Connect with us

    ಜನತಾ ಕರ್ಫ್ಯೂಗೆ ಸರ್ವರೂ ಕೈಜೋಡಿಸಲು ಶಾಸಕ ವೇದವ್ಯಾಸ್ ಕಾಮತ್ ಮನವಿ

    Published

    on

    ಜನತಾ ಕರ್ಫ್ಯೂಗೆ ಸರ್ವರೂ ಕೈಜೋಡಿಸಲು ಶಾಸಕ ವೇದವ್ಯಾಸ್ ಕಾಮತ್ ಮನವಿ

    ಮಂಗಳೂರು: ಜಗತ್ತಿನಾದ್ಯಂತ ಭೀತಿ ಹುಟ್ಟಿಸಿರುವ ಕೊರೆನೋ ವೈರಸ್ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ

    ಇದೇ ಭಾನುವಾರ (ಮಾರ್ಚ್ 22) ಒಂದು ದಿನದ ಜನತಾ ಕರ್ಫ್ಯೂನಲ್ಲಿ ಕೈಜೋಡಿಸುವಂತೆ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಮನವಿ ಮಾಡಿಕೊಂಡಿದ್ದಾರೆ.

    ವಿಶ್ವದಾದ್ಯಂತ ಮರಣ ಮೃದಂಗ ಬಾರಿಸಿದ ಕೊರೆನೋ ಈಗಷ್ಟೇ ಭಾರತದಲ್ಲೂ ತನ್ನ ಬಾಹು ಚಾಚುತ್ತಿದೆ.

    ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಕರೆಕೊಟ್ಟಿರುವ ಜನತಾ ಕರ್ಫ್ಯೂ ಎನ್ನುವ ಆಂದೋಲನದಲ್ಲಿ ಮಂಗಳೂರಿನ ಪ್ರತಿಯೊಬ್ಬ ನಾಗರಿಕರೂ ಕೈ ಜೋಡಿಸುವಂತೆ ಶಾಸಕ ಕಾಮತ್ ಮನವಿ ಮಾಡಿಕೊಂಡಿದ್ದಾರೆ.

    ಇತ್ತೀಚಿನ ಕೆಲವು ದಿನಗಳಿಂದ ನಗರ ಪ್ರದೇಶಗಳಲ್ಲಿ ಕೊರೆನೋ ವ್ಯಾಪಕವಾಗಿ ಹರಡುತ್ತಿದೆ.

    ಸಾರ್ವಜನಿಕರ ಹಿತ ದೃಷ್ಠಿಯಿಂದ ಭಾನುವಾರ ಒಂದು ದಿನಮನೆಯಲ್ಲೇ ಉಳಿದುಕೊಳ್ಳುವಂತೆ ಪ್ರಧಾನಿಯವರು ಕರೆ ನೀಡಿದ್ದಾರೆ.

    ವೈರಸ್ ವಿರುದ್ಧ ಸರಕಾರದ ಹೋರಾಟದಲ್ಲಿ ನಾವೆಲ್ಲರೂ ಕೈ ಜೋಡಿಸಬೇಕೆಂದು ಶಾಸಕರು ಜನತೆಯಲ್ಲಿ ಮನವಿ ಮಾಡಿದ್ದಾರೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ಕಂದಕಕ್ಕೆ ಉರುಳಿದ ಕಾರು; ಮೂವರ ದು*ರ್ಮರಣ

    Published

    on

    ಮಂಗಳೂರು/ವಿಜಯಪುರ : ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಕದಂಕಕ್ಕೆ ಉರುಳಿದ ಪರಿಣಾಮ ಮೂವರು ಸಾ*ವನ್ನಪ್ಪಿರುವ ಘಟನೆ ವಿಜಾಪುರ-ಸೋಲಾಪುರ ರಾಷ್ಟ್ರೀಯ ಹೆದ್ದಾರಿ 50ರ ಕನ್ನಾಳ ಕ್ರಾಸ್‌ ಬಳಿ ನಡೆದಿದೆ.

    ವಿಜಯಪುರ ನಗರದ  ಅಭಿಷೇಕ ಸಾವಂತ್(23), ವಿಜಯಕುಮಾರ್ ಔರಂಗಾಬಾದ್(24), ರಾಜು ಬಿರಾದಾರ(23) ಮೃ*ತಪಟ್ಟವರು.

