ಚೀನಾದವರು ಒಳನುಗ್ಗಿ ಸೈನಿಕರನ್ನು ಹೊಡೆಯುವಾಗ 56 ಇಂಚಿನ ಎದೆಗಾರಿಕೆಯವರು ಎಲ್ಲಿದ್ದಾರೆ: ಖಾದರ್ ವ್ಯಂಗ್ಯ..
Published
5 years agoon
By
Adminಚೀನಾದವರು ಒಳನುಗ್ಗಿ ಸೈನಿಕರನ್ನು ಹೊಡೆಯುವಾಗ 56 ಇಂಚಿನ ಎದೆಗಾರಿಕೆಯವರು ಎಲ್ಲಿದ್ದಾರೆ: ಖಾದರ್ ವ್ಯಂಗ್ಯ..
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಡಳಿತ ಪಕ್ಷದವರು ಮರಳು ದಂಧೆ ನಡೆಸ್ತಿದಾರೆ.
ಸಂಸದರು, ಆಡಳಿತ ಪಕ್ಷದ ಸದಸ್ಯರ ಮೂಗಿನಡಿ ದಂಧೆ ನಡೆಯುತ್ತಿದೆ ಎಂದು ಶಾಸಕ ಯುಟಿ ಖಾದರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸದ್ಯ ಮರಳು ದಂಧೆಯಿಂದಾಗಿ ಪ್ರತೀ ಲೋಡ್ ಮರಳಿಗೆ 20 ಸಾವಿರ ಆಗಿದೆ.
ಕಳೆದ ಬಾರಿ ಇದ್ದ ಸ್ಯಾಂಡ್ ಬಝಾರ್ ಸಿಸ್ಟಮನ್ನು ಮುಗಿಸಿದ್ದಾರೆ. ಸ್ಯಾಂಡ್ ಬಝಾರ್ ಇದ್ದಾಗ 8 ಸಾವಿರಕ್ಕೆ ಮರಳು ಸಿಗ್ತಾ ಇತ್ತು.
ಈಗ ಯಾಕೆ ಅಕ್ರಮ ಮರಳನ್ನು ಎತ್ತಿ ನೇರವಾಗಿ ಮಾರುತ್ತಿದ್ದಾರೆ ಎಂದು ಯುಟಿ ಖಾದರ್ ರಾಜ್ಯ ಸರ್ಕಾರಕ್ಕೆ ಖಡಕ್ ಪ್ರಶ್ನೆ ಎಸೆದಿದ್ದಾರೆ.
ಇನ್ನು ಬಿಜೆಪಿಯವರು ಮಂಗಳೂರನ್ನು ಬಳ್ಳಾರಿ ಮಾಡಲು ಹೊರಟಿದ್ದಾರೆ ಎಂದು ಮಂಗಳೂರಿನಲ್ಲಿ ಮಾಜಿ ಸಚಿವ ಯು.ಟಿ ಖಾದರ್ ಕಿಡಿ ಕಾರಿದ್ದಾರೆ.
ಇನ್ನು ಭಾರತದ ಮೇಲೆ ಚೀನಾ ಆಕ್ರಮಣ ಮಾಡಿರುವ ಬಗ್ಗೆ ಪ್ರತಿಕ್ರೀಯೆ ನೀಡಿದ ಅವರು, ಚೀನಾ ಸೈನಿಕರು ಈಗ ಭಾರತದ ಒಳಕ್ಕೆ ಬಂದು ಕೂತಿದ್ದಾರೆ.
ಒಳ ಭಾಗಕ್ಕೆ ಬಂದು ನಮ್ಮ ಸೈನಿಕರನ್ನು ಕೊಲ್ಲುತ್ತಿದ್ದಾರೆ. ಆದ್ರೆ ಈಗ ಯಾಕೆ 56 ಇಂಚಿನ ಎದೆಗಾರಿಕೆಯವರು ಮೌನವಾಗಿದ್ದಾರೆ ಎಂದು ಕೇಂದ್ರಕ್ಕೆ ಟಾಂಗ್ ಕೊಟ್ಟರು.
