Connect with us

    ಸಾರ್ವಜನಿಕರ ದೂರಿನ ಹಿನ್ನಲೆ ಬಿಜೈ ಆರೋಗ್ಯ ಕೇಂದ್ರಕ್ಕೆ ವಿಸಿಟ್ ಕೊಟ್ಟ ಶಾಸಕ ಕಾಮತ್

    Published

    on

    ಸಾರ್ವಜನಿಕರ ದೂರಿನ ಹಿನ್ನಲೆ ಬಿಜೈ ಆರೋಗ್ಯ ಕೇಂದ್ರಕ್ಕೆ ವಿಸಿಟ್ ಕೊಟ್ಟ ಶಾಸಕ ಕಾಮತ್

    ಮಂಗಳೂರು: ಮಂಗಳೂರಿನ ಬಿಜೈ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮಸ್ಯೆಯ ಕುರಿತು, ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಬಳಿಕ ಮಾತನಾಡಿದ ಅವರು, ಮಂಗಳೂರು ನಗರದ ಬಿಜೈ ಪ್ರಾಥಮಿಕ ಆರೋಗ್ಯ ಕೇಂದ್ರದ ಕುರಿತು ಸಾರ್ವಜನಿಕರು ಹಾಗೂ ಮಾಧ್ಯಮಗಳಲ್ಲಿ ದೂರು ಬಂದ ಕಾರಣ ಭೇಟಿ ನೀಡಿ ಅಲ್ಲಿನ ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ.

    ಇಲ್ಲಿಗೆ ಭೇಟಿ ನೀಡುವ ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ಎಚ್ಚರ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

    ಇನ್ನು ಬಿಜೈ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕೇಂದ್ರದ ಮುಂಭಾಗದಲ್ಲಿ ಪರ್ಯಾಯ ವ್ಯವಸ್ಥೆಯ ಕುರಿತು ಜಿಲ್ಲಾ ಆರೋಗ್ಯಾಧಿಕಾರಿಗಳ ಜೊತೆ ಚರ್ಚಿಸಿದ್ದೇನೆ.

    ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

    Click to comment

    Leave a Reply

    Your email address will not be published. Required fields are marked *

    LATEST NEWS

    ಇನ್ಮುಂದೆ ಅನ್ನಪೂರ್ಣೇಶ್ವರಿ ದರ್ಶನಕ್ಕೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ…!

    Published

    on

    ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹೊರನಾಡಿನಲ್ಲಿ ನೆಲೆಸಿರುವ ಅನ್ನಪೂರ್ಣೇಶ್ವರಿ ದರ್ಶನಕ್ಕೆ ಸಾಂಪ್ರದಾಯಿಕ ಉಡುಗೆಯನ್ನು ಕಡ್ಡಾಯ ಮಾಡಿದ್ದು, ಭಕ್ತರು ಈ ನಿಯಮವನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಅಡಳಿತ ಮಂಡಳಿ ಮನವಿ ಮಾಡಿಕೊಂಡಿದೆ.

    ಗಂಡಸರು ಶಲ್ಯ, ಪ್ಯಾಂಟ್, ಪಂಚೆ ಧರಿಸಬೇಕು. ಹೆಣ್ಣು ಮಕ್ಕಳು ಸೀರೆ ಹಾಗೂ ಚೂಡಿದಾರ ಧರಿಸುವಂತೆ ದೇವಾಲಯದ ಆಡಳಿತ ಮಂಡಳಿ ಆದೇಶ ಹೊರಡಿಸಿದೆ. ಸಾಂಪ್ರದಾಯಿಕ ಉಡುಗೆಯಲ್ಲಿ ಬರದಿದ್ದರೆ ದೇವಸ್ಥಾನದ ಒಳಗೆ ಪ್ರವೇಶವಿಲ್ಲ ಅಂತ ಅಡಳಿತ ಮಂಡಳಿ ತಿಳಿಸಿದೆ.

    Continue Reading

    LATEST NEWS

    ಎಂಟು ಕಾಲುಗಳೊಂದಿಗೆ ಜನಿಸಿದ ಕರು..! ಈ ವಿಚಿತ್ರ ನೋಡಲು ಮುಗಿಬಿದ್ದ ಜನ..!!

    Published

    on

    ಉತ್ತರಪ್ರದೇಶ/ಮಂಗಳೂರು: ಇಲ್ಲಿನ ಗ್ರಾಮದ ರೈತರೊಬ್ಬರ ಮನೆಯಲ್ಲಿ ಎಮ್ಮೆಯೊಂದು ಎಂಟು ಕಾಲುಗಳಿರುವ ಕರುವಿಗೆ ಜನ್ಮ ನೀಡುವ ಮೂಲಕ ವಿಸ್ಮಯವನ್ನುಂಟುಮಾಡಿದೆ. ಅಲ್ಲದೇ ಈ ವಿಚಿತ್ರ ಕರುವನ್ನು ನೋಡಲು ಊರವರೆಲ್ಲಾ ಮನೆಗೆ ದೌಡಾಯಿಸಿದ್ದಾರೆ.

    ಎರಡು ಬೆನ್ನು ಹಾಗೂ ಎಂಟು ಕಾಲು ಹಾಗೂ ಒಂದು ತಲೆಯೊಂದಿಗೆ ಜನಿಸಿದ ಈ ಕರುವನ್ನು ನೋಡಿ ಎಲ್ಲರೂ ಬೆಚ್ಚಿ ಬಿದ್ದಿದ್ದಾರೆ.  ಕರುವನ್ನು ಪರೀಕ್ಷಿಸಿದ ವೈದ್ಯರು ಆನುವಂಶಿಕ ದೋಷದಿಂದ ಇಂತಹ ಕರುಗಳು ಜನಿಸುತ್ತವೆ ಎಂದು ಹೇಳಿದ್ದಾರೆ. ಈ ಘಟನೆ ಸ್ಥಳೀಯರು ಹಾಗೂ ನೆಟ್ಟಿಗರ ಗಮನ ಸೆಳೆದಿದೆ.

