Connect with us

ಹಳೆಕೋಟೆ ಮಾರಿಯಮ್ಮ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಕಾಮತ್

Published

on

ಹಳೆಕೋಟೆ ಮಾರಿಯಮ್ಮ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಕಾಮತ್

ಮಂಗಳೂರು: ಕರಾವಳಿಯ ಅತ್ಯಂತ ಪುರಾತನ ದೇಗುಲಗಳಲ್ಲಿ ಒಂದಾದ ಬೋಳಾರ ಹಳೇಕೋಟೆ ಮಾರಿಯಮ್ಮ ಮಹಿಷಮರ್ಧಿನಿ ದೇವಸ್ಥಾನದ ಆವರಣದಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಗುದ್ದಲಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸುಮಾರು 800 ವರ್ಷಗಳ ಇತಿಹಾಸವಿರುವ ಬೋಳಾರ ಹಳೆಕೋಟೆ ಮಾರಿಯಮ್ಮ ಮಹಿಷಮರ್ಧಿನಿ ದೇವಸ್ಥಾನವು ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಪೌರಾಣಿಕ ಇತಿಹಾಸದ ಕುರುಹುಗಳನ್ನು ಉಳಿಸಿಕೊಂಡಿರುವ ದೇವಾಲಯಗಳಲ್ಲಿ ಒಂದಾಗಿದೆ.

ನಗರದ ಪ್ರಮುಖ ಕ್ಷೇತ್ರಗಳ ಅಭಿವೃದ್ಧಿಯ ಕುರಿತು ವಿಶೇಷ ಕಾಳಜಿ ವಹಿಸಿರುವ ನಮ್ಮ ಸರಕಾರ ಶ್ರೀ ಕ್ಷೇತ್ರದ ಅಭಿವೃದ್ಧಿಯ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ 20 ಲಕ್ಷ ಅನುದಾನ ಬಿಡುಗಡೆಗೊಳಿಸಿದೆ.

ಅದಕ್ಕಾಗಿ ಪ್ರವಾಸೋದ್ಯಮ ಹಾಗೂ ಮುಜರಾಯಿ ಸಚಿವರಿಬ್ಬರಿಗೂ ಕೂಡ ಧನ್ಯವಾದ ಅರ್ಪಿಸಬೇಕು ಎಂದಿದ್ದಾರೆ.

ಕರಾವಳಿ ಪ್ರದೇಶದಲ್ಲಿ ಅನೇಕ ಪುರಾತನ ಕಾಲದ ದೇವಾಲಯಗಳಿವೆ.

ಇವೆಲ್ಲವನ್ನೂ ಅಭಿವೃದ್ಧಿಪಡಿಸುವ ಮಹತ್ತರವಾದ ಹೊಣೆಗಾರಿಕೆಯೊಂದಿಗೆ ನಾವೆಲ್ಲರೂ ಒಂದಾಗಿ ಶ್ರಮಿಸಬೇಕು.

ಧಾರ್ಮಿಕ ನಂಬಿಕೆಗಳನ್ನು ಬಲಪಡಿಸಬೇಕಿದ್ದರೆ ಕ್ಷೇತ್ರಗಳ ಅಭಿವೃದ್ಧಿ ಅಗತ್ಯವೆಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.

ಈ ಸಂದರ್ಭ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ  ನವನೀತ ಶೆಟ್ಟಿ ಕದ್ರಿ, ಸ್ಥಳೀಯ ಕಾರ್ಪೊರೇಟರ್ ಗಳಾದ ಶ್ರೀಮತಿ ರೇವತಿ ಶ್ಯಾಮಸುಂದರ, ಶ್ರೀ ಪ್ರೇಮಾನಂದ  ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ತಾರನಾಥ ಶೆಟ್ಟಿ ಬೋಳಾರ,

ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸೀತಾರಾಮ, ಬಿ. ಕೇಶವ ಶೆಟ್ಟಿ, ಪ್ರಧಾನ ಅರ್ಚಕ ನಾರಾಯಣ ಭಟ್, ಪ್ರವೀಣ್ ಶೇಟ್, ದೀಪಕ್ ಪೈ, ರಮಾನಂದ ಪೂಜಾರಿ,

ಗಂಗಾಧರ ಕೋಟ್ಯಾನ್, ಮುರುಳಿಧರ್ ಬೋಳಾರ್, ಉಮಾನಾಥ ಶೆಟ್ಟಿಗಾರ್ ಸೇರಿದಂತೆ ಹಲವು ಗಣ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

