Wednesday, May 18, 2022

ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಸುವ ಕಾರ್ಯಕ್ಕೆ ಶಾಸಕ ಕಾಮತ್ ಚಾಲನೆ

ಮಂಗಳೂರು : ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ ನಡ್ಡಾ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರ ಸೂಚನೆಯಂತೆ ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಸುವ ಕಾರ್ಯಕ್ರಮದ ಅಂಗವಾಗಿ ಶಾಸಕ ವೇದವ್ಯಾಸ್ ಕಾಮತ್ ಅವರು ಮಂಗಳಾದೇವಿ, ಹೈೂಗೆಬಜಾರ್ ಹಾಗೂ ಮಿಲಾಗ್ರೀಸ್ ವಾರ್ಡಿನಲ್ಲಿ ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಸುವ ಮೂಲಕ‌ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಶಾಸಕ ಕಾಮತ್, ಮರ ವಿಶಾಲವಾಗಿ ಬೆಳೆಯಬೇಕಾದರೆ ಬೇರುಗಳು ಬಲಿಷ್ಟವಾಗಿರಬೇಕು. ಹಾಗೆಯೇ ಭಾರತೀಯ ಜನತಾ ಪಾರ್ಟಿಯ ಬೆಳವಣಿಗೆಗೆ ಬೂತ್ ಮಟ್ಟದ ಕಾರ್ಯಕರ್ತರ ಶ್ರಮ ಅಮೂಲ್ಯವಾದದ್ದು ಎಂದು ಹೇಳಿದ್ದಾರೆ.

ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಮತ್ತು ರಾಜ್ಯಾಧ್ಯಕ್ಷರ ಸೂಚನೆಯಂತೆ ಮಂಗಳೂರು ನಗರ ದಕ್ಷಿಣದ ಎಲ್ಲಾ ಬೂತ್ ಅಧ್ಯಕ್ಷರನ್ನು ಗೌರವಿಸುವ ಸಲುವಾಗಿ ಅವರ ಮನೆಗೆ ನಾಮಫಲಕ ಅಳವಡಿಸಲಾಗುತ್ತದೆ. ಕೇಂದ್ರ ಮತ್ತು ರಾಜ್ಯ ಸರಕಾರದ ಸವಲತ್ತುಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಬೂತ್ ಮಟ್ಟದ ಕಾರ್ಯಕರ್ತರು ಕೆಲಸ ನಿರ್ವಹಿಸುತ್ತಾರೆ. ಉಳಿದ ಪಕ್ಷಗಳಿಗಿಂತ ಭಿನ್ನವಾಗಿ ಬಿಜೆಪಿ ಕಾರ್ಯಕರ್ತರ ಪಕ್ಷವಾಗಿ ಈ ಹಂತದ ಬೆಳವಣಿಗೆಗೆ ಕಾರ್ಯಕರ್ತರ‌ ತ್ಯಾಗ, ಬಲಿದಾನ, ಪರಿಶ್ರಮವೇ ಕಾರಣ ಎಂದು ಹೇಳಿದರು.

ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ‌ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ ಮಾತನಾಡಿ, ಬೂತ್ ಮಟ್ಟದಲ್ಲಿ ಪಕ್ಷದ ಬಲವರ್ಧನೆಗಾಗಿ ರಾಷ್ಟ್ರೀಯ ಅಧ್ಯಕ್ಷರ ಹಾಗೂ ರಾಜ್ಯ ಅಧ್ಯಕ್ಷರ ಸೂಚನೆಯಂತೆ ಬೂತ್ ಅಧ್ಯಕ್ಷರನ್ನು ಗೌರವಿಸುವ ನಿಮಿತ್ತ ನಾಮಫಲಕ ಅಳವಡಿಕೆ ಅಭಿಯಾನ ಮಾಡಲಾಗುತ್ತದೆ ಎಂದು ಹೇಳಿದರು.

ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಪ್ರಭಾರಿ ಸಂತೋಷ್ ರೈ ಬೋಳಿಯಾರು, ಮೇಯರ್ ಪ್ರೇಮಾನಂದ ಶೆಟ್ಟಿ, ಮೀನುಗಾರಿಕಾ ನಿಗಮದ ಅಧ್ಯಕ್ಷರಾದ ನಿತಿನ್ ಕುಮಾರ್, ಮಂಡಲ‌ ಪ್ರಧಾನ ಕಾರ್ಯದರ್ಶಿ ರೂಪಾ ಡಿ ಬಂಗೇರ, ಸುರೇಂದ್ರ ಜಪ್ಪಿನಮೊಗರು, ಮಹಾಶಕ್ತಿಕೇಂದ್ರದ ಅಧ್ಯಕ್ಷರಾದ ದೀಪಕ್ ಪೈ, ಕಿರಣ್ ರೈ ಎಕ್ಕೂರು, ಅಜಯ್ ಕುಲಶೇಖರ, ಪಾಲಿಕೆ ಸದಸ್ಯರಾದ ಭಾನುಮತಿ, ಶೈಲೇಶ್ ಶೆಟ್ಟಿ ಅತ್ತಾವರ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ರಮೇಶ್ ಕಂಡೆಟ್ಟು, ಭಾಸ್ಕರ್ ಚಂದ್ರ ಶೆಟ್ಟಿ, ಮುಖಂಡರಾದ ವಿನೋದ್ ಮೆಂಡನ್, ಉಮಾನಾಥ್ ಶೆಟ್ಟಿಗಾರ್, ಲಲ್ಲೇಶ್ ಅತ್ತಾವರ, ಪ್ರಿಯ ಮೆಂಡನ್, ಹೇಮ, ಚೇತನ್ ಕೋಟ್ಯಾನ್, ಶಬರಿ, ಶಿವಪ್ರಸಾದ್, ಮೋಹನ್ ಪೂಜಾರಿ, ರಾಜೇಂದ್ರ, ನಿತಿನ್ ಕಾಮತ್, ಉಷಾ, ದಿನೇಶ್ ಶೆಟ್ಟಿ, ಗಿರೀಶ್ ಶೆಟ್ಟಿ, ಪ್ರಕಾಶ್, ನಾಗರಾಜ್, ಹರೀಶ್ ರಾವ್, ಪ್ರಮೋದ್ ಕೊಟ್ಟಾರಿ, ಪುಷ್ಪರಾಜ್, ಭರತ್ ಕುಮಾರ್, ಬೂತ್ ಪ್ರಮುಖರು ಹಾಗೂ ಇತರೆ ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Hot Topics

ಉಡುಪಿ: ಬೈಕ್ ಸ್ಕಿಡ್ ಆಗಿ ಹಿಂಬದಿ ಸವಾರೆ ದಾರುಣ ಸಾವು

ಉಡುಪಿ: ಬೈಕ್ ನಲ್ಲಿ ಹೋಗುವಾಗ ಬೈಕ್ ಸ್ಕಿಡ್ ಆಗಿ ಹಿಂಬದಿ ಸವಾರೆ ಮೃತಪಟ್ಟಂತಹ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೈಂದೂರಿನ ಕಾಲ್ತೋಡು ಗ್ರಾಮದ ಮುರೂರು ಎಂಬಲ್ಲಿ ನಡದಿದೆ.ಕಾಲ್ತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ...

ಬಂಟ್ವಾಳ: ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿನಿ ಸಾವು

ಬಂಟ್ವಾಳ: 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದಾಗಿ ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಅಳಿಕೆ ಎಂಬಲ್ಲಿ ಇಂದು ನಡೆದಿದೆ.ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.ಮೃತಳನ್ನು ವಿಠಲ್ ಜೇಸೀಸ್ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ...

ವಿಟ್ಲ: ಭಾರೀ ಮಳೆಗೆ ರಸ್ತೆಗೆ ಬಿದ್ದ ವಿದ್ಯುತ್ ಕಂಬ-ಸಂಚಾರ ಸ್ಥಗಿತ

ವಿಟ್ಲ: ಸುರಿದ ಭಾರೀ ಗಾಳಿ ಮಳೆಯಿಂದಾಗಿ ವಿದ್ಯುತ್ ಕಂಬ ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾದ ಘಟನೆ ವಿಟ್ಲ- ಕಲ್ಲಡ್ಕ ರಸ್ತೆಯಲ್ಲಿ ನಡೆದಿದೆ.- ನಿನ್ನೆ ಸುರಿದ ಮಳೆಗೆ ಇಂದು ಮುಂಜಾನೆ...