Friday, August 19, 2022

ಮೂವರು ಸಹೋದರಿಯರು ನಿಗೂಢವಾಗಿ ನಾಪತ್ತೆ

ಮಂಜೇಶ್ವರ: ಮೂವರು ಸಹೋದರಿಯರು ನಿಗೂಢವಾಗಿ ಕಾಣೆಯಾಗಿರುವ ಘಟನೆ ಮಂಜೇಶ್ವರದಲ್ಲಿ ನಡೆದಿದೆ. ಮಂಜೇಶ್ವರ ಸಮೀಪದ ಮೀಯಪದವು ನಿವಾಸಿಗಳಾದ 16, 17 ಹಾಗೂ 21 ವಯಸ್ಸಿನ ಸೋದರಿಯರು ನಾಪತ್ತೆಯಾಗಿದ್ದು ಮನೆಮಂದಿ ಮಾತ್ರವಲ್ಲದೆ ಸಾರ್ವಜನಿಕರಲ್ಲಿ ಆತಂಕಕ್ಕೂ ಕಾರಣವಾಗಿದೆ. ಆಗಸ್ಟ್ 16ರಂದು ಮೂರು ಮಂದಿ ಜೊತೆಯಲ್ಲೇ ಆಸ್ಪತ್ರೆಗೆಂದು ಹೋಗಿದ್ದು ಬಳಿಕ ವಾಪಸ್ ಆಗಿಲ್ಲ ಎಂದು ಪೊಲೀಸರಿಗೆ ದೂರು ನೀಡಲಾಗಿದೆ.


ಮೂವರು ಸಹೋದರಿಯರಲ್ಲಿ ಓರ್ವ ಸಹೋದರಿಯ ಬಳಿ ಇತ್ತೀಚೆಗೆ ಮೊಬೈಲ್‌‌ ಫೋನ್‌‌ ಕಂಡುಬಂದಿತ್ತು. ಮೊಬೈಲ್‌ ಫೋನ್‌ ಬಗ್ಗೆ ಪೋಷಕರು ಪ್ರಶ್ನಿಸಿದಾಗ ಆಕೆ ಉತ್ತರಿಸಲಿಲ್ಲ. ಇದಾದ ಬಳಿಕ ಮೂವರು ಸಹೋದರಿಯರು ನಿಗೂಢವಾಗಿ ಕಾಣೆಯಾಗಿದ್ದಾರೆ ಎನ್ನಲಾಗಿದೆ.
ಘಟನೆಯ ಬಗ್ಗೆ ಮಂಜೇಶ್ವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರು ಸಹೋದರಿಯರನ್ನು ಪತ್ತೆ ಹಚ್ಚಲು ಸೈಬರ್ ಸೆಲ್ ಸಹಾಯದಿಂದ ತನಿಖೆ ನಡೆಯುತ್ತಿದೆ.

LEAVE A REPLY

Please enter your comment!
Please enter your name here

Hot Topics

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದನ್ನು ಖಂಡಿಸಿ ಆ.26 ರಂದು ಮಡಿಕೇರಿ ಎಸ್‌ಪಿ ಕಚೇರಿಗೆ ಮುತ್ತಿಗೆ

ಬೆಂಗಳೂರು: ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಮಡಿಕೇರಿ ಭೇಟಿ ವೇಳೆ ಮೊಟ್ಟೆ ಎಸೆದ ಪ್ರಕರಣವನ್ನು ಕಾಂಗ್ರೆಸ್‌ ಖಂಡಿಸಿದ್ದು, ಆ.26 ರಂದು ಎಸ್‌ಪಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್‌ ಕಾರ್ಯಕರ್ತರು ನಿರ್ಧರಿಸಿದ್ದಾರೆ.ಈ...

ಬಿಜೆಪಿ ಕಾರ್ಯಕರ್ತ ಖಾಲಿದ್ ನಂದಾವರಗೆ ಜೀವಬೆದರಿಕೆ: ಬಂಟ್ವಾಳ DYSPಗೆ ದೂರು

ಮಂಗಳೂರು: ಬಿಜೆಪಿ ಕಾರ್ಯಕರ್ತ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವಕ್ಫ್‌ ಬೋರ್ಡ್‌ ಸದಸ್ಯರ ಜೀವಬೆದರಿಕೆ ಇರುವ ಬಗ್ಗೆ ಬಂಟ್ವಾಳ ಉಪವಿಭಾಗದ ಡಿವೈಎಸ್‌ಪಿಗೆ ದೂರು ನೀಡಿದ್ದಾರೆ.  ಖಾಲಿದ್ ನಂದಾವರದ.ಕ ಜಿಲ್ಲಾ ವಕ್ಫ್‌ ಬೋರ್ಡ್ ಸದಸ್ಯ...

ಸುರತ್ಕಲ್‌ನಲ್ಲಿ ಕತ್ತಿ ಬೀಸಿ ಹುಚ್ಚಾಟ: ಓರ್ವನ ಬಂಧನ

ಮಂಗಳೂರು: ದಾರಿ ಮಧ್ಯೆ ಕತ್ತಿ ಬೀಸಿ ಹುಚ್ಚಾಟ ನಡೆಸಿದ ಜಾರ್ಖಾಂಡ್‌ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಮಂಗಳೂರು ಹೊರ ವಲಯದ ಸುರತ್ಕಲ್ ಸಮೀಪದ ಕಾನದಲ್ಲಿ ನಡೆದಿದೆ.ಅತಲ್ ಕುಲ್ಲು (30) ಬಂಧಿತ...