LATEST NEWS
ಕೃಷ್ಣಾ ನಗರಿಯಲ್ಲಿ ಮತ್ತೆ ಅಜ್ಜನ ಕಾರ್ಣಿಕ ಸಾಬೀತು-ಗಂಭೀರ ಸ್ಥಿತಿಯಲ್ಲಿದ್ದ ಪುಟ್ಟ ಕಂದಮ್ಮನ ಜೀವ ಉಳಿಸಿದ ಕೊರಗಜ್ಜನ ‘ಕರಿಗಂಧ’
ಉಡುಪಿ: ತುಳುನಾಡಿನ ಬಹುತೇಕ ಜನ ನಂಬುವ ಕಾರ್ಣಿಕ ಶಕ್ತಿ ಕೊರಗಜ್ಜ ದೈವದ ಪವಾಡ ಮತ್ತೆ ಸಾಬೀತಾಗಿದೆ. ವೈದ್ಯರೇ ಮಗು ಬದುಕುವ ಭರವಸೆಯನ್ನು ನೀಡದ ಸಂದರ್ಭದಲ್ಲಿ ಮಗುವಿನ ಹೆತ್ತವರು ಕೊರಗಜ್ಜನಲ್ಲಿ ಪ್ರಾರ್ಥಿಸಿ ಮಗುವಿನ ಹಣೆಗೆ ಕರಿಗಂಧ ಹಚ್ಚಿದ ಕೆಲವೇ ಗಂಟೆಗಳಲ್ಲಿ ಮಗುವಿನ ಆರೋಗ್ಯದಲ್ಲಿ ದಿಢೀರ್ ಚೇತರಿಕೆ ಕಂಡ ಘಟನೆ ಉಡುಪಿಯಲ್ಲಿ ನಡೆದಿದೆ.
ಸಾಗರ ಮೂಲದ ನಾಗಶ್ರೀ ಎಂಬುವವರ ನಾಲ್ಕು ತಿಂಗಳ ಪುಟ್ಟ ಹೆಣ್ಣು ಮಗುವಿಗೆ ವಿಪರೀತ ಜ್ವರ ಕಂಡು ಬಂದಿತ್ತು. ಎರಡು ದಿನ ಕಳೆದರೂ ಜ್ವರ ಕಡಿಮೆಯಾಗದೇ ಮಗು ಅಳು ನಿಲ್ಲಿಸುತ್ತಿರಲ್ಲಿಲ್ಲ.
ಹೀಗಾಗಿ ಕುಂದಾಪುರದ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಅಸ್ಪತ್ರೆಯಲ್ಲಿ ಮಗುವಿಗೆ ಪಿಡ್ಸ್ ಇರುವುದಾಗಿಯೂ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಅಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದ್ದರು.
ಹೀಗಾಗಿ ಮಣಿಪಾಲ ಆಸ್ಪತ್ರೆಯಲ್ಲಿ ಐಸಿಯು ಘಟಕದಲ್ಲಿಟ್ಟಿದ್ದರು. ಆದರು ಮಗುವಿನ ಅರೋಗ್ಯ ಚಿಂತಾಜನಕವಾಗಿತ್ತು. ಅಷ್ಟೇ ಅಲ್ಲ ಪದೇ ಪದೇ ಮಗುವಿನ ಹೃದಯ ಸ್ತಬ್ಧವಾಗುತ್ತಿರುವುದರ ಬಗ್ಗೆ ವೈದರು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದರು.
ವೈದರ ಪ್ರಯತ್ನ ಮಾಡುವುದಾಗಿಯೂ ಭರವಸೆ ನೀಡಿದರೂ ಮಗುವಿನ ಪ್ರಾಣ ಉಳಿಯುವ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದರು.
ಮಗುವಿನ ಪರಿಸ್ಥಿತಿ ಕಂಡ ಕುಟುಂಬಸ್ಥರು ಕಂಗಾಲಾಗಿ ಹೋಗಿದ್ದರು.
ಇದ್ದ ಒಂದು ಮಗುವನ್ನು ಕಳೆದುಕೊಳ್ಳುವ ಭಯದಲ್ಲಿದ್ದ ಪೋಷಕರಿಗೆ ಅಸ್ಪತ್ರೆ ಬಳಿಯಿದ್ದ ಓರ್ವ ವ್ಯಕ್ತಿ ಕೊರಗಜ್ಜ ಕ್ಷೇತ್ರದಲ್ಲಿ ಪ್ರಾರ್ಥನೆ ಸಲ್ಲಿಸುವಂತೆ ಹೇಳಿದ ಹಿನ್ನಲೆಯಲ್ಲಿ ಮಗುವಿನ ಹೆತ್ತವರು ಇಂದ್ರಾಳಿ, ಎಂಜಿಎಂ ಹಾಸ್ಟೆಲ್ ಬಳಿಯಿರುವ ಕೊರಗಜ್ಜನ ಕ್ಷೇತ್ರಕ್ಕೆ ಬಂದು ಪ್ರಾರ್ಥನೆ ಸಲ್ಲಿಸಿ ಗಂಧ ಪ್ರಸಾದ ಪಡೆದು ತೆರಳಿದ್ದರು.