ಬಳಿಕ ಮಾತು ಮುಂದುವರಿಸಿದ ಅವರು, ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಮೌನಿ ಬಾಬಾ ಎನ್ನುತ್ತಿದ್ದವರು ಈಗೆಲ್ಲಿದ್ದಾರೆ.
ಮನೆಗೆ ಹೊಕ್ಕಿ ಹೊಡೆಯುವುದಾಗಿ ಭಾಷಣ ಮಾಡಿದ್ದವರು ಮೌನವಾಗಿದ್ದು ಏಕೆ.?. ಹೊಡೆಯಬೇಕಿತ್ತಲ್ವಾ..
ಯಾಕೆ ಸುಮ್ಮನೆ ಕುಳಿತಿದ್ದಾರೆ.? ಎಂದು ಚೀನಾ ದಾಳಿ ಬಗ್ಗೆ ಮಾಜಿ ಸಚಿವ ಯು.ಟಿ ಖಾದರ್ ವ್ಯಂಗ್ಯವಾಡಿದರು.
You may like
LATEST NEWS
ಭೀಕರ ರಸ್ತೆ ಅ*ಪಘಾತ; ಒಲಿಂಪಿಕ್ ಪದಕ ವಿಜೇತೆ ಮನು ಭಾಕರ್ ಕುಟುಂಬಕ್ಕೆ ಆ*ಘಾತ
Published
23 minutes agoon
19/01/2025By
NEWS DESK3ಮಂಗಳೂರು/ಚಂಡೀಗಢ : ಭೀ*ಕರ ರಸ್ತೆ ಅಪಘಾತದಲ್ಲಿ ಡಬಲ್ ಒಲಿಂಪಿಕ್ ಪದಕ ವಿಜೇತೆ ಶೂಟರ್ ಮನು ಭಾಕರ್ ಅವರ ಸಂಬಂಧಿಗಳಿಬ್ಬರು ಕೊ*ನೆಯುಸಿರೆಳೆದಿದ್ದಾರೆ.
ಈ ಘಟನೆ ಹರ್ಯಾಣದ ಮಹೇಂದ್ರಗಢ ಬೈಪಾಸ್ ರಸ್ತೆಯಲ್ಲಿ ಭಾನುವಾರ (ಜ.19ರಂದು) ನಡೆದಿರುವ ಬಗ್ಗೆ ವರದಿಯಾಗಿದೆ. ಮನುಭಾಕರ್ ಅವರ ಚಿಕ್ಕಪ್ಪ ಹಾಗೂ ಅಜ್ಜಿ ಭೀ*ಕರ ರಸ್ತೆ ಅಪ*ಘಾತದಲ್ಲಿ ಮೃ*ತಪಟ್ಟಿದ್ದಾರೆ.
ಚಿಕ್ಕಪ್ಪ ಯುದ್ಧವೀರ್ ಸಿಂಗ್ ಮತ್ತು ಅಜ್ಜಿ ಸಾವಿತ್ರಿ ದೇವಿ ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ರಾಂಗ್ ಸೈಡ್‌ನಿಂದ ವೇಗವಾಗಿ ಬಂದ ಕಾರು ಸ್ಕೂಟರ್‌ಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಮನು ಭಾಕರ್ ಅವರ ಚಿಕ್ಕಪ್ಪ, ಅಜ್ಜಿ ಸ್ಥಳದಲ್ಲೇ ಪ್ರಾ*ಣ ಚೆಲ್ಲಿದ್ದಾರೆ ಎಂದು ವರದಿ ತಿಳಿಸಿದೆ.
ಅಪಘಾತದ ತೀವ್ರತೆಗೆ ಇಬ್ಬರು ನೆಲಕ್ಕೆ ಎಸೆಯಲ್ಪಟ್ಟಿದ್ದು, ಕಾರು ಚಾಲಕ ಸ್ಥಳದಿಂದ ಪರಾರಿ ಆಗಿದ್ದಾನೆ ಎಂದು ವರದಿ ತಿಳಿಸಿದೆ.
