DAKSHINA KANNADA
ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಫೆಲೋಶಿಪ್ ಮೊತ್ತ ಕಡಿತ: ರಾಜ್ಯ ಸರಕಾರದ ಕ್ರಮಕ್ಕೆ ಪಾಪ್ಯುಲರ್ ಫ್ರಂಟ್ ಆಕ್ಷೇಪ
ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಫೆಲೋಶಿಪ್ ಮೊತ್ತ ಕಡಿತ: ರಾಜ್ಯ ಸರಕಾರದ ಕ್ರಮಕ್ಕೆ ಪಾಪ್ಯುಲರ್ ಫ್ರಂಟ್ ಆಕ್ಷೇಪ
ಮಂಗಳೂರು: ಪಿಎಚ್‌ಡಿ ಮತ್ತು ಎಂ.ಫಿಲ್ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ವರ್ಷಕ್ಕೆ ರೂ.3 ಲಕ್ಷ ಫೆಲೋಶಿಪ್ ನೀಡುತ್ತಿದ್ದು, ಇದೀಗ ಕೋವಿಡ್ ನೆಪವೊಡ್ಡಿ ಈ ಮೊತ್ತವನ್ನು ರೂ.1 ಲಕ್ಷಕ್ಕೆ ಇಳಿಸಿದೆ ಎಂದು ವರದಿಯಾಗಿದೆ.
ಅದೇ ರೀತಿ ತಿಂಗಳಿಗೆ ರೂ.25 ಸಾವಿರದಂತೆ ನೀಡಲಾಗುತ್ತಿದ್ದ ಮೊತ್ತವನ್ನು ಕಳೆದ ಹತ್ತು ತಿಂಗಳಿನಿಂದ ಪಾವತಿಸಲಾಗಿಲ್ಲ ಎಂಬ ಆರೋಪವೂ ವಿದ್ಯಾರ್ಥಿಗಳಿಂದ ಕೇಳಿ ಬಂದಿದೆ. ಮುಸ್ಲಿಮರಲ್ಲಿ ಪಿಎಚ್‌ಡಿ, ಎಂ.ಫಿಲ್‌ನಂತಹ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುವವರ ಪ್ರಮಾಣ ಶೇ.1ರಷ್ಟು ಮಾತ್ರವಿದೆ. ವಸ್ತುಸ್ಥಿತಿ ಹೀಗಿದ್ದರೂ, ರಾಜ್ಯ ಸರಕಾರವು ಫೆಲೋಶಿಪ್ ಮೊತ್ತವನ್ನು ಕಡಿತಗೊಳಿಸಿರುವುದು ಖಂಡನೀಯವಾಗಿದೆ.
ರಾಜ್ಯದ ಬಿಜೆಪಿ ಸರಕಾರವು ಅಲ್ಪಸಂಖ್ಯಾತ ವಿರೋಧಿ ನೀತಿಗಳನ್ನು ಅನುಸರಿಸುತ್ತಾ ಬರುತ್ತಿದೆ. ಅಲ್ಪಸಂಖ್ಯಾತರ ಕಲ್ಯಾಣ ಅಭಿವೃದ್ಧಿ ಯೋಜನೆಗಳಿಗೆ ನೀಡಲಾಗುವ ಅನುದಾನದ ಪೈಕಿ 2020-21ನೆ ಆರ್ಥಿಕ ವರ್ಷದಲ್ಲಿ ಸುಮಾರು 468 ಕೋಟಿ ರೂಪಾಯಿ ಮೊತ್ತವನ್ನು ಕಡಿತಗೊಳಿಸಲು ಈಗಾಗಲೇ ತೀರ್ಮಾನಿಸಿದೆ. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡಲಾಗುವ ಸ್ಕಾಲರ್ ಶಿಪ್ ಮೊತ್ತವೂ ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ತಲುಪುತ್ತಿಲ್ಲ. ಇದೀಗ ಕೊರೋನದ ನೆಪವೊಡ್ಡಿ ಫೆಲೋಶಿಪ್ ಮೊತ್ತವನ್ನು ಕಡಿತಗೊಳಿಸಿರುವುದು ರಾಜ್ಯ ಸರಕಾರದ ತಾರತಮ್ಯ ಧೋರಣೆಗೆ ಹಿಡಿದ ಕೈಗನ್ನಡಿಯಾಗಿದೆ.
