LATEST NEWS
ನೆಹರು ತಂದೆ ಇಡೀ ಆಸ್ತಿ ದೇಶಕ್ಕೆ ಕೊಟ್ಟರು, ನೀವು ಏನು ಕೊಟ್ರಿ?: ಸಿ.ಟಿ ರವಿಯನ್ನು ಪ್ರಶ್ನಿಸಿದ ಎಂಎಲ್‌ಸಿ ಹೆಚ್. ವಿಶ್ವನಾಥ್
Published
3 years agoon
By
Adminಮೈಸೂರು: ನೆಹರು ಅವರ ತಂದೆ ತಮ್ಮ ಇಡೀ ಆಸ್ತಿಯನ್ನು ದೇಶಕ್ಕೆ ಬರೆದು ಕೊಟ್ಟರು. ಸಿ.ಟಿ. ರವಿ ಏನು ಕೊಟ್ಟಿದ್ದಾರೆ. ಐದು ಪೈಸೆಯನ್ನು ದೇಶಕ್ಕೆ ಕೊಟ್ಟಿದ್ದೀರಾ? ಎಂದು ವಿಧಾನ ಪರಿಷತ್ ಸದಸ್ಯ, ಬಿಜೆಪಿ ನಾಯಕ ವಿಶ್ವನಾಥ್ ಪ್ರಶ್ನಿಸಿದರು.
ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ. ರವಿ ಅವರು ಮಾಜಿ ಪ್ರಧಾನಿ ನೆಹರು ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದಕ್ಕೆ ಖೇದ ವ್ಯಕ್ತಪಡಿಸಿದ್ದಾರೆ. ಜವಾಹರ ಲಾಲ್ ನೆಹರು ಅಧಿಕಾರದ ಅವಧಿಗಿಂತಾ ಹೆಚ್ಚಿನ ಅವಧಿ ಜೈಲಲ್ಲಿ ಕಳೆದರು. ಇಡೀ ಕುಟುಂಬವೇ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿತ್ತು. ಅವರ ಬಗ್ಗೆ ಸಿ.ಟಿ. ರವಿ ಅವರ ಅವಹೇಳನಕಾರಿ ಮಾತು ಯಾರೂ ಮೆಚ್ಚುವಂಥದಲ್ಲ ಎಂದು ಗುಡುಗಿದ್ದಾರೆ.
ಸಿ.ಟಿ. ರವಿಗೂ ಮತ್ತು ಬಿಜೆಪಿ ಗೂ ಈ ಮಾತು ಶೋಭೆ ತರುವುದಿಲ್ಲ. ಸಿ.ಟಿ. ರವಿ ಅವರು ನೆಹರು ಬಗ್ಗೆ ಓದಿಕೊಳ್ಳಬೇಕು. ವಾಜಪೇಯಿ ಅವರು ನೆಹರು ನಿಧನರಾದಾಗ ಏನು ಭಾಷಣ ಮಾಡಿದ್ದರು ಎಂಬುದನ್ನು ಸಿ.ಟಿ. ರವಿ ಓದಿಕೊಳ್ಳಬೇಕು. ನೆಹರು ಅವರ ಬಗ್ಗೆ ವಾಜಪೇಯಿ ಅವರು ಚರಿತ್ರಾರ್ಹ ಭಾಷಣ ಮಾಡಿದ್ದಾರೆ. ನೆಹರು ಅವರ ಬಗ್ಗೆ ಇಷ್ಟು ಲಘುವಾಗಿ ಮಾತಾಡಬಾರದು. ನಿಮಗೆ ನೆಹರು ಬಗ್ಗೆ ಏನು ಗೊತ್ತಿದೆ? ಏನು ತಿಳಿದು ಕೊಂಡಿದ್ದೀರಿ? ಎಂದು ರವಿ ಅವರನ್ನು ವಿಶ್ವನಾಥ್ ಪ್ರಶ್ನಿಸಿದ್ದಾರೆ.
You may like
DAKSHINA KANNADA
ರಾಜ್ಯ ಮಟ್ಟದ ತ್ರೋಬಾಲ್ : ದರ್ಬೆ ಬೆಥನಿ ಶಾಲೆ ದ್ವಿತೀಯ
Published
12 hours agoon
10/01/2025By
NEWS DESK4ಪುತ್ತೂರು : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೋಲಾರ ಜಿಲ್ಲೆಯ ಕೆಜಿಎಫ್ ಪ್ರೌಢ ಶಾಲೆಯಲ್ಲಿ ಜ. 8 ಮತ್ತು 9 ರಂದು ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರು ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ತಂಡದಲ್ಲಿ ಆದ್ಯ ಕೆ, ಶಾನ್ವಿ ಪ್ರೀಷ್ಮ, ಫಾತಿಮಾತ್ ಮುನವರ, ಫಾತಿಮಾತ್ ಝುಲ್ಫ, ನಿರೀಕ್ಷಾ H ಶೆಟ್ಟಿ, ಸ್ನಿಗ್ಧ, ಆಯಿಷಾತ್ ಹಿಬಾ ಉತ್ತಮ ಪ್ರದರ್ಶನವನ್ನು ನೀಡಿ ಗೆಲುವಿಗೆ ಕಾರಣೀಭೂತರಾದರು. ಹಿಬಾ ಉತ್ತಮ ಆಟಗಾರ್ತಿಯಾಗಿ ವೈಯಕ್ತಿಕ ಪ್ರಶಸ್ತಿಯನ್ನು ಪಡೆದುಕೊಂಡರು.