ಚಾಲಕನಾಗಿ ಕೆಲಸ ಮಾಡುತ್ತಿದ್ದ ಯುದ್ದ್‌ವೀರ್ ಅವರು ಕೆಲಸಕ್ಕೆ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಅವರ ತಾಯಿ ಸಾವಿತ್ರಿ ದೇವಿ ಲೋಹರು ಚೌಕ್‌ನಲ್ಲಿರುವ ತನ್ನ ಕಿರಿಯ ಮಗನನ್ನು ಭೇಟಿ ಮಾಡಲು ಅವರೊಂದಿಗೆ ಬಂದಿದ್ದರು. ಇಬ್ಬರೂ ಕಲ್ಯಾಣ ಮಾಡ್ ಪ್ರದೇಶವನ್ನು ತಲುಪುತ್ತಿದ್ದಂತೆ ರಸ್ತೆಯ ಇನ್ನೊಂದು ಬದಿಯಿಂದ ವೇಗವಾಗಿ ಬಂದ ಕಾರು ಅವರ ಸ್ಕೂಟರ್‌ಗೆ ಢಿ*ಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಇದನ್ನೂ ಓದಿ: ಪೆಟ್ರೋಲ್ ಟ್ಯಾಂಕರ್ ಸ್ಪೋ*ಟ: 70 ಮಂದಿ ಸಾ*ವು
ಢಿಕ್ಕಿಯ ರಭಸಕ್ಕೆ ಕಾರು ಕೂಡ ರಸ್ತೆಯಲ್ಲೇ ಪಲ್ಟಿ ಹೊಡೆದಿದೆ. ಸದ್ಯ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದು, ಚಾಲಕನ ಪತ್ತೆಗೆ ಬಲೆ ಬೀಸಿದ್ದಾರೆ.
ಮನು ಭಾಕರ್ ಅವರು 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ನಿರ್ಮಿಸಿದ್ದರು. ಒಂದೇ ಆವೃತ್ತಿಯ ಕ್ರೀಡಾಕೂಟದಲ್ಲಿ ಎರಡು ಪದಕಗಳನ್ನು ಗೆದ್ದಿದ್ದರು. ಇತ್ತೀಚೆಗಷ್ಟೇ ಮನು ಭಾಕರ್ ರಾಷ್ಟ್ರಪತಿ ಅವರಿಂದ ‘ಖೇಲ್ ರತ್ನ’ ಪ್ರಶಸ್ತಿಯನ್ನು ಸ್ವೀಕರಿಸಿದ್ದರು.
ಸಾವಿರಾರು ನೀರಿಕ್ಷೆಗಳೊಂದಿಗೆ ಜನರು ದಾಂಪತ್ಯ ಜೀವನಕ್ಕೆ ಕಾಲಿಡುವುದು ಸಾಮಾನ್ಯ. ಆದರೆ ನಿರೀಕ್ಷೆಗಳೆಲ್ಲವೂ ಯಾವಾಗಲೂ ನನಸಾಗುವುದಿಲ್ಲ, ಹೂವಿನ ಜೊತೆಗೆ ಮುಳ್ಳು ಇರುವಂತೆಯೇ ಸುಖದ ಜೊತೆ ಕಷ್ಟವೂ ಇರುತ್ತದೆ. ಅವೆಲ್ಲವನ್ನು ಸರಿದೂಗಿಸಿಕೊಂಡು ಹೋದರಷ್ಟೇ ಜೀವನ ಸುಖಕರವಾಗಿರುತ್ತದೆ. ಹಾಗಂತ ಎಲ್ಲವನ್ನು ಸಹಿಸಿಕೊಂಡು ಹೋಗಲೇಬೇಕೆಂದೆನಿಲ್ಲ, ಆದರೆ ಕೆಲವು ತಾಳ್ಮೆಯಿಂದ ತೆಗೆದುಕೊಂಡ ನಿರ್ಧಾರಗಳು ನಮ್ಮ ಬದುಕನ್ನು ಹಸನಾಗಿಸಬಹುದು. ಹೀಗಿರುವಾಗ ನೂರೆಂಟು ಕನಸುಗಳನ್ನು ಹೊತ್ತು ಹೊಸದಾಗಿ ಮದುವೆಯಾದವರಿಗೆ, ಮದುವೆಯಾಗುತ್ತಿರುವವರಿಗೆ, ಮದುವೆಯಾಗಲು ತುದಿಗಾಲಲ್ಲಿ ನಿಂತಿರುವವರಿಗೆ ಕೆಲ ಕಿವಿಮಾತುಗಳು ಇಲ್ಲಿವೆ.
