LATEST NEWS
ರಾಜ್ಯದ ದೇಗುಲಗಳಲ್ಲಿ ಮೊಬೈಲ್ ಬಳಕೆಗೆ ಬ್ರೇಕ್-ಶೀಘ್ರವೇ ಫೋನ್ ಬ್ಯಾನ್ ರೂಲ್ಸ್ ಜಾರಿ…!
ಬೆಂಗಳೂರು: ರಾಜ್ಯದಲ್ಲಿರುವ ದೇವಾಲಯಗಳಲ್ಲಿ ಮೊಬೈಲ್ ಬ್ಯಾನ್ ಮಾಡಬೇಕು ಎನ್ನುವ ಕೂಗು ಕೇಳಿಬಂದಿದೆ. ದೇಗುಲದ ಒಳಗೆ ಮೊಬೈಲ್ ಬಳಕೆಗೆ ಅನುಮತಿ ಕೊಡಬಾರದು ಎಂದು ಅರ್ಚಕರ ಒಕ್ಕೂಟ ಮನವಿ ಸಲ್ಲಿಸಿದೆ.
ತಮಿಳಿನಾಡಿನ ದೇವಾಲಯಗಳಲ್ಲಿ ಮೊಬೈಲ್ ಬಳಕೆ ನಿಷೇಧ ಮಾಡಲಾಗಿದೆ. ಇದೀಗ ತಮಿಳುನಾಡಿನ ಹಾಗೇ ರಾಜ್ಯದಲ್ಲಿಯೂ ಮೊಬೈಲ್ ಬ್ಯಾನ್ ಮಾಡಲು ಒತ್ತಾಯ ಕೇಳಿಬಂದಿದೆ.
ದೇವಾಲಯಗಳ ಅಂಗಳದಲ್ಲಿ ಮೊಬೈಲ್ ಬಳಕೆಗೆ ಅನುಮತಿ ಕೊಡಬೇಡಿ ಎಂದು ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ ಒಕ್ಕೂಟ ಆಗ್ರಹಿಸಿದೆ.
ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ ಒಕ್ಕೂಟದ ವತಿಯಿಂದ ಪತ್ರದ ಮೂಲಕ ಮನವಿ ಮಾಡಲಾಗಿದೆ. ಬ್ಯಾನ್ ಮಾಡದೇ ಇದ್ರೆ ಮುಂದಿನ ದಿನಗಳಲ್ಲಿ ಕೋರ್ಟ್ ಮೆಟ್ಟಿಲೇರೋ ನಿರ್ಧಾರ ಮಾಡಿರುವುದಾಗಿ ಒಕ್ಕೂಟದ ಸದಸ್ಯರು ಹೇಳಿದ್ದಾರೆ.
ಅರ್ಚನೆ ಮಾಡುತ್ತಿರುವಾಗ ಮಂತ್ರಗಳ ಉಚ್ಚಾರಣೆ ಮಾಡುವಾಗ ಮೊಬೈಲ್ನಲ್ಲಿ ಕೆಲವರು ಹಾಡುಗಳನ್ನು ಹಾಕುತ್ತಾರೆ. ಇದ್ರಿಂದ ಧಾರ್ಮಿಕ ಕಾರ್ಯಗಳಿಗೆ ಅಡಚಣೆ ಆಗ್ತಿದೆ ಎಂದು ಅರ್ಚಕರು ದೂರಿದ್ದಾರೆ.
ಅಲ್ಲದೆ ಅಶ್ಲೀಲ ರಿಂಗ್ ಟೋನ್ ಗಳ ಕಿರಿಕಿರಿ, ಭಕ್ತಾದಿಗಳು ಧ್ಯಾನ ಮಾಡುವಾಗ, ಹೆಣ್ಣು ಮಕ್ಕಳ ಫೋಟೋ ತೆಗೆಯುವುದು ಹೀಗೆ ಕೆಲವರು ಕಿಡಿಗೇಡಿ ಕೆಲಸ ಮಾಡ್ತಿದ್ದಾರೆ.
ದೇಗುಲಕ್ಕೆ ಬರುವ ಭಕ್ತರು ಹೆಚ್ಚಾಗಿ ಮೊಬೈಲ್ ಬಳಸುವುದರಿಂದ ಇತರರಿಗೆ ತೊಂದರೆಯಾಗುತ್ತದೆ. ದೇವರ ಫೋಟೋ ತೆಗೆಯುವುದು, ಸೆಲ್ಫಿ ಹುಚ್ಚಾಟಗಳು ಹೆಚ್ಚಾಗಿದೆ.
ಹೀಗಾಗಿ ದೇಗುಲಗಳಲ್ಲಿ ಮೊಬೈಲ್ ಬಳಕೆಗೆ ಕಡಿವಾಣ ಹಾಕಲೇಬೇಕಿದೆ ಎಂದು ಅರ್ಚಕರ ಒಕ್ಕೂಟ ಆಗ್ರಹಿಸಿದೆ.
DAKSHINA KANNADA
ಜಾನುವಾರು ಸಾಗಾಟಗಾರರ ಕೊಲೆಗೆ ಸಂಚು ರೂಪಿಸುತ್ತಿದ್ದ ಇಬ್ಬರ ಬಂಧನ..!
ಮಂಗಳೂರು: ಜಾನುವಾರು ಅಕ್ರಮ ಸಾಗಾಟದ ತಂಡವೊಂದರ ಸದಸ್ಯರ ಕೊಲೆಗೆ ಸಂಚು ರೂಪಿಸಿದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ಮಂಗಳೂರು ನಗರ ಹೊರವಲಯದ ಅಡ್ಯಾರ್ ನಲ್ಲಿ ನಡೆದಿದೆ.
ಫರಂಗಿಪೇಟೆ ಸಮೀಪದ ಅಮೆಮಾರ್‌ನ ನಿವಾಸಿಗಳು ತಸ್ಲೀಮ್ ಯಾನೆ ಗರುಡ ತಸ್ಲೀಮ್ (34) ಮತ್ತು ಹೈದರಾಲಿ ಯಾನೆ ಹೈದು (26) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.
ಗುರುವಾರದಂದು ತಸ್ಲೀಮ್ ಮತ್ತು ಆತನ ಗುಂಪಿನ ಸದಸ್ಯರು ಇನ್ನೊಂದು ತಂಡದ ಕೊಲೆಗೆ ಸಂಚು ರೂಪಿಸಿ ತಲವಾರಿನೊಂದಿಗೆ ಹೊಂಚು ಹಾಕುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ ಕೊಲೆ ಸಂಚನ್ನು ವಿಫಲಗೊಳಿಸಿರುವುದಾಗಿ ಮಾಹಿತಿ ನೀಡಿದ್ದಾರೆ.
ಈ ಕೃತ್ಯದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎಂದು ತಿಳಿಸಿದ್ದಾರೆ.
ಆರೋಪಿಗಳ ಪೈಕಿ ತಸ್ಲೀಮ್ ಈ ಹಿಂದೆ ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆಯತ್ನ ಹಾಗೂ ದರೋಡೆ ಪ್ರಕರಣ, ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣ, ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ, ಜಾನುವಾರು ಕಳ್ಳತನ ಪ್ರಕರಣ, ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣ ಗಳು, ರೈಲ್ವೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣ ಸಹಿತ 14 ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ.
ಈತನು 10 ದಿನಗಳ ಹಿಂದೆ ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಗೊಂಡಿದ್ದ.
ಇನ್ನೋರ್ವ ಆರೋಪಿ ಹೈದರಾಲಿಯು ಈ ಹಿಂದೆ ಮೂಡುಬಿದಿರೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆಯತ್ನ ಪ್ರಕರಣ, ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಜಾನುವಾರು ಕಳ್ಳತನ ಪ್ರಕರಣ ಹಾಗೂ ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ನಡೆದ ಜಾನುವಾರು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
BANTWAL
ವಿಟ್ಲ: ವಿದ್ಯಾರ್ಥಿನಿಗೆ ಕಿರುಕುಳ-ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು
ಬಂಟ್ವಾಳ: ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ವಿಚಾರದಲ್ಲಿ ಪೆರುವಾಯಿ ಮೂಲದ ಯುವಕನ ವಿರುದ್ಧ ವಿಟ್ಲ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.