    ಇದನ್ನೂ ಓದಿ : ಟೀ ಮಾರುವವನ ಯಡವಟ್ಟಿಗೆ 13 ಮಂದಿ ಬಲಿ

    ಕಾರಿನಲ್ಲಿ ಐವರು ಸೋಲಾಪುರದಿಂದ ವಿಜಯಪುರಕ್ಕೆ ವಾಪಾಸ್ಸಾಗುತ್ತಿದ್ದಾಗ ಅಪಘಾ*ತ ಸಂಭವಿಸಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Continue Reading

    LATEST NEWS

    ಟೀ ಮಾರುವವನ ಯಡವಟ್ಟಿಗೆ 13 ಮಂದಿ ಬಲಿ

    Published

    on

    ಮುಂಬೈ: ಮಹಾರಾಷ್ಟ್ರದಲ್ಲಿ ರೈಲು ದುರಂತ ಸಂಭವಿಸಿ 13 ಮಂದಿ ಮೃತಪಟ್ಟು 15 ಮಂದಿ ಗಾಯಗೊಂಡಿದ್ದಾರೆ. ಈ ರೈಲು ದುರಂತಕ್ಕೆ ಟೀ ಮಾರುವವನ ಯಡವಟ್ಟೇ ಕಾರಣ ಎಂಬ ವಿಚಾರ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

    ಜಲಗಾಂವ್ ರೈಲು ಅಪಘಾತಕ್ಕೆ ಟೀ ಮಾರುವವನೇ ಕಾರಣ, ಆತನಿಂದಲೇ 13 ಮಂದಿ ಬಲಿಯಾಗಿದ್ದಾರೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿದ್ದಾರೆ.

    ಪುಣೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟೀ ಮಾರುವವನಿಂದಲೇ ಜಲಗಾಂವ್ ರೈಲು ದುರಂತ ಸಂಭವಿಸಿದೆ. ಲಕ್ನೋ-ಮುಂಬೈ ಪುಷ್ಪಕ್ ಎಕ್ಸ್‌ಪ್ರೆಸ್‌  ರೈಲಿನಲ್ಲಿ ಪ್ಯಾಂಟ್ರಿಯಿಂದ ಬಂದ ಟೀ ಮಾರುವವನೊಬ್ಬ ರೈಲಿನಲ್ಲಿ ಬೆಂಕಿ ಹೊತ್ತಿಕೊಂಡಿರುವುದಾಗಿ ಕೂಗಿದ್ದಾನೆ. ಇದನ್ನು ಕೇಳಿಸಿಕೊಂಡ ಉತ್ತರ ಪ್ರದೇಶದ ಶ್ರಾವಸ್ತಿಯ ಮೂಲದ ಇಬ್ಬರು ಅಲ್ಲಿದ್ದ ಇತರರಿಗೂ ತಿಳಿಸಿದ್ದಾರೆ. ಇದರಿಂದ ಗಾಬರಿಗೊಂಡ ಪ್ರಯಾಣಿಕರು ತಮ್ಮ ರಕ್ಷಣೆಗಾಗಿ ರೈಲಿನ ಅಲಾರಾಂ ಚೈನ್‌ನ್ನು ಎಳೆದು ರೈಲನ್ನು ನಿಲ್ಲಿಸಿದ್ದಾರೆ.

    ರೈಲಿನಿಂದ ಇಳಿದ ಪ್ರಯಾಣಿಕರು ಪಕ್ಕದ ರೈಲು ಹಳಿಯ ಮೇಲೆ ನಿಂತಿದ್ದಾರೆ. ಇದೇ ವೇಳೆ ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ಕರ್ನಾಟಕ ಎಕ್ಸ್‌ಪ್ರೆಸ್‌ ರೈಲು ಪ್ರಯಾಣಿಕರು ನಿಂತಿದ್ದ ಹಳಿಯ ಮೇಲೆ ಬಂದಿದೆ. ಪರಿಣಾಮ ಹಳಿಯ ಮೇಲಿಂದ ಇಳಿಯದೇ ಅಲ್ಲೇ ನಿಂತಿದ್ದವರ ಪೈಕಿ 13 ಮಂದಿ ಸಾವನ್ನಪ್ಪಿದ್ದು, 15 ಜನರು ಗಾಯಗೊಂಡಿದ್ದಾರೆ. ಬೆಂಕಿಯಿಂದಾಗಿ ಅಪಘಾತ ಸಂಭವಿಸಿದೆ ಎನ್ನುವುದು ಸುಳ್ಳು, ಸದ್ಯ ಮೃತರ ಪೈಕಿ 10 ಜನರನ್ನು ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದರು.