ಕೊರಗಜ್ಜನ ಕರಿಗಂಧವನ್ನು ಮಗುವಿನ ಹಣೆಗೆ ಹಚ್ಚುತ್ತಿದ್ದಂತೆಯೇ, ಗಂಭೀರ ಸ್ಥಿತಿಯಲ್ಲಿದ್ದ ಪುಟ್ಟ ಕಂದಮ್ಮನ ಅರೋಗ್ಯ ದಿಢೀರಾಗಿ ಚೇತರಿಕೆ ಕಾಣಿಸಿಕೊಳ್ಳಲು ಪ್ರಾರಂಭಿಸಿತ್ತು.
ವೈದರು ಕೂಡ ತಮ್ಮ ಕೈಲಾದ ಪ್ರಯತ್ನಗಳನ್ನು ಮಾಡುವ ಮೂಲಕ ಮಗು ಅರೋಗ್ಯವಾಗಿ ಹೆತ್ತಮ್ಮಳ ಕೈಯಲ್ಲಿ ಮತ್ತೆ ಬಂದು ಸೇರಿದೆ.
ಹೃದಯ ಬಡಿತವೇ ನಿಂತು ಹೋಯಿತು ಎಂದಿದ್ದ ಮಗು ಮತ್ತೆ ಕಿಲಕಿಲ ನಗುತ್ತಿರುವುದನ್ನು ಕಂಡ ಕುಟುಂಬಸ್ಥರ ಸಂತೋಷ ಮುಗಿಲು ಮುಟ್ಟಿದೆ.
ಯಾವುದೇ ಕಷ್ಟಕಾಲದಲ್ಲಿ ಕೈಮುಗಿದೊಡನೆ ಸಹಾಯಕ್ಕೆ ನಿಲ್ಲುವ ಆ ಶಕ್ತಿಯ ಬಗ್ಗೆ ಕುಟುಂಬಸ್ಥರು ದಂಗಾಗಿ ಹೋಗಿದ್ದಾರೆ.
ಮಗು ಆರೋಗ್ಯದಲ್ಲಿ ಸುಧಾರಿಸಿದ್ದ ಕಾರಣ ಅಸ್ಪತ್ರೆಯಿಂದ ನೇರವಾಗಿ ಇಂದ್ರಾಳಿ ಬಳಿಯ ಕೊರಗಜ್ಜನ ಕ್ಷೇತ್ರಕ್ಕೆ ಬಂದು ಮಗುವನ್ನು ಕೊರಗಜ್ಜ ಸ್ವಾಮಿಯ ಮುಂದಿಟ್ಟು ಪ್ರಾರ್ಥನೆ ಸಲ್ಲಿಸಿ ಗಂಧ ಪ್ರಸಾದ ಪಡೆದುಕೊಂಡರು.
ಈ ಬಗ್ಗೆ ಅಚ್ಚರಿ ಹಾಗೂ ಸಂತೋಷವನ್ನು ವ್ಯಕ್ತಪಡಿಸಿರುವ ಮಗುವಿನ ಪೋಷಕರು ‘ಗಂಭೀರ ಪರಿಸ್ಥಿತಿಯಲ್ಲಿ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದ ಪುಟ್ಟ ಕಂದಮ್ಮನನ್ನು ಕೊರಗಜ್ಜನೇ ಸಲಹಿದ್ದು.
ಬದುಕಿರುವವರೆಗೂ ಈ ಮಗು ಕೊರಗಜ್ಜನ ಪ್ರಸಾದವೆಂದೇ ನಂಬಿ ಬದುಕುತ್ತೇವೆ’ ಎಂದು ಹೇಳಿದ್ದಾರೆ.
LATEST NEWS
ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರ ಕಾರು ಪ*ಲ್ಟಿ; ಓರ್ವ ಸಾ*ವು, ಹಲವರ ಸ್ಥಿತಿ ಗಂಭೀ*ರ
ಶಿವಮೊಗ್ಗ: ಶಿವಮೊಗ್ಗದ ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರ ಕಾರೊಂದು ಪ*ಲ್ಟಿಯಾಗಿರುವ ಘಟನೆ ಸಂಭವಿಸಿದೆ. ಪರಿಣಾಮ ಕಾರಿನಲ್ಲಿದ್ದ ಬೆಂಗಳೂರು ಮೂಲದ ಯುವಕ ಮೃ*ತಪಟ್ಟಿದ್ದಾನೆ. ನೆಲಮಂಗಲದ ಚಂದನ್ (26) ಮೃ*ತ ಯುವಕ.
ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಕೆರೆಕೋಡಿ ಬಳಿ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಭತ್ತದ ಗದ್ದೆಗೆ ಪ*ಲ್ಟಿಯಾಗಿದೆ. ಕೊಡುಗು ಮೂಲದ ನಂದನ್, ಕೋಲಾರದ ಕೋದಂಡ, ಹಾಸನದ ಭರತ್, ಮಂಡ್ಯ ಜಿಲ್ಲೆಯ ಯೋಗೇಶ್ ಎಂಬವರಿಗೆ ಗಂ*ಭೀರ ಗಾ*ಯವಾಗಿದೆ.
ಇದನ್ನೂ ಓದಿ : ನಟಿ ಓವಿಯಾ ಖಾಸಗಿ ವಿಡಿಯೋ ಲೀಕ್? ನಿಜಾನಾ ಎಂದು ಕೇಳಿದ್ದಕ್ಕೆ ಎಂಜಾಯ್ ಮಾಡಿ ಎಂದ ಕಿರಾತಕ ಬೆಡಗಿ
ಯುವಕರ ತಂಡ ಬೆಂಗಳೂರಿನಿಂದ ಸಿಗಂದೂರಿಗೆ ಪ್ರವಾಸಕ್ಕೆ ಬಂದಿತ್ತು. ಸ್ಥಳಕ್ಕೆ ಕುಂಸಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃ*ತದೇಹವನ್ನು ಮ*ರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
LATEST NEWS
ಪೊಳಲಿ ಸೇತುವೆ ಬಂದ್: ಮಂಗಳವಾರ ಗ್ರಾಮಸ್ಥರಿಂದ ಪ್ರತಿಭಟನೆ
ಮಂಗಳೂರು: ಘನ ವಾಹನ ಸಂಚಾರಕ್ಕೆ ನಿರ್ಬಂಧ ಹೇರಿದ್ದ ಸೇತುವೆಯ ಬಗ್ಗೆ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಪೊಳಲಿ – ಅಡ್ಡೂರಿನ ಪಲ್ಗುಣಿ ನದಿಯ ಸೇತುವೆ ಬಿರುಕು ಬಿಟ್ಟ ಕಾರಣಕ್ಕೆ ಘನ ವಾಹನ ಸಂಚಾರ ಸ್ಥಗಿತ ಮಾಡಲಾಗಿತ್ತು. ಸಂಬಂಧಪಟ್ಟ ಇಲಾಖೆ ಸೇತುವೆಯ ಸಾಮರ್ಥ್ಯವನ್ನು ಯಂತ್ರದ ಮೂಲಕ ಪರಿಶೀಲನೆ ನಡೆಸಿ ಎರಡು ತಿಂಗಳಾದ್ರೂ ಏನಾಗಿದೆ ಎಂಬ ಬಗ್ಗೆ ಜನರಿಗೆ ಮಾಹಿತಿಯೇ ಇಲ್ಲ. ಇದರಿಂದ ತೊಂದರೆಗೆ ಒಳಗಾಗಿರುವ ಅಮ್ಮುಂಜೆ , ಕರಿಯಂಗಳ, ಬಡಗಬೆಳ್ಳೂರು, ತೆಂಕಬೆಳ್ಳೂರು ಮತ್ತು ಸುತ್ತಮುತ್ತಲಿನ ಜನ ಸಭೆ ನಡೆಸಿದ್ದಾರೆ. ಜನರ ಸಮಸ್ಯೆಗೆ ಸ್ಪಂದನೆಯೇ ನೀಡದ ಜನಪ್ರತಿಧಿಗಳು, ಹಾಗೂ ಅಧಿಕಾರಿಗಳ ವಿರುದ್ಧ ಅಕ್ಟೋಬರ್ 15 ರಂದು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಪೊಳಲಿಯ ರಾಮಕೃಷ್ಣ ತಪೋವನ ರಾಜರಾಜೇಶ್ವರಿ ಸಭಾಂಗಣದಲ್ಲಿ ಸಭೆ ನಡೆಸಲಾಗಿದ್ದು, ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ರಾಮಕೃಷ್ಣ ತಪೋವನದ ಸ್ವಾಮಿ ವಿವೇಕಾಚೈತನ್ಯನಂದ ಸ್ವಾಮೀಜಿ , ಪೊಳಲಿ ಅಡ್ಡೂರು ಫಲ್ಗುಣಿ ಹೋರಾಟ ಸಮಿತಿಯ ಅಧ್ಯಕ್ಷ ವೆಂಕಟೇಶ್ ನಾವುಡ, ಚಂದ್ರಹಾಸ್ ಪಲ್ಲಿಪಾಡಿ, ಜಯರಾಮಕೃಷ್ಣ ಪೊಳಲಿ, ನೂಯಿ ಬಾಲಕೃಷ್ಣ ರಾವ್, ಅಬೂಬಕ್ಕರ್ ಅಮ್ಮುಂಜೆ ಉಪಸ್ಥಿತರಿದ್ದು ಹೋರಾಟದ ಬಗ್ಗೆ ಜನಾಭಿಪ್ರಾಯ ಪಡೆದುಕೊಂಡಿದ್ದಾರೆ.