ಇದನ್ನೂ ಓದಿ : ಕಾಲೇಜು ಕಾರ್ಯಕ್ರಮದಲ್ಲಿ ಅಶ್ವಿನ್ ಮಾತಿಗೆ ಅಸಮಾಧಾನ ವ್ಯಕ್ತಪಡಿಸಿದ ಫ್ಯಾನ್ಸ್
ತಂಡಕ್ಕೆ ದೈಹಿಕ ಶಿಕ್ಷಕರಾದ ನಿರಂಜನ್ ಹಾಗೂ ಅಕ್ಷಯ್ ತರಬೇತಿಯನ್ನು ನೀಡಿದ್ದಾರೆ. ತಂಡದ ವ್ಯವಸ್ಥಾಪಕಿಯಾಗಿ ಅನಿತಾಸಿಯ ಗೋನ್ಸಲ್ವಸ್ ಇವರು ತಂಡವನ್ನು ಮುನ್ನಡೆಸಿದರು ಎಂಬುದಾಗಿ ಶಾಲಾ ಮುಖ್ಯ ಶಿಕ್ಷಕಿ ಭಗಿಣಿ ಸೆಲಿನ್ ಪೇತ್ರ ಮಾಹಿತಿ ನೀಡಿದ್ದಾರೆ.
ಮಂಗಳೂರು/ಗದಗ : ಶಿರಹಟ್ಟಿ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿಯ ಕಾರು ಚಾಲಕ ನೇ*ಣಿಗೆ ಶರಣಾಗಿದ್ದಾರೆ. ಸುನಿಲ್ ಲಮಾಣಿ(25) ಆತ್ಮಹ*ತ್ಯೆ ಮಾಡಿಕೊಂಡವರು. ಸುನಿಲ್ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಮಲ್ಲಾಡ್ ಕಾಲೋನಿಯಲ್ಲಿ ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಆತ್ಮಹ*ತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಸುನೀಲ್ ಲಮಾಣಿ ಆತ್ಮಹ*ತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಶಾಸಕ ಚಂದ್ರು ಲಮಾಣಿ ಇತ್ತೀಚೆಗೆ ಖರೀದಿಸಿದ್ದ ಮನೆಯಲ್ಲಿ ಸುನೀಲ್ ಆತ್ಮಹ*ತ್ಯೆ ಮಾಡಿಕೊಂಡಿದ್ದು, ಆತ ಚಂದ್ರು ಅವರ ಸಂಬಂಧಿ ಎಂದು ತಿಳಿದುಬಂದಿದೆ . ಮನೆ ಕಟ್ಟುವ ವಿಚಾರದಲ್ಲಿ ಸಹೋದರರ ನಡುವೆ ಕಲಹ ಉಂಟಾಗಿತ್ತು ಎನ್ನಲಾಗಿದೆ. ಇದೇ ವಿಚಾರವಾಗಿ ಸುನಿಲ್ ಆತ್ಮಹ*ತ್ಯೆ ಮಾಡಿಕೊಂಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.
ಇದನ್ನೂ ಓದಿ : ಹಲ್ಲು ಹುಳುಕಾಗಿದ್ಯಾ.? ಈ ಮನೆಮದ್ದು ಪ್ರಯತ್ನಿಸಿ, ತಕ್ಷಣ ಎಲ್ಲಾ ಹಲ್ಲಲ್ಲಿರುವ ಹುಳುಗಳು ಹೊರ ಬರುತ್ತವೆ.!
ಸ್ಥಳಕ್ಕೆ ಲಕ್ಷ್ಮೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹ*ತ್ಯೆಗೆ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.
LATEST NEWS
ಹಲ್ಲು ಹುಳುಕಾಗಿದ್ಯಾ.? ಈ ಮನೆಮದ್ದು ಪ್ರಯತ್ನಿಸಿ, ತಕ್ಷಣ ಎಲ್ಲಾ ಹಲ್ಲಲ್ಲಿರುವ ಹುಳುಗಳು ಹೊರ ಬರುತ್ತವೆ.!
