Connect with us

DAKSHINA KANNADA

Manglore: ಪಟಾಕಿ ಮಾರಾಟ ಮಳಿಗೆ ನಿಯಮಾವಳಿಗೆ  ಶಾಸಕ ಕಾಮತ್‌ ಆಕ್ರೋಶ..!

Published

on

ಮಂಗಳೂರಿನಲ್ಲಿ ದೀಪಾವಳಿ ಸಂದರ್ಭ ಪಟಾಕಿ ಮಾರಾಟ ಮಳಿಗೆ ತೆರೆಯಲು ಬೈಕಂಪಾಡಿ ಎಪಿಎಂಸಿ, ಕೇಂದ್ರ ಮೈದಾನ, ಪಚ್ಚನಾಡಿ, ಬೋಂದೇಲ್ ಸೇರಿದಂತೆ ಕೆಲವೇ ಮೈದಾನಗಳಲ್ಲಿ ಸ್ಥಳ ಗುರುತಿಸಿರುವ ಬಗ್ಗೆ ಶಾಸಕ ಡಿ. ವೇದವ್ಯಾಸ ಕಾಮತ್‌ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಪಟಾಕಿ ಮಾರಾಟಕ್ಕೆ ಸಂಬಂಧಿಸಿ ಹೊಸ ನಿಯಮಾವಳಿ ರೂಪೀಕರಿಸಿದ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ದೀಪಾವಳಿಯ ಸಂದರ್ಭದಲ್ಲಿಯೇ ಇಲ್ಲ ಸಲ್ಲದ ನಿಯಮಾವಳಿಗಳನ್ನು ಹೇರಿ ರಾಜ್ಯದ ಕಾಂಗ್ರೆಸ್‌ ಸರಕಾರ ಗೊಂದಲ ಸೃಷ್ಟಿಸಿ ಹಿಂದೂಗಳ ಭಾವನೆಗಳಿಗೆ ಘಾಸಿ ಉಂಟು ಮಾಡುತ್ತಿದೆ, ಇದು ಹಿಂದೂ ವಿರೋಧಿ ನೀತಿಯಾಗಿದೆ. ಹಿಂದೂ ಧಾರ್ಮಿಕ ಆಚರಣೆಗಳಿಗೆ ಹಂತ ಹಂತವಾಗಿ ಕಡಿವಾಣ ಹಾಕುವುದು ಕಾಂಗ್ರೆಸಿನ ಉದ್ದೇಶ ಎಂದು ಆರೋಪಿಸಿದರು.

