Connect with us

BANTWAL

ಮತ್ತೊಮ್ಮೆ ಕಾರ್ಣಿಕ ತೋರಿಸಿದ ಕೊರಗಜ್ಜ..ಮುಸ್ಲಿಂ ಧರ್ಮದ ಮಹಿಳೆಯೊಬ್ಬರಿಗೆ ದೈವ ಆವೇಶ..!

Published

on

ಮತ್ತೊಮ್ಮೆ ಕಾರ್ಣಿಕ ತೋರಿಸಿದ ಕೊರಗಜ್ಜ..ಮುಸ್ಲಿಂ ಧರ್ಮದ ಮಹಿಳೆಯೊಬ್ಬರಿಗೆ ದೈವ ಆವೇಶ..!

ಮಂಗಳೂರು : ಈ ತುಳುನಾಡು ಕಲೆ ಕಾರ್ಣೀಕ ಬೂಡು. ಇಲ್ಲಿ ಸರ್ವಧರ್ಮದ ಬೀಡಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಜನ ಸಹಿಷ್ಣತೆಗೆ ಹೆಸರು ಪಡೆದವರಾಗಿದ್ದಾರೆ.

ಆದರೆ ಇತ್ತೀಚಿನ ದಿನಗಳಲ್ಲಿ ಯಾರೋ ಅಲ್ಲಲ್ಲಿ ಕೆಲವು ಮತಾಂಧರು ಮಾಡುವ ಅನಾಚರದ ಘಟನೆಗಳಿಂದಾಗಿ ಇಡೀ ಧರ್ಮದ ಮೇಲೆ ಕಳಂಕ ಹಚ್ಚುವ ಕೆಲಸ ನಡೆಯುತ್ತಿದೆ.

ತಮ್ಮ ಸಮಸ್ಯೆಗಳಿಗೆ ಜಾತಿ ಧರ್ಮದ ಕಟ್ಟಳೆಗಳು ಮೀರಿ ದೈವ ದೇವರುಗಳನ್ನು ನಂಬಿ ಅದನ್ನು ನೆರವೇರಿಸುವ ಹೃದಯ ಶ್ರೀಮಂತಿಕೆ ಈ ಕರಾವಳಿಯ ಮಣ್ಣಿನಲ್ಲಿದೆ.  ಇಂತಹುದೇ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯಲ್ಲಿ ನಡೆದಿದೆ.

ಮೂಡಬಿದ್ರೆಯ ನಡೆದ ಕೊರಗಜ್ಜನ ಕೋಲಕ್ಕೆ ಆಗಮಿಸಿದ ಮುಸ್ಲಿಂ ಧರ್ಮದ ಮಹಿಳೆಯೊಬ್ಬರಿಗೆ ದೈವ ಆವೇಶ ಬಂದಿರುವ ಘಟನೆ ನಡೆದಿದೆ.

ಮೂಡಬಿದ್ರೆಯ ಗಂಟಾಲ್ಕಟ್ಟೆಯ ಮಾರೂರಿನಲ್ಲಿ ನಿನ್ನೆ ನಡೆದ ಕೊರಗಜ್ಜನ ನೇಮದಲ್ಲಿ ಮುಸ್ಲಿಂ ಮಹಿಳೆಗೆ ದೈವ ಆವೇಶ ಬಂದಿದ್ದು ತುಳುನಾಡಿನಲ್ಲಿ ಕೊರಗಜ್ಜನ ಕಾರ್ನಿಕ ಇದೆ ಎಂದು ಮತ್ತೊಮ್ಮೆ ಸಾಬಿತಾಗಿದೆ ಎಂದು ಆಸ್ತಿಕರು ನುಡಿಯುತ್ತಿದ್ದಾರೆ.

ಧರ್ಮ ಯಾರನ್ನೂ ಕೈಬಿಡುವುದಿಲ್ಲ. ದೇವರ ಮೇಲಿನ ನಂಬಿಕೆಗೆ ಧರ್ಮದ ಲೇಪನ ಅಗತ್ಯವಿಲ್ಲ.

ಇದೇ ಕಾರಣಕ್ಕೆ ಮುಸ್ಲಿಂ ಮಹಿಳೆಗೂ ದೈವ ಅಭಯ ನೀಡಿ ಆಕೆಯ ಜೀವನದ ಸಂಕಷ್ಟವನ್ನು ದೂರ ಮಾಡುವ ಅಭಯಕೊಟ್ಟಿದೆ ಎಂದು ಪಾಲ್ಗೊಂಡ ಭಕ್ತರು ನುಡಿದಿದ್ದಾರೆ.

