Connect with us

DAKSHINA KANNADA

ಮಾಣಿ-ಪುತ್ತೂರು ರಾ. ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರಕ್ಕೆ ಶಾಸಕ ರೈ ಮನವಿ

Published

on

ಪುತ್ತೂರು: ಮಾಣಿಯಿಂದ ಪುತ್ತೂರು ತನಕ ಚತುಷ್ಪಥ ರಸ್ತೆ ನಿರ್ಮಾಣದ ಬಗ್ಗೆ ಪುತ್ತೂರು ಶಾಸಕ ಅಶೋಕ್ ರೈ ರಾ. ಹೆದ್ದಾರಿ ವಿಭಾಗದ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಅಧಿಕಾರಿಗಳ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ಬೆಂಗಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ದಕ್ಷಿಣ ಭಾರತ ಪ್ರಾಂತೀಯ (ನ್ಯಾಷನಲ್ ಹೈವೇ ಸೌತ್ ಇಂಡಿಯಾ ಝೋನ್) ಅಧಿಕಾರಿ ಮಹೇಂದ್ರ ಶರ್ಮ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಮಾಣಿಯಿಂದ ಪುತ್ತೂರು ತನಕ ಚತುಷ್ಪಥ ಕಾಮಗಾರಿ ಆರಂಭದಲ್ಲಿ ನಡೆಸುವಂತೆ ಮತ್ತು ಕಾಮಗಾರಿಯನ್ನು ಪ್ರಸಕ್ತ ಸಾಲಿನ ವಾರ್ಷಿಯ ಯೋಜನೆಯಲ್ಲಿ ಸೇರಿಸಿಕೊಳ್ಳುವಂತೆಯೂ ಮನವಿ ಮಾಡಿದ್ದಾರೆ.

ಪ್ರಸಕ್ತ ಸಾಲಿನ ವಾರ್ಷಿಕ ಯೋಜನೆಯಲ್ಲಿ ಸೇರಿಸಿಕೊಂಡಲ್ಲಿ ಮಾತ್ರ ಮುಂದಿನ ಅವಧಿಗೆ ಈ ಕಾಮಗಾರಿಗೆ ಚಾಲನೆ ದೊರೆಯಬಹುದಾಗಿದ್ದು ಇಲ್ಲವಾದಲ್ಲಿ ಇನ್ನಷ್ಟು ದಿನ ಕಾಯಬೇಕಾದ ಅನಿವಾರ್ಯತೆ ಉಂಟಾಗಬಹುದು.

ಈ ಕಾರಣಕ್ಕೆ ಪ್ರಸಕ್ತ ಸಾಲಿನಲ್ಲೇ ಈ ಬೇಡಿಕೆಯನ್ನು ಮಂಡಿಸುವಂತೆ ಶಾಸಕರು ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಶಾಸಕರ ಮನವಿಯನ್ನು ಸ್ವೀಕರಿಸಿದ ಅಧಿಕಾರಿ ಮಹೇಂದ್ರ ಶರ್ಮ ಅವರು ತಮ್ಮ ಬೇಡಿಕೆಯನ್ನು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಡುವುದಾಗಿಯೂ , ಕಾಮಗಾರಿಯ ಬೇಡಿಕೆಯ ಬಗ್ಗೆ ವಿವರಣೆ ನೀಡುವುದಾಗಿಯೂ ಶಾಸಕರಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಶಾಸಕರು ಮಾಣಿಯಿಂದ ಪುತ್ತೂರು ತನಕ ಚತುಷ್ಪಥ ರಸ್ತೆ ನಿರ್ಮಾಣವಾದಲ್ಲಿ ಜನರಿಗೆ ಹೆಚ್ಚು ಪ್ರಯೋಜನಕಾರಿಯಾಗಲಿದೆ.

ರಾ. ಹೆದ್ದಾರಿಯಾಗಿ ಮಾಣಿ ಮೈಸೂರು ರಸ್ತೆ ಮೇಲ್ದರ್ಜೆಗೇರಿದ್ದರಿಂದ ಚತುಷ್ಪಥ ರಸ್ತೆ ಕಾಮಗಾರಿ ಬೇಡಿಕೆಯನ್ನು ಕೇಂದ್ರ ಸರಕರ ಈಡೇರಿಸಲಿದೆ ಎಂಬ ನಂಬಿಕೆ ಇದೆ.

ರಸ್ತೆ ನಿರ್ಮಾಣವಾದಲ್ಲಿ ಈ ಭಾಗದ ಬಹುಕಾಲದ ಬೇಡಿಕೆಯೂ ಈಡೇರಲಿದೆ. ರಸ್ತೆ ನಿರ್ಮಾಣ ಕುರಿತು ಅಧಿಕಾರಿಗಳ ಜೊತೆ ಮಾತನಾಡಿ ಮನವಿಯನ್ನು ನೀಡಿದ್ದೇನೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

LATEST NEWS

Trending