Published
13 hours agoon
10/01/2025By
NEWS DESK2ನೀವು ಚಿಕ್ಕವರಾಗಿರಲಿ ಅಥವಾ ವಯಸ್ಸಾದವರಾಗಿರಲಿ ಸಿಹಿತಿಂಡಿ ಸೇವಿಸಿದ ನಂತರ ಹಲ್ಲುಗಳನ್ನ ಸ್ವಚ್ಛಗೊಳಿಸುವಲ್ಲಿನ ಅಜಾಗರೂಕತೆಯು ಹಲ್ಲುಗಳಿಗೆ ಸೋಂಕು ತಗುಲಿಸಬಹುದು. ಇದು ಇಡೀ ಹಲ್ಲನ್ನು ಹಾನಿಗೊಳಿಸುತ್ತದೆ. ಅಂತಹ ಸಂದರ್ಭಗಳಲ್ಲಿ, ಜನರು ದಂತವೈದ್ಯರ ಬಳಿಗೆ ಹೋಗುತ್ತಾರೆ ಮತ್ತು ಆಗಾಗ್ಗೆ ಹಲ್ಲುಗಳನ್ನ ಕೀಳಬೇಕಾಗುತ್ತದೆ. ಯಾಕಂದ್ರೆ, ಇದು ಇತರ ಹಲ್ಲುಗಳಿಗೆ ಹಾನಿ ಮಾಡುವ ಅಪಾಯವನ್ನ ಹೆಚ್ಚಿಸುತ್ತದೆ.
ಇಂದಿಗೂ ಸಹ ನಾವು ನಮ್ಮ ಹಿರಿಯರ ಹಳೆಯ ಪರಿಹಾರಗಳನ್ನ ಅನುಸರಿಸುವ ಮೂಲಕ ಹಲ್ಲಿನ ಹುಳುಗಳನ್ನ ತೊಡೆದು ಹಾಕಬಹುದು. ಇಂದು ನಾನು ನಿಮಗೆ ಅಂತಹ ಮನೆಮದ್ದನ್ನ ಹೇಳಲಿದ್ದೇನೆ, ಅದನ್ನು ಬಳಸಿಕೊಂಡು ನೀವು ದಂತವೈದ್ಯರ ಬಳಿಗೆ ಹೋಗದೆ ಹಲ್ಲಿನ ಹುಳುಗಳನ್ನ ತೊಡೆದು ಹಾಕಬಹುದು.
ಚಾಕೊಲೇಟ್ ತಿನ್ನುವುದರಿಂದ ಮಕ್ಕಳ ಹಲ್ಲುಗಳು ಹಾನಿಗೊಳಗಾಗುತ್ತವೆ. ಆಹಾರ ಅಥವಾ ಸಿಹಿತಿಂಡಿಗಳನ್ನು ಸೇವಿಸಿದ ನಂತರ ನಾವು ತೊಳೆಯುವುದಿಲ್ಲ. 10 ರಿಂದ 12 ವರ್ಷ ವಯಸ್ಸಿನಲ್ಲಿ, ಕುಳಿಗಳಿಂದಾಗಿ ಮಕ್ಕಳ ಹಲ್ಲುಗಳು ಕ್ಷೀಣಿಸಲು ಪ್ರಾರಂಭಿಸುತ್ತವೆ.
ಇದನ್ನು ತಡೆಗಟ್ಟಲು ಸುಲಭ ಮಾರ್ಗವಿದೆ. ಯಾರಿಗಾದರೂ ಹಲ್ಲಿನಲ್ಲಿ ಕುಳಿ ಇದ್ದರೆ, ನೀವು ಅದನ್ನು ಮನೆಯಲ್ಲಿಯೇ ತೆಗೆದುಹಾಕಬಹುದು. ಮೊದಲಿಗೆ, ಈರುಳ್ಳಿ ಬೀಜಗಳನ್ನ ಮಾರುಕಟ್ಟೆಯಿಂದ ತರಬೇಕು. ನಂತರ ಬೆಂಕಿಯನ್ನ ಹೊತ್ತಿಸಿ ಕೆಂಡದ ಮೇಲೆ ಈರುಳ್ಳಿ ಬೀಜಗಳನ್ನ ಹಾಕಿ ಬಂದ ಹೊಗೆಯನ್ನ ಬಾಯಿಯಲ್ಲಿ ಶೇಖರಿಸಿ ನಂತ್ರ ಮುಚ್ಚಿ. ಈ ಪ್ರಕ್ರಿಯೆಯನ್ನ ಎರಡರಿಂದ ಮೂರು ಬಾರಿ ಮಾಡಿ. ಈಗ ನಿಮ್ಮ ಬಾಯಿಯಲ್ಲಿ ನೀರು ಹಾಕಿಕೊಂಡು ಮುಕ್ಕಳಿಸಿ ಆ ಬಟ್ಟಲಿನಲ್ಲಿ ಉಗುಳಿ. ಈಗ ಆ ಬಟ್ಟಲಿನಲ್ಲಿರುವ ನೀರಿನಲ್ಲಿ ಎಲ್ಲಾ ಹುಳುಗಳು ಗೋಚರಿಸುತ್ತವೆ.