ಮುಸ್ಲಿಮರ ಹಿಂದುಳಿಯುವಿಕೆಯ ಬಗ್ಗೆ ವಿಸ್ತೃತ ವರದಿ ನೀಡಿರುವ ಜಸ್ಟಿಸ್ ರಾಜೀಂದರ್ ಸಾಚಾರ್ ನೇತೃತ್ವದ ಆಯೋಗವು ಅವರನ್ನು ಶೈಕ್ಷಣಿಕವಾಗಿ ಮೇಲೆತ್ತಬೇಕೆನ್ನುವ ಬಗ್ಗೆ ಸಲಹೆಗಳನ್ನು ನೀಡಿತ್ತು. ಎಲ್ಲಾ ವರ್ಗಗಳಿಗೆ ಸಮಾನ ನ್ಯಾಯ ಕಲ್ಪಿಸಬೇಕೆಂಬುದು ಸಂವಿಧಾನದ ಆಶಯವಾಗಿದೆ ಮತ್ತು ಮುಸ್ಲಿಮರ ಹಿಂದುಳಿಯುವಿಕೆಯನ್ನು ನಿರ್ಮೂಲನೆಗೊಳಿಸಲು ಕ್ರಮ ಕೈಗೊಳ್ಳಬೇಕಾಗಿರುವುದು ಆಯಾ ಸರಕಾರಗಳ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರವು ತನ್ನ ಪಕ್ಷಪಾತಿ ಧೋರಣೆಯಿಂದ ಹಿಂದೆ ಸರಿದು ಅಲ್ಪಸಂಖ್ಯಾತರ ಶೈಕ್ಷಣಿಕ ಸಬಲೀಕರಣವನ್ನು ಖಾತರಿಪಡಿಸಬೇಕು. ಅದೇ ರೀತಿ ಅಲ್ಪಸಂಖ್ಯಾತ ಸಮುದಾಯವೂ ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಲು ಮುಂದೆ ಬರಬೇಕಾಗಿದೆ ಎಂದು ಅಯ್ಯೂಬ್ ಅಗ್ನಾಡಿ ತಿಳಿಸಿದ್ದಾರೆ.
DAKSHINA KANNADA
Sullia : ಕಂಠಪೂರ್ತಿ ಕುಡಿದು ಅಡ್ಡಾದಿಡ್ಡಿ ಕಾರು ಚಲಾಯಿಸಿದ ಸರ್ಕಾರಿ ಅಧಿಕಾರಿ
ಸುಳ್ಯ : ಸರ್ಕಾರಿ ಅಧಿಕಾರಿಯೊಬ್ಬರು ಮದ್ಯದ ನಶೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಸಾರ್ವಜನಿಕರಿಂದ ಬೈಗುಳ ತಿಂದ ಸುಳ್ಯದ ಅರಂಬೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್ ಎಂಬವರು ಕಂಠಪೂರ್ತಿ ಕುಡಿದ ಮದ್ಯದ ಮತ್ತಿನಲ್ಲಿ ಸುಳ್ಯ ಅರಂಬೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ, ರಸ್ತೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಹಲವಾರು ವಾಹನಗಳಿಗೆ ಢಿಕ್ಕಿ ಆಗುವಂತಹ ಸಂಭಾವ್ಯ ದುರಂತವೊಂದು ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ತಪ್ಪಿದೆ. ರಸ್ತೆಯುದ್ದಕ್ಕೂ ವಿರುದ್ಧ ದಿಕ್ಕಿನಲ್ಲಿ, ಅಡ್ಡಾದಿಡ್ಡಿ ವಾಹನ ಚಲಾಯಿಸಿ ಅಪಘಾತ ಸಂಭವಿಸುವ ಸಾಧ್ಯತೆಯನ್ನು ಮನಗಂಡ ಕೆಲವು ವಾಹನ ಸವಾರರು ಸಾರ್ವಜನಿಕರ ಸಹಕಾರದಿಂದ ಅಡ್ಡಗಟ್ಟಿದ್ದಾರೆ. ಸರ್ಕಾರಿ ಅಧಿಕಾರಿಯ ಈ ವರ್ತನೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
DAKSHINA KANNADA
ಉಪ್ಪಿನಂಗಡಿ:12 ಅಡಿ ಉದ್ದದ ಕಾಳಿಂಗ ಸರ್ಪ ಹಿಡಿಯೋಕು ಮೀಟ್ರು ಬೇಕು
ಉಪ್ಪಿನಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿಯ ಸೈಂಟ್ ಜೋಸೆಫ್ ಮಲಂಕರ ಚರ್ಚ್ ಪರಿಸರದಲ್ಲಿ 12 ಅಡಿ ಉದ್ದದ ಕಾಳಿಂಗ ಸರ್ಪ ಪ್ರತ್ಯಕ್ಷಗೊಂಡಿತು. ಇದನ್ನು ಸೆರೆ ಹಿಡಿದ ಉರಗ ತಜ್ಞ ಕೆ. ಝಕರಿಯ್ಯ ಎಂಬುವವರು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.
