Connect with us

    LATEST NEWS

    MLC ಚುನಾವಣೆ: ದ.ಕ ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ

    Published

    on

    ಮಂಗಳೂರು: ಮುಂಬರುವ ವಿಧಾನಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಲು ಆರಂಭಿಸಿದೆ.

    ಇನ್ನು ಕೆಲವೇ ತಿಂಗಳಲ್ಲಿ ಎರಡು ಪರಿಷತ್ ಸ್ಥಾನಗಳಿಗೆ ಚುನಾವಣೆಗೆ ಘೋಷಣೆಯಾಗಲಿದ್ದು, ಕಾಂಗ್ರೆಸ್​​​ನಲ್ಲಿ ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ.


    ಹಾಲಿ ವಿಧಾನಪರಿಷತ್ ಸದಸ್ಯ ಕಾಂಗ್ರೆಸ್​​​ನ ಪ್ರತಾಪ್ ಚಂದ್ರ ಶೆಟ್ಟಿ ಮತ್ತು ಬಿಜೆಪಿಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಸದಸ್ಯತ್ವದ ಅವಧಿ ಜನವರಿಗೆ ಮುಗಿಯಲಿದ್ದು, ನೂತನ ಸದಸ್ಯರ ಆಯ್ಕೆಗೆ ಚುನಾವಣೆ ನಡೆಯಲಿದೆ.

    ಚುನಾವಣೆಗೆ ಅಧಿಸೂಚನೆ ಪ್ರಕಟವಾಗದಿದ್ದರೂ ಕಾಂಗ್ರೆಸ್​​ನಲ್ಲಿ ಈಗಾಗಲೇ ಆಕಾಂಕ್ಷಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
    ಕಾಂಗ್ರೆಸ್​​ನಿಂದ ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷಿಗಳು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸೆಪ್ಟೆಂಬರ್ 30ರ ವರೆಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

    ಈಗಾಗಲೇ ಮಂಜುನಾಥ ಭಂಡಾರಿ, ಶಶಿಧರ್ ಹೆಗ್ಡೆ ಮತ್ತು ಪ್ರಸಾದ್ ರಾಜ್ ಕಾಂಚನ್ ಅರ್ಜಿ ಸಲ್ಲಿಸಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸದಾಶಿವ ಉಳ್ಳಾಲ ತಿಳಿಸಿದ್ದಾರೆ.
    ಕೆಪಿಸಿಸಿ ಸೂಚನೆಯಂತೆ ಟಿಕೆಟ್ ಆಕಾಂಕ್ಷಿಗಳು ಕೆಪಿಸಿಸಿ ಕಟ್ಟಡ ನಿಧಿಗೆ 1 ಲಕ್ಷ ರೂ. ಕೊಡುಗೆ ನೀಡುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಸೂಚಿಸಿದ್ದು, ಈಗಾಗಲೇ ಅರ್ಜಿ ಸಲ್ಲಿಸಿರುವ ಮೂವರು ಕೆಪಿಸಿಸಿ ಕಟ್ಟಡ ನಿಧಿಗೆ 1 ಲಕ್ಷ ರೂ. ನೀಡಿದ್ದಾರೆ ಎಂದು ತಿಳಿದುಬಂದಿದೆ.

    ಈ ಬಾರಿ ಪ್ರತಾಪ್ ಚಂದ್ರ ಶೆಟ್ಟಿ ಚುನಾವಣೆಗೆ ನಿಲ್ಲದಿರಲು ನಿರ್ಧರಿಸಿರುವುದರಿಂದ ಕಾಂಗ್ರೆಸ್​ ಇದೇ ತಿಂಗಳ ಕೊನೆಯವರೆಗೆ ಬರುವ ಅರ್ಜಿಯನ್ನು ಪರಿಗಣಿಸಿ ಅಭ್ಯರ್ಥಿ ಘೋಷಣೆ ಮಾಡಲಿದೆ ಎಂದು ಹೇಳಲಾಗ್ತಿದೆ.

    ಬಿಜೆಪಿಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತೊಮ್ಮೆ ಚುನಾವಣೆಗೆ ನಿಲ್ಲುವ ಸಾಧ್ಯತೆ ಇದ್ದು, ಮತ್ತೋರ್ವ ಅಭ್ಯರ್ಥಿಯನ್ನು ಪಕ್ಷ ಘೋಷಿಸಲಿದೆ.

    ಒಟ್ಟಿನಲ್ಲಿ ಚುನಾವಣೆಗೆ ಅಧಿಸೂಚನೆ ಪ್ರಕಟವಾಗದಿದ್ದರೂ ಕಾಂಗ್ರೆಸ್‌ ಪರಿಷತ್ ಚುನಾವಣೆಗೆ ಈಗಿನಿಂದಲೇ ಭರ್ಜರಿ ತಯಾರಿ ಮಾಡಿಕೊಳ್ಳಲಾಗುತ್ತಿದೆ.

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?

    Published

    on

    ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
    ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.

    ಸೀಟ್ ಗಾಗಿ ಎಡವಟ್ಟು :
    ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.

    ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್‌ಗೆ 60 ರೂ., ಹಾಲ್ಫ್‌ಗೆ 40 ರೂ.
    ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.

    ರೋಹಿತ್‌ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

    ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.

    Continue Reading

    LATEST NEWS

    Trending