ಹಿಂದೂಗಳ ಹಬ್ಬದ ಸಮಯದಲ್ಲಿ ದಿಢೀರನೆ ಚಾಲನೆಗೆ ಬರುವ ನಿಯಮಗಳು ಮತ್ತು ಕಡಿವಾಣಗಳು ಇನ್ನಿತರ ಯಾವುದೇ ಧರ್ಮಗಳ ಹಬ್ಬದ ಸಂದರ್ಭದಲ್ಲಿ ಕಂಡು ಬರುವುಲ್ಲ. ಅದಕ್ಕೆ ಕಾಂಗ್ರೆಸ್ ಸರಕಾರಕ್ಕೆ ಧೈರ್ಯವೂ ಇಲ್ಲ. ಅವರ ಪೌರುಷ ಏನಿದ್ದರೂ ಕೇವಲ ಹಿಂದುಗಳ ಮೇಲೆ ಮಾತ್ರ. ಹಿಂದೂಗಳಿಗೆ ಏನು ಬೇಕಾದರೂ ಅನ್ಯಾಯ ಮಾಡಿ ಕೆಲವೊಂದಿಷ್ಟು ಗ್ಯಾರಂಟಿ ಯೋಜನೆಗಳನ್ನು ಕೊಟ್ಟರೆ ಅವರು ಸುಮ್ಮನಾಗುತ್ತಾರೆ ಎಂದು ಕಾಂಗ್ರೆಸ್ ಸರಕಾರ ಭಾವಿಸಿದ್ದರೆ ಅದು ಮೂರ್ಖತನ. ಪಟಾಕಿ ಮಳಿಗೆ ಕುರಿತಂತೆ ಹೊಸ ನಿಯಮಾವಳಿ ರಚಿಸಿರುವುದು ರಾಜ್ಯದ ಕಾಂಗ್ರೆಸ್ ಸರಕಾರದ ವೈಫಲ್ಯಗಳನ್ನು ಮರೆ ಮಾಚಲು ಮಾಡಿರುವ ಯತ್ನವಾಗಿದೆ ಎಂದು ಆಪಾದಿಸಿದರು. ಮಂಗಳೂರಿನಲ್ಲಿ ಈಗಾಗಲೇ ಜಿಲ್ಲಾಡಳಿತ ಸೂಚಿಸಿರುವ ಕೇವಲ ಮೂರ್ನಾಲ್ಕು ಮೈದಾನಗಳಲ್ಲದೆ ಹೆಚ್ಚುವರಿ ಮೈದಾನಗಳಲ್ಲಿ ತಾತ್ಕಾಲಿಕ ಪಟಾಕಿ ಮಳಿಗೆ ಹಾಕಲು ಅವಕಾಶ ಮಾಡಿ ಕೊಡ ಬೇಕೆಂದು ಒತ್ತಾಯಿಸಿದರು.

 

 

DAKSHINA KANNADA

ಅತ್ತಾವರ ಅಪಾರ್ಟ್‌ಮೆಂಟ್‌ನಲ್ಲಿ ಆಕಸ್ಮಿಕ ಬೆಂಕಿ – ವೃದ್ಧೆ ಸಾವು..!

Published

on

ಮಂಗಳೂರು: ಮಂಗಳೂರಿನ ಅತ್ತಾವರದ ಅಪಾರ್ಟ್‌ ಮೆಂಟ್‌ವೊಂದರಲ್ಲಿ ಇಂದು ಬೆಳಗ್ಗೆ ನಡೆದ ಆಕಸ್ಮಿಕ ಬೆಂಕಿ ಅನಾಹುತದಲ್ಲಿ ಗಂಭೀರ ಗಾಯಗೊಂಡಿದ್ದ ವೃದ್ಧೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ‌ಮಾಹಿತಿ ನೀಡಿದ್ದಾರೆ.

ಶಾಹಿನಾ ನುಸ್ಬಾ(58) ಸಾವನ್ನಪ್ಪಿದ ವೃದ್ಧೆ ಎಂದು ಗುರುತಿಸಲಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮುಂಜಾನೆ 4 ಗಂಟೆಯ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದ್ದು, ಐವರು ಮಕ್ಕಳ ಸಹಿತ ಎಂಟು ಮಂದಿ ಅಪಾಯದಿಂದ ಪಾರಾಗಿದ್ದಾರೆ.

ಅನಾರೋಗ್ಯದಿಂದಾಗಿ ಬೆಡ್ ರೂಮ್ ನಲ್ಲೇ ಇದ್ದ ವೃದ್ಧ ಮಹಿಳೆ ದಟ್ಟ ಹೊಗೆಯಿಂದಾಗಿ ತಕ್ಷಣ ಹೊರಬರಲಾಗದೇ ಉಸಿರುಗಟ್ಟಿ ಚಿಂತಾಜನಕ ಸ್ಥಿತಿಯಲ್ಲಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

