Monday, May 23, 2022

ನಾಪತ್ತೆಯಾದ ಅಪ್ರಾಪ್ತ ವಿದ್ಯಾರ್ಥಿನಿ ಪ್ರಿಯಕರನ ಜೊತೆ ಠಾಣೆಗೆ ಹಾಜರು

ಕಾಸರಗೋಡು: ನಾಪತ್ತೆಯಾದ ಕಾಲೇಜು ವಿದ್ಯಾರ್ಥಿನಿ ಪ್ರಿಯಕರನ ಜೊತೆ ಪೊಲೀಸ್ ಠಾಣೆಯಲ್ಲಿ ಹಾಜರಾದ ಘಟನೆ ವರದಿಯಾಗಿದೆ.

ಬೋವಿಕ್ಕಾನ ಪರಿಸರದ ಅಪ್ರಾಪ್ತ ವಿದ್ಯಾರ್ಥಿನಿ ಮಂಗಳವಾರ ಬೆಳಗ್ಗೆಯಿಂದ ನಾಪತ್ತೆಯಾಗಿದ್ದಳು. ಈಕೆ ಕಾಲೇಜೊಂದರಲ್ಲಿ ಪದವಿ ವಿದ್ಯಾರ್ಥಿನಿಯಾಗಿದ್ದು, ಕಾಲೇಜಿಗೆಂದು ಹೋದವಳು ಮನೆಗೆ ಹಿಂತಿರುಗಲಿಲ್ಲ.


ಈ ಬಗ್ಗೆ ಮನೆಯವರು ಆದೂರು ಪೊಲೀಸರಿಗೆ ದೂರು ನೀಡಿದ್ದರು. ಇದೇ ವೇಳೆ ಈಕೆ ಪೆರ್ಲ ಬಳಿಯಲ್ಲಿ ಪ್ರಿಯಕರನ ಜೊತೆ ಇರುವುದಾಗಿ ತಿಳಿದು ಬಂತು.

ಅದರಂತೆ ಬುಧವಾರ ಬೆಳಗ್ಗೆ ಯುವತಿ ಹಾಗೂ ಪ್ರಿಯಕರ ಬದಿಯಡ್ಕ ಠಾಣೆಯಲ್ಲಿ ಹಾಜರಾದರು.

ಈ ಮಾಹಿತಿ ತಿಳಿದ ಆದೂರು ಪೊಲೀಸರು ಬದಿಯಡ್ಕಕ್ಕೆ ಆಗಮಿಸಿ ಯುವತಿ ಮತ್ತು ಪ್ರಿಯಕರನನ್ನು ಆದೂರಿಗೆ ಕರೆದೊಯ್ತು ಸಮಗ್ರ ತನಿಖೆ ನಡೆಸಿದರು.

LEAVE A REPLY

Please enter your comment!
Please enter your name here

Hot Topics

ಆಟೋ ರಿಕ್ಷಾ- ಪಿಕಪ್ ಢಿಕ್ಕಿ: ಓರ್ವನಿಗೆ ಗಾಯ

ಬಂಟ್ವಾಳ: ಆಟೋ ರಿಕ್ಷಾ ಮತ್ತು ಪಿಕಪ್ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದ ಕನ್ಯಾನ ಎಂಬಲ್ಲಿ ನಿನ್ನೆ ನಡೆದಿದೆ.ಅಪಘಾತದಿಂದಾಗಿ ಆಟೋ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು...

ಭಾರತ ಸೇರಿದಂತೆ 15 ದೇಶಗಳಿಗೆ ಪ್ರಯಾಣ ನಿರ್ಬಂಧ ಹೇರಿದ ಸೌದಿ ಅರೇಬಿಯಾ

ಜೆದ್ದಾ: ಸೌದಿ ಅರೇಬಿಯಾದಲ್ಲಿ ಕಳೆದ ಕೆಲವು ವಾರಗಳಿಂದ ಕೋವಿಡ್ ಸೋಂಕು ಮತ್ತೆ ಏರಿಕೆ ಕಂಡುಬಂದಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ದೇಶದ ನಾಗರಿಕರು ಭಾರತ ಸೇರಿದಂತೆ ಹದಿನಾರು ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಿದೆ.ಲೆಬನಾನ್, ಸಿರಿಯಾ, ಟರ್ಕಿ,...

ಉಡುಪಿ: ಭಾರಿ ಅಲೆಗೆ ದೋಣಿ ಮುಳುಗಡೆ-ಐವರು ಮೀನುಗಾರರ ರಕ್ಷಣೆ

ಉಡುಪಿ: ಭಾರಿ ಗಾತ್ರದ ಅಲೆಗೆ ದೋಣಿಯೊಂದು ಮುಳುಗಡೆಯಾದ ಘಟನೆ ಉಡುಪಿ ಜಿಲ್ಲೆಯ ಶಿರೂರಿನ ಕಡಲ ತೀರದಲ್ಲಿ ನಡೆದಿದೆ. ದೋಣಿಯಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಲಾಗಿದೆ.ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಕಡಲ ತೀರದಿಂದ ಆಳ...