Wednesday, July 28, 2021

ಮುಡಿಪು ಪರಿಸರದ ಕೆಂಪು ಮಣ್ಣು ಗಣಿಗಾರಿಕೆಯ ಶಾಸಕರೋರ್ವರ ಸಂಬಂಧಿಕರು ಶಾಮೀಲು : ರಮಾನಾಥ ರೈ

ಮುಡಿಪು ಪರಿಸರದ ಕೆಂಪು ಮಣ್ಣು ಗಣಿಗಾರಿಕೆಯ ಶಾಸಕರೋರ್ವರ ಸಂಬಂಧಿಕರು ಶಾಮೀಲು : ರಮಾನಾಥ ರೈ

ಮಂಗಳೂರು  : ನಗರ ಹೊರವಲಯದ ಮುಡಿಪು ಪರಿಸರದಲ್ಲಿ ಕೆಂಪು ಮಣ್ಣು ಗಣಿಗಾರಿಕೆಯನ್ನು ಅಕ್ರಮವಾಗಿ ಮಾಡಲಾಗುತ್ತಿದೆ. ಇಲ್ಲಿ ನಡೆಯುವ ದಂಧೆ ಬಗ್ಗೆ ರಾಜ್ಯ ಸರಕಾರ ವಿಶೇಷ ತನಿಖೆ ಮಾಡಬೇಕು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ನೇತೃತ್ವದಲ್ಲಿ ಇದನ್ನು ತನಿಖೆ ನಡೆಸಬೇಕೆಂದು ಮಾಜಿ ಸಚಿವ ಬಿ ರಮಾನಾಥ್ ರೈ ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಕಲಿ ದಾಖಲೆಗಳನ್ನು ಇಟ್ಟು ಅಕ್ರಮ ಕೆಂಪು ಮಣ್ಣಿನ ಮರಳುಗಾರಿಕೆಯನ್ನು ಮಾಡಲಾಗುತ್ತಿದೆ.

ಈ ದಂಧೆಯಲ್ಲಿ ತಮಿಳುನಾಡು, ಆಂಧ್ರಪ್ರದೇಶ,ಕೇರಳದ ಜನರೂ ಶಾಮೀಲಾಗಿದ್ದಾರೆ.ಮಾತ್ರವಲ್ಲ ಹಾಲಿ ಶಾಸಕರೋರ್ವರ ಸಂಬಂಧಿಕರು ಈ ಅಕ್ರಮದಲ್ಲಿ ಪಾಲ್ಗೊಂಡಿದ್ದಾರೆ.

ಜಿಲ್ಲೆಯ ಗಂಜಿಮಠದಲ್ಲಿ ಪರ್ಮೀಟ್ ಪಡೆದು ಬೇರೆ ಕಡೆಯಲ್ಲಿ ಗಣಿಗಾರಿಕೆ ಮಾಡುತ್ತಿದ್ದಾರೆ. ಇನ್ನು ಗಣಿಗಾರಿಕೆ ನಡೆಯುವ ಪ್ರದೇಶದಲ್ಲಿ ಇನ್ಫೋಸಿಸ್ ಕಂಪೆನಿ ಕೂಡಾ ಇದೆ. ಈ ಹಿಂದೆ ಈ ಪ್ರದೇಶಕ್ಕೆ ಮಂಗಳೂರಿನ ಎಸಿ ರೈಡ್ ಮಾಡಿದ್ದರು.

ಅವರನ್ನು ಈಗ ಬೇರೆ ಕಡೆ ವರ್ಗಾವಣೆ ಮಾಡಲಾಗಿದೆ. ಆದ್ದರಿಂದ ಕೂಡಲೇ ಇದಕ್ಕೆ ಕಡಿವಾಣ ಹಾಕಬೇಕೆಂದು ಅವರು ಆಗ್ರಹಿಸಿದರು.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...