Continue Reading

DAKSHINA KANNADA

ನ.30ರಂದು ಶ್ರೀ ಆದಿ ಕ್ಷೇತ್ರ ಜಾರದಲ್ಲಿ ನಿಧಿ ಕುಂಭ ಮತ್ತು ಶಿಲಾನ್ಯಾಸ ಕಾರ್ಯಕ್ರಮ

Published

on

ಮಂಗಳೂರು: ಧಾರ್ಮಿಕ ಕ್ಷೇತ್ರ ಜಾರದಲ್ಲಿ ನ. 30ರಂದು ಬೆಳಿಗ್ಗೆ 8 ಗಂಟೆಯಿಂದ ಜಾರಂದಾಯ ಬಂಟ ಪರಿವಾರ ಸಾನಿಧ್ಯ ಮತ್ತು ಕ್ಷೇತ್ರ ಕಲ್ಲುರ್ಟಿ ಸಾನಿಧ್ಯಗಳ ನಿಧಿ ಕುಂಭ ಮತ್ತು ಶಿಲಾನ್ಯಾಸ ಕಾರ್ಯಕ್ರಮ ವಿಜೃಂಭಣೆಯಿಂದ ಜರಗಲಿದೆ ಎಂದು ದೈವಜ್ಞ ಪ್ರಕಾಶ ವಿ. ಹೊಳ್ಳ ಶಕ್ತಿನಗರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

“ಕಾರ್ಯಕ್ರಮದ ಯಶಸ್ಸಿಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು ಕ್ಷೇತ್ರದ ತಂತ್ರಿಗಳಾದ ಕೊಂರ್ಗಿಬೈಲು ನಾರಾಯಣ ಮಯ್ಯರ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನೆರವೇರಲಿದೆ. ಖ್ಯಾತ ವಾಸ್ತು ತಜ್ಞಮಹೇಶ್ ಮುನಿಯಂಗಳ ಇವರ ವಾಸ್ತು ವಿನ್ಯಾಸದೊಂದಿಗೆ ಸುಮಾರು 12 ರಿಂದ 15 ಕೋಟಿ ವೆಚ್ಚದಲ್ಲಿ ಹಂತ ಹಂತವಾಗಿ ಕ್ಷೇತ್ರ ಜೀರ್ಣೋದ್ಧಾರ ನಡೆಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡಿದೆ. ಈಗಾಗಲೇ ನವೆಂಬರ್ 11ರಂದು ಜಾರಚಾವಡಿಯಲ್ಲಿ ಪ್ರಧಾನ ದೈವ ಜಾರಂದಾಯ  ಬಂಟ ಮಾಯಾಂದಾಲ್ ದೈವಗಳ ನೇಮೋತ್ಸವ ಶ್ರದ್ಧಾ ಭಕ್ತಿಯಿಂದ ನೆರವೇರಿದೆ. ನವೆಂಬರ್ 30ರಂದು
ಬೆಳಿಗ್ಗೆ 9.00 ಗಂಟೆಗೆ ಸರಳ ಜುಮಾದಿ ಬಂಟ ಹಾಗೂ ಪರಿವಾರ ದೈವಗಳಿಗೆ ಹಾಗೂ 11.00 ಗಂಟೆಗೆ ಶ್ರೀ ಜಾರ ಆದಿ ಕ್ಷೇತ್ರದ ಗಿರಿಯಲ್ಲಿ ಗ್ರಾಮ ದೈವ ಶ್ರೀ ಬಂಟ ಸರಳ ಜುಮಾದಿ ಬಂಟ ಮತ್ತು ಪರಿವಾರ ದೈವಗಳಿಗೆ ನಿಧಿ ಕುಂಬ ಮತ್ತು ಶಿಲಾನ್ಯಾಸ ಕಾರ್ಯಕ್ರಮ ನೆರವೇರಲಿದೆ. ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೆ  ಭಕ್ತಾಧಿಗಳು ತನು ಮನ ಧನಗಳಿಂದ ಸಹಕರಿಸಬೇಕು” ಎಂದು ಮನವಿ ಮಾಡಿದರು.

