2.80 ಕೋಟಿ ರೂಪಾಯಿ ಯೋಜನೆಯ `ಜಲಸಿರಿ’ ಯೋಜನೆಗೆ ಶಾಸಕ ಡಾ. ಭರತ್ ಶೆಟ್ಟಿ ಶಿಲಾನ್ಯಾಸ
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ(ಮನಪಾ) ತಿರುವೈಲು ಮತ್ತು ಪಚ್ಚನಾಡಿ ವಾರ್ಡುಗಳಲ್ಲಿ ಕ್ರಮವಾಗಿ ಎಡಿಬಿ-ಕೆಯುಐಡಿಎಫ್‌ಸಿ-ಜಲಸಿರಿ-24×7 ಕುಡಿಯುವ ನೀರಿ ಸರಬರಾಜು ಯೋಜನೆಯ 7.5 ಲಕ್ಷ ಲೀಟರ್ ಮತ್ತು 5 ಲಕ್ಷ ಲೀಟರ್ ಸಾಮರ್ಥ್ಯದ ಎರಡು ಮೇಲ್ಮಟ್ಟದ ಜಲ ಸಂಗ್ರಹಾಗಾರ ನಿರ್ಮಾಣಕ್ಕೆ ಮಂಗಳೂರು ನಗರ ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಶಿಲಾನ್ಯಾಸ ನೆರವೇರಿಸಿದರು.ತಿರುವೈಲು ವಾರ್ಡಿನ ಅಮೃತನಗರದಲ್ಲಿ ಅಂದಾಜು 1.60 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೀರಿನ ಟ್ಯಾಂಕ್‌ನಿಂದ ಅಮೃತನಗರ ಹಾಗೂ ಸುತ್ತಲ ಪ್ರದೇಶಗಳ ಮನೆಗಳಿಗೆ ಕುಡಿಯುವ ನೀರು ಪೂರೈಕೆಯಾದರೆ, ಪಚ್ಚನಾಡಿ ಸಂತೋಷನಗರದಲ್ಲಿ ಅಂದಾಜು 1.20 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಟ್ಯಾಂಕ್‌ನಿಂದ ಸ್ಥಳೀಯ ಪ್ರದೇಶಕ್ಕೆ ದಿನದ 24 ತಾಸು ನೀರು ಪೂರೈಕೆಯಾಗಲಿದೆ.ಕೇಂದ್ರ ಮತ್ತು ರಾಜ್ಯ ಸರ್ಕಾರದ ಒಟ್ಟು 792 ಕೋಟಿ ರೂ ವೆಚ್ಚದ ಯೋಜನೆ ಇದಾಗಿದೆ ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಗುರುತಿಸಲಾದ 48 ವಲಯಗಳಲ್ಲಿ ಇಂತಹ 21 ನೀರಿನ ಟ್ಯಾಂಕ್ ನಿರ್ಮಾಣಗೊಳ್ಳಲಿದೆ.
ಯೋಜನೆಗೆ ಸಂಬಂಧಿಸಿದಂತೆ ಸುರತ್ಕಲ್ ಹತ್ತಿರದ ಕೋಡಿಪಾಡಿ ಮತ್ತು ಎನ್‌ಐಟಿಕೆ ಬಳಿ ಎರಡು ನೀರಿನ ಟ್ಯಾಂಕ್ ನಿರ್ಮಾಣ ಕಾಮಗಾರಿ ಆರಂಭಗೊಂಡಿದೆ.ಸುವೇಜ್ ಇಂಡಿಯಾ ಕಂಪೆನಿಯು ಯೋಜನೆಯ ಗುತ್ತಿಗೆ ಪಡೆದುಕೊಂಡಿದೆ.ಚುನಾವಣೆಗೆ ಮುಂಚೆ ನೀಡಿರುವ ಭರವಸೆಯಂತೆ ತಾನು ಅಭಿವೃದ್ಧಿ ಕಾರ್ಯಕ್ಕೆ ಒತ್ತು ನೀಡಿದ್ದೇನೆ. ಅಭಿವೃದ್ಧಿ ವಿಷಯದಲ್ಲಿ ಜಾತಿ, ಮತ ಭೇದ ಮಾಡಲಾರೆ. ಪ್ರಸಕ್ತ ಕೋವಿಡ್ ಸನ್ನಿವೇಶದಲ್ಲೂ ತನ್ನ ಕ್ಷೇತ್ರದ ಅಭಿವೃದ್ಧಿಗಾಗಿ ಸರ್ಕಾರದಿಂದ ಸಾಕಷ್ಟು ಅನುದಾನ ತಂದಿದ್ದೇನೆ ಎಂದು ಶಾಸಕ ಡಾ. ಭರತ್ ಶೆಟ್ಟಿ ಹೇಳಿದರು.