LATEST NEWS

ಓಂ ಶಕ್ತಿ ದರ್ಶನ ಪಡೆದು ವಾಪಾಸಾಗುತ್ತಿದ್ದಾಗ ದುರಂ*ತ; ಐವರು ಸಾ*ವು

Published

on

ಮಂಗಳೂರು/ ಕೋಲಾರ : ತಮಿಳುನಾಡಿನ ರಾಣಿಪೇಟೆ ಬಳಿ ಭೀ*ಕರ ಅಪ*ಘಾತ ಸಂಭವಿಸಿದ್ದು, ಕೋಲಾರದ ನಾಲ್ವರು ಸೇರಿ ಐವರು ಮೃ*ತಪಟ್ಟಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕ್ಯಾಂಟರ್ ನಡುವೆ ಅಪಘಾ*ತ ಸಂಭವಿಸಿದ್ದು, ಬಸ್ ಚಾಲಕ ಹಾಗೂ ಕ್ಯಾಂಟರ್‌ನಲ್ಲಿದ್ದ ನಾಲ್ವರು ಸಾ*ವನ್ನಪ್ಪಿದ್ದಾರೆ.  ಬಸ್‌ನಲ್ಲಿದ್ದ ಓರ್ವ ಮಹಿಳೆ ಗಂ*ಭೀರವಾಗಿ ಗಾ*ಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕ್ಯಾಂಟರ್ ಚಾಲಕ ಮಂಜುನಾಥ್, ಕ್ಲೀನರ್ ಶಂಕರ್, ಸಹಾಯಕ ಸೋಮಶೇಖರ್, ವೆಂಕಟೇಶ್, ಕೃಷ್ಣಪ್ಪ ಮೃ*ತಪಟ್ಟವರು. ನಲ್ಲೂರು ಗ್ರಾಮದ ಸರಸ್ವತಮ್ಮ ಗಂಭೀ*ರವಾಗಿ ಗಾ*ಯಗೊಂಡ ಮಹಿಳೆ.

ಮುಳಬಾಗಿಲು ತಾಲೂಕಿನ ನಲ್ಲೂರು ಗ್ರಾಮದ 50 ಮಂದಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ತಮಿಳುನಾಡಿನ ಮೇಲ್ಮರವತ್ತೂರು ಓಂ ಶಕ್ತಿ ದೇವಾಲಯಕ್ಕೆ ಹೋಗಿ ವಾಪಾಸಾಗುತ್ತಿದ್ದರು. ಕ್ಯಾಂಟರ್ ಶ್ರೀನಿವಾಸಪುರ ತಾಲೂಕು ಸೀಗೆಹಳ್ಳಿ ಗ್ರಾಮದಿಂದ ಚೆನ್ನೈಗೆ ತರಕಾರಿ ತುಂಬಿಕೊಂಡು ಹೋಗುತ್ತಿತ್ತು.

ಇದನ್ನೂ ಓದಿ : ಮಗುವಿಗೆ ಸು*ಟ್ಟು ಗಾಯ ಮಾಡಿದ ಪ್ರಕರಣ; ಆರೋಪಿ ತಾಯಿಗೆ ಶಿಕ್ಷೆ ಪ್ರಕಟ

ಗಾ*ಯಾಳುಗಳನ್ನು ವೇಲೂರು ಸಿಎಂಸಿ ಆಸ್ಪತ್ರೆ, ರತ್ನಗಿರಿಯ ಮೆಡಿಕಲ್ ಕಾಲೇಜಿಗೆ ದಾಖಲಿಸಲಾಗಿದೆ. ರಾಣಿಪೇಟೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Continue Reading

LATEST NEWS

KSRTC ಗುತ್ತಿಗೆ ಬಸ್ ದರದಲ್ಲೂ ಏರಿಕೆ: ಪ್ರತಿ ಕಿ.ಮೀ.ಗೆ 7 ರೂ. ಹೆಚ್ಚಳ

Published

on

ಬೆಂಗಳೂರು: ಬಸ್ ಪ್ರಯಾಣ ದರವನ್ನು ಶೇಕಡಾ 15 ರಷ್ಟು ಹೆಚ್ಚಿಸಿದ ಕೆಲವೇ ದಿನಗಳಲ್ಲಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಗುತ್ತಿಗ ಆಧಾರದ ಮೇಲೆ ಪಡೆಯುವ ಬಸ್ ಗಳ ಪ್ರಯಾಣ ದರವನ್ನೂ ಹೆಚ್ಚಳ ಮಾಡಿದೆ.

