DAKSHINA KANNADA
ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಹೆಸರು ದುರುಪಯೋಗ: ಡಿವೈಎಸ್ಪಿಗೆ ದೂರು
ಪುತ್ತೂರು: ದೇಯಿ ಬೈದೇತಿ ಕೋಟಿ-ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಧಿಕೃತ ಟ್ರೇಡ್ ಮಾರ್ಕ್ ಉಲ್ಲಂಘಿಸಿ ಹಾಗೂ ಕ್ಷೇತ್ರದ ಹೆಸರು ದುರುಪಯೋಗಪಡಿಸಿಕೊಂಡು ಅಗರಬತ್ತಿ ತಯಾರಿಸಿ ಮಾರಾಟ ಮಾಡಿ ವಂಚನೆ ಎಸಗುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ವತಿಯಿಂದ ಪುತ್ತೂರು ಉಪವಿಭಾಗ ಡಿವೈಎಸ್ಪಿಗೆ ದೂರು ಸಲ್ಲಿಸಿದೆ.
ಶ್ರೀ ಕ್ಷೇತ್ರ ಗೆಜ್ಜೆಗಿರಿ ಭಾರತ ಸರಕಾರದ ಟ್ರೇಡ್ ಮಾರ್ಕ್ ರಿಜಿಸ್ಟ್ರಿ (Trade Mark Registry) ಯಲ್ಲಿ ಗೆಜ್ಜೆಗಿರಿ ಎಂಬ ಟ್ರೇಡ್ ಮಾರ್ಕ್ ಅನ್ನು ಕ್ಲಾಸ್ 3 ಅಡಿಯಲ್ಲಿ ಅಗರಬತ್ತಿ ಉತ್ಪನ್ನ ಹೊಂದಿದೆ.
ಈ ಅಧಿಕೃತ ನೋಂದಾವಣೆ ಟ್ರೇಡ್ ಮಾರ್ಕ್ ಶ್ರೀ ಕ್ಷೇತ್ರ ಹೊಂದಿದ್ದು ಗೆಜ್ಜೆಗಿರಿ ಎಂಬ ಮಾರ್ಕ್ ಮೇಲೆ ಬೌದ್ಧಿಕ ಆಸ್ತಿ ಹಕ್ಕಿನ ಕಾನೂನು ಬದ್ಧ ಅಧಿಕಾರ ಹೊಂದಿರುವಾಗ ಗಂಗಗೂಡನಹಳ್ಳಿಯ ಮಿಸ್ಬಾ ಪ್ರಾಗ್ರನೆನ್ಸ್ ಗೆಜ್ಜೆಗಿರಿ ಹೆಸರಿನಲ್ಲಿ ಅಗರಬತ್ತಿ ಉತ್ಪಾದಿಸಿ ದಕ್ಷಿಣ ಕನ್ನಡದ ಪ್ರಮುಖ ಮಾರುಕಟ್ಟೆಗಳಲ್ಲಿ ಮಾರಾಟ ಮಾಡುತ್ತಿದೆ.
ಅದಲ್ಲದೇ ಉತ್ಪನ್ನದಲ್ಲಿ ಶ್ರೀ ಕ್ಷೇತ್ರದ ಫೋಟೋ ಅನ್ನು ನಮೂದಿಸಿ ದುರುಪಯೋಗಪಡಿಸಿಕೊಂಡಿದೆ.
ಇದೇ ರೀತಿ ಉಪ್ಪಿನಂಗಡಿಯ ಶುಕ್ರಿಯಾ ಟ್ರೇಡರ್ಸ್ನ ಮಾಲಕ ಶುಕೂರ್ ಕೂಡ ಗೆಜ್ಜೆಗಿರಿ ಹೆಸರಿನ ಅಗರಬತ್ತಿ ಮಾರಾಟ ಮಾಡುತ್ತಿದ್ದು,
ಶ್ರೀ ಕ್ಷೇತ್ರದ ಹೆಸರನ್ನು, ಫೋಟೋವನ್ನು ಉತ್ಪನ್ನಕ್ಕೆ ಉಪಯೋಗಿಸುತ್ತಿರುವುದು ಕಂಡುಬಂದಿದೆ. ಉತ್ಪನ್ನಗಳನ್ನು ಮುಟ್ಟು ಗೋಲು ಹಾಕಿ ಕ್ರಮ ಕೈಗೊಳ್ಳುವಂತೆ ಕ್ಷೇತ್ರಾಡಳಿತ ಸಮಿತಿ ಪರವಾಗಿ ಉಪಾಧ್ಯಕ್ಷ ರವಿ ಪೂಜಾರಿ ದೂರು ಸಲ್ಲಿಸಿದ್ದಾರೆ.
