ಗೆಜ್ಜೆಗಿರಿ ಪವಾಡ: ಬಾಗಿಲು ಹಾಕಿದ ಚಾವಡಿಯಲ್ಲಿ ಮೂಡಿತು ಹೆಜ್ಜೆಗುರುತು…!!
Published
5 years agoon
By
Adminಗೆಜ್ಜೆಗಿರಿ ಸತ್ಯಧರ್ಮ ಚಾವಡಿಯೊಳಗೆ ಅರ್ಧನಾರೀಶ್ವರ ಮಂಡಲದಲ್ಲಿ ಮೂಡಿದ ಸಪ್ತ ಹೆಜ್ಜೆಗುರುತು…!
ಪುತ್ತೂರು: ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿರುವ ಕೋಟಿ ಚೆನ್ನಯರ ಮೂಲ ಸ್ಥಾನವಾದ ಪುತ್ತೂರಿನ ಗೆಜ್ಜೆಗಿರಿ ನಂದನಬಿತ್ತಿಲ್ ಕ್ಷೇತ್ರದಲ್ಲಿ ಹೆಜ್ಜೆಗುರುತಿನ ಪವಾಡವೊಂದು ನಡೆಯುವ ಮೂಲಕ ಭಕ್ತಾಧಿಗಳ ಅಚ್ಚರಿಗೆ ಕಾರಣವಾಗಿದೆ.
ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಸತ್ಯಧರ್ಮ ಚಾವಡಿಯಲ್ಲಿ ಪುರೋಹಿತರು ಬಿಡಿಸಿದ್ದ ಮಂಡಲದಲ್ಲಿ ಪುಟ್ಟ ಮಗುವಿನ ಗಾತ್ರದ ಹೆಜ್ಜೆಗುರುತು ಪ್ರತ್ಯಕ್ಷಗೊಂಡಿದ್ದು, ಭಕ್ತ ಕೋಟಿಯನ್ನು ಆಶ್ಚರ್ಯಗೊಳಿಸಿದೆ.
ಬ್ರಹ್ಮಕಲಶೋತ್ಸವದ ನಿಮಿತ್ತ ಬುಧವಾರ ರಾತ್ರಿ ಚಾವಡಿಯ ಸಾಯನಗುರು ಪೀಠದ ಬಳಿ ಅರ್ಚಕರು ಚಂದ್ರ ಮಂಡಲ ರಚಿಸಿ ಅರ್ಧನಾರೀಶ್ವರ ಚಿತ್ತಾರ ರೂಪಿಸಿದ್ದರು.
ಶುಕ್ರವಾರ ಬೆಳಗ್ಗೆ ಚಾವಡಿಯಲ್ಲಿ ದೇಯಿ ಬೈದೆತಿ ಬಿಂಬ, ಸಾಯನಗುರುಗಳ ಬಿಂಬಗಳ ಶಯ್ಯಾಧಿವಾಸ ನಡೆದು ಬಾಗಿಲು ಹಾಕಲಾಗಿತ್ತು.
ಸಂಜೆ ಹೊತ್ತಿಗೆ ಬಾಗಿಲು ತೆರೆದು ಒಳಹೋದ ಸಂದರ್ಭ ಈ ಅಚ್ಚರಿ ಕಂಡು ಬಂದಿದ್ದು, ಚಂದ್ರ ಮಂಡಲದ ಒಂದು ಭಾಗದಿಂದ ಗುರುಪೀಠದ ಕಡೆ ನಡೆದು ಹೋಗುವ ರೀತಿಯಲ್ಲಿ ಸಪ್ತ ಹೆಜ್ಜೆಗುರುತು ಕಂಡು ಬಂದಿದೆ.