ಸೌಂದರ್ಯ ಹಾಗೂ ಬ್ಯಾಂಕ್ ಬ್ಯಾಲೆನ್ಸ್‌ಗಿಂತಲೂ ಹೆಚ್ಚಾಗಿ ಸಂಗಾತಿಯ ಗುಣನಡವಳಿಕೆಗಳು ಸುಮಧುರ ದಾಂಪತ್ಯಕ್ಕೆ ಬಹಳ ಮುಖ್ಯವಾಗಿರುತ್ತದೆ. ಚೆಂದ, ಬ್ಯಾಂಕ್ ಬ್ಯಾಲೆನ್ಸ್ ಎಲ್ಲವೂ ಇದ್ದು, ಅವರು ನಮ್ಮಲ್ಲಿ ಗೌರವಯುತವಾಗಿ ನಡೆಸಿಕೊಳ್ಳುವುದಿಲ್ಲವೆಂದರೆ ಎಲ್ಲವೂ ನಿಷ್ಪ್ರಯೋಜಕ.ಸರಿ ತಪ್ಪುಗಳ ಪ್ರಶ್ನೆಗಳಿಗಿಂತ ಹೊಂದಾಣಿಕೆ ಬಹಳ ಮುಖ್ಯವಾಗುತ್ತದೆ. ಯಾರು ತಪ್ಪು ಯಾರು ಸರಿ ಎಂದು ಹೋರಾಟ ಮಾಡುವವರಿಗಿಂತ ಚೆನ್ನಾಗಿ ಜೀವನ ಮಾಡುತ್ತಿರುವುದು ಅನೇಕ ಪ್ರಕರಣಗಳಲ್ಲಿ ಸಾಬೀತಾಗಿದೆ.ರೋಮ್ಯಾನ್ಸ್ ದಾಂಪತ್ಯದ ಭಾಗವಷ್ಟೇ ಅದೇ ಎಲ್ಲವೂ ಅಲ್ಲ, ಕೆಲವೊಂದು ರಹಸ್ಯಗಳಾಗಿದ್ದರೆಯೇ ಚಂದ. ಭಾರತದಲ್ಲಿ ಮದುವೆ ಕೇವಲ ಇಬ್ಬರು ಗಂಡು ಹೆಣ್ಣಿಗೆ ಸಂಬಂಧಿಸಿದ್ದಲ್ಲ, ಇದು ಸಂಪೂರ್ಣವಾಗಿ ಕುಟುಂಬ, ಉದ್ಯೋಗ ಜೀವನ, ಬದುಕಿನ ವಾಸ್ತವತೆ, ಸಾಮಾಜಿಕ ಸಾಂಸ್ಕೃತಿಕ ನಂಬಿಕೆಗೆ ಸಂಬಂಧಿಸಿದ ವಿಚಾರವಾಗಿದೆ.