ಕೇಪು ಗ್ರಾಮದ 9ನೇ ತರಗತಿ ವಿದ್ಯಾರ್ಥಿಯೊಬ್ಬಳನ್ನು ಯುವಕ ಕೆಲವು ದಿನಗಳಿಂದ ಹಿಂಬಾಲಿಸುತ್ತಿದ್ದು, ಮೊಬೈಲ್ ನಂಬರ್ ನೀಡುವಂತೆ ಕಿರುಕುಳ ನೀಡಿದ್ದಾನೆ. ಶಾಲೆ ಸಮೀಪ ಬಂದು ಬೈಕ್ ನಲ್ಲಿ ಕೂರುವಂತೆ ಹೇಳಿದ್ದಾನೆ.
ಈ ಎಲ್ಲಾ ವಿಚಾರವನ್ನು ಬೇರೆ ಕಡೆ ಹೇಳಬಾರದೆಂದು ಬೆದರಿಸುವ ಕಾರ್ಯ ಮಾಡಿದ್ದಾನೆ. ಇದರಿಂದ ಭಯಗೊಂಡ ಬಾಲಕಿ ಶಾಲೆಯ ಶಿಕ್ಷಕರಲ್ಲಿ ತಿಳಿಸಿದ್ದು, ಅವರು ಪೋಷಕರಿಗೆ ಮಾಹಿತಿ ನೀಡಿ, ನಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
DAKSHINA KANNADA
ಇಂದು ಕರ್ನಾಟಕ ಬಂದ್: ಕರಾವಳಿಗರಿಂದ ನೈತಿಕ ಬೆಂಬಲ-ಬಸ್, ಹೊಟೇಲ್, ಶಾಲೆಗಳು ಎಂದಿನಂತೆ
ಮಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಹಲವು ಸಂಘಟನೆಗಳು ಕರೆ ನೀಡಿರುವ ಇಂದಿನ (ಶುಕ್ರವಾರ) ಕರ್ನಾಟಕ ಬಂದ್ ಗೆ ಕರಾವಳಿಯಲ್ಲಿ ನೈತಿಕ ಬೆಂಬಲ ವ್ಯಕ್ತವಾಗಿದೆ.
ಖಾಸಗಿ ಬಸ್ ಸಂಘಟನೆಯು ಕರ್ನಾಟಕ ಬಂದ್ ಗೆ ನೈತಿಕ ಬೆಂಬಲ ನೀಡಿದೆ. ಆದರೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳು ಎಂದಿನಂತೆ ಓಡಾಟ ನಡೆಸಲಿದೆ.
ಕಾವೇರಿ ವಿಚಾರವಾಗಿ ನಮ್ಮ ಸಹಾನುಭೂತಿಯಿದೆ. ಆದರೆ ಬಸ್ ಸಂಚಾರ ಬಂದ್ ಮಾಡುವುದರಿಂದ ವಿದ್ಯಾರ್ಥಿಗಳು, ಉದ್ಯೋಗಿಗಳು ಸೇರಿ ಸಾರ್ವಜನಿಕ ಜೀವನಕ್ಕೆ ಕಷ್ಟವಾಗುವ ಕಾರಣ ನಾವು ನೈತಿಕ ಬೆಂಬಲ ಸೂಚಿಸುತ್ತೇವೆ. ಬಸ್ ಓಡಾಟ ಎಂದಿನಂತೆ ಇರಲಿದೆ ಎಂದು ಖಾಸಗಿ ಬಸ್ ಒಕ್ಕೂಟ ತಿಳಿಸಿದೆ.
ಜೊತೆಗೆ ಕರಾವಳಿ ಹೋಟೆಲ್ ಉದ್ಯಮವು ಕರ್ನಾಟಕ ಬಂದ್‌ಗೆ ನೈತಿಕ ಬೆಂಬಲ ಮಾತ್ರ ನೀಡಿದೆ. ಹೀಗಾಗಿ ಉಡುಪಿ- ಮಂಗಳೂರಿನಲ್ಲಿ ಹೋಟೆಲ್ ಗಳು ತೆರೆದಿರಲಿವೆ.
ಇಂದು ಕರ್ನಾಟಕ ಬಂದ್ ಇದ್ದರೂ, ಕರಾವಳಿ ಜಿಲ್ಲೆಗಳಲ್ಲಿ ಜನ ಜೀವನ ಎಂದಿನಂತೆ ಇರಲಿದೆ. ಜೊತೆಗೆ ಶಾಲಾ-ಕಾಲೇಜುಗಳು ಎಂದಿನಂತೆ ಕಾರ್ಯ ನಿರ್ವಹಿಸಲಿದೆ.