ಚಂದ್ರ ಮಂಡಲದ ಮೇಲೆ ಪುಟ್ಟ ಮಕ್ಕಳ ಹೆಜ್ಜೆ ಗುರುತು ಹೇಗೆ ಬಂದಿದೆ ಎನ್ನುವ ಆಶ್ಚರ್ಯ ಸದ್ಯ ಎಲ್ಲರನ್ನೂ ಕಾಡಿದೆ.
ಒಂದು ವೇಳೆ ಪುಟ್ಟ ಮಕ್ಕಳು ಈ ಚಂದ್ರಮಂಡಲದ ಮೇಲೆ ನಡೆದಿದ್ದೇ ಆದಲ್ಲಿ ರಂಗೋಲಿಯಿಂದ ಬಿಡಿಸಿದ ಚಂದ್ರಮಂಡಲ ಸಂಪೂರ್ಣ ಅಸ್ತವ್ಯಸ್ತವಾಗುತ್ತಿತ್ತು.
ಆದರೆ ಚಂದ್ರಮಂಡಲ ಇದ್ದ ಹಾಗೇ ಇದ್ದು, ಪುಟ್ಟ ಮಕ್ಕಳ ಹೆಜ್ಜೆ ಗುರುತು ಮೂಡಲು ಹೇಗೆ ಸಾಧ್ಯ ಎನ್ನುವ ಚರ್ಚೆಗಳು ಆರಂಭವಾಗತೊಡಗಿದೆ.
ಕರಾವಳಿ ಜಿಲ್ಲೆಯಲ್ಲಿ ಸುಮಾರು 247 ಗರಡಿಗಳಲ್ಲಿ ಆರಾಧಿಸಲ್ಪಡುತ್ತಿರುವ ಕೋಟಿ- ಚೆನ್ನಯರಿಗೆ ಇದೇ ಮೊದಲ ಬಾರಿಗೆ ಮೂಲಸ್ಥಾನದಲ್ಲಿ ಗರಡಿ ನಿರ್ಮಾಣಗೊಂಡಿದೆ.
ಈ ಗರಡಿಯಲ್ಲಿ ಕೋಟಿ – ಚೆನ್ನಯರ ಜೊತೆಗೆ ಗುರು ಸಾಯನ ಬೈದ್ಯರ ಬಿಂಬ ಸ್ಥಾಪನೆಯಾಗಿರುವುದು ಇಲ್ಲಿನ ವಿಶೇಷ.
ವಿಡಿಯೋಗಾಗಿ..
You may like
International news
ಚೀನಾ ಸೈನಿಕರ ಕಾಲರ್ ನಲ್ಲಿ ಗುಂಡು ಪಿನ್ ಏಕಿದೆ ಗೊತ್ತಾ ?
Published
6 hours agoon
07/01/2025By
NEWS DESK3ಮಂಗಳೂರು/ಬೀಜಿಂಗ್ : ಸಾಮಾನ್ಯವಾಗಿ ಭಾರತೀಯ ಸೇನೆ ಮತ್ತು ಚೀನಾ ಸೇನೆಯ ಶಸ್ತ್ರಾಸ್ತ್ರಗಳಿಗೆ ಸಂಬಂಧಿಸಿದ ವಿಷಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುತ್ತವೆ. ಆದರೆ ಚೀನಾದ ಸೈನಿಕರ ತರಬೇತಿಯಲ್ಲಿ, ಯೋಧರ ಕೊರಳಪಟ್ಟಿಗಳ ಮೇಲೆ ಗುಂಡು ಪಿನ್ ಗಳನ್ನು ಅಂಟಿಸಿರುವುದು, ಇದಕ್ಕೆ ಸಂಬಂಧಿಸಿದ ಫೋಟೋಗಳು ವೈರಲ್ ಆಗುತ್ತಿವೆ.
