ಉಳ್ಳಾಲ: ಎರಡು ದಿನಗಳ ಹಿಂದೆ ನಾಪತ್ತೆಯಾದ ವ್ಯಕ್ತಿಯ ಸ್ಕೂಟರ್ ಉಳ್ಳಾಲದ ಸೋಮೇಶ್ವರ ಸಮುದ್ರ ತೀರದಲ್ಲಿ ಇಂದು ಪತ್ತೆಯಾಗಿದೆ.
ಘಟನೆ ವಿವರ
ಹರೇಕಳ ಶಾಂತಿನಗರದ ನಿವಾಸಿ ಜಬ್ಬಾರ್ ಹಸನ್ (40) ಎಂಬುವವರು ಜು.23 ರಂದು ಹೊಟ್ಟೆನೋವು ಎಂದು ಮನೆಯಲ್ಲಿ ತಿಳಿಸಿ, ಆಧಾರ್ ಕಾರ್ಡ್ ಹಿಡಿದುಕೊಂಡು ಮನೆಯಿಂದ ಹೊರಟು ನಾಪತ್ತೆಯಾಗಿದ್ದರು. ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮನೆಮಂದಿ ನಿನ್ನೆ ನಾಪತ್ತೆ ದೂರು ದಾಖಲಿಸಿದ್ದರು.
ಇಂದು ಜಬ್ಬಾರ್ ಅವರ ಬೈಕ್ ಸೋಮೇಶ್ವರ ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ಅಲ್ ಮದೀನಾ ಸಭಾಂಗಣದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಜಬ್ಬಾರ್, ಮೀನು ಮಾರಾಟ ಮಾಡುತ್ತಿದ್ದರು. ವಿವಾಹಿತರಾಗಿರುವ ಇವರಿಗೆ ಇಬ್ಬರು ಮಕ್ಕಳಿದ್ದಾರೆ.