ಮದುವೆಯಾದ ತಕ್ಷಣ ಅದೇಕೆ ಇದೇಕೆ ಅಂತ ಪ್ರಶ್ನಿಸುತ್ತಾ ಮನೆಯವರನ್ನೆಲ್ಲಾ ಎದುರು ಹಾಕಿಕೊಳ್ಳಬಾರದು. ಯಶಸ್ವಿ ಮದುವೆಗೆ ಸಂಬಂಧಿಸಿದಂತೆ ಯಾವುದೇ ವೈಜ್ಞಾನಿಕ ಫಾರ್ಮುಲಾಗಳಿಲ್ಲ. ಪ್ರತಿಯೊಂದು ಜೋಡಿಯೂ ವಿಭಿನ್ನ, ಈ ಆತ್ಮ ಸಮ್ಮಿಲನಕ್ಕೆ ಏನು ಕಾರಣವಿರಬಹುದು ಎಂಬುದನ್ನು ಕೇವಲ ತಿಳಿದುಕೊಳ್ಳಲು ಪ್ರಯತ್ನಿಸಬೇಕು. ಬಹಳ ಮುಖ್ಯವಾಗಿ ತಿಳಿದುಕೊಳ್ಳಬೇಕಾದ ವಿಚಾರ ಎಂದರೆ ಸೋಶಿಯಲ್ ಮೀಡಿಯಾದಲ್ಲಿ ಕೆಲವರು ತೋರಿಸುವಂತೆಯೇ ಮದುವೆ ಜೀವನ ಇರುವುದಿಲ್ಲ, ಸಾಮಾಜಿಕ ಜಾಲತಾಣದಲ್ಲಿ ಸುಂದರ ಫೋಟೊಗಳನ್ನು ಹಾಕಿಕೊಂಡು ಎಂಜಾಯ್ ಮಾಡುತ್ತಿರುವ ಜೋಡಿಯ ಜೀವನದ ಜೊತೆ ನಮ್ಮನ್ನು ಹೊಂದಾಣಿಕೆ ಮಾಡಿಕೊಳ್ಳಬಾರದು. ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಾಕಿ ಶೋಕಿ ಮಾಡುವವರು ವಾಸ್ತವದಲ್ಲಿ ಇತರರಿಗಿಂತ ಬಹಳ ಕೆಟ್ಟದಾಗಿ ಹೊಡೆದಾಡಿಕೊಂಡಿರುತ್ತಾರೆ. ಜೊತೆಯಾಗಿ ಸಾಗಲು ಕಷ್ಟಪಡುತ್ತಿರುತ್ತಾರೆ. ಕಿತ್ತಾಟವನ್ನು ಯಾವ ದಂಪತಿಯೂ ಸಾಮಾಜಿಕ ಜಾಲತಾಣದಲ್ಲಿ ಹಾಕುವುದಿಲ್ಲ. ಸುಖಿ ದಾಂಪತ್ಯ ಜೀವನಕ್ಕಾಗಿ ಈ ವಿಚಾರಗಳು ಸಣ್ಣ ವಿಚಾರಗಳನ್ನು ನೆನಪಿಟ್ಟು ಬಾಳುವುದು ಉತ್ತಮ.
International news
ಪೆಟ್ರೋಲ್ ಟ್ಯಾಂಕರ್ ಸ್ಪೋ*ಟ: 70 ಮಂದಿ ಸಾ*ವು
Published
1 hour agoon
19/01/2025By
NEWS DESK3ಮಂಗಳೂರು/ಮೈದುಗುರಿ (ನೈಜೀರಿಯಾ) : ಉತ್ತರ ನೈಜೀರಿಯಾದಲ್ಲಿ ಶನಿವಾರ ಪೆಟ್ರೋಲ್ ಟ್ಯಾಂಕರ್ ಸ್ಪೋ*ಟಗೊಂಡ ಪರಿಣಾಮ ಕನಿಷ್ಠ 70 ಜನ ಮೃ*ತಪಟ್ಟು, ಹಲವರು ಗಾಯಗೊಂಡಿದ್ದಾರೆ ಎಂದು ದೇಶದ ರಾಷ್ಟ್ರೀಯ ತುರ್ತು ಏಜೆನ್ಸಿ ತಿಳಿಸಿದೆ.