    ಕರುವಿನ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

    Continue Reading

    FILM

    ‘ಬಿಗ್ ಬಾಸ್’ ಟೀಮ್ ಜೊತೆ ಅಪ್‌ಡೇಟ್ ಹೊತ್ತು ತರುತ್ತಿದ್ದಾರೆ ಸುದೀಪ್- ಏನದು?

    Published

    on

    ‘ಬಿಗ್ ಬಾಸ್ ಕನ್ನಡ 11’ಕ್ಕೆ ಕೌಂಟ್ ಡೌನ್ ಶುರುವಾಗಿದೆ. ಇದೇ ಸೆ.29ಕ್ಕೆ ಶೋ ಅದ್ಧೂರಿಯಾಗಿ ಆಗಿ ಲಾಂಚ್ ಆಗಲಿದೆ. ಶೋ ಚಾಲನೆಗೂ ಮುನ್ನ ಬಿಗ್ ಬಾಸ್ ತಂಡದ ಜೊತೆ ಬಿಗ್ ಅಪ್‌ಡೇಟ್‌ವೊಂದನ್ನು ಸುದೀಪ್ ಹೊತ್ತು ತರುತ್ತಿದ್ದಾರೆ.

    ಹೊಸ ಸೀಸನ್ ಪ್ರಾರಂಭಕ್ಕೆ ಬಿಗ್ ಬಾಸ್ ತಂಡ ತೆರೆಮರೆಯಲ್ಲಿ ಎಲ್ಲ ರೀತಿಯಲ್ಲೂ ತಯಾರಿ ಮಾಡಿಕೊಳ್ಳುತ್ತಿದೆ. ಈಗ ಬಿಗ್ ಬಾಸ್ ತಂಡದಿಂದ ಸುದ್ದಿಗೋಷ್ಠಿ ಆಯೋಜಿಸಲಾಗಿದೆ. ಇಂದು 3 ಗಂಟೆ ಸುಮಾರಿಗೆ ಬಿಗ್ ಬಾಸ್ ಸೀಸನ್ 11ರ ಬಗ್ಗೆ ಅಧಿಕೃತ ಚಾಲನೆ ಸಿಗಲಿದೆ. ಈ ಸುದ್ದಿಗೋಷ್ಠಿಯಲ್ಲಿ ಸುದೀಪ್ ಕೂಡ ಭಾಗಿಯಾಗಲಿದ್ದಾರೆ. ಹಲವು ವಿಚಾರಗಳ ಕುರಿತು ನಟ ಮಾತನಾಡಲಿದ್ದಾರೆ.

    ಮೊದಲ ಸೀಸನ್‌ನಿಂದ ಹಿಡಿದು ಹತ್ತು ಸೀಸನ್‌ಗಳು ಯಶಸ್ವಿಯಾಗಿ ಪ್ರಸಾರ ಕಂಡಿದೆ. ಇದೀಗ ಬಿಗ್ ಬಾಸ್ ಶೋ 11ನೇ ಸೀಸನ್‌ಗೆ ಕಾಲಿಟ್ಟಿದೆ. ಈಗಾಗಲೇ ಪ್ರೋಮೋಗಳ ಮೂಲಕ ಬಿಗ್ ಬಾಸ್ ಸೀಸನ್ 11ರ ಮೇಲೆ ಫ್ಯಾನ್ಸ್‌ಗೆ ಸಾಕಷ್ಟು ನಿರೀಕ್ಷೆಯಿದೆ. ಜೊತೆಗೆ ಈ ಬಾರಿ ಸುದೀಪ್ ಕಾರ್ಯಕ್ರಮ ನಿರೂಪಣೆ ಮಾಡ್ತಿಲ್ಲ ಅನ್ನೋ ಸುದ್ದಿಯೂ ಹರಿದಾಡಿತ್ತು. ಆ ನಂತರ ಪ್ರೋಮೋದಲ್ಲಿ ನಟನ ಆಗಮನದ ಮೂಲಕ ವದಂತಿಗಳಿಗೆ ಬ್ರೇಕ್‌ ಬಿದ್ದಿತ್ತು.

    ಅಂದಹಾಗೆ, ಬಿಗ್ ಬಾಸ್‌ಗೆ ಬರಲಿರುವ ಕೆಲ ಸ್ಪರ್ಧಿಗಳ ಹೆಸರು ಸದ್ದು ಮಾಡುತ್ತಿದೆ. ಮೋಕ್ಷಿತಾ ಪೈ, ಹುಲಿ ಕಾರ್ತಿಕ್, ಸುಕೃತಾ ನಾಗ್, ಕಿರುತೆರೆ ನಟಿ ಅಮೂಲ್ಯ, ಭವ್ಯಾ ಗೌಡ, ವರ್ಷಾ ಕಾವೇರಿ ಸೇರಿದಂತೆ ಅನೇಕರು ಹೆಸರು ಚಾಲ್ತಿಯಲ್ಲಿದೆ. ಯಾರೆಲ್ಲಾ ದೊಡ್ಮನೆ ಬರುತ್ತಾರೆ ಎಂಬುದನ್ನು ಕಾದುನೋಡಬೇಕಿದೆ. ಶೋ ಶುರುವಾದ್ಮೇಲೆ ಎಲ್ಲದ್ದಕ್ಕೂ ಉತ್ತರ ಸಿಗಲಿದೆ.

    Continue Reading

    LATEST NEWS

    Trending