ಪ್ರವಾಸ, ತೀರ್ಥ ಯಾತ್ರೆ, ರಾಜಕೀಯ ರ್ಯಾಲಿ ಮದುವೆ ಹಾಗೂ ಇತರೆ ಕಾರ್ಯಕ್ರಮಗಳಿಗೆ ಕೆಎಸ್ಆರ್’ಟಿಸಿ ಬಸ್ ಗಳನ್ನು ಬಾಡಿಗೆಗೆ ನೀಡಲಾಗುತ್ತದೆ. ಈ ಬಸ್ ಗಳ ದರವನ್ನೂ ಇದೀಗ ಪರಿಷ್ಕರಿಸಲಾಗಿದೆ. ಇಷ್ಟು ದಿನ ಪ್ರತಿ ಕಿಮೀ.ಗೆ 47 ರೂ ದರದಲ್ಲಿ ಬಸ್ ಗಳನ್ನು ಬಾಡಿಗೆಗೆ ನೀಡಲಾಗುತ್ತಿತ್ತು. ಇದೀಗ ಈ ದರನ್ನು 54 ರೂ.ಗೆ ಪರಿಷ್ಕರಿಸಲಾಗಿದ್ದು, ಇದರ ಪರಿಣಾಮ ಪ್ರತಿ ಕಿ.ಮೀ.ಗೆ 7 ರೂ. ಹೆಚ್ಚಳವಾಗಿದೆ. ಕರ್ನಾಟಕದ ಹೊರಗಿನ ಸೇವೆಗಳಿಗೆ, ಪ್ರತಿ ಕಿ.ಮೀ.ಗೆ 50 ರೂ.ನಿಂದ 57 ರೂ.ಗೆ ಹೆಚ್ಚಿಸಲಾಗಿದೆ.

ರಾಜ್ಯದೊಳಗೆ ಪ್ರತಿ ಕಿ.ಮೀ.ಗೆ 52 ರೂ.ನಂತೆ ಕಾರ್ಯನಿರ್ವಹಿಸುತ್ತಿದ್ದ ಅಶ್ವಮೇಧ ಸೇವೆಗಳನ್ನು ಪ್ರತಿ ಕಿ.ಮೀ.ಗೆ 58 ರೂ.ಗೆ ಹೆಚ್ಚಿಸಲಾಗಿದೆ, ಇದರಂತೆ ಪ್ರತಿ ಕಿ.ಮೀ.ಗೆ 6 ರೂ. ಹೆಚ್ಚಳವಾಗಿದೆ. ರಾಜಹಂಸ, ಐರಾವತ, ಪಲ್ಲಕ್ಕಿ, ಅಂಬಾರಿ, ಮಿಡಿ ಬಸ್, ಎಸಿ ಅಲ್ಲದ ಸ್ಲೀಪರ್, ಫ್ಲೈ ಬಸ್ ಮತ್ತು ಇತರ ಎಲ್ಲಾ ಬಸ್ ಸೇವೆಗಳ ದರವನ್ನೂ ಹೆಚ್ಚಳ ಮಾಡಲಾಗಿದೆ.

ಮುಂಗಡವಾಗಿ ಸೇವೆಗಳನ್ನು ಬುಕ್ ಮಾಡಿದವರಿಗೆ ಹಳೆಯ ದರಗಳ ಪ್ರಕಾರ ಶುಲ್ಕ ವಿಧಿಸಲಾಗುತ್ತದೆ. ಅಶ್ವಮೇಧದ ದರಗಳು ಕರ್ನಾಟಕದೊಳಗೆ ಪ್ರತಿ ಕಿ.ಮೀ.ಗೆ 58 ರೂ. ಮತ್ತು ರಾಜ್ಯದ ಹೊರಗೆ 61 ರೂ. ಇರಲಿದೆ. ರಾಜಹಂಸ ಬಸ್ ಸೇವೆ ದರ ಕರ್ನಾಟಕದೊಳಗೆ ಪ್ರತಿ ಕಿ.ಮೀ.ಗೆ 59 ರೂ. ಮತ್ತು ಹೊರಗೆ 63 ರೂ., ಪಲ್ಲಕ್ಕಿ ಬಸ್‌ಗಳ ದರ ಕರ್ನಾಟಕದೊಳಗೆ ಪ್ರತಿ ಕಿ.ಮೀ.ಗೆ 80 ರೂ. ಮತ್ತು ರಾಜ್ಯದ ಹೊರಗೆ 85 ರೂ ಇರಲಿದೆ.

ಜನವರಿ 7 ರಂದು ಸಾರಿಗೆ ನಿಗಮ ಸುತ್ತೋಲೆ ಹೊರಡಿಸಿದ್ದು, ಡೀಸೆಲ್ ದರ ಹೆಚ್ಚಳ ಮತ್ತು ನೌಕರರ ವೇತನದಲ್ಲಿನ ಹೆಚ್ಚಳದಿಂದಾಗಿ ಕಾರ್ಯಾಚರಣೆಯ ವೆಚ್ಚದಲ್ಲಿ ಹೆಚ್ಚಳ ಮಾಡಲಾಗಿದೆ. ನಿಯಮಿತ ದೈನಂದಿನ ಕಾರ್ಯಾಚರಣೆಗಳಿಂದ ಬರುವ ಆದಾಯದ ಜೊತೆಗೆ, ಒಪ್ಪಂದದ ಸೇವೆಗಳು ಬಸ್ ನಿಗಮಕ್ಕೆ ಆದಾಯದ ಪ್ರಮುಖ ಮೂಲಗಳಾಗಿವೆ. ಹೆಚ್ಚುತ್ತಿರುವ ಕಾರ್ಯಾಚರಣೆಯ ವೆಚ್ಚಗಳಿಂದಾಗಿ ಬೆಲೆಯನ್ನು ಹೆಚ್ಚಿಸುವುದು ಅನಿವಾರ್ಯವಾಗಿದೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

