ಒಡಿಶಾ : ನಾಪತ್ತೆಯಾಗಿದ್ದ ಭಾರತೀಯ ಮಹಿಳಾ ಕ್ರಿಕೆಟರ್ ರಾಜಶ್ರೀ ಸ್ವೈನ್ ಒಡಿಶಾದ ಕಾಡಿನಲ್ಲಿ ಶವವಾಗಿ ಪತ್ತೆಯಾಗಿದ್ದು ಹಲವು ಅನುಮಾನಗಳು ಹುಟ್ಟುಹಾಕಿದೆ.
ಕಟಕ್ ನಗರದ ಬಳಿಯ ಕಾಡಿನಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ ಎಂದು ಕಟಕ್ ಉಪ ಪೊಲೀಸ್ ಆಯುಕ್ತ ಪಿನಾಕ್ ಮಿಶ್ರಾ ತಿಳಿಸಿದ್ದಾರೆ. ಪೊಲೀಸರು ಅಸ್ವಾಭಾವಿಕ ಸಾವಿನ ಪ್ರಕರಣವನ್ನು ದಾಖಲಿಸಿದ್ದಾರೆ.
ಜನವರಿ 11 ರಿಂದ ರಾಜಶ್ರೀ ಕಾಣೆಯಾಗಿದ್ದಾರೆ ಎಂದು ಕೋಚ್ ಪೊಲೀಸರಿಗೆ ದೂರು ನೀಡಿದ್ದರು. ಅದೇ ಸಮಯದಲ್ಲಿ, ರಾಜಶ್ರೀ ಅವರ ಕುಟುಂಬವು ಇದು ಕೊಲೆ, ಆತ್ಮಹತ್ಯೆಯಲ್ಲ ಎಂದು ಆರೋಪಿಸಿದೆ.
ರಾಜಶ್ರೀ ಅವರ ದೇಹದ ಮೇಲೆ ಗಾಯಗಳಾಗಿವೆ. ಅವರ ಕಣ್ಣುಗಳಿಗೆ ಗಾಯಗಳಾಗಿವೆ ಎಂದು ಕುಟುಂಬವು ಹೇಳಿದೆ.
ಒಡಿಶಾ ಕ್ರಿಕೆಟ್ ಅಸೋಸಿಯೇಷನ್ (ಒಸಿಎ) ಆಯೋಜಿಸಿದ್ದ ತರಬೇತಿ ಶಿಬಿರದಲ್ಲಿ ಸ್ವೈನ್ ಸೇರಿದಂತೆ ಸುಮಾರು 25 ಮಹಿಳಾ ಕ್ರಿಕೆಟಿಗರು ಭಾಗವಹಿಸಿದ್ದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.
ಪುದುಚೇರಿಯಲ್ಲಿ ನಡೆಯಲಿರುವ ಮುಂಬರುವ ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ತಂಡವನ್ನು ಆಯ್ಕೆ ಮಾಡಲು ಈ ಶಿಬಿರವನ್ನು ಆಯೋಜಿಸಲಾಗಿತ್ತು.