Connect with us

DAKSHINA KANNADA

ಮಂಗಳೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಪ್ರಕರಣದ ಅಪರಾಧಿಗೆ 10 ವರ್ಷ ಕಠಿಣ ಸಜೆ

Published

on

ಮಂಗಳೂರು: ಬಾಲಕಿಯ ಮೇಲೆ ಸುಮಾರು ಒಂದು ವರ್ಷ ಕಾಲ ನಿರಂತರ ಅತ್ಯಾಚಾರ ಎಸಗಿದ ಅಪರಾಧಿಗೆ 10 ವರ್ಷ ಕಠಿಣ ಸಜೆ ಮತ್ತು 25 ಸಾವಿರ ರೂ. ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಹಾಗೂ 2 ನೇ ತ್ವರಿತಗತಿ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.


ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಬೊಳ್ಳರ ಮಜಲು ಮನೆಯ ಪ್ರಸಾದ್ (31) ಶಿಕ್ಷೆಗೊಳಗಾದ ಆರೋಪಿ, ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಪ್ರಸಾದ್ ಮನೆಗೆ ಆತನ ಸಂಬಂಧಿಕಳೇ ಆಗಿರುವ 17 ವರ್ಷದ ಬಾಲಕಿ ಮನೆ ಕೆಲಸಕ್ಕಾಗಿ 2018ರ ಜುಲೈ 28ರಂದು ಬಂದಾಗ ಆಕೆಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ್ದ.

ಆ ಬಳಿಕ ಪದೇ ಪದೇ ಅತ್ಯಾಚಾರ ಮಾಡಿದ್ದು, ಈ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಆಕೆ ಪ್ರತಿಭಟಿಸಿದಾಗ ಆತ ಆಕೆಯ ಮೇಲೆ ಹಲ್ಲೆಯನ್ನು ಮಾಡಿದ್ದ. ಹೀಗಾಗಿ ಬಾಲಕಿ ಆರೋಪಿ ವಿರುದ್ಧ ಪೋಕ್ಸೊ ಕೇಸ್ ದಾಖಲು ಮಾಡಿದ್ದಳು.

ಇದೀಗ ವಿಚಾರಣೆ ಕೈಗೆತ್ತಿಕೊಂಡ ಹೆಚ್ಚುವರಿ ನ್ಯಾಯಾಲಯ ಹಾಗೂ 2ನೇ ತವರಿತಗತಿ ವಿಶೇಷ ನ್ಯಾಯಾಲಯದ ನ್ಯಾಯಾಧಿಶರಾದ ಎಂ.ಕೆ. ರಾಧಾಕೃಷ್ಣ ಅವರು ಆರೋಪ ಸಾಬೀತಾಗಿದೆ ಎಂಬ ತೀರ್ಮಾನಕ್ಕೆ ಬಂದು ಮಾ.22ರಂದು ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದು, ಪೋಕ್ಸ್ ಕಾಯಿದೆಯ ಕಲಂ 6ರನ್ವಯ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ ಮತ್ತು 25 ಸಾವಿರ ರೂ. ದಂಡ ಹಾಗೂ ದಂಡ ತೆರಲು ತಪ್ಪಿದರೆ ಮತ್ತೆ 2 ತಿಂಗಳ ಸಜೆ, ಐಪಿಸಿ ಸೆ.506 (ಕೊಲೆ ಬೆದರಿಕೆ) 1 ವರ್ಷ ಸಜೆ, ಐಪಿಸಿ ಸೆಕ್ಷನ್ 323(ಹಲ್ಲೆ) ಅನ್ವಯ 6 ತಿಂಗಳ ಸಜೆ ವಿಧಿಸಲಾಗಿದೆ.

ಈ ಮೂರೂ ಶಿಕ್ಷೆಗಳನ್ನು ಏಕಕಾಲದಲ್ಲಿ ಅನುಭವಿಸಬೇಕಾಗಿದೆ ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ.

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending