Sunday, December 4, 2022

ಶಾಸಕ ಜಿಟಿ ದೇವೇಗೌಡರ ಕ್ಯೂಟ್ ಮೊಮ್ಮಗಳು ಇನ್ನಿಲ್ಲ..!

ಬೆಂಗಳೂರು: ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿಟಿ ದೇವೇಗೌಡರ ಮೊಮ್ಮಗಳು ಅನಾರೋಗ್ಯದಿಂದ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.


ಪುಟ್ಟ ಕಂದಮ್ಮ ಗೌರಿ ಮೃತಪಟ್ಟ ಮಗು.


ಜಿಟಿ ದೇವೇಗೌಡರ ಮೊಮ್ಮಗಳಾದ ಗೌರಿ ಕಳೆದ 6 ತಿಂಗಳಿಂದ ಮೂಳೆ ಕ್ಯಾನ್ಸರ್‌ನಿಂದ ಬಳಲುತ್ತಿದ್ದಳು.

ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ.


ಮಗುವಿನ ಸಾವಿಗೆ ಮಾಜಿ ಸಿಎಂ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಂತಾಪವನ್ನು ಸೂಚಿಸಿ ಟ್ವೀಟ್ ಮಾಡಿದ್ದಾರೆ.

LEAVE A REPLY

Please enter your comment!
Please enter your name here

Hot Topics