ಬಳಿಕ ಮಾತಾಡಿದ ಕ್ಷೇತ್ರದ ತಂತ್ರಿಗಳಾದ ಕೊಂರ್ಗಿಬೈಲು ನಾರಾಯಣ ಮಯ್ಯ ಅವರು, “ಶ್ರೀ ಆದಿ ಕ್ಷೇತ್ರ ಜಾರ ಇದು ತುಳುನಾಡಿನ ಕಾರ್ಣಿಕ ಕ್ಷೇತ್ರಗಳಲ್ಲಿ ಒಂದಾಗಿದೆ. ಸಾನಿಧ್ಯ ಪ್ರಧಾನ ದೈವಗಳಾಗಿ ಶ್ರೀ ಉಳ್ಳಾಯ, ಶ್ರೀ ಜಾರಂದಾಯ ಬಂಟ, ಸರಳ ಧೂಮಾವತಿ ಬಂಟ, ಕಾಂತೇರಿ ಧೂಮಾವತಿ ಬಂಟ, ಮಾಯಾಂದಾಲ್ ದೈವ, ಪಿಲಿ ಚಾಮುಂಡಿ, ಬಬ್ಬರ್ಯ ದೈವಗಳು ಕ್ಷೇತ್ರ ಹಾಗೂ ಗ್ರಾಮದ ಮಾಗಣೆಯ ದೈವಗಳಾಗಿವೆ. ಕ್ಷೇತ್ರದ ಆದಿ ದೈವಗಳಾಗಿ ಕಲ್ಲುರ್ಟಿ, ಪಟ್ಟದ ಅಣ್ಣಪ್ಪ ಸ್ವಾಮಿ, ಸ್ಥಳದ ಪಂಜುರ್ಲಿ, ನಾಗಬ್ರಹ್ಮ ಪ್ರಧಾನ ಸಾನಿಧ್ಯಗಳಾಗಿವೆ” ಎಂದರು. ಸುದ್ದಿಗೋಷ್ಠಿಯಲ್ಲಿ ದೈವಜ್ಞ ಶ್ರೀ ಪ್ರಕಾಶ ವಿ. ಹೊಳ್ಳ ಶಕ್ತಿನಗರ, ಕ್ಷೇತ್ರದ ತಂತ್ರಿಗಳಾದ ಕೊಂರ್ಗಿಬೈಲು ನಾರಾಯಣ ಮಯ್ಯರ , ಕ್ಷೇತ್ರದ ಗಡಿ ಪ್ರಧಾನರಾದ ಜತ್ತಿ ಪೂಜಾರಿ ಜಾರ, ಅಧ್ಯಕ್ಷರಾದ ಉದಯಶಂಕರ ಜಾರಮನೆ, ಕಾರ್ಯದರ್ಶಿ ಎಂ. ವಿಠಲ್ ಪೂಜಾರಿ ಕುಕ್ಕುದಡಿ, ಕೋಶಾಧಿಕಾರಿ ಜೀವನ್ ದಾಸ್ ಜಾರ ಮತ್ತಿತರರು ಉಪಸ್ಥಿತರಿದ್ದರು.

Continue Reading

DAKSHINA KANNADA

Mangaluru: ಬೆಳ್ಮ ಬೋಲ್ದನ್‌ ಕುಟುಂಬಿಕರು ತರವಾಡು ಮನೆಯಲ್ಲಿ ಕೋಲೋತ್ಸವ

Published

on

ಮಂಗಳೂರು: ಕೊಣಾಜೆ ಬೆಳ್ಮದಲ್ಲಿರುವ ಬೋಲ್ದನ್‌ ಕುಟುಂಬಿಕರ ತರವಾಡು ಮನೆಯಲ್ಲಿ ಕಲ್ಲುರ್ಟಿ, ಪಂಜುರ್ಲಿ, ಗುಳಿಗ ಮೂರನೇ ವರ್ಷದ ಕೋಲೋತ್ಸವ ಭಾನುವಾರ ರಾತ್ರಿ ಸಂಭ್ರಮದಿಂದ ಜರುಗಿತು.