Click to comment

Leave a Reply

Your email address will not be published. Required fields are marked *

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

BANTWAL

ಬಂಟ್ವಾಳ : ಬಾವಿಯೊಳಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಸಾ*ವು

Published

on

ಬಂಟ್ವಾಳ : 30 ಅಡಿ ಇರುವ ಆಳದ ಬಾವಿಗೆ ರಿಂಗ್‌ ಅಳವಡಿಸಲು ಇಳಿದ ಇಬ್ಬರು ಕೂಲಿ ಕಾರ್ಮಿಕರು ಬಾವಿಯೊಳಗೆ ಆಕ್ಸಿಜನ್ ಸಿಗದೇ ಸಾ*ವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ನಡೆದಿದೆ.


ಮೃ*ತರನ್ನು ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ(40) ಹಾಗೂ ಮಲಾರ್ ನಿವಾಸಿ ಆಲಿ (24) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ : ಡಿವೈಡರ್ ಗೆ ಡಿ*ಕ್ಕಿ ಹೊಡೆದ ಬೈಕ್; ಸವಾರ ಸ್ಥಳದಲ್ಲೇ ಸಾ*ವು

ಮೃ*ತ ಇಬ್ರಾಹಿಂ ಎಂಬವರು ಸುಮಾರು 20 ವರ್ಷಗಳಿಂದ ಬಾವಿಗೆ ರಿಂಗ್ ಹಾಕುವಲ್ಲಿ ಪರಿಣಿತರಾಗಿದ್ದರು. ಮೃ*ತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಲಾಗಿದೆ.

Continue Reading

BANTWAL

ಪುತ್ತೂರು ಜಾತ್ರೆಯಿಂದ ಹಿಂದಿರುಗುವ ವೇಳೆ ಜವರಾಯನ ಅಟ್ಟಹಾಸ; ಜೀಪ್ ಡಿಕ್ಕಿ; ಬೈಕ್ ಸವಾರ ಸಾ*ವು

Published

on

ಪುತ್ತೂರು : ಜೀಪೊಂದು ಬೈಕ್ ಗೆ ಡಿ*ಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃ*ತಪಟ್ಟು, ಅವರ ಇಬ್ಬರು ಮಕ್ಕಳು ಗಂಭೀ*ರ ಗಾ*ಯಗೊಂಡ ಘಟನೆ ಬುಧವಾರ ರಾತ್ರಿ ಪುತ್ತೂರು ಸುಬ್ರಹ್ಮಣ್ಯ ರಸ್ತೆಯಲ್ಲಿನ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್ (48) ಮೃ*ತಪಟ್ಟವರು. ಅವರ ಇಬ್ಬರು ಮಕ್ಕಳು ಗಂಭೀ*ರ ಗಾಯಗೊಂಡಿದ್ದು, ಗಾ*ಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಲೋಕೇಶ್ ಅವರು  ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆಯಲ್ಲಿ ಮುಂಭಾಗದಿಂದ ಆಗಮಿಸಿದ ಜೀಪು ಅವರು ಚಲಾಯಿಸುತ್ತಿದ್ದ ಬೈಕ್ ಗೆ ಡಿ*ಕ್ಕಿಯಾಗಿತ್ತು.

ಇದನ್ನೂ ಓದಿ : ಕರಡಿಗೂ ಕ್ಯಾಪ್ಟನ್ ಗೂ ಫೈಟ್; ಮನೆಯಂಗಳದಲ್ಲೇ ಕಾದಾಟ! ವೀಡಿಯೋ ವೈರಲ್

ಡಿ*ಕ್ಕಿಯ ರಭಸಕ್ಕೆ ಬೈಕ್ ಎರಡು ತುಂಡಾಗಿದೆ. ಸುಮಾರು 50 ಮೀಟರ್ ದೂರದ ತನಕ ಬೈಕನ್ನು ಜೀಪ್‌ ಎಳೆದುಕೊಂಡು ಹೋಗಿದೆ. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಲೋಕೇಶ್ ಅವರು ಸ್ಥಳದಲ್ಲಿಯೇ ಸಾ*ವನ್ನಪ್ಪಿದ್ದಾರೆ. ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

Trending