ತಿರುವೈಲು ಹಾಗೂ ಪಚ್ಚನಾಡಿ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಮೇಯರ್ ದಿವಾಕರ ಪಾಂಡೇಶ್ವರ, ಉಪ-ಮೇಯರ್ ವೇದಾವತಿ, ಕಾರ್ಪೊರೇಟರ್‌ಗಳಾದ ಹೇಮಲತಾ ರಘು ಸಾಲ್ಯಾನ್, ಸಂಗೀತಾ ಆರ್ ನಾಯಕ್ ಹಾಗೂ ಉದ್ಯಮಿ ರಘು ಸಾಲ್ಯಾನ್, ಪೌರ ಸಮಿತಿ ಅಧ್ಯಕ್ಷ ವಿಠಲ ಸಾಲ್ಯಾನ್, ಸ್ಟ್ಯಾನಿ ಕುಟಿನ್ಹೋ, ರವೀಂದ್ರ ನಾಯಕ್ ಕುಡುಪು, ಸಂದೀಪ್ ಬೋಂದೆಲ್, ಪೂಜಾ ಪಿ ಪೈ, ಇಲಾಖಾ ಅಧಿಕಾರಿಗಳು, ಪಕ್ಷ ಕಾರ್ಯಕರ್ತರು, ನಾಗರಿಕರು ಉಪಸ್ಥಿತರಿದ್ದರು.
ಕೆಯುಐಡಿಎಫ್‌ಸಿ ಯೋಜನಾ ನಿರ್ದೇಶಕ ಮಂಜುನಾಥಯ್ಯ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಮಂಗಳೂರು/ಬೆಂಗಳೂರು: ‘ಕನ್ನಡದ ಬಿಗ್ ಬಾಸ್ ಸೀಸನ್ 11’ ಈಗ, 9ನೇ ವಾರಕ್ಕೆ ಕಾಲಿಟ್ಟಿದೆ. ಈ ವಾರದ ಹೊಸ ಟಾಸ್ಕ್ ಗೆ ಸ್ಪರ್ಧಿಗಳು ಬೆಚ್ಚಿಬಿದ್ದಿದ್ದಾರೆ. ಅದುವೇ ಬಿಗ್ ಬಾಸ್ ಸಾಮ್ರಾಜ್ಯ. ಈ ಸಾಮ್ರಾಜ್ಯದಲ್ಲಿ ಉಗ್ರಂ ಮಂಜು ಅವತಾರಕ್ಕೆ, ಇನ್ನುಳಿದ ಸ್ಪರ್ಧಿಗಳು ಸುಸ್ತಾಗಿದ್ದಾರೆ.
ಮಹಾರಾಜನಾಗಿರುವ ಉಗ್ರಂ ಮಂಜು ಆಸ್ಥಾನದಲ್ಲಿ, ಪ್ರಜೆಗಳೆಲ್ಲರೂ ಕಕ್ಕಾಬಿಕ್ಕಿಯಾಗಿದ್ದಾರೆ. ಈ ವಾರ ಮಂಜು ಮನೆಯ ಕ್ಯಾಪ್ಟನ್ ಆಗಿದ್ದಾರೆ. ಈಗಾಗೀ ಮಹಾರಾಜನಾಗಿ ಮೆರೆಯುವ ಅವಕಾಶ ಸಿಕ್ಕಿದೆ. ಮಂಜು ಅವರ ಸಾಮ್ರಾಜ್ಯದಲ್ಲಿ ತಪ್ಪು ಮಾಡಿದವರಿಗೆ ಸರಿಯಾದ ಶಿಕ್ಷೆಯನ್ನು ನೀಡುತ್ತಿದ್ದಾರೆ.