    ರೈಲ್ವೆ ಇಲಾಖೆ ಮೃತರ ಕುಟಂಬಸ್ಥರಿಗೆ 1.5 ಲಕ್ಷ ರೂ. ಪರಿಹಾರ ಘೋಷಿಸಿದೆ. ಸಂಭವಿಸಿದ ಅಪಘಾತದಲ್ಲಿ ರೈಲ್ವೆಯಿಂದ ಯಾವುದೇ ಸಮಸ್ಯೆಯಾಗಿರಲಿಲ್ಲ. 4.45ಕ್ಕೆ ಪುಷ್ಪಕ್ ಎಕ್ಸ್ಪ್ರೆಸ್ ನಿಂತ 20 ನಿಮಿಷಗಳ ಬಳಿಕ 5.05ಕ್ಕೆ ಕರ್ನಾಟಕ ಎಕ್ಸ್‌ಪ್ರೆಸ್‌ ಬಂದಿದೆ. ಆದರೆ ಜನರು ಹಳಿ ಬಿಟ್ಟು ಕದಡದ ಕಾರಣ ದುರಂತ ಆಗಿದೆ ಎಂದು ರೈಲ್ವೆ ಇಲಾಖೆ ಸ್ಪಷ್ಟನೆ ನೀಡಿದೆ.

    Continue Reading

    DAKSHINA KANNADA

    ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ ನಿಧನ

    Published

    on

    ಮಂಗಳೂರು : ಹಿರಿಯ ಪತ್ರಕರ್ತ  ಗುರುವಪ್ಪ ಬಾಳೆಪುಣಿ  (62)  ಅಲ್ಪಕಾಲದ ಅಸೌಖ್ಯದಿಂದ ಇಂದು(ಜ.24) ಬಾಳೆಪುಣಿಯ ಸ್ವಗೃಹದಲ್ಲಿ ನಿ*ಧನರಾಗಿದ್ದಾರೆ. ಅವರು ಪತ್ನಿ ಹಾಗೂ ಪುತ್ರನನ್ನು ಅ*ಗಲಿದ್ದಾರೆ.

    ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಮಂಗಳೂರು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಬಾಳೆಪುಣಿ  26 ವರ್ಷ ಹೊಸದಿಗಂತ ಪತ್ರಿಕೆಯ ವರದಿಗಾರನಾಗಿ ಕಾರ್ಯ ನಿರ್ವಹಿಸಿದ್ದರು. ಮಂಗಳೂರು ಮಿತ್ರ , ಕರಾವಳಿ ಅಲೆ ಪತ್ರಿಕೆಗಳಲ್ಲಿಯೂ ವರದಿಗಾರನಾಗಿ   ಕರ್ತವ್ಯ ನಿರ್ವಹಿಸಿದ್ದಾರೆ. ಸರಳ, ಸಜ್ಜನಿಕೆಯ ಬಾಳೆಪುಣಿ ಅವರು ಜನಾನುರಾಗಿಯಾಗಿದ್ದರು.

    ಇದನ್ನೂ ಓದಿ: ಮಾಜಿ ಕ್ರಿಕೆಟಿಗ ಸೆಹ್ವಾಗ್-ಆರತಿ ದಾಂಪತ್ಯದಲ್ಲಿ ಬಿರುಕು ?

    ಹರೇಕಳ ಹಾಜಬ್ಬ ಅವರನ್ನು ಮೊದಲ ಬಾರಿಗೆ ನಾಡಿಗೆ  ಪರಿಚಯಿಸಿದ ಕೀರ್ತಿ  ಗುರುವಪ್ಪ ಬಾಳೆಪುಣಿ ಅವರದು. ಪತ್ರಿಕೋದ್ಯಮದ ಅವರ ಮೇರು ಸಾಧನೆಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ರಾಜ್ಯ ಸರ್ಕಾರದ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ, ರಾಷ್ಟ್ರೀಯ ಮಟ್ಟದ ಸರೋಜಿನಿ ನಾಯ್ಡು ಪ್ರಶಸ್ತಿ ಸಹಿತ ಹಲವು ಪ್ರಶಸ್ತಿ ಅವರ ಮುಡಿಗೇರಿದೆ.

    Continue Reading

    LATEST NEWS

    Trending