Monday, January 24, 2022

ಉಳ್ಳಾಲ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ ಓಡಿಹೋದವನನ್ನು ವಶಕ್ಕೆ ಪಡೆದ ಪೊಲೀಸರು

ಉಳ್ಳಾಲ: ಅಲಂಕಾರುಗುಡ್ಡೆ ಪ್ರದೇಶದಲ್ಲಿ ನಿನ್ನೆ ಬೆಳಿಗ್ಗೆ ವಿದ್ಯಾರ್ಥಿನಿ ಶಾಲೆಗೆ ತೆರಳುವ ಸಂದರ್ಭ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಸಂಬಂಧ ಆರೋಪಿ ಕೆ ಸಿ ರೋಡು ನಿವಾಸಿ ಅಬ್ದುಲ್ ರಾಶಿಕ್ ನನ್ನು ಸಿಸಿಬಿ ಪೊಲೀಸ್ ತಂಡ ವಶಕ್ಕೆ ಪಡೆದಿದ್ದಾರೆ.


ಹಿಂದೆಯೂ ಉಚ್ಚಿಲ ಸಮೀಪ ಬಾಲಕಿ ಮೇಲೆ ಕೈ ಹಾಕಿದ್ದ ಭೂಪ . ಈತನ ಮೇಲೆ ಉಳ್ಳಾಲ ಠಾಣೆಯಲ್ಲಿ ಒಟ್ಟು ಎರಡು ಪ್ರಕರಣ ದಾಖಲಾಗಿದ್ದು.

ಹಲವು ಇಂತಹ ಕೃತ್ಯ ನಡೆಸಿರುವ ಕುರಿತು ಸಿಸಿಬಿಯಿಂದ ವಿಚಾರಣೆ ನಡೆಸುತ್ತಿದ್ದಾರೆ.

ಡಿಸೆಂಬರ್ 1 ರ ಬುಧವಾರ ಬೆಳಗ್ಗೆ ತಲಪಾಡಿಯ ಆಲಂಕಾರುಗುಡ್ಡೆ ಪ್ರದೇಶದಲ್ಲಿ ಶಾಲೆಗೆ ತೆರಳುತ್ತಿದ್ದಾಗ ಸ್ಕೂಟರ್ ನಲ್ಲಿ ಬಂದಿದ್ದ ಈತ ಆಕೆಯ ಕೈ ಹಿಡಿದು ಎಳೆದಾಡಿ ಲೈಂಗಿಕ ಕಿರುಕುಳ ನೀಡಿದ್ದು ಬಾಲಕಿ ಕಿರುಚಾಡುತ್ತಿದ್ದಂತೆ ಆರೋಪಿ ರಾಶಿಕ್ ಪರಾರಿಯಾಗಿದ್ದ.

Hot Topics

ನೇತಾಜಿ ಸುಭಾಸ್ ಚಂದ್ರ ಬೋಸ್ ಜನ್ಮ ದಿನದ ಪ್ರಯುಕ್ತ ರಕ್ತದಾನ ಶಿಬಿರ

ಮಂಗಳೂರು: ಸ್ವಾತಂತ್ರ ಸೇನಾನಿ ನೇತಾಜಿ ಸುಭಾಸ್ ಚಂದ್ರ ಬೋಸ್ 125 ನೇ ಜನ್ಮ ದಿನಾಚರಣೆಯ ಪ್ರಯುಕ್ತ ಸೇವಾಂಜಲಿ ಚ್ಯಾರಿಟೇಬಲ್ ಟ್ರಸ್ಟ್ ಮತ್ತು ಬಿರುವೆರ್ ಕುಡ್ಲ(ರಿ) ನೇತೃತ್ವದಲ್ಲಿ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆ ಸಹಯೋಗದಲ್ಲಿ ರಕ್ತದಾನ...

ಕಾರ್ಕಳದಲ್ಲಿ ಕೊರೋನಾದಂತೆ ಹರಡುತ್ತಿದೆ ಕಾಲು ಬಾಯಿ ರೋಗ

ಕಾರ್ಕಳ: ಇಲ್ಲಿನ ಆಸುಪಾಸಿನಲ್ಲಿ ಪ್ರಾಣಿಗಳಲ್ಲಿ ಕಂಡುಬರುವ ಅದರಲ್ಲೂ ಜಾನುವಾರಿನಲ್ಲಿ ಸಾಂಕ್ರಾಮಿಕ ಕಾಲುಬಾಯಿ ರೋಗ ಹರಡುತ್ತಿದೆ.ಇದರಿಂದಾಗಿ ಈಗಾಗಲೇ ಹಲವು ಜಾನುವಾರು ಬಲಿಯಾಗಿದ್ದು, ಪಶು ಇಲಾಖೆಯ ನಿರ್ಲಕ್ಷ್ಯದ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.ಕಾರ್ಕಳ ನಗರ, ತೆಳ್ಳಾರು, ಮಿಯಾರು,...

ಮಂಗಳೂರಿನ ಕುವರಿ ರೆಮೊನಾ ಇವೆಟ್ಟಾ ಪಿರೇರಾಗೆ ರಾಷ್ಟ್ರೀಯ ಬಾಲಪುರಸ್ಕಾರ ಪ್ರಶಸ್ತಿ

ಮಂಗಳೂರು: ಈ ಬಾರಿಯ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲಪುರಸ್ಕಾರ ಪ್ರಶಸ್ತಿ ಮಂಗಳೂರಿನ ರೆಮೊನಾ ಇವೆಟ್ಟಾ ಪಿರೇರಾ ಅವರಿಗೆ ದೊರೆತಿದೆ.ಸಾಂಸ್ಕೃತಿಕ ರಂಗದಲ್ಲಿ ಮಾಡಿದ ಸಾಧನೆಗೆ ಈ ಗೌರವ ಲಭಿಸಿದ್ದು, ಪುರಸ್ಕಾರವು ಒಂದು ಲಕ್ಷ ಮೊತ್ತ,...