ಮಿಲಿಟರಿ ಸೇವೆಯಲ್ಲಿ ಸೈನಿಕರು ನಡೆಯುವ ರೀತಿ, ಚಲಿಸುವ ಅಥವಾ ನಿಂತಿರುವ ರೀತಿಯಲ್ಲಿ ವಿಶೇಷ ಗಮನ ಹರಿಸುತ್ತಾರೆ. ಸೈನಿಕರು ತಮ್ಮ ಎದೆಯನ್ನು ಮೇಲಕ್ಕೆತ್ತಿ, ಕುತ್ತಿಗೆಯನ್ನು ನೇರವಾಗಿ ಮತ್ತು ಕೈಗಳನ್ನು ನೇರವಾಗಿ ನಿಲ್ಲಬೇಕು ಎಂಬ ನಿಯಮ ಇದೆ. ಈ ನಿಯಮ ಚೀನಾದ ಸೇನೆಯಲ್ಲೂ ಇದೆ.
ಚೀನಾದ ಸೈನಿಕರ ಸಮವಸ್ತ್ರದ ಕೊರಳಪಟ್ಟಿಗಳ ಮೇಲೆ ಗುಂಡುಪಿನ್ ಗಳನ್ನು ಅಂಟಿಕೊಂಡಿರುವ ರೀತಿಯಲ್ಲಿ ಇರಿಸಲಾಗುತ್ತದೆ. ಇದಕ್ಕೆ ಒಂದು ಕಾರಣವೂ ಇದೆ. 2009ರಲ್ಲಿ ನ್ಯೂಯಾರ್ಕ್ ಟೈಮ್ಸ್ ಈ ಬಗ್ಗೆ ವರದಿ ಮಾಡಿತ್ತು. ಸೈನಿಕರು ತಮ್ಮ ಕುತ್ತಿಗೆಯನ್ನು ಸದಾ ಗಟ್ಟಿಯಾಗಿರಿಸಲು ಈ ರೀತಿಯಾಗಿ ಪಿನ್ ಗಳನ್ನು ಧರಿಸುತ್ತಾರೆ ಎಂದು ಹೇಳಲಾಗಿದೆ.
ಇದನ್ನೂ ಓದಿ: ದೆಹಲಿ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ
ಕುತ್ತಿಗೆಯನ್ನು ಬಾಗಿಸಿದಾಗ ಪಿನ್ ಗಳು ಕುತ್ತಿಗೆಗೆ ಚುಚ್ಚುವ ರೀತಿಯಲ್ಲಿ ಕಾಲರ್ ನಲ್ಲಿ ಇರಿಸಲಾಗಿದೆ. ಸೈನಿಕರು ತಮ್ಮ ಕುತ್ತಿಗೆಯನ್ನು ಸದಾ ನೇರವಾಗಿರಿಸಲು ಈ ರೀತಿ ಮಾಡಲಾಗುತ್ತದೆ. ಅಲ್ಲದೆ, ಸದಾ ಅಲರ್ಟ್ ಆಗಿರಲು ಈ ರೀತಿ ಮಾಡಲಾಗುತ್ತದೆ. ಇದನ್ನು ಹೆಚ್ಚಾಗಿ ಪರೇಡ್ ಸಂದರ್ಭಗಳಲ್ಲಿ ಅನುಸರಿಸಲಾಗುತ್ತದೆ.
ಪ್ರತಿಯೊಬ್ಬ ಸೈನಿಕನಿಗೂ ಈ ವಿಧಾನ ಅನ್ವಹಿಸುವುದಿಲ್ಲ. ಬದಲಾಗಿ ಕುತ್ತಿಗೆ ನೇರವಾಗಿರಿಸದ ಸೈನಿಕರಿಗೆ ಇದನ್ನು ಬಳಸುತ್ತಾರೆ ಮತ್ತು ಇದರಿಂದ ಅವರ ಭಂಗಿಯನ್ನು ಸರಿಪಡಿಸಲಾಗುತ್ತದೆ.
