Saturday, November 27, 2021

ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದ ಆರೋಗ್ಯಾಧಿಕಾರಿಗೆ ನಿಷ್ಕರುಣೆ ತೋರಿದ ಶಾಸಕ ಡಿಎಸ್ ಸುರೇಶ್.!

ಚಿಕ್ಕಮಗಳೂರು : ಕೋವಿಡ್ ವಾರಿಯರ್ ಆಗಿದ್ದ ಹಿರಿಯ ಆರೋಗ್ಯಾಧಿಕಾರಿಯೊಬ್ಬರು ಬೈಕ್ ನಲ್ಲಿ ಸಂಚರಿಸುತ್ತಿದ್ದಾಗ ತರೀಕೆರೆಯ ಲಕ್ಕವಳ್ಳಿ ಕ್ರಾಸ್ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದರು.ಸ್ಥಳೀಯರು ಆ್ಯಂಬುಲೆನ್ಸ್ ಗೆ ಕರೆ ಮಾಡಿ ತಿಳಿಸಿದ್ದಾರೆ ಆದರೆ ಅರ್ಧ ಗಂಟೆಯಾದ್ರೂ ಆ್ಯಂಬುಲೆನ್ಸ್ ಸ್ಥಳಕ್ಕಾಗಮಿಸಿರಲಿಲ್ಲ ಇದೇ ವೇಳೆ ಅದೇ ಮಾರ್ಗವಾಗಿ ಸಂಚರಿಸುತ್ತಿದ್ದ ಸ್ಥಳೀಯ ಬಿಜೆಪಿ ಶಾಸಕ ಡಿಎಸ್ ಸುರೇಶ್ ಆಪಘಾತವಾದ ಸ್ಥಳದಲ್ಲಿ ವಾಹನ ನಿಲ್ಲಿಸಿ ಸ್ಥಳೀಯರಿಂದ ಮಾಹಿತಿ ಪಡೆದುಕೊಂಡಿದ್ದಾರೆ.ಆದರೆ ಆ್ಯಂಬುಲೆನ್ಸ್ ಬಂದಿಲ್ಲ ತೀವ್ರ ರಕ್ತಸ್ರಾವವಾಗಿದೆ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಎಂದು ಸ್ಥಳೀಯರು ಪರಿ ಪರಿಯಾಗಿ ಕೇಳಿಕೊಂಡರೂ ಶಾಸಕರು ಕಾರಿನಿಂದ ಇಳಿಯದೇ ನಿರ್ದಯಿಯಂತೆ ಅಲ್ಲಿಂದ ಕಾಲ್ಕಿತ್ತಿದ್ದಾರೆ.ಅರ್ಧ ಗಂಟೆ ಬಳಿಕ ಆ್ಯಂಬುಲೆನ್ಸ್ ಬಂದು ಅಧಿಕಾರಿಯನ್ನು ಕರೆದೊಯ್ಯಿತಾದ್ರೂ ಮಾರ್ಗ ಮಧ್ಯದಲ್ಲಿ ತೀವ್ರ ರಕ್ತಸ್ರಾವದಿಂದಾಗಿ ಅಧಿಕಾರಿ ಕೊನೆಯುಸಿರೆಳೆದಿದ್ದಾರೆ.

ಇದರಿಂದ ರೊಚ್ಚಿಗೆದ್ದ ಸ್ಥಳೀಯರು ಶಾಸಕ ಡಿ.ಎಸ್ ಸುರೇಶ್ ಅವರ ದುರ್ವರ್ತನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...