Connect with us

MANGALORE

74 ಕುಟುಂಬಗಳಿಗೆ ಶಾಸಕರಾದ ಡಾ.ಭರತ್ ಶೆಟ್ಟಿಯವರಿಂದ ಹಕ್ಕು ಪತ್ರ ವಿತರಣೆ..

Published

on

74 ಕುಟುಂಬಗಳಿಗೆ ಶಾಸಕರಾದ ಡಾ.ಭರತ್ ಶೆಟ್ಟಿಯವರಿಂದ ಹಕ್ಕು ಪತ್ರ ವಿತರಣೆ..

ಮಂಗಳೂರು : ಪ್ರತಿಯೊಬ್ಬರಿಗೂ ಸ್ವಂತ ಮನೆ ಹೊಂದುವುದು ಕನಸಾಗಿರುತ್ತದೆ. ನಗರ ಪ್ರದೇಶದಲ್ಲಿರುವ ಹಲವರಿಗೆ ಇದು ಸಾಧ್ಯವಾಗುವುದಿಲ್ಲ.

ಈ ನಿಟ್ಟಿನಲ್ಲಿ ಹಲವು ವರ್ಷಗಳಿಂದ ಸರಕಾರಿ ಜಾಗದಲ್ಲಿ ವಾಸಿಸುವ ಕುಟುಂಬಗಳಿಗೆ ಸ್ವಂತ ಹಕ್ಕು ನೀಡುವ ಕೆಲಸವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರಕಾರ ತ್ವರಿತಗೊಳಿಸಿದೆ ಎಂದು ಶಾಸಕರಾದ ಡಾ.ಭರತ್ ಶೆಟ್ಟಿ ವೈ ಹೇಳಿದರು.

ಗಣೇಶಪುರದಲ್ಲಿ ಸೋಮವಾರ 3ನೇ ವಾರ್ಡ್, 4 ಮತ್ತು 5ನೇ ವಾರ್ಡ್ ನಲ್ಲಿ ಅರ್ಹ 74 ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಿ ಅವರು ಮಾತನಾಡಿದರು. ಸ್ವಂತ ಮನೆಯ ಹಕ್ಕು ನೀಡುವಾಗ ಸಂತಸವಾಗುತ್ತದೆ. ಒಂದು ಕುಟುಂಬಕ್ಕೆ ನೆಮ್ಮದಿಯಾಗಿರಲು ಸೂರು ಒದಗಿಸಿದ ಧನ್ಯತಾ ಭಾವ ಮೂಡುತ್ತದೆ.

ಸರಕಾರದ ಕೆಲಸವನ್ನು ಅಧಿಕಾರಿಗಳು ನಿಷ್ಠೆಯಿಂದ ಮಾಡುತ್ತಿದ್ದಾರೆ. ತಾನು ಶಾಸಕನಾದ ಮೇಲೆ ಇದುವರೆಗೆ ನಾಲ್ಕುವರೆ ಸಾವಿರ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿರುವುದು ಮನಸ್ಸಿಗೆ ತೃಪ್ತಿ ತಂದಿದೆ ಎಂದರು.

ಕ್ಷೇತ್ರದಲ್ಲಿ ಸಾರ್ವಜನಿಕರ ಪರವಾಗಿ ನಾನು, ಪಾಲಿಕೆ ಸದಸ್ಯರು ಸರಕಾರದ ಸೌಲಭ್ಯವನ್ನು ಮುಟ್ಟಿಸುವ ಕೆಲಸವನ್ನು ಮಾಡುತ್ತಿದ್ದೇವೆ. ಮುಂದೆಯೂ ನಿರಂತರವಾಗಿ ಈ ಕೆಲಸ ಮುಂದುವರಿಯಲಿದೆ ಎಂದರು.

ಕಾರ್ಯಕ್ರಮದಲ್ಲಿ ಉಪಮೇಯರ್ ವೇದಾವತಿ, ಸ್ಥಾಯೀ ಸಮಿತಿ ಅಧ್ಯಕ್ಷ ಕಿರಣ್ ಕುಮಾರ್ ಕೋಡಿಕಲ್, ಪಾಲಿಕೆ ಸದಸ್ಯರುಗಳಾದ ಲೋಕೇಶ್ ಬೊಳ್ಳಾಜೆ, ಲಕ್ಷ್ಮೀಶೇಖರ್ ದೇವಾಡಿಗ, ಶ್ವೇತ ಪೂಜಾರಿ,ಶೋಭಾ ರಾಜೇಶ್, ಸರಿತ ಶಶಿಧರ್, ಶಂಶಾದ್,ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಧರ್ಮೇಂದ್ರ ಗಣೇಶಪುರ, ತಹಸೀಲ್ದಾರ್ ಗುರುಪ್ರಸಾದ್, ಕಂದಾಯ ಅಧಿಕಾರಿ ನವೀನ್ ಮತ್ತಿತರರು ಉಪಸ್ಥಿತರಿದ್ದರು.

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

DAKSHINA KANNADA

ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ

Published

on

ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.

Continue Reading

DAKSHINA KANNADA

ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ

Published

on

ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಮಂಗಳೂರಿನಲ್ಲಿ ತಮ್ಮ ಮತ ಚಲಾಯಿಸಿದ್ದಾರೆ. ಮಂಗಳೂರಿನ ಕಪಿತಾನಿಯೋ ಶಾಲೆಯ ಮತಗಟ್ಟೆಗೆ ತನ್ನ ಪತ್ನಿ ಹಾಗೂ ಮಗಳ ಜೊತೆ ಆಗಮಿಸಿ ಮತ ಚಲಾಯಿಸಿದ್ದಾರೆ.

ಮುಂಜಾನೆ ಏಳುಗಂಟೆಗೆ ಮತಗಟ್ಟೆಗೆ ಆಗಮಿಸಿದ ಪದ್ಮರಾಜ್ ಅವರು ಬರುವ ವೇಳೆಗೆ ಜನರು ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದರು. ಹೀಗಾಗಿ ಪದ್ಮರಾಜ್ ಹಾಗೂ ಅವರ ಪತ್ನಿ ಮತ್ತು ಮಗಳು ಸರತಿ ಸಾಲಿನಲ್ಲಿ ನಿಂತೇ ಮತ ಚಲಾಯಿಸಿದ್ದಾರೆ. ಪದ್ಮರಾಜ್ ಆಗಮಿಸುವ ವೇಳೆ ಅವರ ಸಾಕಷ್ಟು ಅಭಿಮಾನಿಗಳು ಮತಗಟ್ಟೆಯ  ಹೊರಗೆ ನಿಂತು ಅವರಿಗೆ ಶುಭ ಕೋರಿದ್ದಾರೆ.

 

ಮತದಾನ ಮಾಡಿದ ಪದ್ಮರಾಜ್ ಬಳಿಕ ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯೆ ವೀಕ್ಷಣೆಗೆ ತೆರಳಿದ್ದಾರೆ.

Continue Reading

LATEST NEWS

Trending