DAKSHINA KANNADA
ಜ.10 ರಂದು ಡೊಂಗರಕೇರಿ ವೆಂಕಟರಮಣ ದೇವಳದಲ್ಲಿ ವೈಕುಂಠ ಏಕಾದಶಿ
Published
6 hours agoon
07/01/2025By
NEWS DESK4ಮಂಗಳೂರು : ಡೊಂಗರಕೇರಿ ವೆಂಕಟರಮಣ ದೇವಸ್ಥಾನದಲ್ಲಿ ಜನವರಿ 10 ರಂದು ಏಳನೇ ವರ್ಷದ ಏಕಾದಶಿಯನ್ನು ಅದ್ಧೂರಿಯಿಂದ ಆಚರಿಸಲಾಗುವುದು ಎಂದು ದೇವಳದ ಮ್ಯಾನೇಜಿಂಗ್ ಟ್ರಸ್ಟಿ ಪ್ರವೀಣ್ ನಾಗ್ವೇಕರ್ ಬೋಳಾರ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.
ಇಲ್ಲಿ ನಡೆಯುವ ಏಕಾದಶಿ ಕಾರ್ಯಕ್ರಮ ದೇವರ ಅಪ್ಪಣೆಯಂತೆ ನಡೆಯುತ್ತಿದ್ದು, ಪ್ರತೀ ಬಾರಿಯಂತೆ ಈ ಬಾರಿಯೂ ವಿಜೃಂಭಣೆಯಿಂದ ಆಚರಿಸಲಾಗುವುದು. ಅಂದು ಲೋಕ ಕಲ್ಯಾಣಕ್ಕಾಗಿ ನಾಮತ್ರಯ ಮಹಾಮಂತ್ರ ಜಪಯಜ್ಞ, ಪುಷ್ಪಯಾಗ ಮತ್ತು ಅಷ್ಟಾವಧಾನ ಸೇವೆಯನ್ನು ಹಮ್ಮಿಕೊಳ್ಳಲಾಗಿದೆ. ಅಂದು ಸಾಯಂಕಾಲ 4 ಗಂಟೆಗೆ ಡೊಂಗರಕೇರಿ ಕಟ್ಟೆಯಿಂದ ಪುಷ್ಪಯಾಗದ ಹೂವಿನ ವಿಶೇಷ ಮೆರವಣಿಗೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ : ಮಹಾಕುಂಭ ಮೇಳಕ್ಕೆ ನಾಗಾಸಾಧುಗಳ ಗ್ರ್ಯಾಂಡ್ ಎಂಟ್ರಿ..!
ಕಾರ್ಯಕ್ರಮದ ಉಸ್ತುವಾರಿ ಗಣೇಶ್ ನಾಗ್ವೇಕರ್ ಬೋಳಾರ್ ಮಾತನಾಡಿ, ಅಂದು ಬೆಳಗ್ಗೆ 7 ರಿಂದ 8ರ ವರೆಗೆ ಸಾಮೂಹಿಕ ವಿಷ್ಣು ಸಹಸ್ರನಾಮ ಪಾರಾಯಣ, ಮಧ್ಯಾಹ್ನ 12ಕ್ಕೆ ಮಹಾಪೂಜೆ, 1 ರಿಂದ 3ರ ವರೆಗೆ ಭಜನಾ ಕಾರ್ಯಕ್ರಮ, ರಾತ್ರಿ 9ಕ್ಕೆ ದೀಪಾರಾಧನೆ ಮಹಾಪೂಜೆ ಬಳಿಕ 10 ಗಂಟೆಗೆ ಪ್ರಸಾದ ವಿತರಣೆ ನಡೆಯಲಿದೆ ಎಂದು ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ವಿನಾಯಕ ಶೇಟ್, ಸಾಯಿದತ್ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.
LATEST NEWS
ಅಯೋಧ್ಯೆಯಲ್ಲಿ ಭಾರೀ ಭದ್ರತಾ ಲೋಪ; ಅಧಿಕಾರಿಗಳನ್ನ ಬೆಚ್ಚಿಬೀಳಿಸಿದ ಆರೋಪಿಯ ಕನ್ನಡಕ..!
