Wednesday, October 5, 2022

ಶಿರಸಿ: ಫಾಲ್ಸ್​ ವೀಕ್ಷಣೆಗೆ ಆಗಮಿಸಿದ್ದ 6 ಜನರು ನಾಪತ್ತೆ

ಶಿರಸಿ: ಹುಬ್ಬಳ್ಳಿಯಿಂದ ಯಲ್ಲಾಪುರದ ಶಿರ್ಲೆ ಫಾಲ್ಸ್​ ವೀಕ್ಷಣೆಗೆ ಆಗಮಿಸಿದ್ದ 6 ಜನರು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದ್ದು, ಗುರುವಾರ ರಾತ್ರಿಯಿಂದಲೇ ಪ್ರವಾಸಿಗರ ಹುಡುಕಾಟ ನಡೆಸುತ್ತಿದ್ದಾರೆ.‌ ಹುಬ್ಬಳ್ಳಿ ನವಗರದಿಂದ ಪ್ರವಾಸಿಗರು ಯಲ್ಲಾಪುರ ತಾಲೂಕಿನ ಶಿರ್ಲೆ ಫಾಲ್ಸ್​ಗೆ ಆಗಮಿಸಿದ್ದರು ಎನ್ನಲಾಗಿದೆ.

ನಾಪತ್ತೆಯಾದವರನ್ನು ಆಸಿಫ್​​ ಡಲಾಯಿತ್, ಅಹ್ಮದ್​​ ಸೈಯದ್ ಶೇಖ್, ಅಬತಾಫ್​​ ಸದ್ದಾಂ ಶಿರಹಟ್ಟಿ, ಮಾಬುಸಾಬ್ ಮಕಬುಲಸಾಬ್ ಶಿರಹಟ್ಟಿ, ಶಾನು ಬಿಜಾಪುರಿ,‌ ಇಂಪ್ತಿಯಾಜಿ ನಜೀರಸಾಬ್ ಮುಲ್ಲಾನವರ ಎಂದು ತಿಳಿದು ಬಂದಿದೆ. ಮೂರು ಬೈಕ್​​ನಲ್ಲಿ ಫಾಲ್ಸ್ ನೋಡಲು ಆಗಮಿಸಿದ್ದು, ಭಾರಿ ಮಳೆಯಿಂದಾಗಿ ಫಾಲ್ಸ್ ತುಂಬಿ ಹರಿಯುತ್ತಿದೆ. ಆದರೆ, ಫಾಲ್ಸ್ ವೀಕ್ಷಣೆ ವೇಳೆ 6 ಮಂದಿ ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ. ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.‌

LEAVE A REPLY

Please enter your comment!
Please enter your name here

Hot Topics

ಎಲ್‌ಇಡಿ ಟಿ.ವಿ ಬ್ಲಾಸ್ಟ್‌..! : ಬಾಲಕ ಸಾವು-ಮನೆ ಗೋಡೆ ಕುಸಿತ

ಲಕ್ನೋ: ಎಲ್‌ಇಡಿ ಟಿ.ವಿ ಸ್ಪೋಟಗೊಂಡ ಪರಿಣಾಮ ಬಾಲಕನೊಬ್ಬ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.ಮೃತ ಬಾಲಕನನ್ನು ಓಮೇಂದ್ರ (16) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಟಿವಿ ನೋಡುತ್ತಿದ್ದ ಸಂದರ್ಭ ಎಲ್ ಐಡಿ ಟಿವಿ...

ಉಡುಪಿಯಲ್ಲಿ ಬೋನಿಗೆ ಬಿದ್ದ ಚಿರತೆ: ಮತ್ತೆ ಕಾಡಿಗೆ ಬಿಟ್ಟ ಅರಣ್ಯ ಸಿಬ್ಬಂದಿ

ಉಡುಪಿ: ಜಿಲ್ಲೆಯ ಮಟಪಾಡಿ ಗ್ರಾಮದಲ್ಲಿ ಊರಿನ ಜನರು ಅರಣ್ಯ ಇಲಾಖೆ ಮೂಲಕ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ.ಮಟಪಾಡಿ ಗ್ರಾಮದಲ್ಲಿ ಬಹಳಷ್ಟು ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿದ್ದರಿಂದ ಗ್ರಾಮಸ್ಥರು ಅರಣ್ಯ ಇಲಾಖೆ ಮೂಲಕ ಬೋನನ್ನು...

ಮಂಗಳೂರು: ಹೆಲಿಕಾಪ್ಟರ್‌ನಲ್ಲಿ ವೈಷ್ಣೋದೇವಿ ಮಂದಿರಕ್ಕೆ ಕರೆದೊಯ್ಯುವುದಾಗಿ 38 ಸಾವಿರ ರೂ. ವಂಚನೆ

ಮಂಗಳೂರು: ವೈಷ್ಣೋದೇವಿ ಮಂದಿರ ಯಾತ್ರೆಗೆ ಹೆಲಿಕಾಪ್ಟರ್ ಬುಕ್ಕಿಂಗ್ ಮಾಡುತ್ತೇನೆಂದು ನಂಬಿಸಿ ಮಂಗಳೂರು ಮೂಲದ ವ್ಯಕ್ತಿಯೊಬ್ಬರಿಗೆ ರೂ.38 ಸಾವಿರ ವಂಚನೆಗೈದ ಬಗ್ಗೆ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಂಚನೆಗೊಳಗಾದ ವ್ಯಕ್ತಿ ಬೆಂಗಳೂರಿನಲ್ಲಿ IT consultant...