Tuesday, January 31, 2023

ಸುರತ್ಕಲ್: 1ಕೋಟಿ 25 ಲಕ್ಷ ರೂ.ವೆಚ್ಚದ ಕಾಂಕ್ರಿಟೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಭರತ್

ಸುರತ್ಕಲ್: ಸುರತ್ಕಲ್‌ನ ಶ್ರೀಕಾಂತೇರಿ ದೈವಸ್ಥಾನದ ಹಿಂಬದಿಯಿಂದ ಚಿರಂತನ ಆಶ್ರಮ ಕೂಡು ರಸ್ತೆಯವರೆಗೆ ಲೋಕೋಪಯೋಗಿ ಇಲಾಖೆಯ ಅನುದಾನದ 1ಕೋಟಿ 25 ಲಕ್ಷ ರೂ.ವೆಚ್ಚದಲ್ಲಿ ಕಾಂಕ್ರಿಟೀಕರಣ ಕಾಮಗಾರಿಗೆ ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಗುದ್ದಲಿ ಪೂಜೆ ನೆರವೇರಿಸಿದರು.


ಈ ಸಂದರ್ಭ ಮಾಧ್ಯಮದೊಂದಿಗೆ ಮಾತನಾಡಿದ ಶಾಸಕ ಡಾ.ಭರತ್ ಶೆಟ್ಟಿ ವೈ ‘ಸುರತ್ಕಲ್ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು ಪ್ರಮುಖ ರಸ್ತೆಗಳ ಕಾಂಕ್ರಟೀಕರಣ ,ಜಂಕ್ಷನ್ ಅಭಿವೃದ್ಧಿ ಹಾಗೂ ಸುರತ್ಕಲ್ ಸರ್ಕಲ್ ಗೆ ವೀರ ಸಾವರ್ಕರ್ ಮತ್ತು ಬೋಂದೆಲ್ ಜಂಕ್ಷನ್ ಗೆ ಸರ್ವಜ್ಞ ಸರ್ಕಲ್ ಹೆಸರಿಡಲು ತೀರ್ಮಾನಿಸಲಾಗಿದೆ’ ಎಂದರು.

ಈ ಸಂದರ್ಭ ಮೇಯರ್ ಜಯಾನಂದ ಅಂಚನ್, ಉಪಮೇಯರ್ ಪೂರ್ಣಿಮಾ, ಸ್ಥಳೀಯ ಕಾರ್ಪೊರೇಟರ್ ಶ್ರೀಮತಿ ಸರಿತಾ ಶಶಿಧರ್, ಸ್ಥಾಯಿ ಸಮಿತಿ ಅಧ್ಯಕ್ಷರು ಶಕೀಲಾ ಕಾವ, ಮ. ನ. ಪಾ ಸದಸ್ಯರಾದ ಲೋಕೇಶ್ ಬೊಳ್ಳಾಜೆ, ಶೋಭಾ ರಾಜೇಶ್,

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರು ಭರತ್ ರಾಜ್ ಕೃಷ್ಣಾಪುರ, ಬಿಜೆಪಿ ಮಂಡಲ ಕೋಶಾಧಿಕಾರಿ ಪುಷ್ಪರಾಜ್ ಮುಕ್ಕ, ಬೂತ್ ಅಧ್ಯಕ್ಷರು ಅನಿಲ್ ಸಾಲ್ಯಾನ್, ಕಾರ್ಯದರ್ಶಿ ಲೀಲಾಧರ್ ಶೆಟ್ಟಿ, ಬಿಜೆಪಿ ಮುಖಂಡರು, ಕಾರ್ಯಕರ್ತರು ಗುತ್ತಿಗೆದಾರರು ಸುಧಾಕರ್ ಪೂಂಜಾ, ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Hot Topics

ಮಂಗಳೂರು ತಲಪಾಡಿ ಟೋಲ್ ಸಿಬ್ಬಂದಿ ಗೂಂಡಾಗಿರಿ :ಸಾಮಾಜಿಕ ಜಾಲತಾಣದಲ್ಲಿ ವೈರಲ್..!

ಉಳ್ಳಾಲ: ಟೋಲ್ ಸಿಬ್ಬಂದಿಗಳ ಗೂಂಡಾ ವರ್ತನೆಯಿಂದ ಕಾರು ಚಾಲಕನ ಮೇಲೆ ಹಲ್ಲೆ ನಡೆದ ಘಟನೆ ತಲಪಾಡಿ ಟೋಲ್ ಪ್ಲಾಜಾದಲ್ಲಿ ಭಾನುವಾರ ನಡೆದಿರುವುದು, ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತ ವೀಡಿಯೋ ವೈರಲ್ ಆಗಿದೆ.ಕೇರಳ ಗಡಿಭಾಗದ...

ಮುಂಬೈ- ಅಹ್ಮದಾಬಾದ್ ಹೆದ್ದಾರಿಯಲ್ಲಿ ಬಸ್‌ ಗೆ ಕಾರು ಡಿಕ್ಕಿ : ನಾಲ್ವರು ಮೃತ್ಯು..!

ಮುಂಬೈ:ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ದಹಾನು ಎಂಬಲ್ಲಿ ಮುಂಬೈ-ಅಹ್ಮದಾಬಾದ್ ರಾಷ್ಟ್ರೀಯ ಹೆದ್ದಾರಿಯ ಚರೋಟಿಯಲ್ಲಿ  ಮುಂಜಾನೆ ಐಷಾರಾಮಿ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ.ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್...

ಬೆಳ್ತಂಗಡಿ ಆಟೋ ಚಾಲಕನ ನಿರ್ಲಕ್ಷ್ಯಕ್ಕೆ ಒಂದು ವರ್ಷದ ಮಗು ಮೃತ್ಯು..!

ಆಟೋ ರಿಕ್ಷಾವೊಂದು ಸೇತುವೆ ಡಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾದಲ್ಲಿದ್ದ ಒಂದು ವರ್ಷದ ಗಂಡು ಮಗು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮಾಲಾಡಿಯಲ್ಲಿ ನಡೆದಿದೆ.ಬೆಳ್ತಂಗಡಿ : ಆಟೋ ರಿಕ್ಷಾವೊಂದು ಸೇತುವೆ...