LATEST NEWS
ಮದರಸ ಹಾಸ್ಟೇಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ
ಬ್ರಹ್ಮಾವರ: ಹೇರಾಡಿ ಖಾಸಗಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿಯೊಬ್ಬ ಮದರಸ ಹಾಸ್ಟೇಲ್‌ನಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತ ವಿದ್ಯಾರ್ಥಿಯು ಮೊಹಮ್ಮದ್ ಜಹೀದ (12) ಎಂದು ಗುರುತಿಸಲಾಗಿದೆ.
ಕಳೆದ 4 ತಿಂಗಳಿನಿಂದ ಬ್ರಹ್ಮಾವರ ತಾಲೂಕಿನ ರಂಗನಕೆರೆಯ ಮಾಲಿಕ್ ದಿನಾರ್ ಮದರಸ ಹಾಸ್ಟೇಲ್‌ನಲ್ಲಿ ಉಳಿದು ವಿದ್ಯಾಭ್ಯಾಸ ಮಾಡುತ್ತಿದ್ದು, ರಜೆಯನ್ನು ಮುಗಿಸಿ ಅ.11 ರಂದು ಹಾಸ್ಟೇಲ್‌ಗೆ ಮರಳಿದ್ದಾನೆ.
ರಾತ್ರಿ 9 ಗಂಟೆಗೆ ಊಟಕ್ಕೆ ಬಾರದಿದ್ದನ್ನು ಗಮನಿಸಿ ಹಾಡುಕಿದಾಗ ಹಾಸ್ಟೇಲ್‌ನ ಬಾತ್‌ರೂಮ್‌ನಲ್ಲಿ ಸರಳಿಗೆ ಬೈರಾಸ್‌ನಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವುದು ತಿಳಿದು ಬಂದಿದೆ.
ಕೂಡಲೇ ಆತನನ್ನು ಚಿಕಿತ್ಸೆಗಾಗಿ ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದು, ವೈದ್ಯರು ರಾತ್ರಿ 10.40 ರ ಸುಮಾರಿಗೆ ಆತನನ್ನು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮೃತನ ಮರಣದಲ್ಲಿ ಸಂಶಯವಿರುವುದಾಗಿ ಬಾಲಕನ ತಾಯಿ ರಿಹಾನ ಬೇಗಂ ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಲಕನಿಗೆ ಹಾಸ್ಟೇಲ್‌ಗೆ ಹೋಗಲು ಮನಸ್ಸಿಲ್ಲವೆಂದು, ಹಾಸ್ಟೇಲ್‌ನ ಇತರ ವಿದ್ಯಾರ್ಥಿಗಳೊಂದಿಗೆ ಸಣ್ನ ಮಟ್ಟಿನ ಜಗಳ ಆಗಿತ್ತು ಎಂದು ತಿಳಿದು ಬಂದಿದದೆ.
- FILM6 days ago
ಎರಡನೇ ಮದುವೆಯಾಗುತ್ತಿರುವ ಬಿಗ್ಬಾಸ್ ಕಂಟೆಸ್ಟೆಂಟ್
- LATEST NEWS6 days ago
ನ.8 ಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ ನಿವೃತ್ತಿ..! 15 ದಿನದಲ್ಲಿ 8 ಪ್ರಮುಖ ತೀರ್ಪು ಸಾಧ್ಯತೆ..!
- DAKSHINA KANNADA7 days ago
ಮಂಗಳೂರು : ರಾತ್ರಿ ಹೊತ್ತಲ್ಲಿ ಯುವಕನ ಬೆತ್ತಲೆ ಓಡಾಟ; ಭಯದಲ್ಲಿ ಹಾಸ್ಟೆಲ್ ವಿದ್ಯಾರ್ಥಿನಿಯರು
- BIG BOSS7 days ago
ಇದೇ ಕಾರಣಕ್ಕೆ ಮೊದಲ ವಾರವೇ ಯಮುನಾ ಶ್ರೀ ನಿಧಿ ಬಿಗ್ಬಾಸ್ ಮನೆಯಿಂದ ಔಟ್ ಆದದ್ದು..!