Continue Reading

BANTWAL

ಬಂಟ್ವಾಳ: ಇಡಿ ಅಧಿಕಾರಿಗಳ ಸೋಗಿನಲ್ಲಿ ಹಣ ದೋಚಿದ ಮನೆಗೆ ಸ್ಪೀಕರ್ ಯು.ಟಿ. ಖಾದರ್ ಭೇಟಿ

Published

on

ಬಂಟ್ವಾಳ: ಇಡಿ ಅಧಿಕಾರಿಗಳ ಸೋಗಿನಲ್ಲಿ ಹಣ ದರೋಡೆಯಾಗಿರುವ ಬಂಟ್ವಾಳ ತಾಲೂಕಿನ ಬೋಳಂತೂರು ನಾರ್ಶದ ಸಿಂಗಾರಿ ಬೀಡಿ ಮಾಲಕ ಸುಲೈಮಾನ್ ಹಾಜಿ ಅವರ ಮನೆಗೆ ಸ್ಪೀಕರ್ ಯು.ಟಿ. ಖಾದರ್, ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ತಂಡ ಬುಧವಾರ ಬೆಳಗ್ಗೆ ಭೇಟಿ ನೀಡಿ ತನಿಖೆಯ ಪ್ರಗತಿ ಪರಿಶೀಲನೆ ಮತ್ತು ಕಾರ್ಯವಿಧಾನದ ಕುರಿತು ಮನೆಯವರ ಜೊತೆಗೆ ಗೌಪ್ಯ ಸಮಾಲೋಚನೆ ನಡೆಸಿದರು.

ಇದೇ ವೇಳೆ ಮಾತನಾಡಿದ ಸ್ಪೀಕರ್ ಯು.ಟಿ.ಖಾದರ್ ಅವರು, ತನಿಖೆ ಇನ್ನಷ್ಟು ತೀವ್ರಗೊಳಿಸಲು ಪೊಲೀಸ್ ಇಲಾಖೆಯು ಆಧುನಿಕ ತಂತ್ರಜ್ಞಾನದೊಂದಿಗೆ ಉನ್ನತ ಮಟ್ಟದ ತನಿಖೆ ನಡೆಸುತ್ತಿದೆ. ಇದಕ್ಕೆ ಊರವರ ಮತ್ತು ಮನೆಯವರ ಸಹಕಾರ ಅಗತ್ಯ. ಈಗಾಗಲೇ ಡಿವೈಎಸ್ಪಿ ನೇತೃತ್ವದ 4 ತಂಡಗಳನ್ನು ರಚಿಸಲಾಗಿದೆ. ಕೇರಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಈ ತಂಡ ಕಾರ್ಯಾಚರಣೆ ನಡೆಸುತ್ತಿದೆ. ಶೀಘ್ರವೇ ದರೋಡೆಕೋರರ ಪತ್ತೆ ಹಚ್ಚುವಲ್ಲಿ ಕ್ರಮಕೈಗೊಳ್ಳಲಾಗುವುದು ಎಂದರು.

ಇದಕ್ಕೂ ಮುನ್ನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್, ಡಿವೈಎಸ್ಪಿ ವಿಜಯ ಪ್ರಸಾದ್ ಜೊತೆಗೆ ದರೋಡೆಗೊಳಗಾದ ಮನೆಯ ಮಾಲಕ ಸುಲೈಮಾನ್ ಹಾಜಿ ಹಾಗೂ ಪುತ್ರ ಇಕ್ಬಾಲ್ ಜೊತೆಗೆ ಗೌಪ್ಯ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಬಂಟ್ವಾಳ ಜಮೀಯ್ಯತುಲ್ ಫಲಾಹ್ ಅಧ್ಯಕ್ಷ ರಶೀದ್ ವಿಟ್ಲ, ವಿಟ್ಲ ಪೊಲೀಸ್ ಇನ್ಸ್ ಪೆಕ್ಟರ್ ಎಚ್.ಇ. ನಾಗರಾಜ್, ಸಬ್ ಇನ್ಸ್ ಪೆಕ್ಟರ್ ವಿದ್ಯಾ ಮೊದಲಾದವರು ಉಪಸ್ಥಿತರಿದ್ದರು.

Continue Reading

LATEST NEWS

Trending

Exit mobile version