BELTHANGADY
ಸನತ್ ಶೆಟ್ಟಿ ಮನೆಗೆ ಶಾಸಕ ಹರೀಶ್ ಪೂಂಜಾ ಭೇಟಿ : ಸರ್ಕಾರದ 5 ಲಕ್ಷ ರೂ. ಪರಿಹಾರದ ಚೆಕ್ ವಿತರಣೆ..
ಸನತ್ ಶೆಟ್ಟಿ ಮನೆಗೆ ಶಾಸಕ ಹರೀಶ್ ಪೂಂಜಾ ಭೇಟಿ : ಸರ್ಕಾರದ 5 ಲಕ್ಷ ರೂ. ಪರಿಹಾರದ ಚೆಕ್ ವಿತರಣೆ..
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಎಳನೀರಿನ ಬಂಗಾರ ಪಲ್ಕೆಯ ಗುಡ್ಡ ಕುಸಿತದಲ್ಲಿ ಮೃತಪಟ್ಟ ಸನತ್ ಶೆಟ್ಟಿ ಮನೆಗೆ ಸ್ಥಳಿಯ ಶಾಸಕರಾದ ಹರೀಶ್ ಪೂಂಜಾ ಅವರು ಇಂದು ಭೇಟಿ ನೀಡಿ ಮನೆಯ ಸದಸ್ಯರಿಗೆ ಸಾಂತ್ವನ ಹೇಳಿದರು.
ಇದೇ ಸಂದರ್ಭ ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ 5ಲಕ್ಷದ ಚೆಕ್ಕನ್ನು ಸನತ್ ಶೆಟ್ಟಿ ಅವರ ಹೆತ್ತವರಿಗೆ ಹಸ್ತಾಂತರಿಲಾಯಿತು.
ಲಾಯಿಲ ಗ್ರಾಮದ ಕಾಶಿಬೆಟ್ಟು ವಾಸುದೇವ ಶೆಟ್ಟಿ ಅವರ ಪುತ್ರ 20 ವರ್ಷದ ಸನತ್ ಶೆಟ್ಟಿ ಬಂಗಾರಪಲ್ಕೆ ಜಲಪಾತ ವೀಕ್ಷಣೆಗೆ ಹೋದ ಸಂದರ್ಭ ಪಕ್ಕದ ಗುಡ್ಡ ಜರಿದುಮಣ್ಣಿನ ಅಡಿಗೆ ಬಿದ್ದು ಕಣ್ಮರೆಯಾಗಿದ್ದರು.
ಜನವರಿ 25ರಂದು ಈ ದುರ್ಘಟನೆ ನಡೆದಿತ್ತು. ಸತತ 22 ದಿನಗಳ ಕಾರ್ಯಾಚರಣೆ ಬಳಿಕ ನಿನ್ನೆ ಸನತ್ ಶೆಟ್ಟಿ ಅವರ ಮೃತ ದೇಹ ಮತ್ತೆಯಾಗಿತ್ತು.
ದೇಹ ಮಣ್ಣು ಕಲ್ಲುಬಂಡೆಯಡಿ ಸಿಲುಕಿದ್ದರಿಂದ ಸತತ 22 ದಿನಗಳ ಕಾರ್ಯಾಚರಣೆ ಬಳಿಕ ಪತ್ತೆಯಾಗಿತ್ತು. ಬಂಡೆಕಲ್ಲು ಒಡೆದು ಜೆಸಿಬಿ, ಹಿಟಾಚಿ 22 ದಿನ ಸುಮಾರು 30 ಅಡಿಗಳಷ್ಟು ಆಳದ ಮಣ್ಣು ತೆರವು ಕಾರ್ಯ ಸತತ ನಡೆದಿತ್ತು.
ವಿದ್ಯುತ್ ಸಂಪರ್ಕವಾಗಲಿ, ಯಂತ್ರೋಪಕರಣ ಬಳಸಲು ಸಾಧ್ಯವಿಲ್ಲದ ದುರ್ಗಮ ಸ್ಥಳವಾದ್ದರೂ ಜಿಲ್ಲಾಡಳಿತ, ಶಾಸಕರು, ಸ್ಥಳೀಯರು, ಸಂಘ ಸಂಸ್ಥೆಗಳ ಸಹಕಾರದಿಂದ ದೇಹ ಶೋಧ ಕಾರ್ಯದ ಎಲ್ಲ ಪ್ರಯತ್ನಗಳು ನಡೆದಿದ್ದವು. ಒಂದೆರಡು ಸಲ ವಾಸನೆ ಬಂದಿತ್ತಾದರೂ ದೇಹ ಪತ್ತೆಯಾಗದೆ ಪ್ರಕರಣ ಕಗ್ಗಂಟಾಗಿತ್ತು.
BELTHANGADY
ಮುಂದಿನ ನಾಲ್ಕು ದಿನ ಕರಾವಳಿಯಲ್ಲಿ ಮಳೆಯ ಸಿಂಚನ..! ಹವಾಮಾನ ಇಲಾಖೆ ಮುನ್ಸೂಚನೆ
ಮಂಗಳೂರು: ಕಳೆದ ಕೆಲವು ದಿನಗಳಿಂದ ಸುಡು ಬಿಸಿಲಿಗೆ ಬಸವಳಿದು ಜನರು ಕಂಗಾಲಾಗಿದ್ದು, ಕೆಲವೊಂದು ಕಡೆ ವರುಣನ ಕೃಪೆಗಾಗಿ ಜನರು ದೇವರಿಗೆ ಪ್ರಾರ್ಥನೆ ಸಲ್ಲಿಸಿ ಪೂಜಾ ಕಾರ್ಯಗಳನ್ನು ನೆರವೇರಿಸುತ್ತಿದ್ದಾರೆ.