DAKSHINA KANNADA
ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀ*ರ
ಮಂಗಳೂರು: ಬೈಕಂಪಾಡಿ ಹೋಟೆಲ್ ಶ್ರೀ ದ್ವಾರದ ಬಳಿ ಲಾರಿಗಳೆರಡರ ನಡುವೆ ಅಪಘಾತ ಸಂಭವಿಸಿ ಲಾರಿ ಚಾಲಕ ಗಂಭಿರ ಗಾಯಗೊಂಡ ಘಟನೆ ನಡೆದಿದೆ. ಒಂದು ಲಾರಿಯೊಂದು ಗ್ರಾನೈಟ್ ಅಂಗಡಿಯೊಳಗೆ ನುಗ್ಗಿದ್ದು, ಅಪಾರ ಮೌಲ್ಯದ ಗ್ರಾನೈಟ್ ಹಾನಿಗೊಂಡಿದೆ.
ಮುಂದೆ ಓದಿ..; ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!
ಲಾರಿ ಸಾಗಾಟ ಮಾಡುತ್ತಿದ್ದ ಲಾರಿ ಅಪಘಾತದಿಂದ ನಜ್ಜುಗುಜ್ಜಾಗಿದೆ. ಇನ್ನು ಇದೇ ಭಾಗದಲ್ಲಿ ನಿತ್ಯವೂ ಮಹಿಳೆಯರು ಮೀನ ಮಾರಾಟ ಮಾಡುತ್ತಿದ್ದರು. ಅದೃಷ್ಟವಶಾತ್ ಇದೀಗ ಭಾರೀ ಅನಾಹುತ ತಪ್ಪಿದೆ.
DAKSHINA KANNADA
ದೊಡ್ಡವರ ಜಗಳದಲ್ಲಿ ಇಹಲೋಕ ತಜ್ಯಿಸಿದ 3 ರ ಕಂದಮ್ಮ…
ಮಂಗಳೂರು (ಬೆಳಗಾವಿ): ಅದು ಎರಡು ಕುಟುಂಬಗಳ ನಡುವೆ ನಡೆದಿರೋ ಜಗಳ . ಆದ್ರೆ ಆ ಜಗಳಕ್ಕೆ ಏನೂ ಅರಿಯದ ಮೂರು ವರ್ಷದ ಪುಟ್ಟ ಮಗು ಬಲಿಯಾಗಿದೆ. ಪಾಪಿಯೊಬ್ಬ ಮಗುವಿನ ಎದೆಗೆ ಕಾಲಿಟ್ಟು ಮಗುವಿನ ಉಸಿರು ನಿಲ್ಲಿಸಿದ್ದಾನೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಎಂಬ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ದೊಡ್ಡವರ ಜಗಳದಲ್ಲಿ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಎಂಬ ಮೂರು ವರ್ಷದ ಮಗು ಹತವಾಗಿದೆ. ಜೋತಿಭಾ ತುಕಾರಾಮ ಬಾಬಬರ ಎಂಬಾತ ಮಗುವಿನ ಜೀವಕ್ಕೆ ಕುತ್ತು ತಂದ ಆರೋಪಿಯಾಗಿದ್ದಾನೆ.
ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಜಗಳ ತಾರಕ್ಕೇರಿದಾಗ ಸಿಟ್ಟಿನಲ್ಲಿ ಜೋತಿಬಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ನಿಂತಿದ್ದಾನೆ. ಈ ವೇಳೆ ಮಗುವನ್ನು ಆತನ ಕಾಲಿನ ಅಡಿಯಿಂದ ತೆಗೆಯಲು ಮಗುವಿನ ತಾಯಿ ಯತ್ನಿಸಿದ್ದಾಳೆ . ಆ ವೇಳಗೆ ಇನ್ನಷ್ಟು ಗಟ್ಟಿಯಾಗಿ ಕಾಲಿನಿಂದ ಮಗುವಿನ ಎದೆಗೆ ಕಾಲಿನಿಂದ ಒತ್ತಿದ ಕಾರಣ ಮಗು ಉಸಿರು ನಿಲ್ಲಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವಿನ ದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.
DAKSHINA KANNADA
ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!
ನ್ಯೂಯಾರ್ಕ್ : ಅಮೇರಿಕಾದಲ್ಲಿ ನಡೆದ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ಮಹಿಳೆಯರು ಇಹಲೋಕ ತ್ಯಜಿಸಿದ್ದಾರೆ. ಕೌಂಟಿಯ ಹೆದ್ದಾರಿಯ ಸೇತುವೆಯೊಂದರ ಮೇಲೆ ವೇಗವಾಗಿ ಕಾರು ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಉತ್ತರದ ಕಡೆಗೆ ಕಾರು ಪ್ರಯಾಣಿಸುತ್ತಿದ್ದು, ಎಲ್ಲಾ ಲೇನ್ಗಳನ್ನು ದಾಟಿ, ಹಂಪ್ ಮೇಲೆ ವೇಗವಾಗಿ ಏರಿತ್ತು. ಈ ಕಾರಣದಿಂದ ಕನಿಷ್ಟ 20 ಅಡಿಗಳಷ್ಟು ಮೇಲಕ್ಕೆ ಹಾರಿ ಸೇತುವೆಯ ಮುಂದೆ ಇದ್ದ ಮರಗಳಿಗೆ ಕಾರು ಅಪ್ಪಳಿಸಿದೆ. ಗುಜಾರಾತ್ ಮೂಲದ ಮೂವರು ಮಹಿಳೆಯರು ಈ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಗುಜರಾತ್ನ ಆನಂದ್ ಜಿಲ್ಲೆಯ ರೇಖಾಬೆನ್ ಪಟೇಲ್ , ಸಂಗೀತಾಬೆನ್ ಪಟೇಲ್ ಹಾಗೂ ಮನೀಶಾಬೆನ್ ಪಟೇಲ್ ಅವರು ಇಹಲೋಕ ತ್ಯಜಿಸಿದವರಾಗಿದ್ದಾರೆ.
ಕಾರು ನಿಗದಿಪಡಿಸಿದ ವೇಗದ ಮಿತಿಗಿಂತ ಹೆಚ್ಚು ವೇಗದಲ್ಲಿತ್ತು ಎಂದು ಅಲ್ಲಿನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಪಘಾತದ ಪ್ರಮಾಣ ಎಷ್ಟಿತ್ತು ಮತ್ತು ಕಾರು ಎಷ್ಟು ಎತ್ತರಕ್ಕೆ ಹಾರಿತ್ತು ಅನ್ನೋದಿಕ್ಕೆ ಮರದ ಮೇಲಿರುವ ಕಾರಿನ ಅವಶೇಷಗಳು ಸಾಕ್ಷಿ ಎಂದು ಅವರು ಹೇಳಿದ್ದಾರೆ. ಮರದ ಮೇಲೆ ಬಿದ್ದ ಕಾರು ಛಿದ್ರಗೊಂಡು ಕಾರಿನ ಅವಶೇಷಗಳು ಚೆಲ್ಲಾಪಿಲ್ಲಿಯಾಗಿತ್ತು.
ದಕ್ಷಿಣ ಕೆರೊಲಿನಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಕ್ಷಣ ಸ್ಥಳಕ್ಕೆ ರಕ್ಷಣಾ ತಂಡಗಳು, ಪೊಲೀಸರು ಆಗಮಿಸಿದ್ದಾರೆ. ಅಪಘಾತದಲ್ಲಿ ಓರ್ವ ಬದುಕಿ ಉಳಿದಿದ್ದು, ಆತನ ಸ್ಥಿತಿ ಗಂಭೀರವಾಗಿದ್ದು ಈಗಲೇ ಏನೂ ಹೇಳಲು ಆಗದ ಪರಿಸ್ಥಿತಿಯಲ್ಲಿದ್ದಾನೆ. ವಾಹನ ಅಪಘಾತವಾದ ತಕ್ಷಣ ಅದರಲ್ಲಿದ್ದ ತಾಂತ್ರಿಕ ವ್ಯವಸ್ಥೆಯ ಕಾರಣ ತಕ್ಷಣ ಕುಟುಂಬ ಸದಸ್ಯರಿಗೆ ಅಲರ್ಟ್ ಮೆಸೆಜ್ ರವಾನೆಯಾಗಿತ್ತು. ಹೀಗಾಗಿ ತಕ್ಷಣ ಕುಟುಂಬಸ್ಥರು ಕೂಡಾ ತಕ್ಷಣ ಸ್ಥಳಕ್ಕೆ ಆಗಮಿಸಿದ್ದಾರೆ.
- FILM6 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM7 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- chikkamagaluru6 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!
- FILM6 days ago
ಶೋಬಿತಾ ಜೊತೆ ಕಾಡಿನಲ್ಲಿ ಕಾಣಿಸಿಕೊಂಡ್ರ ನಾಗಚೈತನ್ಯ..! ಫ್ಯಾನ್ಸ್ ಏನಂದ್ರು..?