ವರದಿಗಳ ಪ್ರಕಾರ, ಘಟನೆಯಲ್ಲಿ 70ಕ್ಕೂ ಹೆಚ್ಚು ಮಂದಿ ಸಾ*ವಿಗೀಡಾಗಿದ್ದು, 56 ಜನ ಗಾಯಗೊಂಡಿದ್ದಾರೆ. 15ಕ್ಕೂ ಹೆಚ್ಚು ಅಂಗಡಿಗಳು ನಾಶವಾಗಿವೆ. ಸದ್ಯ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ರಾಷ್ಟ್ರೀಯ ತುರ್ತು ನಿರ್ವಹಣಾ ಪ್ರಾಧಿಕಾರ ಹೇಳಿಕೆಯಲ್ಲಿ ತಿಳಿಸಿದೆ.
ಇದನ್ನೂ ಓದಿ: ರಾಯಚೂರು ಡಿಸಿ ಆಗಿದ್ದವರು…ಸನ್ಯಾಸಿ ಆಗಿದ್ದು ಹೇಗೆ ?
ಕಳೆದ ಅಕ್ಟೋಬರ್‌ನಲ್ಲಿ ಜಿಗಾವಾ ರಾಜ್ಯದಲ್ಲಿ ಇದೇ ರೀತಿಯ ಸ್ಪೋ*ಟ ಸಂಭವಿಸಿದ್ದು, 147 ಮಂದಿ ಸಾ*ವಿಗೀಡಾಗಿದ್ದರು.
LATEST NEWS
ಸೈಫ್ ಮೇಲೆ ಹ*ಲ್ಲೆ ಪ್ರಕರಣ; ಪ್ರಮುಖ ಆರೋಪಿ ಬಾಂಗ್ಲಾ ಪ್ರಜೆ ಅರೆಸ್ಟ್
ಗೌತಮಿ ಬಳಿಕ ಮನೆಯಿಂದ ಹೊರಬಂದ ಸ್ಪರ್ಧಿ ಇವರೇನಾ?
ಮೊಬೈಲ್ಗೆ ಸಿಮ್ ಹಾಕಿದಾಕ್ಷಣ ಬ್ಯಾಂಕ್ ಅಕೌಂಟ್ನಿಂದ ಕೋಟಿಗಟ್ಟಲೆ ಹಣ ಮಾಯ
ಮಂಗಳೂರು ಪಾಲಿಕೆ ಆಯುಕ್ತ ಆನಂದ್ ಸಿ.ಎಲ್ ವರ್ಗಾವಣೆ
ಕುಡಿಯಬಾರದು ಎಂದು ಬುದ್ಧಿವಾದ ಹೇಳಿದಕ್ಕೆ ಅಪ್ಪನನ್ನೇ ಕೊಂ*ದ ದುಷ್ಟ ಮಗ
ಬಸ್ ಕದ್ದ ಪ್ರಕರಣಕ್ಕೆ ಟ್ವಿಸ್ಟ್; ಕಥೆ ಹಾಗಲ್ಲ ಹೀಗೆ ಎಂದ ವಿದೇಶದಲ್ಲಿರುವ ಮಾಲಕ
Trending
- BIG BOSS6 days ago
ಕಣ್ಣೀರು ಒರೆಸಿದ ಸುದೀಪ್.. ಕಿಚ್ಚನ ಈ ದೊಡ್ಡ ಗುಣಕ್ಕೆ ಸೆಲ್ಯೂಟ್ ಹೊಡೆದ ಫ್ಯಾನ್ಸ್..!
- BIG BOSS5 days ago
ಮಿಡ್ ವೀಕ್ ಎಲಿಮಿನೇಷನ್ ನಿಂದ ಬಚಾವ್ ಆಗುವವರು ಯಾರು ?
- BIG BOSS5 days ago
ಚೈತ್ರಾ ಕುಂದಾಪುರ ಪ್ರಕಾರ ಈ ಸಲ ಬಿಗ್ ಬಾಸ್ ವಿನ್ನರ್ ಇವರೇ ?
- BIG BOSS6 days ago
ಬಿಗ್ ಬಾಸ್ ನಿಂದ ಹೊರ ಬಂದ ಚೈತ್ರಾ ಕುಂದಾಪುರ ಪಡೆದ ಸಂಭಾವನೆ ಎಷ್ಟು ಗೊತ್ತೇ?