ಭಾನುವಾರ ಬೆಳಿಗ್ಗೆ ಪ್ರಶಾಂತ್ ಉಡುಪ ಪೌರೋಹಿತ್ಯದಲ್ಲಿ ನಾಗತಂಬಿಲ, ಗಣಹೋಮ ನಡೆದ ಬಳಿಕ ಶ್ರೀ ವೆಂಕಟ್ರಮಣ ದೇವರ ಮುಡಿಪು ಕಟ್ಟುವಿಕೆಯಲ್ಲಿ ಸರ್ವ ಕುಟುಂಬಿಕರು ಪಾಲ್ಗೊಂಡು ದೇವತಾ ಕಾರ್ಯದಲ್ಲಿ ಭಾಗವಹಿಸಿದರು. ಮಧ್ಯಾಹ್ನ ಅನ್ನಸಂಪರ್ತಣೆ ನಡೆಯಿತು.

ಅದೇ ದಿನ ರಾತ್ರಿ 7.30ಕ್ಕೆ ದೈವದ ಭಂಡಾರ ಏರಿ ಬಳಿಕ ಕಲ್ಲುರ್ಟಿ , ಪಂಜುರ್ಲಿ, ಗುಳಿಗ ಕೋಲ ಉತ್ಸವ ಜರುಗಿತು. ಮರುದಿನ ಅಗೇಲು ಸೇವೆ ನಡೆಯಿತು.

ತರವಾಡು ಮನೆಯ ಮೋಹಿಣಿ ಬೆಳ್ಮ, ಐತಪ್ಪ ಬೆಳ್ತಂಗಡಿ, ಧರ್ಣಪ್ಪ ಧರ್ಮಸ್ಥಳ, ವಿಶ್ವನಾಥ ಕಡಬ, ದಯಾನಂದ್‌ ಹುಬ್ಬಳ್ಳಿ, ದೇವದಾಸ ಬೆಳ್ಮ, ಆನಂದ ಕಡಬ, ಚಂದ್ರಶೇಖರ ಎಕ್ಕೂರು, ಹರೀಶ ವರ್ಕಾಡಿ ಮೊದಲಾದವರು ಭಾಗವಹಿಸಿದ್ದರು.

ರಾತ್ರಿ ತರವಾಡಿನ ಆಡಳಿತ ಸಮಿತಿ ಪದಾಧಿಕಾರಿಗಳ ಸಭೆ ನಡೆದು ಲೆಕ್ಕ ಪತ್ರವನ್ನು ಕಾರ್ಯದರ್ಶಿ ಆನಂದ ಕಡಬ ಮಂಡಿಸಿದರು.

ಕ್ಷೇತ್ರದ ಅಂಗಣಕ್ಕೆ ಇಂಟರ್‌ಲಾಕ್ ಅಳವಡಿಸಿದ ದಯಾನಂದ ಹುಬ್ಬಳ್ಳಿ, ತರವಾಡು ಮನೆಗೆ ಗ್ರೈಂಡರ್‌ ನೀಡಿದ ಶೋಭಾ ವಾಮಂಜೂರು, ತರವಾಡು ಮನೆಗೆ ಕೊಡುಗೆಯಾಗಿ ನೀಡಿದ ಕುರ್ಚಿಗಳಿಗೆ ಆರ್ಥಿಕ ಸಹಕಾರ ನೀಡಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಲಾಯಿತು.

 

ದಿನಕರ ಕಯ್ಯಾರ, ವಿಕ್ರಾಂತ್‌ ಜಪ್ಪಿನಮೊಗರು , ಧನ್‌ರಾಜ್ ತಲಪಾಡಿ ಸೇರಿದಂತೆ ಸಮಿತಿ ಪದಾಧಿಕಾರಿಗಳು, ಸರ್ವ ಸದಸ್ಯರೂ ಉಪಸ್ಥಿತರಿದ್ದರು.

Continue Reading

LATEST NEWS

Trending