾಪ್ತ ಬಾಲಕ..!

ಮಂಗಳೂರು:ಉಳ್ಳಾಲ ಸಮೀಪ ಅಪ್ರಾಪ್ತ ಯುವಕನೋರ್ವ ಪಾದಚಾರಿ ಮಹಿಳೆಯರಿಗೆ  ಕಿರುಕುಳ ನೀಡುತ್ತಿದ್ದ ಸಂದರ್ಭ ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ.  ಆರೋಪಿಯ ವಿರುದ್ದ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಸ್ಥಳೀಯ ಮಹಿಳೆಯರು ಪೊಲೀಸ್  ಠಾಣೆಯಲ್ಲಿ ಧರಣಿ ನಡೆಸಿದರು. ಉಳ್ಳಾಲ ಉಳಿಯಕ್ಕೆ ಸಂಪರ್ಕಿಸುವ ಉಳ್ಳಾಲ ಬಂಡಿಕೊಟ್ಯ, ಗೋಳಿಯಡಿ ರಸ್ತೆಯಾಗಿ ಮಹಿಳೆಯರು ನಡೆದುಕೊಂಡು ಹೋಗುತ್ತಿದ್ದಾಗ ರಸ್ತೆ ಬದಿಯ ಓಣಿಯಲ್ಲಿ ಬೈಕ್ ನಲ್ಲಿ ಬರುವ ಕೆಲ ಆಗಂತುಕರು ಮಹಿಳೆಯರ ಮೈ ಸವರಿಕೊಂಡು ಹೋಗುತ್ತಿರುವ ಬಗ್ಗೆ ಆರೋಪಗಳು ಕೇಳಿ ಬಂದಿವೆ.ಕಳೆದ 15 ದಿನಗಳಿಂದ ಮೂರು- ನಾಲ್ಕು ಬಾರಿ ಇಂತಹ ಘಟನೆಗಳು ನಡೆದಿತ್ತು.ಇಂದು ಕೂಡ ಇಂತಹ ಘಟನೆ ನಡೆದಾಗ ಸ್ಥಳೀಯರು 16ರ ಹರೆಯದ ಅಪ್ರಾಪ್ತ ವಯಸ್ಸಿನ ಆರೋಪಿಯನ್ನು ಸೆರೆಹಿಡಿದು, ಪೊಲೀಸರಿಗೆ ಒಪ್ಪಿಸಿದ್ದಾರೆ.

ಆರೋಪಿಯನ್ನು ಪೊಲೀಸ್ ಠಾಣೆಯಲ್ಲಿ ಕುಳ್ಳಿರಿಸಿದ್ದು,ಆತನನ್ನು ಮಾನಸಿಕ ಅಸ್ವಸ್ಥ ಎಂದು ಬಿಂಬಿಸಬಾರದು, ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ವರ್ಕ್ ಶಾಪ್‌ಗೆ ನೀರು ನುಗ್ಗಿ ಅಪಾರ ಹಾನಿ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ವರ್ಕ್ ಶಾಪ್‌ಗೆ ನೀರು ನುಗ್ಗಿ ಅಪಾರ ಹಾನಿಯಾದ ಘಟನೆ ಮಂಗಳೂರು ನಗರ ಹೊರವಲಯದ ಕುಲಶೇಖರದ ಬಜ್ಜೋಡಿ ಎಂಬಲ್ಲಿ ನಡೆದಿದೆ.ಭಾರೀ ಮಳೆ ಹಿನ್ನಲೆ ವರ್ಕ್ ಶಾಪ್...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ : ಶಾಲಾ- ಕಾಲೇಜುಗಳಿಗೆ ಇಂದು (ಜು5) ರಜೆ ಘೋಷಿಸಿದ ಜಿಲ್ಲಾಧಿಕಾರಿ..!

ಮಂಗಳೂರು " ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ದಿನಾಂಕ 05/07/ 2022ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ...

ಬಂಟ್ವಾಳ: ಯುವಕನನ್ನು ಇರಿದು ಮುಗಿಸಿದ ಸ್ನೇಹಿತರು…

ಬಂಟ್ವಾಳ: ಯುವಕನೋರ್ವನನ್ನು ಆತನ ಸ್ನೇಹಿತರಿಬ್ಬರು ಸೇರಿಕೊಂಡು ಮಾರಕಾಸ್ತ್ರಗಳಿಂದ ಕೊಲೆ ನಡೆಸಿದ ಘಟನೆ ನಿನ್ನೆ ಮಧ್ಯರಾತ್ರಿ ವೇಳೆ ಕೈಕಂಬದ ತಲಪಾಡಿ ಎಂಬಲ್ಲಿ ನಡೆದಿದೆ.ಶಾಂತಿ ಅಂಗಡಿ ನಿವಾಸಿ ಮಹಮ್ಮದ್ ಆಶಿಫ್ (29) ಕೊಲೆಯಾದ ಯುವಕ.ಆತನ ಸ್ನೇಹಿತ...