Connect with us

  BANTWAL

  ವಿಟ್ಲ ಜನಪ್ರಿಯ ಸೆಂಟ್ರಲ್ ಶಾಲೆಯಲ್ಲಿ ನಕಲಿ ದಾಖಲೆ ಸೃಷ್ಟಿಸಿ ಟ್ರಸ್ಟ್ ಹಣ ದುರುಪಯೋಗ-ಎಫ್‌ಐಆರ್ ದಾಖಲು..!

  Published

  on

  ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಕಂಬಳಬೆಟ್ಟುವಿನ ಜನಪ್ರಿಯ ಸೆಂಟ್ರಲ್ ಶಾಲೆಯಲ್ಲಿ ಟ್ರಸ್ಟ್ ಕಾರ್ಯದರ್ಶಿಯ ಗಮನಕ್ಕೆ ತಾರದೇ , ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್ ನಲ್ಲಿದ್ದ ಲಕ್ಷಾಂತರ ರೂಪಾಯಿ ದುರುಪಯೋಗ ಪಡಿಸಿದ ಶಾಲೆಯ ಟ್ರಸ್ಟಿಗಳ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಕೇಸು ದಾಖಲಾಗಿದೆ.

  ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಕಂಬಳಬೆಟ್ಟುವಿನ ಜನಪ್ರಿಯ ಸೆಂಟ್ರಲ್ ಶಾಲೆಯಲ್ಲಿ ಟ್ರಸ್ಟ್ ಕಾರ್ಯದರ್ಶಿಯ ಗಮನಕ್ಕೆ ತಾರದೇ, ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್ ನಲ್ಲಿದ್ದ ಲಕ್ಷಾಂತರ ರೂಪಾಯಿ ದುರುಪಯೋಗ ಪಡಿಸಿದ ಶಾಲೆಯ ಟ್ರಸ್ಟಿಗಳ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಕೇಸು ದಾಖಲಾಗಿದೆ.

  ವಿಟ್ಲ ಮುಡ್ನೂರು ಗ್ರಾಮದಲ್ಲಿರುವ ಜನಪ್ರಿಯ ಸೆಂಟ್ರಲ್ ಸ್ಕೂಲ್ ಆಡಳಿತವು ಟ್ರಸ್ಟ್ ಡೀಡ್ ಪ್ರಕಾರ ನೋಂದಣಿಗೊಂಡಿದ್ದು, ಮಹಮ್ಮದ್ ಇರ್ಫಾನ್ ಅವರು ಟ್ರಸ್ಟ್ ಕಾರ್ಯದರ್ಶಿ ಯಾಗಿರುತ್ತಾರೆ.

  ಟ್ರಸ್ಟಿಗಳಾದ ಹಾಸನದಲ್ಲಿ ವಾಸ್ತವ್ಯವಿರುವ ಫಾತಿಮಾ ನಸ್ರೀನ್ ಬಶೀರ್ ಕೋಂಡಾ , ಅಬ್ದುಲ್ ಬಶೀರ್ ವಿ.ಕೆ, ಶಾರೂಕ್ ಅಬ್ದುಲ್ಲಾ ಬಿನ್, ಶಫಾಕ್ ಮುಹಮ್ಮದ್ ಬಿನ್ ಅವರುಗಳು ಟ್ರಸ್ಟ್ ನ ಕಾರ್ಯದರ್ಶಿ ಸಹಿ ಇಲ್ಲದೇ, ರಹಸ್ಯವಾಗಿ ಯೂನಿಯನ್ ಬ್ಯಾಂಕ್ ವಿಟ್ಲ ಶಾಖೆಯಲ್ಲಿ ಜನಪ್ರಿಯ ಟ್ರಸ್ಟ್ ಖಾತೆಯಲ್ಲಿದ್ದ ಲಕ್ಷಾಂತರ ರೂಪಾಯಿ ಮೊತ್ತವನ್ನು ನಕಲಿ ದಾಖಲೆ ಸೃಷ್ಟಿಸಿ ಹಣವನ್ನು ಹಿಂದೆಗೆದು ಬ್ಯಾಂಕ್ ಖಾತೆಯನ್ನು ಮುಕ್ತಾಯಗೊಳಿಸಿದ್ದರು.

  ಈ ಹಿನ್ನೆಲೆಯಲ್ಲಿ ಟ್ರಸ್ಟ್ ಕಾರ್ಯದರ್ಶಿ ಮುಹಮ್ಮದ್ ಇರ್ಫಾನ್ ಅವರು ಜನಪ್ರಿಯ ಶಾಲೆಯ ಟ್ರಸ್ಟಿಗಳಾದ ಫಾತಿಮಾ ನಸ್ರೀನ್ ಬಶೀರ್, ಶಾರೂಕ್ ಅಬ್ದುಲ್ಲಾ ಮತ್ತು ಶಫಾಕ್ ಮುಹಮ್ಮದ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

  ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

  BANTWAL

  ಬಂಟ್ವಾಳ: ಹಂಚಿಕಟ್ಟೆಯಲ್ಲಿ ಸಾಗಾಟದ ಲಾರಿಯಲ್ಲಿದ್ದ ಸಿಎನ್‌ಜಿ ಸೋರಿಕೆ

  Published

  on

  ಬಂಟ್ವಾಳ: ಬಿ.ಸಿ.ರೋಡು-ಪುಂಜಾಲಕಟ್ಟೆ ಹೆದ್ದಾರಿಯ ವಗ್ಗ ಸಮೀಪದ ಹಂಚಿಕಟ್ಟೆಯಲ್ಲಿ ಗೇಲ್ ಕಂಪನಿಯ ಸಿಎನ್‌ಜಿ ಗ್ಯಾಸ್ ಸಾಗಾಟದ ಲಾರಿಯಲ್ಲಿದ್ದ ಸಿಎನ್‌ಜಿ ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆಯಾದ ಘಟನೆ ನಡೆದಿದೆ.