ಎರಡು- ಮೂರು ದಿನಗಳಿಂದ ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪವೊಂದು ನೆಲ್ಯಾಡಿಯ ಸೈಂಟ್ ಜೋಸೆಫ್ ಮಲಂಕರ ಚರ್ಚ್ ಪರಿಸರದಲ್ಲಿ ಸುತ್ತಾಡಿಕೊಂಡಿತ್ತು.
ಈ ಬಗ್ಗೆ ಮಾಹಿತಿ ಪಡೆದ ಉಪ್ಪಿನಂಗಡಿಯ ಕೆ. ಝಕರಿಯಾ ಅವರು ಅಲ್ಲಿಗೆ ತೆರಳಿ ಸುಮಾರು ಒಂದು ಗಂಟೆಯಷ್ಟು ಕಾರ್ಯಾಚರಣೆಯ ಬಳಿಕ ಕಾಳಿಂಗ ಸರ್ಪವನ್ನು ಹಿಡಿದು ಸುರಕ್ಷಿತವಾಗಿ ಗುಂಡ್ಯ ಬಳಿ ದಟ್ಟಾರಣ್ಯಕ್ಕೆ ಬಿಟ್ಟಿದ್ದಾರೆ.
DAKSHINA KANNADA
ಅತ್ತಾವರ ಅಪಾರ್ಟ್‌ಮೆಂಟ್‌ನಲ್ಲಿ ಆಕಸ್ಮಿಕ ಬೆಂಕಿ – ವೃದ್ಧೆ ಸಾವು..!
ಮಂಗಳೂರು: ಮಂಗಳೂರಿನ ಅತ್ತಾವರದ ಅಪಾರ್ಟ್ ಮೆಂಟ್‌ವೊಂದರಲ್ಲಿ ಇಂದು ಬೆಳಗ್ಗೆ ನಡೆದ ಆಕಸ್ಮಿಕ ಬೆಂಕಿ ಅನಾಹುತದಲ್ಲಿ ಗಂಭೀರ ಗಾಯಗೊಂಡಿದ್ದ ವೃದ್ಧೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಶಾಹಿನಾ ನುಸ್ಬಾ(58) ಸಾವನ್ನಪ್ಪಿದ ವೃದ್ಧೆ ಎಂದು ಗುರುತಿಸಲಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮುಂಜಾನೆ 4 ಗಂಟೆಯ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದ್ದು, ಐವರು ಮಕ್ಕಳ ಸಹಿತ ಎಂಟು ಮಂದಿ ಅಪಾಯದಿಂದ ಪಾರಾಗಿದ್ದಾರೆ.
ಅನಾರೋಗ್ಯದಿಂದಾಗಿ ಬೆಡ್ ರೂಮ್ ನಲ್ಲೇ ಇದ್ದ ವೃದ್ಧ ಮಹಿಳೆ ದಟ್ಟ ಹೊಗೆಯಿಂದಾಗಿ ತಕ್ಷಣ ಹೊರಬರಲಾಗದೇ ಉಸಿರುಗಟ್ಟಿ ಚಿಂತಾಜನಕ ಸ್ಥಿತಿಯಲ್ಲಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
- FILM7 days ago
ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ ನೋಡಿ ‘ಕತ್ತೆ’ ಎಂದ ಕಿಚ್ಚ ಸುದೀಪ
- bengaluru6 days ago
ಇನ್ಸ್ಟಾಗ್ರಾಂನಲ್ಲಿ 11 ಸಾವಿರ ಫಾಲೋವರ್ಸ್ ಕಳೆದುಕೊಂಡ ಬಿಗ್ ಬಾಸ್ ಸ್ಪರ್ಧಿ ಸಂಗೀತಾ
- DAKSHINA KANNADA6 days ago
Breaking news :ಮಂಗಳೂರಿನ ಹೊಟೇಲ್ ರೂಂನಲ್ಲಿ ಬೆಂಕಿ-ಒಳಗಿದ್ದ ವ್ಯಕ್ತಿ ಸಾವು
- bengaluru6 days ago
ಬೆಂಗಳೂರು ಕಂಬಳಕ್ಕೆ ಕ್ಷಣಗಣನೆ-ಉಪ್ಪಿನಂಗಡಿಯಿಂದ ಬೆಂಗಳೂರಿಗೆ ಕೋಣಗಳ ಪ್ರಯಾಣ