ಕಾಪು ಶಾಸಕ ಲಾಲಾಜಿ ಮೆಂಡನ್ ಗೆ ಕೊರೊನಾ ಸೋಂಕು ದೃಡ..! ಕೋವಿಡ್ ಆಸ್ಪತ್ರೆಗೆ ದಾಖಲು..
ಉಡುಪಿ : ಉಡುಪಿ ಜಿಲ್ಲೆಯ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಅವರಿಗೆ ಕೊರೋನಾ ಸೊಂಕು ದೃಢಪಟ್ಟಿದೆ. ಈ ಕುರಿತಂತೆ ಸಾಮಾಜಿಕ ಜಾಲತಾಣ ಫೆಸ್ಬುಕ್ ನಲ್ಲಿ ಮಾಹಿತಿ ಶೇರ್ ಮಾಡಿದ್ದಾರೆ.
ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಅವರ ಆಪ್ತ ಕಾರ್ಯದರ್ಶಿಗೆ ಕೊರೋನಾ ಬಂದ ಹಿನ್ನೆಲೆಯಲ್ಲಿ ಶಾಸಕರು 7 ದಿನಗಳಿಂದ ಹೋಂ ಕ್ವಾರಂಟೈನ್ ನಲ್ಲಿದ್ದರು.
ಇದೀಗ ಸ್ವಾಬ್ ಪರೀಕ್ಷೆಗೆ ಒಳಪಡಿಸಿದಾಗ ಕೊರೋನಾ ದೃಢಪಟ್ಟಿದೆ. ಸದ್ಯ ಕೊರೊನಾ ಸೊಂಕಿನ ಯಾವುದೇ ಲಕ್ಷಣಗಳಿಲ್ಲ, ಶಾಸಕರು ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.