ಈ ನಡುವೆ ಬಿಸಿ ಶಾಖದಿಂದ ಕಂಗೆಟ್ಟಿದ್ದ ರಾಜಧಾನಿ ಬೆಂಗಳೂರಿನ ಜನರು ನಿನ್ನೆ ಕೆಲವೆಡೆ ಸುರಿದ ಮಳೆಯಿಂದಾಗಿ ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಇನ್ನು ಬೆಂಗಳೂರಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಅಲ್ಲಲ್ಲಿ ಅಲ್ಪಾ ಸ್ವಲ್ಪ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ಇದೇ ವೇಳೆ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ.
ಮುಂದೆ ಓದಿ..; ಈ ಸರ್ವಾಧಿಕಾರಿಗೆ ಬೇಕಂತೆ ವರ್ಷಕ್ಕೆ 25 ಕನ್ಯೆಯರು..!! ಏನಿದು ಕಾಮಕಾಂಡ?
ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಹಗುರ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆಯ ಮೂಲಗಳು ತಿಳಿಸಿವೆ. ಅದರಲ್ಲೂ ಬೆಂಗಳೂರಿನಲ್ಲಿ ಗುಡುಗು, ಮಿಂಚಿನ ಜತೆಗೆ ಅಲ್ಲಲ್ಲಿ ಚದುರಿದ ಮಳೆ ಬೀಳುವ ಸಂಭವವಿದೆ. ಮೇ 6 ಮತ್ತು 7 ರಂದು ಸಾಧಾರಣ ಅಥವಾ ಅದಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಿಜಾಪುರ, ಬಾಗಲಕೋಟೆ, ಕೊಪ್ಪಳ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳವರೆಗೆ ಬಿಸಿಗಾಳಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
BELTHANGADY
ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು
ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು(59 ವ) ಅವರು ಹೃದಯಾಘಾತದಿಂದ ಮೇ.1ರಂದು ರಾತ್ರಿ ನಿಧನರಾಗಿದ್ದಾರೆ.
ಮುಂದೆ ಓದಿ..;ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ
ಕೋಟದಲ್ಲಿ ಮೇ.1ರಂದು ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಕುಕ್ಕಿತ್ತಾಯನ ವೇಷ ಹಾಕಿದ್ದರು. ಮೇಳದ ಬಳಿಕ ಚೌಕಿಯಲ್ಲಿ ಬಣ್ಣ ತೆಗೆಯುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.
ನಾರಾಯಣ ಮಯ್ಯು ಹಾಗೂ ಲಕ್ಷ್ಮೀ ದಂಪತಿ ಪುತ್ರನಾಗಿದ್ದು 1964ರಲ್ಲಿ ಪುತ್ತೂರಿನ ಸೇಡಿಯಾಪಿನಲ್ಲಿ ಜನಿಸಿದರು. ತನ್ನ 18 ನೇ ವಯಸ್ಸಿನಲ್ಲಿ ಯಕ್ಷಗಾನದಲ್ಲಿ ಬಣ್ಣ ಹಚ್ಚಲು ಆರಂಭಿಸಿದ ಇವರು ಸ್ತ್ರೀ ವೇಷ, ರಾಜ ವೇಷ, ಪುಂಡು ವೇಷಗಳಲ್ಲಿ ನಿಸ್ಸೀಮರಾಗಿದ್ದರು. ಇನ್ನು ಮಾಲಿನಿ, ಚಿತ್ರಾಂಗದೆ, ಮೋಹಿನಿ, ದಾಕ್ಷಾಯಿನಿ, ಪ್ರಮೀಳೆ, ಶ್ರೀ ದೇವಿ, ಸೀತೆ, ದೇವೆಂದ್ರ, ದುಶ್ಯಾಸನ ಮೊದಲಾದ ಪಾತ್ರಗಳ ಅಭಿನಯದಲ್ಲಿಯೂ ಸೈ ಎನಿಸಿಕೊಂಡಿದ್ದರು. ಮೃತರು ಆರೋಗ್ಯ ಸಹಾಯಕಿಯಾಗಿರುವ ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.
BELTHANGADY
ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ
ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.
ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?
ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
- DAKSHINA KANNADA3 days ago
ಸುಬ್ರಹ್ಮಣ್ಯ: ಕೆಎಸ್ಸಾರ್ಟಿಸಿ ಬಸ್ಗಳ ಹಗಲು ದರೋಡೆ..! ಏನಿದು ಘಟನೆ?
- FILM5 days ago
ಬಿಗ್ ಬಾಸ್ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ನಮ್ರತಾ ಗೌಡ!
- dehali4 days ago
ನಾಯಿಗಳಿಗೂ ಬಂತು ಆಧಾರ್ ಕಾರ್ಡ್.!! ಇನ್ಮುಂದೆ ನಾಯಿಗೂ ಸ್ಕ್ಯಾನ್ ಕಾರ್ಡ್..! ಏನಿದು?
- BELTHANGADY4 days ago
ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು