ಬೆಂಗಳೂರು: ವಿಧಾನಪರಿಷತ್ತಿನ ಪ್ರತಿಪಕ್ಷ ನಾಯಕ ಸ್ಥಾನ ಬಿ.ಕೆ. ಹರಿಪ್ರಸಾದ್ ಪಾಲಾದ ಮೇಲಿನ ಆ ಹುದ್ದೆ ಮೇಲೆ ಕಣ್ಣಿಟ್ಟಿದ್ದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ವಿಧಾನಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ ಪಕ್ಷ ತೊರೆಯಲು ನಿರ್ಧರಿಸಿದ್ದಾರೆ. ವಿಧಾನ ಪರಿಷತ್ ಸದಸ್ಯತ್ವಕ್ಕೂ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.
ಸಿದ್ದರಾಮಯ್ಯ ಅವರಿಗಾಗಿ ದೇವೇಗೌಡರನ್ನು ಬಿಟ್ಟು, ಕಾಂಗ್ರೆಸ್ ಗೆ ಬಂದೆ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅವರು ಸೋತಾಗ ಬಾದಾಮಿಯಲ್ಲಿ ನಿಲ್ಲಿಸಿ,
ಅಲ್ಲಿನ ಮುಖಂಡರೊಂದಿಗೆ ಮಾತುಕತೆ ನಡೆಸಿ, ಗೆಲ್ಲಿಸುವ ಮೂಲಕ ಹೊಸ ರಾಜಕೀಯ ಜೀವನ ಕೊಟ್ಟೆವು, ಆದರೆ, ಇದೀಗ ಅವರ ಹೊಸ ಉಡುಗೊರೆ ನೀಡಿದ್ದಾರೆ ಎಂದರು.
ಸೋನಿಯಾ ಗಾಂಧಿ ನಮ್ಮ ಮೇಲಿದ್ದ ಬಾರ ಕಡಿಮೆ ಮಾಡಿದ್ದಾರೆ. ನಿರ್ಧಾರ ತೆಗೆದುಕೊಳ್ಳಲು ನಾನೀಗ ಸ್ವತಂತ್ರನಾಗಿದ್ದೇನೆ. ಕಾಂಗ್ರೆಸ್ ಗೂ ನಮಗೂ ಮುಗಿದ ಅಧ್ಯಾಯ.
ಈ ಸಂಬಂಧ ಶೀಘ್ರದಲ್ಲಿಯೇ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳುವುದಾಗಿ ಅವರು ತಿಳಿಸಿದರು.
ಕಾಂಗ್ರೆಸ್ ಗೆ ಸಾಬರು ಮತದಾರರು. ಸಾಬರು ಇಲ್ಲ ಅಂದ ಮೇಲೆ ಪರಿಸ್ಥಿತಿ ಏನಾಗಲಿದೆ? ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 80 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಈ ಬಾರಿಯ ಚುನಾವಣೆಯಲ್ಲಿ ಅದಕ್ಕಿಂತಲೂ ಕಡಿಮೆ ಸ್ಥಾನಗಳು ಕಾಂಗ್ರೆಸ್ ಗೆ ಬರಲಿವೆ ಎಂದರು.