Connect with us

DAKSHINA KANNADA

ಕಾವೂರು ಕಾಲೇಜಿನ ವಿದ್ಯಾರ್ಥಿಗಳ ಹೈ ಡ್ರಾಮಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಕಿಡಿ

Published

on

ಕಾವೂರು: ಕಾವೂರು ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಹಿಜಾಬ್ ಗಲಾಟೆಯನ್ನು ಕೈ ಬಿಟ್ಟು ತರಗತಿಯಲ್ಲಿ ಕುಳಿತು ಪಾಠ ಕೇಳುವುದರ ಬದಲು ಅನಾರೋಗ್ಯದ ಹೈಡ್ರಾಮಾ ನಡೆಸಿ ಶಿಕ್ಷಣ ಸಂಸ್ಥೆ, ಶಿಕ್ಷಕರಿಗೆ ಕೆಟ್ಟ ಹೆಸರು ತರಲು ನಡೆಸುತ್ತಿರುವ ಪ್ರಯತ್ನಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು “ಹಲವು ವರ್ಷಗಳಿಂದ ಇದೇ ಶಿಕ್ಷಕರಿಂದ ಶಿಕ್ಷಣ ಕಲಿತ ನೀವು ಇದೀಗ ಬಾಹ್ಯ ಮತೀಯ ಸಂಘಟನೆಗಳ ಪ್ರಭಾವಕ್ಕೆ ಒಳಗಾಗಿ ಶಿಕ್ಷಕರ ವಿರುದ್ದ ಆರೋಪ ಮಾಡುತ್ತಿದ್ದೀರಿ.

ಶಿಕ್ಷಕರು ನ್ಯಾಯಾಲಯದ ಆದೇಶದಂತೆ ಕಾನೂನು ಪಾಲಿಸಿದ್ದಾರೆ. ಅವರ ವಿರುದ್ಧ ವಿನಾ ಕಾರಣ ಅಪಪ್ರಚಾರ ನಡೆಸುತ್ತಿರುವುದು ಸರಿಯಲ್ಲ.

ನ್ಯಾಯಾಲಯದ ಆದೇಶ ಪಾಲಿಸದೆ ಹೊರಗೆ ನಿಂತು ನಾಟಕ ಪ್ರದರ್ಶನ ಮಾಡುವ ಅಗತ್ಯವಿಲ್ಲ. ಶಿಕ್ಷಣದಲ್ಲಿ ನಿಜವಾಗಿಯೂ ಆಸಕ್ತಿ ಇರುವವರು ತರಗತಿಗೆ ಹೋಗಿ ನಿಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳಬೇಡಿ.

ಸರಕಾರ ಶಿಕ್ಷಣಕ್ಕೆ ಮುಕ್ತ ಅವಕಾಶ ನೀಡಿದ್ದು ಉತ್ತಮವಾಗಿ ಕಲಿತು ಮುಖ್ಯವಾಹಿಗೆ ಬರಬೇಕೆಂಬ ಧ್ಯೇಯೋದ್ದೇಶದಿಂದ ಹೊರತು ಈ ರೀತಿ ವಿವಾದ ಸೃಷ್ಠಿಸಲು ಅಲ್ಲ.

ಶಿಕ್ಷಕರ ವಿರುದ್ದ ನಿಂದನೆಯ ಹೇಳಿಕೆ ನೀಡುವವರನ್ನು ಹಾಗೂ ಈ ವಿದ್ಯಾರ್ಥಿಗಳನ್ನು ಪ್ರಚೋದಿಸುವ ಸಂಘಟನೆ ಸದಸ್ಯರ ಮೇಲೆ ನಿಗಾ ಇರಿಸಿ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಸೂಚಿಸಿದ್ದಾರೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

LATEST NEWS

Trending