Published
7 hours agoon
07/01/2025By
NEWS DESK2ಶ್ರೀರಾಮನ ಕ್ಷೇತ್ರ ಅಯೋಧ್ಯೆಯಲ್ಲಿ ಭದ್ರತಾ ಲೋಪವಾಗಿರುವ ಬಗ್ಗೆ ವರದಿಯಾಗಿದೆ. ವ್ಯಕ್ತಿಯೊಬ್ಬ ಕನ್ನಡಕದಲ್ಲಿ ಎರಡು ಕ್ಯಾಮೆರಾಗಳನ್ನು ಅಳವಡಿಸಿಕೊಂಡು ರಾಮಮಂದಿರಕ್ಕೆ ಎಂಟ್ರಿಯಾಗಿದ್ದ. ಕ್ಯಾಮೆರಾದಲ್ಲಿ ಗೌಪ್ಯವಾಗಿ ದೇಗುಲದ ಫೋಟೋವನ್ನು ತೆಗೆಯುತ್ತಿದ್ದ. ಇದು ಭದ್ರತಾ ಸಿಬ್ಬಂದಿಗೆ ಗೊತ್ತಾಗಿ ವಶಕ್ಕೆ ಪಡೆದು, ವಿಚಾರಣೆ ನಡೆಸಲಾಗ್ತಿದೆ.
ಹೆಚ್ಚಿನ ವಿಚಾರಣೆಗಾಗಿ ಆತನನ್ನು ಗುಪ್ತಚರ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಲಾಗಿದೆ. ವರದಿಗಳ ಪ್ರಕಾರ, ಆರೋಪಿ ಸೋಮವಾರ ರಾಮಲಲ್ಲಾನ ದರ್ಶನ ಪಡೆಯಲು ಅಯೋಧ್ಯೆಗೆ ಆಗಮಿಸಿದ್ದ. ಕ್ಯಾಮೆರಾ ಇರುವ ಕನ್ನಡಕ ಧರಿಸಿದ್ದ ಈತ, ದೇಗುಲದ ಎಲ್ಲಾ ಭದ್ರತಾ ಚೆಕ್ ಪಾಯಿಂಟ್ ದಾಟಿ ಬಂದರೂ ಸಿಬ್ಬಂದಿಗೆ ಗೊತ್ತಾಗಲಿಲ್ಲ.
ಅದೇ ರೀತಿ ರಾಮಮಂದಿರ ಸಂಕಿರ್ಣಕ್ಕೆ ಆಗಮಿಸಿದ್ದ ಆರೋಪಿ ಫೋಟೋ ತೆಗೆಯಲು ಆರಂಭಿಸಿದ್ದ. ಇದು ಅಲ್ಲಿರುವ ಭದ್ರತಾ ಸಿಬ್ಬಂದಿಗೆ ಗೊತ್ತಾಗಿ ಕೂಡಲೇ ವಶಕ್ಕೆ ಪಡೆದುಕೊಂಡಿದ್ದಾರೆ. ನಂತರ ಹೆಚ್ಚಿನ ತನಿಖೆಗಾಗಿ ಗುಪ್ತಚರ ಇಲಾಖೆ ಅಧಿಕಾರಿಗಳಿಗೆ ಆತನನ್ನು ನೀಡಿದ್ದಾರೆ. ಆತ ಧರಿಸಿದ್ದ ಕನ್ನಡಕದ ಎರಡೂ ಬದಿಯಲ್ಲಿ ಕ್ಯಾಮೆರಾ ಅಳವಡಿಸಲಾಗಿತ್ತು. ಅದರ ಮೂಲಕ ಗೊತ್ತಾಗದ ರೀತಿಯಲ್ಲಿ ಸುಲಭವಾಗಿ ಫೋಟೋಗಳನ್ನು ತೆಗೆಯಬಹುದು.