ಇದನ್ನೂ ಓದಿ: ಮಹಿಳೆಯರಿಗೆ ಮಾತ್ರ ಎಂಟ್ರಿ ; ಪುರುಷರು ಈ ಪಬ್‌ಗೆ ಬರುವಂತಿಲ್ಲ !!
ಇನ್ನೂ ದೊಡ್ಮನೆಯಲ್ಲಿ ಯಾವಾಗಲೂ ಸೌಂಡ್ ಮಾಡುತ್ತಿದ್ದ ಚೈತ್ರಾ ಅವರ ಬಾಯಿಗೆ ಆಲೂಗಡ್ಡೆ ತುರುಕುವಂತೆ ಮಹಾರಾಜರು ಆದೇಶಿಸಿದ್ದಾರೆ. ಮಹಾರಾಜರ ಅಪ್ಪನೆಯಂತೆ ಬಾಯಲ್ಲಿ ಆಲೂಗಡ್ಡೆ ಇಟ್ಟುಕೊಂಡಿದ್ದ ಚೈತ್ರಾ ಕೆಲಹೊತ್ತು ಸುಮ್ಮನೆ ಕೂತಿದ್ದರು. ನಂತರ ಇದನ್ನು ನಾನು ಖಂಡಿಸುತ್ತೇನೆ ಎಂದು ಸೌಂಡ್ ಮಾಡೋಕೆ ಪ್ರಾರಂಭಿಸಿದರು.
ಒಟ್ಟಿನಲ್ಲಿ ಮಂಜು ಅವರ ಆಡಳಿತಕ್ಕೆ ಪ್ರಜೆಗಳು ಉಸಿರಾಡುವುದಕ್ಕೂ ಭಯ ಪಡುತ್ತಿದ್ದಾರೆ. ಅಷ್ಟಕ್ಕೂ ಮಂಜು ಆಡಳಿತ ಇಂದಿನ ಸಂಚಿಕೆಯಲ್ಲಿ ನೋಡಬಹುದು.
ಮಂಗಳೂರು : ಈ ವರ್ಷದ ಕಂಬಳ ಸೀಸನ್ ನ ಮೊದಲ ಕಂಬಳ ನವೆಂಬರ್ 22 ಮತ್ತು 23 ರಂದು ಸಿದ್ದಕಟ್ಟೆಯಲ್ಲಿ ನಡೆಯಿತು. ಇದು ಎರಡನೇ ವರ್ಷದ ಸಿದ್ಧಕಟ್ಟೆ ಕೊಡಂಗೆ ‘ವೀರ – ವಿಕ್ರಮ’ ಜೋಡುಕರೆ ಕಂಬಳ ಆಗಿದ್ದು, ಬರೋಬ್ಬರಿ 166 ಜೊತೆ ಕೋಣಗಳು ಭಾಗವಹಿಸಿದ್ದವು. ಕನೆಹಲಗೆ 6 ಜೊತೆ, ಅಡ್ಡಹಲಗೆ 6 ಜೊತೆ, ಹಗ್ಗ ಹಿರಿಯ 15 ಜೊತೆ, ನೇಗಿಲು ಹಿರಿಯ 34 ಜೊತೆ, ಹಗ್ಗ ಕಿರಿಯ 27 ಜೊತೆ, ನೇಗಿಲು ಕಿರಿಯ 78 ಜೊತೆ ಕೋಣಗಳು ಪಾಲ್ಗೊಂಡಿದ್ದವು.