  ಸಿಎನ್‌ಜಿ ಸೋರಿಕೆ ಗಮನಕ್ಕೆ ಬಂದ ತಕ್ಷಣ ಲಾರಿ ಚಾಲಕ ಹೆದ್ದಾರಿ ಬದಿಗೆ ನಿಲ್ಲಿಸಿದ್ದು, ಬಳಿಕ ಬಂಟ್ವಾಳ ಅಗ್ನಿಶಾಮಕ ದಳದವರು ಸ್ಥಳಕ್ಕೆ ತೆರಳಿದ್ದಾರೆ.

  ಅದಾಗಲೇ ಸೋರಿಕೆಯನ್ನು ಚಾಲಕ ಹಾಗೂ ಸ್ಥಳೀಯರು ಸೇರಿ ತಡೆದಿದ್ದಾರೆ.

  Continue Reading

  BANTWAL

  ಬಂಟ್ವಾಳ: ವಿದ್ಯುತ್ ಶಾ*ಕ್‌ ಹೊಡೆದು ಶಾಮಿಯಾನದ ಕೆಲಸಗಾರ ಬ*ಲಿ

  Published

  on

  ಬಂಟ್ವಾಳ: ಪುಂಜಾಲಕಟ್ಟೆಯಲ್ಲಿ ನಿನ್ನೆಯ ದಿನ ಶಾಮಿಯಾನದ ಲಾರಿ ಪಲ್ಟಿಯಾಗಿ ಓರ್ವ ಮೃ*ತಪಟ್ಟ ಘಟನೆಯ ಬೆನ್ನಲ್ಲೇ ಶಾಮಿಯಾನದ ಕೆಲಸಗಾರನೋರ್ವ ವಿದ್ಯುತ್ ಶಾ*ಕ್‌ ಗೆ ಬ*ಲಿಯಾದ ದುರಂ*ತ ಘಟನೆ ನಡೆದಿದೆ.

  ಲಾರಿಯಿಂದ ಶಾಮಿಯಾನದ ಸಾಮಾಗ್ರಿಗಳನ್ನು ಇಳಿಸುವ ವೇಳೆ ವಿದ್ಯುತ್ ವಯರ್ ತಾಗಿ ನಾಲ್ವರು ಕೆಲಸಗಾರರಿಗೆ ಗಾಯವಾಗಿದ್ದು, ಅದರಲ್ಲಿ ಓರ್ವ ಗಂಭೀರವಾಗಿ ಗಾ*ಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಇದ್ದರು. ಅವರನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃ*ತಪಟ್ಟ ಘಟನೆ ಕಡೇಶಿವಾಲಯ ಸಮೀಪ ಕಾಡಬೆಟ್ಟು ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.

  ಈತ ಕಲ್ಲಡ್ಕ ಸಾಲಿಯಾನ್ ಶಾಮಿಯಾನದ ಕೆಲಸಗಾರರು ಎಂದು ಸ್ಥಳೀಯರು ತಿಳಿಸಿದ್ದು, ಸ್ಪಷ್ಟವಾದ ಮಾಹಿತಿ ಲಭ್ಯವಾಗಿಲ್ಲ. ನಾಲ್ವರು ಕೆಲಸಗಾರರು ಉತ್ತರಪ್ರದೇಶ ಮೂಲದವರು ಎಂದು ಹೇಳಲಾಗುತ್ತಿದೆ.

  ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

  Continue Reading

  BANTWAL

  ವಿಟ್ಲದಲ್ಲಿ ಕುಸಿದು ಬಿದ್ದ ಕೋಳಿ ಶೆಡ್; 1500ಕ್ಕೂ ಅಧಿಕ ಕೋಳಿ ಸಾ*ವು

  Published

  on

  ವಿಟ್ಲ: ಕೋಳಿ ಸಾಕಾಣೆ ಮಾಡುವ ಶೆಡ್ ನೆಲಕ್ಕುರುಳಿ ಸುಮಾರು ಒಂದೂವರೆ ಸಾವಿರ ಕೋಳಿಗಳು ಮೃ*ತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕುಳ ಗ್ರಾಮದ ಸೇಕೆಹಿತ್ಲು ಎಂಬಲ್ಲಿ ನಡೆದಿದೆ.

  ಬಂಟ್ವಾಳ ತಾಲೂಕು ಕುಳ ಗ್ರಾಮದ ಸೇಕೆಹಿತ್ಲು ನಿವಾಸಿ ರಾಘವರವರ ಮಾಲಕತ್ವದ ಶೆಡ್ ಇದಾಗಿದ್ದು, ಸುಮಾರು 2200 ಕೋಳಿಗಳನ್ನು ಅವರು ಸಾಕಾಣೆ ಮಾಡುತ್ತಿದ್ದರು.

  ಶೆಡ್ಡಿನ ಮೇಲ್ಚಾವಣಿ ಒಮ್ಮೆಲೆ ಕುಸಿದು ಬಿದ್ದ ಹಿನ್ನೆಲೆಯಲ್ಲಿ ಸುಮಾರು 1500 ಕೋಳಿಗಳು ಅದರಡಿಗೆ ಬಿದ್ದು ಸತ್ತುಹೋಗಿವೆ. ಘಟನೆಯಿಂದಾಗಿ ಶೆಡ್ ಸಂಪೂರ್ಣ ನಾ*ಶವಾಗಿದ್ದು, ಸಾವಿರಾರು ರೂಪಾಯಿ ನಷ್ಟ ಸಂಭವಿಸಿದೆ.

  Continue Reading

  LATEST NEWS

  Trending