ಅಯೋಧ್ಯೆ ರಾಮಮಂದಿರದ ಭದ್ರತಾ ಜವಾಬ್ದಾರಿ ವಿಶೇಷ ಭದ್ರತಾ ಪಡೆ (ಎಸ್ಎಸ್ಎಫ್) ಬಳಿ ಇದೆ. ಯೋಗಿ ಆದಿತ್ಯನಾಥ ಸರ್ಕಾರ ವಿಶೇಷ ಭದ್ರತಾ ಪಡೆಯನ್ನು ನೇಮಿಸಿದೆ. ಪಿಎಸಿ ಮತ್ತು ಉತ್ತರ ಪ್ರದೇಶ ಪೊಲೀಸ್ನ ಅತ್ಯುತ್ತಮ ಸಿಬ್ಬಂದಿಯನ್ನು ಸಂಯೋಜಿಸುವ ಎಸ್ಎಸ್ಎಫ್ ಪಡೆ ರಚನೆ ಮಾಡಲಾಗಿದೆ.
LATEST NEWS
ಪಾಳುಬಿದ್ದ ಮನೆಯ ಫ್ರಿಡ್ಜ್ನಲ್ಲಿ ಮಾನವನ ತಲೆಬುರುಡೆ, ಮೂಳೆಗಳು ಪತ್ತೆ!
ದೆಹಲಿ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ
ದೆಹಲಿಯಲ್ಲಿ ದಟ್ಟ ಮಂಜು: 25 ರೈಲುಗಳ ಸಂಚಾರದಲ್ಲಿ ವ್ಯತ್ಯಯ
ಮಂಗಳೂರಿನಲ್ಲಿ ರಾಜ್ಯದ ಮೊದಲ ಸಿ ಬ್ಯಾಂಡ್ ಹವಾಮಾನ ರಾಡಾರ್ ಅಳವಡಿಕೆ
ಮಹಾಕುಂಭ ಮೇಳಕ್ಕೆ ನಾಗಾಸಾಧುಗಳ ಗ್ರ್ಯಾಂಡ್ ಎಂಟ್ರಿ..!
ಐಸಿಸಿಯಿಂದ ಹೊಸ ನಿಯಮ ರೂಪಿಸಲು ಚಿಂತನೆ; ಟು-ಟೈರ್ ಟೆಸ್ಟ್ ನಿಯಮಕ್ಕೆ ಸಿದ್ದತೆ ?
Trending
- DAKSHINA KANNADA6 days ago
ಬೊಜ್ಜು ಕರಗಿಸಲು ವ್ಯಾಯಾಮದ ಅಗತ್ಯ ಇಲ್ಲ : ಮಾತ್ರೆ ತಿಂದರೆ ಸಾಕು..!
- DAKSHINA KANNADA4 days ago
ಜಮೀನು ಮಾಲೀಕರಿಗೆ ಸಿಹಿ ಸುದ್ದಿ ನೀಡಿದ ಸುಪ್ರೀಂ ಕೋರ್ಟ್..!
- BIG BOSS4 days ago
2ನೇ ಮದುವೆಗೆ ಸಜ್ಜಾದ ಬಿಗ್ ಬಾಸ್ ಮಾಜಿ ಸ್ಪರ್ಧಿ ವರ್ತೂರು ಸಂತೋಷ್; ಹುಡುಗಿ ಯಾರು ಗೊತ್ತಾ..?
- BIG BOSS4 days ago
BBKS11: ಬಿಗ್ ಬಾಸ್ ವೀಕ್ಷಕರ ಮನಗೆದ್ದ ಮೋಕ್ಷಿತಾ ಮಾತು.. ಫ್ಯಾನ್ಸ್ಗಳಿಂದ ಫುಲ್ ಮಾರ್ಕ್ಸ್!