ಪ್ರಶಸ್ತಿ ವಿವರ :
ಕನೆಹಲಗೆ ವಿಭಾಗದಲ್ಲಿ ಬೋಳಾರ ತ್ರಿಶಾಲ್ ಕೆ. ಪೂಜಾರಿ ಪ್ರಥಮ, ವಾಮಂಜೂರು ತಿರುವೈಲು ಗುತ್ತು ಅಭಿಷೇಕ್ ನವೀನ್ ಚಂದ್ರ ಆಳ್ವ ದ್ವಿತೀಯ ಸ್ಥಾನ ಪಡೆದರು. ಅಡ್ಡ ಹಲಗೆ ವಿಭಾಗದಲ್ಲಿ ನಾರಾವಿ ಯುವರಾಜ್ ಜೈನ್ ಪ್ರಥಮ ಹಾಗೂ ಆಲದ ಪದವು ಮೇಗಿನ ಮನೆ ಅಜ್ಜಾಡಿ ಬಾಬು ರಾಜೇಂದ್ರ ಶೆಟ್ಟಿ ‘ಬಿ’ ಅವರು ದ್ವಿತೀಯ ಸ್ಥಾನಿಯಾದರು.
ಹಗ್ಗ ಹಿರಿಯ ವಿಭಾಗದಲ್ಲಿ ನಂದಳಿಕೆ ಶ್ರೀಕಾಂತ್ ಭಟ್ ‘ಎ’ ಕೋಣಗಳು ಪ್ರಥಮ ಹಾಗೂ ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ ದ್ವಿತೀಯ ಸ್ಥಾನ ಪಡೆದರು. ಹಗ್ಗ ಕಿರಿಯ ವಿಭಾಗದಲ್ಲಿ ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ. ಶೆಟ್ಟಿ ಪ್ರಥಮ, ಸುರತ್ಕಲ್ ಪಾಂಚಜನ್ಯ ಯೋಗೀಶ್ ಪೂಜಾರಿ ‘ಎ’ ಕೋಣಗಳು ದ್ವಿತೀಯ ಸ್ಥಾನ ಪಡೆದಿವೆ.
ನೇಗಿಲು ಹಿರಿಯ ವಿಭಾಗದಲ್ಲಿ ಹೊಸ್ಮಾರು ಸೂರ್ಯ ಶ್ರೀ ರತ್ನ ಸದಾಶಿವ ಶೆಟ್ಟಿ ಪ್ರಥಮ ಹಾಗೂ ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ ದ್ವಿತೀಯ ಸ್ಥಾನ ಗೆದ್ದಿದ್ದಾರೆ. ನೇಗಿಲು ಕಿರಿಯ ವಿಭಾಗದಲ್ಲಿ ಮುನಿಯಾಲು ಉದಯ ಕುಮಾರ್ ಶೆಟ್ಟಿ ಪ್ರಥಮ ಹಾಗೂ ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ ‘ಎ’ ಕೋಣಗಳು ದ್ವಿತೀಯ ಸ್ಥಾನ ಪಡೆದಿವೆ.
ಉಡುಪಿ : ಉಡುಪಿ ಜಿಲ್ಲೆಯ ಅರಣ್ಯದ ಅಂಚಿನ ಪ್ರದೇಶಗಳಲ್ಲಿ ಚಿರತೆಯ ಕಾಟ ಜೋರಾಗಿದೆ. ಆಹಾರ ಅರಸಿ ಬರುವ ಚಿರತೆಗಳು ಗ್ರಾಮಸ್ಥರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿವೆ.
ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಎರ್ಮಂಜಪಲ್ಲ ಬಳಿಯ ಬಾಗಿ ಎನ್ನುವವರ ಮನೆಯ ಬಾವಿಗೆ ರಾತ್ರಿ ಚಿರತೆಯೊಂದು ಬಿದ್ದಿತ್ತು. ಬಾವಿಯ ಪೊಟರೆಯಲ್ಲಿ ಅವಿತು ಕುಳಿತುಕೊಂಡಿದ್ದ ಚಿರತೆಯನ್ನು ಮೇಲಕ್ಕೆ ಬರುವಂತೆ ಮಾಡಲು, ಅರಣ್ಯ ಇಲಾಖೆ ಹರ ಸಾಹಸ ಪಡುವಂತಾಯ್ತು.
ಹಲವು ಗಂಟೆಗಳ ಕಾರ್ಯಾಚರಣೆ ಬಳಿಕ ಬೋನಿನ ಮೂಲಕ ಚಿರತೆ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ಸು ಕಂಡಿದ್ದಾರೆ. ಅರಣ್ಯ ಇಲಾಖೆಯ ಕಾರ್ಯ ದಕ್ಷತೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.